ಬಸವನಾಡಿನಲ್ಲಿ ಪ್ರಕೃತಿ ವಿಸ್ಮಯ- ರಾತ್ರಿ ವೇಳೆ ಆಗಸದಲ್ಲಿ ಮುಸ್ಸಂಜೆ, ನಸುಕಿನ ಜಾವದ ಬೆಳಕಿನ ವಾತಾವರಣ

ವಿಜಯಪುರ: ಬಸವನಾಡು ವಿಜಯಪುರ ನಗರದಲ್ಲಿ ರಾತ್ರಿ ವೇಳೆ ಆಗಸದಲ್ಲಿ ಭೂಮಿಯಿಂದ ಮುಗಿಲಿಗೆ ಟಾರ್ಚ್ ಲೈಟ್ ಹಿಡಿದಂತೆ ಬೆಳಕು ಕಂಡು ಬಂದಿದೆ. ರಾತ್ರಿ 9.50 ಸುಮಾರಿನಿಂದ ಆಗಸದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯೂ ಬರುತ್ತಿದೆ.  ಇದೆಲ್ಲದರ ಮಧ್ಯೆ, ಮುಗಿಲು ನೋಡಿದವರಿಗೆ ಅಚ್ಚರಿ ಕಾದಿತ್ತು.  ಆಗಸದ ತುಂಬೆಲ್ಲ ಮುಸ್ಸಂಜೆ ಮತ್ತು ನಸುಕಿನ ಜಾವ ಸೂರ್ಯೋದಯದ ಸಮಯದಲ್ಲಿ ಕಾಣಿಸುವಂತೆ ಆಗಸದಲ್ಲಿ ಬೆಳಕು ಕಂಡಿತು.  ಇದನ್ನು ಇದನ್ನು ನೋಡಿದ ಕೆಲವರು ಅಚ್ಚರಿ ಪಟ್ಟರೆ ಮತ್ತೆ ಕೆಲವರು ಆತಂಕ ಕೂಡ ವ್ಯಕ್ತಪಡಿಸಿದರು. ಗುರುರಾಜ […]

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜಯಪುರ ಕೆಕೆಆರ್ಟಿಸಿಗೆ ತೃತೀಯ ಸ್ಥಾನ

ವಿಜಯಪುರ: ಗುಜರಾತಿನ ಅಹಮದಾಬಾದಿನಲ್ಲಿ ಮೂರು ದಿನಗಳ ಕಾಲ ನಡೆದ ಅಂತರ ನಿಗಮದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ತೃತೀಯ ಸ್ಥಾನ ಪಡೆದುಕೊಂಡಿದೆ.  ಅಸೋಸಿಯೇಶನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ ಟೆಕ್ಕಿಂಗ್ ಈ ಪಂದ್ಯಾವಳಿ ಆಯೋಜಿಸಿತ್ತು.  ಈ ಪಂದ್ಯಾವಳಿಯಲ್ಲಿ ಪಾಲ್ಗೋಂಡಿದ್ದ ತಾಳಿಕೋಟೆ ಘಟಕದ ಅಮರೇಶ ಎಸ್. ಮೇಟಿ, ಬಸವನ ಬಾಗೇವಾಡಿ ಘಟಕದ ಎಸ್. ಆರ್. ಶೇಖ, ಐ. ಐ. ಐರೊಡಗಿ ಅವರ ಸಾಧನೆಯನ್ನು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ಮೊಹ್ಮದ ಫೈಜ್, ಅಧಿಕಾರಿಗಳು ಮತ್ತು […]

ಬಾಗಲಕೋಟೆ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಕಾಲೇಜು ವತಿಯಿಂದ ಸ್ವಚ್ಛತಾ ಅಭಿಯಾನ

ಬಾಗಲಕೋಟೆ: ನಗರದ ಬಸವೇಶ್ವರ ವೀರಶೈವ ವಿದ್ಯಾವಧ೯ಕ ಸಂಘದ ಬಿ.ವಿ.ವಿ.ಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರ ಪಿತ ಮಹಾತ್ಮಾ ಗಾಂಧಿಜೀಯವರ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನ ನಡೆಯಿತು. ಈ ಕಾರ್ಯಕ್ರಮಕ್ಕೆ ಎನ್.ಎಸ್.ಎಸ್ ಅಧಿಕಾರಿ ಡಾ. ಸುನೀಲ ಭೋಸಲೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ವಚ್ಛತೆಗೊಳಿಸುವುದು ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ.  ಎಲ್ಲ ನಾಗರಿಕರ ಮತ್ತು ನಮ್ಮೆಲ್ಲರ ಜವಾಬ್ದಾರಿಯೂ ಆಗಿದೆ.  ಅಷ್ಟೇ ಅಲ್ಲ, ಸ್ವಚ್ಛತೆ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.  ಇದು ವ್ಯಕ್ತಿಯಲ್ಲಿ ಸಕಾರಾತ್ಮಕ ಮಾನಸಿಕ ಮನೋಭಾವವನ್ನು […]

ಶ್ರೀ ಸಿದ್ಧೇಶ್ವರ ಸಂಸ್ಥೆಯ ನೂತನ ಏಳು ಜನ ನಿರ್ದೇಶಕರಿಂದ ಅಧಿಕಾರ ಸ್ವೀಕಾರ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಂಸ್ಥೆಯ ನೂತನ ನಿರ್ದೇಶಕರಾಗಿ ಏಳು ಜನ ಅಧಿಕಾರ ಸ್ವೀಕರಿಸಿದ್ದಾರೆ. ದೇವಸ್ಥಾನ ಆವರಣದಲ್ಲಿರುವ ಡಾ. ಫ. ಗು. ಹಳಕಟ್ಟಿ ಸಭಾ ಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ವಿಶೇಷ ಸಭೆಯಲ್ಲಿ ಏಳು ಜನ ನೂತನ ನಿರ್ದೇಶಕರು ಅಧಿಕಾರ ಸ್ವೀಕರಿಸಿದರು. ಚಂದಪ್ಪ ಹುಂಡೇಕಾರ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ಯತ್ನಾಳ ಅವರ ಪುತ್ರ ರಾಮನಗೌಡ […]

ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ತೆರೆದ ಹೃದಯ, ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ- ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಅತೀ ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಟ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ತೆರೆದ ಹೃದಯ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ […]

ನ. 24, 25 ರಂದು ಭಾವಸಾರ ಕ್ಷತ್ರೀಯ ಸಾಂಸ್ಕೃತಿಕ ಭವನ ಉದ್ಘಾಟನೆ- ರಾಜೇಶ ದೇವಗಿರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ವಿಜಯಪುರ: ನವೆಂಬರ್ 24 ಮತ್ತು 25 ರಂದು ನಗರದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ನೂತನ ಸಾಂಸ್ಕೃತಿಕ ಭವನದ ಉದ್ಗಾಟನೆ ಸಮಾರಂಭ ನಡೆಯಲಿದೆ. ನಗರದಲ್ಲಿ ನಡೆದ ಸಮಾಜದ ವಿಶೇಷ ಮಹಾಸಭೆ ಅಧ್ಯಕ್ಷ ರಾಜೇಶ ದೇವಗಿರಿ ಅವರ ನೇತೃತ್ವದಲ್ಲಿ ನಡೆಯಿತು.  ಈ ವಿಶೇಷ ಸಾಮಾನ್ಯ ಸಭೆಯಲ್ಲಿ ನೂತನ ಸಾಂಸ್ಕೃತಿಕ ಭವನದ ಉದ್ಘಾಟನೆ ಸಮಾರಂಭದ ಉದ್ಘಾಟನೆ ಕುರಿತು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಯಿತು. ನ. 24 ಮತ್ತು 25 ರಂದು ವಿಜಯಪುರ ನಗರದ ಎಲ್ಲಾ ಭಾವಸಾರ ಕ್ಷತ್ರೀಯ ಸಮುದಾಯದವರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬೇಕು.  […]

ಪ್ರಾಣಿಗಳು ಕಚ್ಚಿದ ತಕ್ಷಣ ರೇಬೀಸ್ ಚುಚ್ಚುಮದ್ದು ಹಾಕಿಸಿಕೊಳ್ಳಬೇಕು- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ಪ್ರಾಣಿಗಳು ಕಚ್ಚಿದ ತಕ್ಷಣ ರೇಬೀಸ್ ಚುಚ್ಚುಮದ್ದು ಹಾಕಿಸಿಕೊಳ್ಳುವುದರಿಂದ ರೋಗವನ್ನು ತಡೆಗಟ್ಟಲು ಸಾಧ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ. ತಿಕೊಟಾ ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಶ್ವ ರೇಬೀಸ್ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಾಣಿಗಳು ಕಚ್ಚಿದಾಗ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳು, ಪಡೆಯಬೇಕಾದ ಚಿಕಿತ್ಸೆಗಳ ಕುರಿತು […]

ರಾಜ್ಯ ಸರಕಾರ ಹಿಂದೂ, ಲಿಂಗಾಯಿತ ವಿರೋಧಿ ನೀತಿ ಅನುಸರಿಸುತ್ತಿದೆ- ಶೆಟ್ಟರ, ಸವದಿಯಿಂದ ಬಿಜೆಪಿಗೆ ಹಿನ್ನೆಡೆಯಾಗಿಲ್ಲ- ಯತ್ನಾಳ

ವಿಜಯಪುರ: ರಾಜ್ಯದಲ್ಲಿ ಹಿಂದೂ ವಿರೋಧಿ ಮತ್ತು ಲಿಂಗಾಯಿತ ವಿರೋಧಿ ಸರಕಾರ ಅಧಿಕಾರಿದಲ್ಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನಲ್ಲಿ ಲಿಂಗಾಯಿತ ನಾಯಕರು ಮತ್ತು ಅಧಿಕಾರಿಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂದು ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ಯತ್ನಾಳ ಬೆಂಬಲ ವ್ಯಕ್ತಪಡಿಸಿದರು. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ.  ಆದರೆ ನಾನು […]

ಬ್ಯಾನರ್ ಹರಿದ ಕಿಡಿಗೇಡಿಗಳನ್ನು ಗಡಿಪಾರು ಮಾಡಲು ಆಗ್ರಹ- ಬಿಜೆಪಿ ಮುಖಂಡರಿಂದ ಡಿಸಿ, ಎಸ್ಪಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಗಣೇಶೋತ್ಸವದ ಅಂಗವಾಗಿ ನಗರದಲ್ಲಿ ಅಳವಡಿಸಲಾಗಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬೃಹತ್ ಫ್ಲೆಕ್ಸ್ ಹರಿದಿರುವ ಆರೋಪಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರು ಮತ್ತು ಬಿಜೆಪಿ ಮುಖಂಡರು ಗುಮ್ಟ ನಗರಿಯಲ್ಲಿ ಡಿಸಿ ಮತ್ತು ಎಸ್ಪಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.  ಗುರುವಾರ ನಗರದ ಶಿವಾಜಿ ವೃತ್ತದಲ್ಲಿ ಹಾಕಲಾಗಿದ್ದ ಶಾಸಕ ಬಸನಗೌಡ ಪಾಟೀ ಯತ್ನಾಳ ಅವರ ಬೃಹತ್ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು.  ಈ ವಿಷಯ ತಿಳಿಯುತ್ತಿದ್ದಂತೆ ಯತ್ನಾಳ ಬೆಂಬಲಿಗರು ಶಿವಾಜಿ ಚೌಕಿಗೆ […]

ಐತಿಹಾಸಿಕ ಗೋಳಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ ಮಾಡುವಂತೆ ಪ್ರಧಾನಿಗೆ ಸಂಸದ ರಮೇಶ ಜಿಗಜಿಣಗಿ ಪತ್ರ

ವಿಜಯಪುರ: ನಗರದ ವಿಶ್ವವಿಖ್ಯಾತ ಗೋಳಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಸಂಸದ ರಮೇಶ ಜಿಗಜಿಣಗಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿರೆ. ಐತಿಹಾಸಿಕ ವಿಜಯಪುರವು 80ಕ್ಕೂ ಹೆಚ್ಚು ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ(ಎಎಸ್‌ಐ) ಸಂರಕ್ಷಿತ ಸ್ಮಾರಕಗಳನ್ನು ಹೊಂದಿದೆ.  ಅತೀ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಭಾರತದ ಅತಿ ದೊಡ್ಡ ಪ್ರವಾಸಿ ಕೇಂದ್ರವಾಗಿದೆ.  ರೋಮ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ನಂತರದ ಗಾತ್ರದಲ್ಲಿ ಇದುವರೆಗೆ ನಿರ್ಮಿಸಲಾದ ಎರಡನೇ ಅತಿದೊಡ್ಡ ಗುಮ್ಮಟ […]