ವಿಜಯಪುರ ಡಿಸಿಸಿ ಬ್ಯಾಂಕಿಗೆ ರೂ. 14.30 ಕೋ. ನಿವ್ವಳ ಲಾಭ- ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(DCC) ಬ್ಯಾಂಕು 2022-23ನೇ ಆರ್ಥಿಕ ವರ್ಷದಲ್ಲಿ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ಬ್ಯಾಂಕಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕು ತನ್ನ ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಿ, ಆದಾಯ ತೆರಿಗೆ ಪೂರ್ವ ರೂ. 19.31 ಕೋ. ಲಾಭ ಗಳಿಸಿದ್ದು, ನಿಯಮಾನುಸಾರ ರೂ. 5.01 ಕೋ. ತೆರಿಗೆ ಪಾವತಿಸಿ ನಂತರ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ. ಇದು […]

ಸೆ. 25 ರಂದು ಜನತಾ ದರ್ಶನ- ಅಹವಾಲು ಕುಂದು, ಕೊರತೆ ದಾಖಲಿಸಿ ಪರಿಹಾರ ಪಡೆದುಕೊಳ್ಳಲು ಡಿಸಿ ಟಿ. ಭೂಬಾಲನ ಮನವಿ

ವಿಜಯಪುರ: ಜಿಲ್ಲಾ ಮಟ್ಟದ ಅಹವಾಲುಗಳನ್ನು ಆಲಿಸಲು ಸೆ. 25ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆ. 10 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು-ಕುಂದು ಕೊರತೆ ದಾಖಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿರುವುದರಿಂದ ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ […]

ಆವಾಸ್ ಯೋಜನೆ ಅನುದಾನ ಬಿಡುಗಡೆ- ಜಿಪಿಎಸ್ ಮಾಡಿಸಲು ಅಧಿಕಾರಿಗಳಿಗೆ ಎಂ.ಎಲ್ಸಿ ಸುನೀಲಗೌಡ ಬಿ. ಪಾಟೀಲ ಸೂಚನೆ

ವಿಜಯಪುರ: ಬಬಲೇಶ್ವರ ಹಾಗೂ ತಿಕೋಟಾ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ 2021-22 ನೇ ಸಾಲಿನಲ್ಲಿ ವಸತಿ ರಹಿತರಿಗೆ ಮನೆ ಕಟ್ಟಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಆದ್ದರಿಂದ ಕೂಡಲೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಈ ಮನೆಗಳ ಜಿ.ಪಿ.ಎಸ್ ಮಾಡಿ, ಫಲಾನುಭವಿಗಳು ಮನೆಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಿಕೋಟಾ ತಾಲೂಕಿನ ಅರಕೇರಿ, ಬಾಬಾನಗರ, ಬರಟಗಿ, ಬಿಜ್ಜರಗಿ, ಘೋಣಸಗಿ, ಹೊನವಾಡ, ಜಾಲಗೇರಿ, ಕನಮಡಿ, ಕೋಟ್ಯಾಳ, […]

ಬಡ ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸು ಮಾಡಲು ಸಹಾಯ ಹಸ್ತ ಚಾಚಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ನೀಟ್ ಪಾಸಾಗಿ ವೈದ್ಯಕೀಯ ಸೀಟು ಸಿಕ್ಕರೂ ಆರ್ಥಿಕ ಸಮಸ್ಯೆಯಿಂದಾಗಿ ಪರದಾಡುತ್ತಿದ್ದ ಇಬ್ಬರು ಬಡ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್. ಪ್ರವೇಶ ಪಡೆಯಲು ನೆರವಾಗುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಸಹಾಯ ಹಸ್ತ ಚಾಚಿದ್ದಾರೆ‌. ಬಬಲೇಶ್ವರ ತಾಲೂಕಿನ ಸಂಗಾಪೂರ ಎಸ್. ಎಚ್. ಮತ್ತು ವಿಜಯಪುರ ತಾಲೂಕಿನ ಬರಟಗಿ ಗ್ರಾಮದ ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣ ವೆಚ್ಚವನ್ನು ಬಿ. ಎಲ್. ಡಿ. ಇ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಸಚಿವ ಎಂ. […]

ಮೀಸಲಾತಿ ಹೋರಾಟಕ್ಕೆ ಯತ್ನಾಳ ಸಾಕಷ್ಟು ಕೊಡುಗೆ ನೀಡಿದ್ದಾರೆ- ಲಿಂಗಾಯಿತರಿಗೆ ಡಿಸಿಎಂ ನೀಡುವುದಾದರೆ ಪಂಚಮಸಾಲಿ ಸಮುದಾಯಕ್ಕ ಕೊಡಲಿ- ಕೂಡಲ ಸಂಗಮ ಸ್ವಾಮೀಜಿ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒದಗಿಸಲು ವಿಷಯದಲ್ಲಿ ಶಾಸಕ ಬಸನಗೌಡ ಪಾಟೀಲ ತಮ್ಮ ಸರಕಾರದಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ತಮ್ಮ ಸರಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ನ್ಯಾಯ ಕೊಡಿಸಿದ್ದಾರೆ ಎಂದು ಹೇಳಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಮ್ಮ ಸರಕಾರದ ಅವಧಿಯಲ್ಲಿ ತಮ್ಮ ಸಮಾಜಕ್ಕೆ ಏನು ಕೊಡುಗೆ […]

ವಿಜಯಪುರ ಜಿಲ್ಲೆಯಲ್ಲಿ ಸೆ.25ರಂದು ಜನತಾ ದರ್ಶನ- ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜನೆಗೆ ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ: ಜಿಲ್ಲಾ ಮಟ್ಟದ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ  ಕಾರ್ಯಕ್ರಮ ಹಮ್ಮಿಕೊಂಡು ಪರಿಹಾರ ಒದಗಿಸಲು ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಸೆ.25ರಂದು ಬೆಳಿಗ್ಗೆ 10 ಗಂಟೆಗೆ    ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಿದ ಜನತಾ ದರ್ಶನ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿಗಳ ಕಚೇರಿ […]

ಮಾಧ್ಯಮಗಳಲ್ಲಿರುವ ಹತ್ತಾರು ಅವಕಾಶಗಳನ್ನು ಪತ್ರಿಕೋದ್ಯಮ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು- ಡಾ. ವಿಲಾಸ ನಾಂದೋಡಕರ

ವಿಜಯಪುರ: ಮಾಧ್ಯಮ ಒಂದು ಆಸಕ್ತಿದಾಯಕ ಕ್ಷೇತ್ರವಾಗಿದ್ದು, ಹತ್ತು-ಹಲವಾರು ಅವಕಾಶಗಳಿದ್ದು ನೀವೆಲ್ಲ ವಿದ್ಯಾರ್ಥಿಗಳು ಅದರ ಸದುಪಯೋಗಪಡೆಸಿಕೊಳ್ಳಬೇಕು ಎಂದು ಬೆಂಗಳೂರಿನ ಟಿವಿ9 ಕನ್ನಡ ಸುದ್ದಿವಾಹಿನಿಯ ಇನ್‌ಪುಟ್ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯ ನಿರ್ವಾಹಕ ನಿರ್ಮಾಪಕ ಡಾ. ವಿಲಾಸ ನಾಂದೋಡ್ಕರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ವಿಜಯಪುರ ನಗರದ ಹೊರ ವಲಯದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಹಿಳಾ ಮಿಡಿಯಾ ಕ್ಲಬ್ ಮತ್ತು ಐಎಎಸ್ ಅಧಿಕಾರಿ ಗಂಗೂಬಾಯಿ ಮಾನಕರ ಅವರು ತಮ್ಮ ಅಜ್ಜ ಮಲ್ಲಪ್ಪ […]

ರೋಗಿಗಳ ಆರೋಗ್ಯ ಸುಧಾರಣೆ, ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು ಸದಾ ಕಾರ್ಯೋನ್ಮುಖರಾಗಿರುತ್ತಾರೆ- ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ.

ವಿಜಯಪುರ: ರೋಗಿಗಳ ಆರೋಗ್ಯ ಸುಧಾರಣೆಗೆ ಮತ್ತು ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು ಸದಾ ಕಾರ್ಯೋನ್ಮುಖರಾಗಿರುತ್ತಾರೆ ಎಂದು ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ. ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ನಡೆದ ವಿಶ್ವ ರೋಗಿಗಳ ಸುರಕ್ಷತಾ ದಿನ ಕಾರ್ಯಕ್ರಮಕ್ಕೆ ಚಾಲನೆ […]

ಕಲ್ಪವೃಕ್ಷ ರಕ್ಷಣೆಗಾಗಿ ಆಸ್ಪತ್ರೆ ವಿನ್ಯಾಸ ಬದಲಿಸಿದ ಚಿಕ್ಕಮಕ್ಕಳ ತಜ್ಞ- ಇವರ ಪರಿಸರ ಪ್ರೇಮ ಇತರರಿಗೆ ಮಾದರಿ

ಮಹೇಶ ವಿ. ಶಟಗಾರ ವಿಜಯಪುರ- ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಮರಗಳನ್ನು ಕಡಿದು ಹಾಕುವ ಘಟನೆಗಳು‌ ಆಗಾಗ ನಡೆಯುತ್ತಲೇ ಇರುತ್ತವೆ. ರಸ್ತೆ ಅಗಲೀಕರಣ, ಕಟ್ಟಡಗಳ‌ ನಿರ್ಮಾಣ, ರೈಲು ಮಾರ್ಗ ನಿರ್ಮಾಣದಂಥ ಸಂದರ್ಭಗಳಲ್ಲಿ ಸಾವಿರಾರು ಮರಗಳನ್ನು ಧರೆಗುರುಳಿಸಲಾಗುತ್ತದೆ. ಕಡಿಮೆಯಾಗುತ್ತಿರುವ ಗಿಡ ಮರಗಳನ್ನು ಬೆಳೆಸಲು ಮತ್ತು ಅರಣ್ಯ ಪ್ರದೇಶವನ್ನು ಹೆಚ್ಚಿಸಲು ಪ್ರಯತ್ನಗಳು ನಡೆಯತ್ತಲೇ ಇರುತ್ತವೆ. ಒಂದು ವೃಕ್ಷ ಕಡಿದರೆ 10 ವೃಕ್ಷಗಳನ್ನು ನೆಡಬೇಕು. ಕಡಿಮೆಯಾಗುತ್ತಿರುವ ಅರಣ್ಯವನ್ನು ವೃದ್ಧಿಸಲು ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳು ಹಾಗೂ ಆ ಬೇಡಿಕೆಗಳಿಗೆ ಪೂರಕವಾಗಿ ಕೋಟಿ ವೃಕ್ಷ […]

ವಿಜಯಪುರ ಜಿಲ್ಲೆಯಲ್ಲಿ 3ನೇ ಶನಿವಾರ ಅಂಗನವಾಡಿ ಮಕ್ಕಳ ಪಾಲಕರ ಸಭೆ- 48315 ಜನ ಭಾಗಿ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಗ್ರಾ. ಪಂ. ಗಳ ಮೂಲಕ ಮಕ್ಕಳ ಸ್ನೇಹಿ ಕುರ್ಚಿ ಮತ್ತು ಮೇಜು ಒದಗಿಸಿರುವುದು ಮಕ್ಕಳು ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಲು ಮತ್ತು ಆಸಕ್ತಿ ತಳೆಯಲು ಸಹಕಾರಿಯಾಗಿದೆ ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂದೆ ತಿಳಿಸಿದ್ದಾರೆ. ಪ್ರತಿ ಮೂರನೇ ಶನಿವಾರ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ ನಡೆಯುತ್ತದೆ.  ಈ ಸಭೆಗೆ ಆಗಮಿಸಿದ್ದ ಮಕ್ಕಳ ಪಾಲಕರು, ಕೇಂದ್ರದಲ್ಲಿ ಆಗಿರುವ ಬದಲಾವಣೆಯಿಂದ ತಮ್ಮ ಮಕ್ಕಳು ಓದಿನಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ.  […]