ಚಂದ್ರಯಾನ 3 ಯಶಸ್ವಿ- ವಿಜಯಪುರದಲ್ಲಿ ಯುವ ಭಾರತ ಸಮಿತಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ವಿಜಯಪುರ: ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ ತಕ್ಷಣ ಯುವ ಭಾರತ ಸಮಿತಿ ಕಾರ್ಯಕರ್ತರು ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದ ಹತ್ತಿರ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.  ಇಸ್ರೋಗೆ ಜಯವಾಗಲಿ ಎಂಬ ಘೋಷಣೆ ಹಾಕಿದ ಕಾರ್ಯಕರ್ತರು, ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ, ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ತಲುಪಿದ ವಿಕ್ರಂ ಲ್ಯಾಂಡರ್ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂತೋಷದ ಕ್ಷಣಗಳನ್ನು ಕೊಡುಗೆಯಾಗಿ […]

ಚಂದ್ರನ ತಲುಪಿದ ಭಾರತ- ಸಚಿವ ಎಂ. ಬಿ. ಪಾಟೀಲ ಅಭಿನಂದನೆ

ವಿಜಯಪುರ: ಭಾರತದ ಬಹುನಿರೀಕ್ಷಿತ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಕಳುಹಿಸಿದ್ದ ವಿಕ್ರಮ್ ಚಂದ್ರನ ಮೇಲೆ ಸುರಕ್ಷಿತವಾಗಿ ತಲುಪಿದೆ.  ಚಂದ್ರನನ್ನು ತಲುಪಿದ ವಿಶ್ವದ ನಾಲ್ಕನೇ ರಾಷ್ಟ್ವವಾಗಿ ಭಾರತ ಹೊರ ಹೊಮ್ಮಿದ್ದು, ಚಂದ್ರನ ದಕ್ಷಿಣ ದ್ರುವ ತಲುಪಿದ ಮೊದಲ ದೇಶ ಎಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. ಭಾರತದ ಚಂದ್ರಯಾನ 3 ಯಶಸ್ವಿಯಾಗಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೌಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ […]

ಮೂರು ವರ್ಷಗಳಿಗೊಮ್ಮೆ ನಡೆಯುವ ಉ.ಕ.ದ ಏಕೈಕ ಜೈ ಸಂತೋಷಿ ಮಾತಾ ದೇವಸ್ಥಾನದ ಜಾತ್ರೆಗೆ ಕ್ಷಣಗಣನೆ- ಬುಧವಾರದಿಂದ ಶುಕ್ರವಾರ ನಾನಾ ಕಾರ್ಯಕ್ರಮ

ವಿಜಯಪುರ: ಬಸವನಾಡು ವಿಜಯಪುರ ನಗರದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಅಧಿಕ ಮಾಸ ಶ್ರಾವಣ ತಿಂಗಳಲ್ಲಿ ಮೂರು ದಿನಗಳ ಕಾಲ ನಡೆಯುವ ಜಲನಗರದ ಜೈ ಸಂತೋಷಿ ಮಾತ್ರಾ ಜಾತ್ರೆ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.   ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಾತ್ರಾ ಸಮಿತಿ ಅಧ್ಯಕ್ಷ ಮತ್ತು ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ನಾಳೆ ಆ. 23ರಂದು ಬುಧವಾರದಿಂದ ಆ. 25ರಂದು ಶುಕ್ರವಾರದವರೆಗೆ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು. ಶ್ರೀ ಜೈ ಸಂತೋಷಿಮಾತಾ […]

ಆಲಮಟ್ಟಿ ನಾರಾಯಣಪುರ ಜಲಾಷಯ ವ್ಯಾಪ್ತಿಯ ರೈತರಿಗೆ ಚಾಲು ಬಂದ್ ಪದ್ಧತಿಯಲ್ಲಿ ನೀರು ಬಿಡುಗಡೆ- ಸಚಿವ ಆರ್ ಬಿ ತಿಮ್ಮಾಪುರ

ವಿಜಯಪುರ: ಆಲಮಟ್ಟಿ ಮತ್ತು ನಾರಾಯಣಪುರ ಜಲಾಷಯ ವ್ಯಾಪ್ತಿಯ ಕಾಲುವೆಗಳಿಗೆ ಚಾಲು ಮತ್ತು ಬಂದ್ ಪದ್ಧತಿಯಲ್ಲಿ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮತ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ನೇತ್ವತ್ವದಲ್ಲಿ 2023-24ನೇ ವರ್ಷದ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ಬಾರಿ ಮುಂಗಾರು ಹಂಗಾಮಿಗೆ 14 […]

ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ, ಕಠಿಣ ಶಿಕ್ಷೆಗೆ ತುರ್ತು ಕ್ರಮ- ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು: ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ ಮತ್ತು ಸುಳ್ಳು ಸುದ್ದಿ ಹರಡುವುದರ ವಿರುದ್ಧ ಕಠಿಣ ಶಿಕ್ಷೆಗೆ ಒಳಪಡಿಸಲು ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.  ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಪ್ರಕಟಿಸಿದ್ದಾರೆ. ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿವೆ.  ಸಮಾಜದ ದೃವೀಕರಣಕ್ಕೆ ಕಾರಣವಾಗುತ್ತಿವೆ.  ಇದರ ನಿಯಂತ್ರಣ ಅಗತ್ಯವಾಗಿದ್ದು, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ […]

ದಿ. ಡಿ.ದೇವರಾಜ್ ಅರಸು ಅವರ 108ನೇ ಜನ್ಮ ದಿನಾಚರಣೆ ಸಾಮಾಜಿಕ ಪರಿವರ್ತನೆಯಲ್ಲಿ ಡಿ.ದೇವರಾಜ್ ಅರಸು ಅವರ ಕೊಡುಗೆ ಅಪಾರ- ಟಿ. ಭೂಬಾಲನ್

ವಿಜಯಪುರ: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ […]

ರಾಜ್ಯ ಸರಕಾರದ ಡೇಂಜರ್ ಕೆಲಸದ ಸುದ್ದಿ 2 ದಿನಗಳಲ್ಲಿ ಹೊರಬರಲಿದೆ- ವಿಜಯಪುರದಿಂದ ಖರ್ಗೆ ಸೇರಿದಂತೆ ಯಾರೇ ಸ್ಪರ್ಧಿಸಿದರು ಪರಿಣಾಮ ಬೀರದು- ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ಸಿನವರು ಇನ್ನೊಂದು ಡೇಂಜರಸ್ ಕೆಲಸ ಮಾಡುತ್ತಿದ್ದು, ಇನ್ನೆರಡು ದಿನಗಳಲ್ಲಿ ಅದು ಹೊರ ಬೀಳಲಿದೆ ಎಂದು ಲೋಕಸಭೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಜನರಿಗೆ ಪುಕ್ಸಟ್ಟೆ ಹಣ ನೀಡಲು ದಲಿತರ ಕರ್ಯಾಣಕ್ಕಾಗಿ ಮೀಸಲಿಟ್ಟಿದ್ದ ಎಸ್. ಇ. ಪಿ. ಟಿ. ಎಸ್. ಪಿ ಹಣವನ್ನೂ ಕಸಿದುಕೊಂಡಿದ್ದಾರೆ.  ಇವರು ಮಾಡುತ್ತಿರುವ ಡೇಂಜರಸ್ ಕೆಲಸದ ಬಗ್ಗೆ ಇನ್ನೆರಡು ದಿನಗಳಲ್ಲಿ ಎಲ್ಲವೂ ಹೊರ ಬೀಳಲಿದೆ ಎಂದು ಹೇಳಿದರು. ರಾಜ್ಯ […]

ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಪಾಲಕರ ದಿನ ಆಚಚರಣೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಾಲಯ ವಿಭಾಗದಿಂದ ಗ್ರಂಥಪಾಲಕರ ದಿನಾಚರಣೆ, ನ್ಯಾಷನಲ್ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ಮತ್ತು ಕ್ಲಬ್ ತರಬೇತಿ ಶಿಬಿರ ನಡೆಯಿತು.  ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಾಲೇಜಿನಲ್ಲಿ ಸಾಕಷ್ಟು ಪುಸ್ಸತಕಗಳ ಜೊತೆಗೆ ಡಿಜಿಟಲ್ ಮಾಹಿತಿ ಮತ್ತು ಇ- ರಿಸರ್ಚ್ ಸೌಲಭ್ಯಗಳು ಲಭ್ಯವಿವೆ.  ಇದರ ಸದುಪಯೋಗ […]

ಶ್ರೀ ಹರಳೇಶ್ವರ ಕ್ಷೇತ್ರದಲ್ಲಿ ಗಣದಾಳ ಶ್ರೀಗಳ 11 ದಿನಗಳ ಮೌನಾನುಷ್ಠಾನ ಮುಕ್ತಾಯ

ವಿಜಯಪುರ: ಬಬಲೇಶ್ವರ ತಾಲೂಕಿನ ಶ್ರೀಹರಳೇಶ್ವರ ಸುಕ್ಷೇತ್ರದಲ್ಲಿ ಗುಣದಾಳ ಹಿರೇಮಠದ ಡಾ. ವಿವೇಕಾನಂದ ದೇವರು ಅವರು ಅಧಿಕ ಮಾಸ ಅಂಗವಾಗಿ ಕೈಗೊಂಡಿದ್ದ 11 ದಿನಗಳ ಮೌನ ಅನುಷ್ಠಾನ ಮುಕ್ತಾಯವಾಗಿದೆ. ಈ ಸಮಾರೋಪ ಸಮಾರಂಭದಲ್ಲಿ ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು ಪಾಲ್ಗೋಂಡು ಮಾತನಾಡಿದರು.  ಇಂದಿನ ದಿನಗಳಲ್ಲಿ ಅನುಷ್ಟಾನ ಜಪ- ತಪಗಳು ಕಡಿಮೆಯಾಗಿ ಟಿವಿ, ಮೊಬೈಲ್ ಬಳಕೆ ಹೆಚ್ಚಾಗಿವೆ.  ಮಹಾಭಾರತದಲ್ಲಿ ಗಾಂಧಾರಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಜೀವನ ಮಾಡಿದ ಶಕ್ತಿಯನ್ನು ಮಗ ದುರ್ಯೋಧನನಿಗೆ ಧಾರೆ ಎರೆದ ಪ್ರಸಂಗವನ್ನು ಅವರು ಈ […]

ಕೇಂದ್ರ ಪುರಸ್ಕೃತ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸಿ-ಸಂಸದ ರಮೇಶ ಜಿಗಜಿಣಗಿ ಸೂಚನೆ

ವಿಜಯಪುರ: ಕೇಂದ್ರ ಪುರಸ್ಕೃತ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ವರ್ಷದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಕೇಂದ್ರ, ರಾಜ್ಯ  ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಜುಲೈ ತಿಂಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ವಿವಿಧ ಇಲಾಖೆಯಡಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸುವ ಬೊರವೆಲ್‌ಗಳನ್ನು […]