ಮಿಷನ್ ಇಂದ್ರಧನುಷ 5.0 ಲಸಿಕಾ ಅಭಿಯಾನಕ್ಕೆ ಚಾಲನೆ- ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸಲು ಡಿಸಿ ಮನವಿ

ವಿಜಯಪುರ:   ಜಿಲ್ಲೆಯ 2 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭೀಣಿಯರಿಗೆ ಲಸಿಕೆ ನೀಡುವ ಮಿಷನ್ ಇಂಧ್ರಧನುಷ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಲಾಗಿದ್ದು, ಮಕ್ಕಳನ್ನು ಮಾರಕ ರೋಗಗಳಿಂದ ರಕ್ಷಿಸಲು ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ನಗರದ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ ಅಭಿಯಾನಕ್ಕೆ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ […]

ವಿಜಯಪುರ ಶ್ರೀ ಚಿದಂಬರ ದೇವಸ್ಥಾನಕ್ಕೆ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ

ವಿಜಯಪುರ: ವಿಧಾನ ಪರಿಷತ ಸದಸ್ಯ ಮತ್ತು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಗರದ ಶ್ರೀ ಚಿದಂಬರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ವಿಜಯ ಜೋಶಿ, ಪಿ. ಬಿ. ಹಂಗರಗಿ, ಲಕ್ಷ್ಮೀಕಾಂತ ಕುಲಕರ್ಣಿ, ಕೇಶವ ಕುಲಕರ್ಣಿ, ಮಾಧವ ಜೋಶಿ, ವೆಂಕಟೇಶ ಜೋಶಿ, ದೀಪಕ‌ ಜೋಶಿ, ಶಂಕರ ಭಟ ಅಗ್ನಿಹೋತ್ರಿ, ರಾಘವೇಂದ್ರ ಜೋಶಿ‌ ಸಂಕನಾಳ, ವಿ.ಸಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಸಿ ಕೆ ಪಾಟೀಲ್ […]

ವಿಜಯಪುರ ನ್ಯಾಯಾಲಯಗಳಲ್ಲಿ ಸರಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವಿಜಯಪುರ: ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ವಿಜಯಪುರ ಜಿಲ್ಲೆಗೆ ಸಂಬಂಧಿಸಿದ 13 ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಸಹಾಯಕ ಸರಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 37 ವರ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 40 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 42 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30 ಸಾವಿರ […]

ಬಸವನಾಡಿನಿಂದ ಕಾಫಿನಾಡಿನ ಮೂಲಕ ಧರ್ಮಸ್ಥಳಕ್ಕೆ ಸ್ಲೀಪರ್ ಬಸ್- ಸಾರಿಗೆ ಸಚಿವರಿಗೆ ಡಾ. ಎಲ್. ಎಚ್. ಬಿದರಿ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಬಸವನಾಡು ವಿಜಯಪುರದಿಂದ ಕಾಫಿನಾಡು ಚಿಕ್ಕಮಗಳೂರು ಮಾರ್ಗವಾಗಿ ಸುಕ್ಷೇತ್ರ ಧರ್ಮಸ್ಥಳಕ್ಕೆ ಪ್ರತಿನಿತ್ಯ ಒಂದು ಸ್ಲೀಪರ್ ಇಲ್ಲವೆ ವೊಲ್ವೊ ಬಸ್ ಸೇವೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ನಗರದ ಚಿಕ್ಕಮಕ್ಕಳ ಖ್ಯಾತ ವೈದ್ಯ ಡಾ. ಎಲ್. ಎಚ್. ಬಿದರಿ ಅವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸಾರಿಗೆ ಸಚಿವರನ್ನು ಭೇಟಿ ಮಾಡಿದ ವಿಜಯಪುರ ಜಿಲ್ಲಾ ಪ್ರವಾಸೋದ್ಯಮ ಮತ್ತು ಸಮಗ್ರ ಅಭಿವೃದ್ಧಿ ವೇದಿಕೆ ಸಂಚಾಲಕರೂ ಆಗಿರುವ ಡಾ. ಎಲ್. ಎಚ್. ಬಿದರಿ […]

ವಿಜಯಪುರ ನಗರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಚಿಂತನೆ- ಪ್ರಸ್ತಾವನೆ ಸಿದ್ಧಪಡಿಸಲು ಸಚಿವ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಫ್ಲೈ ಓವರ್ ನಿರ್ಮಾಣದ ಚಿಂತನೆ ನಡೆಯುತ್ತಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸಲು ಕ್ರಮ ಕೈಗೊಳ್ಳುವುದು ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ದಿನಿವಿಡೀ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದ ಅವರು, ಇದೇ ವೇಳೆ ತಮ್ಮನ್ನು […]

ಮಕ್ಕಳ ಉಚಿತ ಲಸಿಕಾ ಅಭಿಯಾನ: ಜಿಲ್ಲಾದ್ಯಂತ ಪರಿಣಾಮಕಾರಿ ಅನುಷ್ಠಾನಕ್ಕೆ ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ:  ಲಸಿಕೆಯಿಂದ ವಂಚಿತರಾಗಿರುವ ಹಾಗೂ ಲಸಿಕೆ ಪಡೆಯದೇ ಇರುವ ಹಾಗೂ ನಿರ್ಲಕ್ಷತನದಿಂದ ಕೈಬಿಟ್ಟು ಹೋಗಿರುವ ನಗರ ಹಾಗೂ ಗ್ರಾಮೀಣ ಭಾಗದ ಗರ್ಭಿಣಿಯರು ಹಾಗೂ ಮಕ್ಕಳನ್ನು ಗುರತಿಸಿ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಉಚಿತ ಲಸಿಕಾ ಅಭಿಯಾನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಹಾಗೂ ಅಂಗನವಾಡಿ ಕೇಂದ್ರಗಳ ಆಶಾ ಕಾರ್ಯಕರ್ತೆಯರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಿಷನ್ ಇಂದ್ರ ಧನುಷ (IMI-5.0) ಎರಡನೇ ಸುತ್ತಿನ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಾನಾ ಇಲಾಖೆಗಳನ್ನು […]

ಶಾಲೆಯ ಪ್ರಭಾರಿ ಮುಖ್ಯ ಗುರುಗಳ ಮೇಲೆ ಹಲ್ಲೆ ಆರೋಪಿಗೆ 3 ವರ್ಷ ಜೈಲು ಶಿಕ್ಷೆ, ರೂ. 31 ಸಾವಿರ ದಂಡ ವಿಧಿಸಿದ ನ್ಯಾಯಾಲಯ- ಎಸ್. ಎಚ್. ಹಕೀಂ

ವಿಜಯಪುರ: ಶಾಲೆಯ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಆರೋಪಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು ರೂ. 31000 ದಂಡ ವಿಧಿಸಿ ಆದೇಶ ಹೊರಡಿಸಿದೆ ಎಂದು ಪ್ರಧಾನ ಸರಕಾರಿ ಅಭಿಯೋಜಕ ಎಸ್. ಎಚ್. ಹಕೀಂ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹುಸೇನ ಮೀರಾಸಾಬ ಮಣೂರ ಎಂಬುವರ […]

ಬೆಲೆಏರಿಕೆಯಿಂದ ತತ್ತರಿಸಿರುವ ಜನರಿಗೆ ಸರಕಾರ ಗ್ಯಾರಂಟಿ ಸ್ಕೀಂ ಗಳ ಮೂಲಕ ಶಕ್ತಿ ತುಂಬುತ್ತಿದೆ- ಎಂ. ಬಿ. ಪಾಟೀಲ

ವಿಜಯಪುರ: ಬೆಲೆ ಏರಿಕೆಯಿಂದ ತತ್ತರಿಸಿರುವ ನಾಡಿನ ಜನರಿಗೆ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಶಕ್ತಿ ತುಂಬುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಗೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ನಗರದಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿಗಳ ಕುರಿತು ಭರಸವೆ ನೀಡಿದ್ದೇವು. ಅದಕ್ಕೆ ಸ್ಪಂದಿಸಿ ಅಧಿಕಾರ ನೀಡಿದ ಜನರಿಗಾಗಿ ಈ ಯೋಜನೆಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ. […]

ಸಿಕ್ಯಾಬ್ ಎ.ಆರ್.ಎಸ್. ಇನಾಮದಾರ ಮಹಿಳಾ ಕಾಲೇಜಿನಲ್ಲಿ ಪ್ರೇಮಚಂದ ಜಯಂತಿ ಆಚರಣೆ

ವಿಜಯಪುರ: ನಗರದ ಸಿಕ್ಯಾಬ್ ಎ. ಆರ್. ಎಸ್. ಇನಾಮದಾರ ಮಹಿಳಾ ಮಹಾವಿದ್ಯಾಲಯದ ಉರ್ದು ಮತ್ತು ಹಿಂದಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಪ್ರೇಮಚಂದ ಜಯಂತಿ ಆಚರಿಸಲಾಯಿತು. ಈ ಸಮಾರಂಭದಲ್ಲಿ ಪಾಲ್ಗೋಂಡ ಮಹಾರಾಷ್ಟ್ರದ ಉದಯಗಿರಿ ಮಹಾವಿದ್ಯಾಲಯದ ಪ್ರೊ. ಹಾಮೀದ್ ಅಶ್ರಫ್ ಮಾತನಾಡಿ, ಪ್ರೇಮಚಂದ ಒಬ್ಬ ಮಹಾನ್ ಕಾದಂಬರಿಕಾರ ಮತ್ತು ಬರಹಗಾರರಾಗಿದ್ದರು.  ಲೌಕಿಕ ಸಂಪತ್ತಿನ ಹಿಂದೆ ಹೋಗದೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.  ಅವರು ಮಾನವೀತೆಯ ಪ್ರತಿಪಾದಕರಾಗಿದ್ದು, ಮಾನವೀಯ ಗುಣಗಳು ಮತ್ತು ಮೌಲ್ಯಗಳನ್ನು ಪ್ರತಿಪಾದಿಸಿದ್ದರು.  ಪರಸ್ಪರ ಪ್ರೀತಿ, ಪ್ರೇಮಗಳು, ಸೌಹಾರ್ದತೆ ಅವರ ಕೃತಿಗಳ ಸಂದೇಶವಾಗಿದೆ.  […]

ಪ್ರಕೃತಿ ಎರಡನೇ ತಾಯಿ ಇದ್ದಂತೆ- ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ- ಡಾ. ಆರ್. ಎಂ. ಮಿರ್ದೆ

ವಿಜಯಪುರ: ಪ್ರಕೃತಿ ಎರಡನೇ ತಾಯಿ ಇದ್ದಂತೆ.  ಸುಂದರವಾದ ಪರಿಸರವನ್ನು ಕಾಳಜಿ ವಹಿಸಿ ಸಂರಕ್ಷಿಸುವುದು ನಮ್ಮೆಲ್ಲಹ ಹೊಣೆಯಾಗಿದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್ ಕಾಲೇಜಿನ ಪ್ರಾಚಾರ್ಯೆ ಡಾ. ಆರ್. ಎಂ. ಮಿರ್ದೇ ಹೇಳಿದ್ದಾರೆ. ಕಾಲೇಜಿನಲ್ಲಿ ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್, ಐಕ್ಯೂಎಸಿ, ಇಕೋ ಕ್ಲಬ್ ಹಾಗೂ ಸಸ್ಯಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಸಸ್ಯಶಾಸ್ತ್ರ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು […]