ವಿಜಯಪುರ ಜಿಲ್ಲೆಯ ಮಹಾರಾಷ್ಟ್ರ ಗಡಿಯಲ್ಲಿ ಪ್ರವೇಶ- ಪ್ರಯಾಣಿಕರ ತಪಾಸಣೆ ಚುರುಕು

ವಿಜಯಪುರ: ಕೊರೊನಾ ಮೂರನೇ ಅಲೆ ಎಚ್ಚರಿಕೆ ಮತ್ತು ಸರಕಾರದ ಮಾರ್ಗಸೂಚಿ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಮಹಾರಾಷ್ಟ್ರದ ಗಡಿ ರಸ್ತೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಿಂದ ಶಿರಾಡೋಣ ರಾಜ್ಯ ಹೆದ್ದಾರಿ ಮತ್ತು ಸೋಲಾಪುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಧೂಳಖೇಡ ಬಳಿ ಜಿಲ್ಲಾಡಳಿತ ಚೆಕ್ ಪೋಸ್ಟ್ ಆರಂಭಿಸಿದೆ. ಈ ರಸ್ತೆಗಳ ಮೂಲಕ ಆಗಮಿಸುವ ವಾಹನ ಸವಾರರ ಕೊರೊನಾ ವ್ಯಾಕ್ಸಿನೇಷನ್ ವಿಚಾರಣೆ ನಡೆಸಿ ದಾಖಲಾತಿ ಪರಿಶೀಲನೆ ನಡೆಸಿ ರಾಜ್ಯದೊಳಗೆ ಪ್ರವೇಶ ನೀಡಲಾಗುತ್ತಿದೆ. ವಿಜಯುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆದೇಶ […]

ಎಸ್ ಎಸ್ ಎಲ್ ಸಿ ನಕಲು ಮುಕ್ತ ಪರೀಕ್ಷೆ ನಡೆಸಿ- ಕೊರೊನಾ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಎಸ್. ಎಸ್. ಎಲ್. ಸಿ. ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ ನಕಲು ಮುಕ್ತ ಪರೀಕ್ಷೆ ನಡೆಸಿ ಹಾಗೂ ಕೊರೊನಾ ಮಾರ್ಗಸೂಚಿಗಳ ಅನ್ವಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ಜು. 19 ರಿಂದ 22 ರವರೆಗೆ ಜಿಲ್ಲೆಯ ಒಟ್ಟು 188 ಪರೀಕ್ಷೆ ಕೇಂದ್ರಗಳಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆ ನಡೆಯಲಿದೆ‌. […]

ನಿರಾಣಿ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೃಸರ್ ವಿತರಣೆ

ವಿಜಯಪುರ: ಶೈಕ್ಷಣಿಕ ಬದುಕಿನ ಮೊದಲ ಪ್ರಮುಖ‌ ಯುದ್ಧ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಗೆಲ್ಲಲು ತಾವೆಲ್ಲರೂ ಈಗಾಗಲೇ ಸನ್ನದ್ಧರಾಗಿದ್ದಿರಿ. ಜು. 19 ರಿಂದ 22 ರವರೆಗೆ ತಮ್ಮ ಪರೀಕ್ಷೆ ಅತ್ಯಂತ ಶಿಸ್ತುಬದ್ಧತೆ ಮತ್ತು ಕೊರೊನಾ ನಿಯಮಗಳನ್ನು ಅನುಸರಿಸಿ ಕಾಳಜಿ ಪೂರ್ವಕವಾಗಿ ಬರೆಯಬೇಕು ಎಂದು ವಿಧಾನ ಪರಿಷತ ಬಿಜೆಇ ಸದಸ್ಯ ಹನುಮಂತ ನಿರಾಣಿ ಅವರು ಹೇಳಿದ್ದಾರೆ‌ ವಿಜಯಪುರ ನಗರದ ಅಲ್ ಅಮಿನ್ ಆಸ್ಪತ್ರೆ ಬಳಿಬಿರುವ ಇರುವ, ಶಿಕ್ಷಕರ ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಎಸ್ ಎಸ್ ಎಲ್ ವಿದ್ಯಾರ್ಥಿಗಳಿಗೆ […]

ಟೋಕಿಯೋ ಓಲಂಪಿಕ್ಸ್ ಗೆ ಭಾರತೀಯ ತಂಡಕ್ಕೆ ಶುಭ ಕೋರಿದ ಸಂಸದ, ಡಿಸಿ, ಜಿ. ಪಂ. ಸಿಇಓ

ವಿಜಯಪುರ: ಜಪಾನಿನ ಟೋಕಿಯೋದಲ್ಲಿ 2020ರ ಓಲಂಪಿಕ್ಸ್ ನಡೆಯುತ್ತಿದೆ. ಈ ಓಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳೂ ಕೂಡ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮತ್ತು ಜಿ. ಪಂ. ಸಿಇಓ ಗೋವಿಂದ ರೆಡ್ಡಿ ಶುಭಾಷಯ ಕೋರಿದ್ದಾರೆ. ವಿಜಯಪುರದಲ್ಲಿ ನಿಲ್ಲಿಸಲಾಗಿರುವ ನಾನು 2020-2021ನೇ ಸಾಲಿನ ಟೋಕಿಯೋ ಓಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತ ಕ್ರೀಡಾ ತಂಡಕ್ಕೆ ಶುಭ ಕೋರುತ್ತೇನೆ. I#Cheef4India TOKYO 2020 ಫ್ಲೇಕ್ಸ್ ಫ್ರೇಮ್ ನಲ್ಲಿ ನಿಂತು ಮೂರು […]

ಗ್ರಾ‌ ಪಂ. ಸದಸ್ಯರು ಕೇವಲ ಶಾಸಕರ ಅವಲಂಬಿಸದೆ ಪ್ರಾಮಾಣಿಕವಾಗಿ ಅಭಿವೃದ್ಧಿಗೆ ಕೈಜೋಡಿಸಬೇಕು- ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮಗಳ ಅಭಿವೃದ್ಧಿಗೆ ಗ್ರಾ. ಪಂ. ಸದಸ್ಯರು ಕೇವಲ ಶಾಸಕರನ್ನು ಅವಲಂಬಿಸದೇ ತಾವೂ ಕೂಡ ಪ್ರಾಮಾಣಿಕವಾಗಿ ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳು ವೇಗವಾಗಿ ಆಗುತ್ತವೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದ ಲಕ್ಷ್ಮೀ ದೇವಸ್ಥಾನದಲ್ಲಿ ತಿಕೋಟಾ ತಾಲೂಕಿನ ಗ್ರಾ. ಪಂ. ನೂತನ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಕೊರೊನಾ ಕಾಯಿಲೆ ಅಥವಾ ಇನ್ನಿತರ ಕಾಯಿಲೆಗಳನ್ನು ಹೋಗಲಾಡಿಸಲು ಗ್ರಾಮಗಳ ಸ್ವಚ್ಚತೆ ಬಗ್ಗೆ ಜನರಲ್ಲಿ ಜಾಗೃತಿ […]

ಕೇಂದ್ರ ಸರಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲಿ ಅಧಿಕಾರಿಗಳಿಗೆ ಸಂಸದ ರಮೇಶ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರದಿಂದ ಲಭ್ಯವಾಗುವ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುತ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸರಕಾರದ ನಾನಾ ಯೋಜನೆಗಳ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದತು. ರೈತರ ಅನುಕೂಲಕ್ಕಾಗಿ ವಿದ್ಯುತ್ ಟ್ರಾನ್ಸಫಾರ್ಮರ್ ಸಮಸ್ಯೆ ಸೇರಿದಂತೆ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಜಿಲ್ಲೆಯಲ್ಲಿರುವ ಸರಕಾರಿ ಶಾಲೆಗಳ ಕಟ್ಟಡ […]

ಕೆಪಿಟಿಸಿಎಲ್ ಅಧಿಕಾರಿ ಸಿದ್ದನಗೌಡ ಮಲ್ಲಿಕಾರ್ಜುನ ಬಿರಾದಾರಗೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ ಎಸಿಬಿ ಅಧಿಕಾರಿಗಳು

ವಿಜಯಪುರ: ಕೆಪಿಟಿಸಿಎಲ್ ಭ್ರಷ್ಟ ಅಧಿಕಾರಿ ನಿವಾಸದ ಮೇಲೆ ಧಾಳಿ ನಡೆಸುವ ಮೂಲಕ ಎಸಿಬಿ ಅಧಿಕಾರಿಗಳು ಅಧಿಕಾರಿಗೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಧಾಳಿ ನಡೆಸಿದ್ದು, ಕೆಪಿಟಿಟಿಎಲ್ ಭ್ರಷ್ಟ ಅಧಿಕಾರಿ ಸಿದ್ಧರಾಮ ಮಲ್ಲಿಕಾರ್ಜುನ ಬಿರಾದಾರ ಮತ್ತು ಸಂಬಂಧಿಕರಿಗೆ ಸೇರಿದ ಸೇರಿದ ಆರು ಕಡೆಗಳಲ್ಲಿ ಏಕಕಾಲಕ್ಕೆಎಸಿಬಿ ಧಾಳಿ ಮಾಡಿದ್ದಾರೆ. ಕೆಪಿಟಿಸಿಎಲ್ ಕಚೇರಿಯಲ್ಲಿ ಎಇಇ ಆಗಿರುವ ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಈಗ ಪ್ರಭಾರ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೂಡ ಆಗಿದ್ದಾರೆ‌. ವಿಜಯಪುರ ನಗರದ ಸುಕೂನ್ ಲೇ ಔಟ್ ನಲ್ಲಿರುವ […]

ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ತರಬೇತಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಮೈಸೂರು: ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ( NDA)ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ನಡೆದ 35ನೇ ಪ್ರೊಬೆಷನರಿ ಪೋಲೀಸ್ ಉಪ ಅಧೀಕ್ಷಕರು ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43 ಮೇ ತಂಡದ ಪ್ರೊಬೇಶನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ […]

ವಿಜಯಪುರ ನೂತನ ಎಸ್ಪಿಯಾಗಿ ಎಚ್. ಡಿ. ಆನಂದ ಕುಮಾರ- ವಿಜಯಪುರ ಜಿಲ್ಲೆಗೂ ನೂತನ ಎಸ್ಪಿಗೂ ಯಾವ ನಂಟಿದೆ ಗೊತ್ತಾ?

ವಿಜಯಪುರ: ವಿಜಯಪುರ ನೂತನ ಎಸ್ಪಿಯಾಗಿ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿರುವ ಎಚ್. ಡಿ. ಆನಂದ ಕುಮಾರ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಎಚ್. ಡಿ. ಆನಂದ ಕುಮಾರ 2012ನೇ ವರ್ಷದ ಐಪಿಎಸ್ ಅಧಿಕಾರಿಯಾಗಿದ್ದು, ಈಗಾಗಲೇ ಚಾಮರಾಜನಗರ ಸೇರಿದಂತೆ ನಾನಾ ಕಡೆ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಎಚ್. ಡಿ. ಆನಂಗ ಕುಮಾರ ಅವರಿಗೂ ವಿಜಯಪುರಕ್ಕೂ ಹಳೆಯ ನಂಟಿದೆ. ಈ ಹಿಂದೆ ವಿಜಯಪುರ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಆರೋಪ ಪ್ರಕರಣವನ್ನು ಸರಕಾರ ಸಿಐಡಿಗೆ […]

ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ವರ್ಗಾವಣೆ, ಎಚ್. ಡಿ. ಆನಂದ ಕುಮಾರ ನೂತನ ಎಸ್ಪಿ

ವಿಜಯಪುರ: ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಳೆದ ಒಂದೂವರೆ ವರ್ಷದಿಂದ ಎಸ್ಪಿಯಾಗಿದ್ದ ಅನುಪಮ ಅಗ್ರವಾಲ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. ಅನುಪಮ ಅಗ್ರವಾಲ ಅವರ ಜಾಗಕ್ಕೆ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿರುವ ಎಚ್. ಡಿ. ಆನಂದ ಕುಮಾರ ಅವರನ್ನು ವಿಜಯಪುರದ ನೂತನ ಎಸ್ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ವಿಜಯಪುರದಿಂದ ವರ್ಗಾವಣೆ ಮಾಡಿರುವ ಅನುಪಮ ಅಗರವಾಲ ಅವರಿಗೆ ಯಾವುದೇ ಜಾಗವನ್ನು ತೋರಿಸಲಾಗಿಲ್ಲ. ಈ ಇಬ್ಬರೂ ಐಪಿಎಸ್ ಆಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರದ […]