ಆ್ಯಂಬ್ಯೂಲನ್ಸ್ ನಲ್ಲಿಯೇ ಮಹಿಳೆಗೆ ಹೆರಿಗೆ ಮಾಡಿಸಿದ ಸಿಬ್ಬಂದಿ

ವಿಜಯಪುರ: ಮಹಿಳೆಯೊಬ್ಬಳು ಆಸ್ಪತ್ರೆಗೆ ಸಾಗಿಸುವಾಗ ಆ್ಯಂಬ್ಯೂಲನ್ಸ್ ನಲ್ಲಿಯೇ ಗಂಡು ಮುಗವಿಗೆ ಜನ್ಮ ನೀಡಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಬಳಿ ಪಟ್ಟಣದ ಬಳಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಬೈಲಕೂರ ಗ್ರಾಮದ ಭುವನೇಶ್ವರಿ ಬಸವರಾಜ ಛಲವಾದಿ(23) ಹೆರಿಗೆ ನೋವಿನಿಂದ ಬಳಲುತ್ತಿದ್ದಳು. ಆಕೆಯನ್ನು ನಾಲವತವಾಡದ 108 ಆ್ಯಂಬ್ಯೂಲನ್ಸ್ ನಲ್ಲಿ ಸಮೀಪದ ತಂಗಡಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋ್ಗಲಾತುತ್ತಿತ್ತು. ಆದರೆ, ಮಹಿಳೆಗೆ ಹೆರಿಗೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಆ್ಯಂಬ್ಯೂಲನ್ಸ್ ನಲ್ಲಿದ್ದ ಸಿಬ್ಬಂದಿಯಾದ ಸ್ಟಾಫ್ ನರ್ಸ್ ಶರಣು ನಾವಿ […]

ಮೈಸೂರು ಜಿಲ್ಲೆಯ ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಭೇಟಿ ನೀಡಿದ ಶಾಸಕ ಯತ್ನಾಳ

ಮೈಸೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದರು. 12ನೇ ಶತಮಾನದಲ್ಲಿ ಕಾಯಕ, ದಾಸೋಹ ತತ್ವಗಳು ಸಮಾಜದ ಎರಡು ಸಾಧನಾ ಪಥಗಳಾಗಿದ್ದವು. ಅವು 18ನೇ ಶತಮಾನಕ್ಕೆ ಮೈಸೂರು ಪ್ರಾಂತ್ಯದಲ್ಲಿ ವಿಸ್ತಾರವಾಗಿ ಹರಡಿಕೊಂಡದ್ದು ಶ್ರೀ ಗುರುಮಲ್ಲೇಶ್ವರರ ಕಾಲದಲ್ಲಿ.ಯೋಗವು ಶಿವಯೋಗವಾಗಿ, ಅಂಗವು ಲಿಂಗವಾಗಿ, ಭಕ್ತಸ್ಥಲವು ಐಕ್ಯಸ್ಥಲದಲ್ಲಿ ಲೀನವಾಗುವ ಸಂಪೂರ್ಣ ಶಿವತತ್ವವು ಶ್ರೀ ಗುರುಮಲ್ಲೇಶ್ವರರ ದಿವ್ಯಸಾನ್ನಿಧ್ಯದಲ್ಲಿ ಬೆಳೆದು ಶಿವಮಯವಾಯಿತು ಎಂಬ ಪ್ರತೀತಿ […]

ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಯತ್ನಾಳ

ಮೈಸೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಮನುಕುಲಕ್ಕೆ ಮಾರಕವಾಗಿರುವ ಕೊರೊನಾ ಮಹಾಮಾರಿಯನ್ನು ತೊಲಗಿಸಿ, ನಾಡಿನ ಜನತೆಗೆ ನೆಮ್ಮದಿಯ ದಿನಗಳನ್ನು ಕರುಣಿಸಲೆಂದು ಜಗನ್ಮಾತೆ ಚಾಮುಂಡೇಶ್ವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಭೇಟಿ ಮಾಡಿದ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ

ಬೆಂಗಳೂರು: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಅವರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇವಾದಳದ ವಿಜಯಪುರ ಜಿಲ್ಲಾಧ್ಯಕ್ಷ ಮತ್ತು ಅಖಿಲ ಕರ್ನಾಟಕ ಡಿ. ಕೆ. ಶಿವಕುಮಾರ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ,ಡಾ. ಗಂಗಾಧರ ಸಂಬಣ್ಣಿ ಉಪಸ್ಥಿತರಿದ್ದರು

ವಿಜಯಪುರದಲ್ಲಿ ಆರೋಗ್ಯ ಅಧಿಕಾರಿಗಳ ಸಂಘದ ರಾಜ್ಯ ಮಟ್ಟದ ಎರಡನೇ ಕಾರ್ಯಕಾರಿಣಿ ಸಭೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ಅಖಿಲ ಕರ್ನಾಟಕ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ರಾಜ್ಯ ಮಟ್ಟದ 2ನೇ ಕಾರ್ಯಕಾರಿಣಿ ಸಭೆ ನಡೆಯಿತು. ಸಂಘದ ರಾಜ್ಯ ಮತ್ತು ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಈ ಕಾರ್ಯಕಾರಿಣಿ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳ ಪದನಾಮ ಸಂಭ್ರಮಾಚರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಬೀರೇಂದ್ರ ಕೇಶವ, ಉಪಾಧ್ಯಕ್ಷ ಸಹದೇವ ಮತ್ತು ಮಮಿತ ಗಾಯಕವಾಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಚೆನ್ನಪ್ಪ ನಾಯಕ ಬಣಕರ, ರಾಜ್ಯ ಮಾಧ್ಯಮ ಕಾರ್ಯದರ್ಶಿ ಶಶಿಧರ ಸ್ವಾಮಿ ಹುಲಿಕಂತಿಮಠ […]

ರಾಜ್ಯದಲ್ಲಿ ಮೊದಲ ಸುಟ್ನಿಕ್-ವಿ ಕೊರೊನಾ ಲಸಿಕೆ ಅಭಿಯಾನ ಬೆಂಗಳೂರಿನಲ್ಲಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಸ್ಪುಟ್ನಿಕ್ ವಿ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ. ಕರೋನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ಸ್ಪುಟ್ನಿಕ್‌-ವಿ ರಾಜ್ಯದ ಮೊದಲ ಲಸಿಕಾ ಅಭಿಯಾನ ಇದಾಗಿದೆ. ಯುನೈಟೆಡ್‌ ಆಸ್ಪತ್ರೆಗೆ ಈಗಾಗಲೇ ಸಾಕಷ್ಟು ಡೋಸ್‌ ಗಳಷ್ಟು ಲಸಿಕೆ ಸರಬರಾಜಾಗಿದೆ. ಪ್ರತಿವಾರ ನಮ್ಮ ಅಗತ್ಯತೆಗೆ ತಕ್ಕಂತೆ ಲಸಿಕೆ ಸರಬರಾಜು ಮಾಡುವ […]

ಕೊರೊನಾದಿಂದ ಮೃತಪಟ್ಟ ಪಕ್ಷದ ಶಿಸ್ತಿನ ಸಿಪಾಯಿ, ಬಡ ಕಾರ್ಯಕರ್ತನ ಮನೆಗೆ ತೆರಳಿ ಲಕ್ಷ ರೂಪಾಯಿ ನೆರವು ನೀಡಿದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಆತ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಸಾಮಾನ್ಯ ಕಾರ್ಯಕರ್ತ. ಕಳೆದ ಹಲವಾರು ವರ್ಷಗಳಿಂದ ಕಚೇರಿಗೆ ಯಾರು ಬರಲಿ, ಬಿಡಲಿ. ಪ್ರತಿದಿನ ಬೆಳಿಗ್ಗೆ ತಪ್ಪದೆ ಬಂದು ಕಚೇರಿಯಲ್ಲಿ ಕಸಗೂಡಿಸಿ ಸ್ವಚ್ಛ ಮಾಡಿ ಮಧ್ಯಾಹ್ನ ಮನೆಗೆ ತೆರಳುತ್ತಿದ್ದ. ಅಷ್ಟೇ ಅಲ್ಲ, ಮಾಜಿ ಸಚಿವ ಎಂ. ಬಿ. ಪಾಟೀಲ ಅವರ ಅಪ್ಪಟ ಬೆಂಬಲಿಗನಾಗಿದ್ದ. ಜಿಲ್ಲೆ ಎಲ್ಲ ಕಾಂಗ್ರೆಸ್ ನಾಯಕರಿಗೂ ಚಿರಪರಿಚಿತನಾಗಿದ್ದ ವ್ಯಕ್ತಿ. ಆದರೆ, ಇತ್ತೀಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದ. ಆತನ ಹೆಸರು ದಾವಲಸಾಬ ಬಾಗವಾನ(59). ವಿಜಯಪುರ ನಗರದ ಜುಮ್ಮಾ ಮಸೀದಿ […]

ಕೊರೊನಾ ನಿಯಂತ್ರಣಕ್ಕಾಗಿ ಅರ್ಹ ಪಲಾನುಭವಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆಯ ಇ- ಆಡಳಿತ ನಿರ್ದೆಶಕಿ ಶಿಲ್ಪಾ ನಾಗ ಕರೆ

ವಿಜಯಪುರ: ಕೊರೊನಾ ಬಡವ ಶ್ರೀಮಂತ, ಹಿರಿಯರೂ, ಕಿರಿಯರೂ ಎನ್ನದೆ ಒಂದೂವರೆ ವರ್ಷದಿಂದ ಕಾಡುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಲು ಕಡ್ಡಾಯವಾಗಿ ಪ್ರತಿಯೊಬ್ಬರು ಲಸಿಕೆ ಹಾಕಿ ಕೊಳ್ಳಬೇಕು ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ ಇಲಾಖೆಯ ಇ- ಆಡಳಿತ ನಿರ್ದೆಶಕಿ ಶಿಲ್ಪಾ ನಾಗ ಕರೆ ನೀಡಿದ್ದಾರೆ. ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಆವರಣದ ಕ್ಷಯ ರೋಗ ನಿರ್ವಹಣೆ ತರಬೇತಿ ಸಭಾಂಗಣದಲ್ಲಿ ನಡೆದ ಎರಡು ದಿನಗಳ ಮೂರು ಜಿಲ್ಲೆಗಳ ಕೊವಿಡ್ ಲಸಿಕಾ ಆಂದೋಲನ ಹಾಗೂ ತರಬೇತಿ ಕಾರ್ಯಕ್ರಮವನ್ನು ವರ್ಚುವಲ್ ಸಮಾರಂಭದ ಮೂಲಕ […]

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವಿಗೆ ಕೇಂದ್ರ ಹಣಕಾಸು ಸಚಿವೆ ಒಪ್ಪಿಗೆ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮತ್ತು ಜಿ ಎಸ್ ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಕೇಂದ್ರ ಸಚಿವೆ ಈ ಭರವಸೆ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿನ ಆರ್ಥಿಕ […]

ಬಸವಾದಿ ಶರಣರು, ಅವರ ವಚನಗಳು, ಕೊಡುಗೆ ಬೆಳಕಿಗೆ ಬರಲು ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಕಾರಣ- ಎಂ. ಬಿ. ಪಾಟೀಲ

ವಿಜಯಪುರ: ಬಸವಾದಿ ಶರಣರು, ಅವರ ವಚನಗಳು ಮತ್ತು ಅವರ ಕೊಡುಗೆಗಳು ಜಗತ್ತಿಗೆ ತಿಳಿಯಲು ವಚನ ಪಿತಾಮಹ ಫ. ಗು. ಹಳಕಟ್ಟಿ ಅವರೇ ಕಾರಣ. ಒಂದು ವೇಳೆ ಫ. ಗು. ಹಳಕಟ್ಟಿ ಅವರು ಇರದಿದ್ದರೆ ಬಸವ ನಾಡಿನ ಶರಣ ಚರಿತ್ರೆ ಯಾರಿಗೂ ಗೊತ್ತಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಬಿ. ಎಲ್. ಡಿ. ಇ. ಸಂಸ್ಥೆಯ ಆವರಣದಲ್ಲಿರುವ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಕೇಂದ್ರದಲ್ಲಿ […]