ಒಂದೆರಡು ದಿನಗಳಲ್ಲಿ ಹೆಚ್ಚಿನ ಪ್ರಮಾಣ ಕೊರೊನಾ ಲಸಿಕೆ ಲಭ್ಯ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ಶಿವಮೊಗ್ಗ: ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಮುಂದಿನ ಒಂದು ವಾರದಲ್ಲಿ ಕೊರೊನಾ ಹತೋಟಿಗೆ ಬರುವ ನಿರೀಕ್ಷೆಯಿದೆ.‌‌ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೊರೊನಾ‌ ಪ್ರಮಾಣ ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ […]

ಅರ್ಹ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪರಿಹಾರಧನ ಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲೆಯ ಅಸಂಘಟಿತ ವಲಯದ 11 ವರ್ಗಗಳ ನೈಜ ಹಾಗೂ ಅರ್ಹ ಕಾರ್ಮಿಕರನ್ನು ಗುರುತಿಸುವ ಜೊತೆಗೆ ತ್ವರಿತವಾಗಿ ಪರಿಹಾರ ಧನ ವಿತರಿಸುವಂತೆ ಜಿಲ್ಲಾಧಿಕಾರಿ ಪಿ.‌ ಸುನಿಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಿಂದಾಗಿ ಅಸಂಘಟಿತ ವಲಯದ 11 ವರ್ಗಗಳ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಸರಕಾರ ಈ ಕಾರ್ಮಿಕರ ಒಂದು […]

ಸ್ಟೀಯರಿಂಗ್ ಹಿಡಿಯುವವರ ಕೈಚಳಕ- ಬಸವ ನಾಡಿನ ಡಿಪೋಗಳು, ಬಸ್ ನಿಲ್ದಾಣಗಳಲ್ಲಿ ಈಗ ಜಾಗೃತೆಯ ಚಿತ್ತಾರಗಳು

ವಿಜಯಪುರ: ಕೊರೊನಾ ಮತ್ತು ಲಾಕಡೌನ್ ಎಲ್ಲರಿಗೂ ನಾನಾ ರೀತಿಯ ಸಮಸ್ಯೆಗಳನ್ನು ತಂದೊಡ್ಡಿದ್ದರೆ, ಹಲವರಿಲ್ಲಿನ ಪ್ರತಿಭೆಯನ್ನು ಹೊರ ಹಾಕಲೂ ಕಾರಣವಾಗಿವೆ. ಲಾಕಡೌನ್ ಗೂ ಮುಂಚೆ ಸ್ಟೀಯರಿಂಗ್ ಹಿಡಿಯುತ್ತಿದ್ದ ಕೈಗಳು ಈಗ ಬಸ್ ಡಿಲೋ ಮತ್ತು ಬಸ್ ನಿಲ್ದಾಣಗಲಲ್ಲಿ ಚಿತ್ತಾರ ಮೂಡಿಸಲು ಕಾರಣವಾಗಿವೆ. ವಿಜಯಪುರ ಈಶಾನ್ಯ ಸಾರಿಗೆ ಸಿಬ್ಬಂದಿ ಈಗ ಲಾಕಡೌನ್ ಸಂದರ್ಭದಲ್ಲಿ ಬೇರೊಂದು ಕೆಲಸದ ಮೂಲಕ ಗಮನ ಸೆಳೆದಿದ್ದಾರೆ. ಕೆಲವು ಜನ ಪ್ರತಿಭಾನ್ವಿತ ಸಿಬ್ಬಂದಿ ತಮ್ಮ ಕಲೆಯ ಪ್ರದರ್ಶನ ಮಾಡಿದ್ದಾರೆ. ಬಿಡುವಿನ ಈ ಸಂದರ್ಭದಲ್ಲಿ ಪೇಟಿಂಗ್ ಮಾಡುವ ಮೂಲಕ […]

ಕೊರೊನಾ ಮೂರನೇ ಅಲೆ ಎದುರಿಸಲು, ಮಕ್ಕಳ ಚಿಕಿತ್ಸೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೊರೊನಾ ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಬೇಕಾಗುವ ಅವಶ್ಯಕ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ರೋಗ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ ಸಭೆ ನಡೆಸಿದ ಅವರು ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆತಲ್ಲಿ ಬಾಧಿತರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ […]

ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಸರಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಕಾಮಗಾರಿ ಪರಿಶೀಲನೆ

ವಿಜಯಪುರ: ವಿಜಯಪುರ ನಗರದ ಸರಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಕಾಮಗಾರಿಗಳು 15 ತಿಂಗಳಲ್ಲಿ ಪೂರ್ಣವಾಗಲಿವೆ. ಬಳಿಕ ಇದನ್ನು ಕೋವಿಡ್ ಆಸ್ಪತ್ರೆಯಾಗಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ‌. ವಿಜಯಪುರ ನಗರದ ಸರಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಈ ಆಸ್ಪತ್ರೆಯ ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ. ಮೊದಲ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಆರ್ […]

ವಿಜಯಪುರ ನಗರದ ಆದರ್ಶ ನಗರದಲ್ಲಿ ಕನೇರಿ ಮಠದ ಆರೋಗ್ಯ ವರ್ಧಕ ಔಷಧಿ ಉಚಿತವಾಗಿ ವಿತರಣೆ

ವಿಜಯಪುರ: ಕೊರೊನಾ ಸೋಂಕಿನ ವಿರುದ್ಧ ಮುನ್ನೆಚ್ಚರಿಕೆ ವಹಿಸಲು ಮತ್ತು ಆರೋಗ್ಯ ವರ್ಧಿಸಲು ಮಹಾರಾಷ್ಟ್ರದ ಕೊಲ್ಹಾಪುರದ ಕನೇರಿ ಮಠದ ಶ್ರೀ ಅದೃಷ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನೀಡಿರುವ ಆರೋಗ್ಯ ವರ್ಧಕ ಔಷಧಿಯ ವಿತರಣೆ ಕಾರ್ಯ ವಿಜಯಪುರ ಜಿಲ್ಲೆಯಲ್ಲಿ ಮುಂದುವರೆದಿದೆ. ವಿಜಯಪುರ ನಗರದ ಆದರ್ಶ ನಗರದಲ್ಲಿರುವ ಶ್ರೀ ಹನುಮಾನ ಮಂದಿರದಲ್ಲಿ ನಡೆದ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖಂಡ ಚಂದ್ರಶೇಖರ ಕವಟಗಿ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಗುರಲಿಂಗಪ್ಪ ಅಂಗಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿತ ಸದಸ್ಯರಾದ […]

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ- ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಮುಂಬರುವ ಚುನಾವಣೆಯನ್ನು ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುವುದಿಲ್ಲ. ಇದೆಲ್ಲ ಊಹಾಪೋಹ. ಸಿಎಂ ಬರಗಾಲ, ಪ್ರವಾಹ, ಕೋವಿಡ್ ವಿಚಾರಗಳನ್ನು ಅತ್ಯಂತ ಕ್ರೀಯಾಶೀಲತೆಯಿಂದ ನಿಭಾಯಿಸಿದ್ದಾರೆ. ಮುಂಬರುವ ಚುನಾವಣೆಯನ್ನೂ ಸಿಎಂ ನೇತ್ರತ್ವದಲ್ಲೇ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಗಾಳಿಮಾತಿಗೆ ಕಿವಿಗೊಡುವ ಅಗತ್ಯವಿಲ್ಲ, ಸಿಎಂ ಸಮರ್ಪಕವಾಗಿ […]

ಭಕ್ತರಿಂದ ಲಾಕಡೌನ್ ಉಲ್ಲಂಘಿಸಿ ಅತಿರೇಕ- ಪೊಲೀಸರಿಂದ ಹೊಳೆಬಬಲಾದಿ ಸದಾಶಿವ ಮಠಕ್ಕೆ ಪೊಲೀಸ್ ಕಾವಲು

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಬಬಲಾದಿ ಸದಾಶಿವ ಮುತ್ಯಾನ ಮಠಕ್ಕೆ ಪೊಲೀಸ್ ಕಾವಲು ಹಾಕಲಾಗಿದೆ. ಮಠದ ಹೊರ ಆವರಣದಲ್ಲಿ ಬಿಗೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಭಕ್ತರ ಅತಿರೇಕ ಜಿಲ್ಲಾಡಳಿತ ಈ ನಿರ್ಧಾರಕ್ಕೆ ಕಾರಣವಾಗಿದೆ. ಘಟನೆಯ ಹಿನ್ನೆಲೆ: ವಿಜಯಪುರ ಜಿಲ್ಲೆಯ ಹೊಳೆ ಬಬಲಾದಿ ಸದಾಶಿವ ಮಠಾಧೀಶ ಮತ್ತು ಕಾರ್ಣಿಕರು ನುಡಿಯುವ ಭವಿಷ್ಯ ನಿಖರವಷ್ಟೇ ಅಲ್ಲ, ಇಲ್ಲಿನ ಭಕ್ತರಿಗೆ ವೇದವಾಕ್ಯವಿದ್ದಂತೆ. ಕೊರೊನಾ ಕುರಿತು ಕಾರ್ಣಿಕ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ನುಡಿದ ಭವಿಷ್ಯ ಮತ್ತೆ ನಿಜವಾಗಿತ್ತು. ಈ ಹಿನ್ನೆಲೆಯಲ್ಲಿ ಭಕ್ತರ […]

ಪಿ ಮತ್ತು ಕೆ ರಸಗೊಬ್ಬರಗಳ ಎನ್ ಬಿ ಎಸ್ ದರ ಪರಿಷ್ಕರಣೆ- ಈಗ ನಿಗದಿಯಾದ ಬೆಲೆ ಎಷ್ಟು ಗೊತ್ತಾ?

ವಿಜಯಪುರ: ಕೇಂದ್ರ ಸರಕಾರವು ಮೇ 20 ರಂದು ಹೊರಡಿಸಿರುವ ಸೂಚನೆಗೆ ಅನುಗುಣವಾಗಿ ಪಿ ಮತ್ತು ಕೆ ರಸಗೊಬ್ಬರಗಳಎನ್ ಬಿ ಎಸ್) ದರಗಳನ್ನು ಪರಿಷ್ಕರಿಸಲಾಗಿದೆ ಎಂದು ವಿಜಯಪುರ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಎಲ್ಲ ರಸಗೊಬ್ಬರ ಕಂಪನಿಗಳ ಡಿಎಪಿ ಮತ್ತು ಎನ್ ಪಿ ಮತ್ತು ಎನ್ ಪಿ ಕೆ ರಸಗೊಬ್ಬರಗಳ ದರಗಳು ಈ ಕೆಳಗಿನಂತಿವೆ. ಪ್ರತಿ ಚೀಲದ ಹೊಸ ದರ ಈ ರೀತಿ ಇದೆ. ನೀಮ್ ಕೋಟೆಡ್ ಯೂರಿಯಾ(45 ಕೆಜಿಬ್ಯಾಗ) ರೂ. 266 ರೂ. ಡಿಎ.ಪಿ- ರೂ. 1200 […]

18 ರಿಂದ 45 ವರ್ಷದೊಳಗಿನ ಮುಂಚೂಣಿ ಕಾರ್ಯಕರ್ತರನ್ನು ಗುರುತಿಸಿ ಒಂದು ವಾರದೊಳಗೆ ಲಸಿಕೆ ನೀಡಿ- ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ :ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 18 ರಿಂದ 45 ವರ್ಷದೊಳಗಿನ ಮುಂಚೂಣಿ ಕಾರ್ಯಕರ್ತರನ್ನು ಗುರುತಿಸಬೇಕು. ಅದರಂತೆ 45 ವರ್ಷ ಮೇಲ್ಪಟ್ಟವರಿಗೂ ಒಂದು ವಾರದಲ್ಲಿ ಗುರುತಿಸಿ ಕೋವ್ಯಾಕ್ಸಿನ್ ಎರಡನೇ ಲಸಿಕೆ ನೀಡಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಸೂಚಿಸಿದ್ದಾರೆ. ವಿಜಯಪುರ ಜಿ. ಪಂ.‌ ಸಭಾಂಗಣದಲ್ಲಿ ಜಿಲ್ಲಾ ಮತ್ರು ತಾಲೂಕಯ ಮಟ್ಟದ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಮೊಬೈಲ್) […]