ಡಿಗ್ರಿ, ಪಿಜಿ ಪರೀಕ್ಷೆಗಳು ತಡವಾದರೂ ಆನ್‌ಲೈನ್‌ ಬೋಧನೆ ಮುಂದುವರಿಕೆ- ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ತಡವಾದರೂ ಆನಲೈನ್ ಬೋಧನೆ ಮುಂದುವರೆಯಲಿದೆ ಎಂದು ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪದವಿ ಮತ್ತು ವಿವಿ ಗಳು ಕೋರ್ಸ್‌ಗಳ ಸಮ ಸ್ಥಾನಿಕ ಸೆಮಿಸ್ಟರ್‌ ಕೋರ್ಸ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬೇಕು. ಈ ಕೋರ್ಸ್‌ಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೊರೊನಾ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಅಶ್ವತ್ಥ ನಾರಾಯಣ ತಿಳಿಸಿದರು. ಬೆಸ ಸೆಮಿಸ್ಟರ್‌ಗಳಿಗೆ ಪರೀಕ್ಷೆಗಳನ್ನು ಇನ್ನೂ […]

ಜಿಲ್ಲೆಯಲ್ಲಿ ಬ್ಯಾಕ್ ಫಂಗಸ್ ಸಂಖ್ಯೆ 50ಕ್ಕೇರಿಕೆ- ಆರ್ ಎಂ ಪಿ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡಿದರೆ ಕ್ರಮ- ಪಿ. ಸುನೀಲ ಕುಮಾರ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಗಂಭೀರ ಸ್ವರೂಪದ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಇಳಿಮುಖ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ನಿರಂತರ ಮತ್ತು ಗುಣಮಟ್ಟದ ಕೊರೊನಾ ರೋಗ ಲಕ್ಷಣ ಪರೀಕ್ಷೆ, ಆ್ಯಪ್ ಮೂಲಕ ಪ್ರತಿದಿನ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರೊಂದಿಗೆ ಬೆಡ್ ನಿರ್ವಹಣೆ, ನಿಗದಿತ ತಂತ್ರಾಂಶದಲ್ಲಿ ಕೊರೊನಾ ರೋಗಿಗಳ ದಾಖಲು, ಬಿಡುಗಡೆ, ಸಾವು, […]

ಆರೋಗ್ಯ ಕವಚ ಆ್ಯಂಬೂಲನ್ಸ್ ನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಸಿಬ್ಬಂದಿ

ವಿಜಯಪುರ- ತುಂಬು ಗರ್ಭಿಣಿ ಮಹಿಳೆಯೊಬ್ಬಳು ಆರೋಗ್ಯ ಕವಚ ವಾಹನದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪ ಈ ಹೆರಿಗೆಯಾಗಿದೆ. ಆಲಕೊಪ್ಪ ನಿವಾಸಿ ಲಕ್ಷ್ಮೀ ಬಿರಾದಾರ 108 ಆರೋಗ್ಯ ಕವಚ ಆ್ಯಂಬೂಲನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆಂದು ಆಸ್ಪತ್ರೆಗೆ ತರುವ ವೇಳೆ ಮಾರ್ಗ ಮದ್ಯದಲ್ಲಿ ವಾಹನದಲ್ಲಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾಹನದಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ 108 ಆ್ಯಂಬೂಲನ್ಸ್ ಸಿಬ್ಬಂದಿ ಅನೀಲಕುಮಾರ ಗುಪ್ತಾ […]

ವಿಜಯಪುರದಲ್ಲಿ ಯತ್ನಾಳ ಅಧ್ಯಕ್ಷತೆಯ ಸಂಸ್ಥೆಯಿಂದ ಆಕ್ಸಿಜನ್ ಆನ್ ವ್ಹೀಲ್ ಉಚಿತ ಸೇವೆ ಆರಂಭ

ವಿಜಯಪುರ: ವಿಜಯಪುರ ಜಿಲ್ಲೆ ಕೊರೊನಾ ಎರಡನೇ ಅಲೆ ಮುಂದುವರೆದಿದ್ದು, ಕೊರೊನಾ ಸೋಂಕಿತರು ಸೂಕ್ತ ವೈದ್ಯಕೀಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ. ಇದನ್ನು ಮನಗಂಡ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷರಾಗಿರುವ ಶ್ರೀ ಸಿದ್ದೇಶ್ವರ ಸಂಸ್ಥೆ ಮತ್ತು ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ರಾಜ್ಯದಲ್ಲಿಯೇ ಪ್ರಥಮವಾಗಿ ಖಾಸಗಿ ಸಂಸ್ಥೆಯಿಂದ ಆಕ್ಸಿಜನ್ ಆನ್ ವ್ಹೀಲ್ ಸೇವೆ ಆರಂಭವಾಗಿದೆ. ಶ್ರೀ ಸಿದ್ಧೇಶ್ವರ ಸಂಸ್ಥೆಗೆ ಸೇರಿರುವ ಶಾಲಾ ಬಸ್ಸುಗಳಲ್ಲಿ ಆಕ್ಸಿಜನ್ ಮಷೀನ್ ಒಳಗೊಂಡ ಸೇವೆ ಆರಂಭವಾಗಿದೆ. ಈ ವಾಹನಗಳಿಗೆ […]

ಬಿ ಎಲ್ ಡಿ ಆಸ್ಪತ್ರೆಯಲ್ಲಿ ಮೂರು ಜನ ಬ್ಲ್ಯಾಕ್ ಫಂಗಸ್ ರೋಗಿಗಳು ಗುಣಮುಖ- ಆರು ಜನರಿಗೆ ಶಸ್ತ್ರಚಿಕಿತ್ಸೆ- ಉಪಕುಲಪತಿ ಡಾ. ಮುಧೋಳ

ವಿಜಯಪುರ: ಕೊರೊನಾದಿಂದ ಗುಣಮುಖರಾಗಿದ್ದ ವ್ಯಕ್ತಿಗಳಲ್ಲಿ ಕಾಣಿಸಿಕೊಳ್ಳುವ ಕಪ್ಪು ಶಿಲೀಂದ್ರ(ಬ್ಲಾಕ್ ಫಂಗಸ್) ರೋಗಿಗಳ ಚಿಕಿತ್ಸೆಗೆ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಆರಂಭಿಸಲಾಗಿದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿವಿ ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ನೆರೆಯ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ, ವಿಜಯಪುರದ ಪಕ್ಕದ ಕಲಬುರಗಿ, ಬಾಗಲಕೋಟೆ, ಸೇರಿದಂತೆ ನಾನಾ ಜಿಲ್ಲೆಗಳ ಒಟ್ಟು 25 ರೋಗಿಗಳು ಇಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ನಿನ್ನೆ ಮೂರು ಗುಣಮುಖರಾಗಿ […]

ಕೊರೊನಾ ನಿಯಂತ್ರಣ- ಗ್ರಾ. ಪಂ.‌ ಕಾರ್ಯ ಪಡೆಗಳ ಕೆಲಸಕ್ಕೆ ವಿಜಯಪುರ ಜಿಲ್ಲಾಧಿಕಾರಿ ಶ್ಲಾಘನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 212 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ಪಡೆಗಳು ಈಗಾಗಲೇ ಸಭೆ ನಡೆಸಿ, ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ‌. ವಿಜಯಪುರ ಜಿಲ್ಲೆಯ ಚಢಚಣದಲ್ಲಿ ಕಾರ್ಯಪಡೆ ಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ತಾವು ಈಗಾಗಲೇ ಗುಣಕಿ, ಝಳಕಿ, ಹೋರ್ತಿ ಈ ಮೂರು ಹಳ್ಳಿಗಳಲ್ಲಿ ಭೇಟಿ ನೀಡಿದ್ದು, ಗ್ರಾಮ ಪಂಚಾಯಿತಿ ಕಾರ್ಯ ಪಡೆಗಳು ಯಾವ ರೀತಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲನೆ ನಡೆಸಿರುವುದಾಗಿ […]

ಕೊರೊನಾ ನಿಯಂತ್ರಣದಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಸಹಭಾಗಿತ್ವ ಅಗತ್ಯ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಖಾಸಗಿ ಸಂಘ-ಸಂಸ್ಥೆಗಳ ಸಹಭಾಗಿತ್ವವಿದ್ದಾಗ ಮಾತ್ರ ಪರಿಣಾಮಕಾರಿಯಾಗಿ ಕೊರೊನಾ ನಿಯಂತ್ರಣ ಸಾಧ್ಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ರಾಜೀವ್ ಗಾಂಧಿ ಮಹಾವಿದ್ಯಾಲಯದಲ್ಲಿ ಆರಂಭವಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಸಂಘ-ಸಂಸ್ಥೆಗಲ ಸಹಯೋಗದಿಂದ ಕೊರೊನಾ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಹೀಗಾಗಿ ಕೊರೊನಾ ವಿರುದ್ಧದ ಹೋರಾಟಕ್ಕೆ ಖಾಸಗಿ ಸಂಘ-ಸಂಸ್ಥೆಗಳು ಮುಂದಾಗಬೇಕು. ಈ ನಿಟ್ಟಿನಲ್ಲಿ […]

ಕೊರೊನಾ ಗೆದ್ದವರ ಕಥೆ- ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ತಾನು ಗುಣವಾಗಿದ್ದಷ್ಟೇ ಅಲ್ಲ, ತಾಯಿಯನ್ನು ಬದುಕಿಸಿದ ಮಗನ ಸ್ಟೋರಿ ಇದು

ವಿಜಯಪುರ: ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನಸಾಮಾನ್ಯರಲ್ಲಿ ಆತಂಕಕ್ಕೆ ಕಾರಣವಾಗಿದ್ದರೆ, ಮತ್ತೋಂದೆಡೆ ಕೊರೊನಾದಿಂದ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಬಸವ ನಾಡಿನ ಜನರ ಪಾಲಿಗೆ ಸ್ವಲ್ಪ ನೆಮ್ಮದಿಯನ್ನು ಮೂಡಿಸಿದೆ. ಇದೇ ರೀತಿ ಕೊರೊನಾ ಸೋಂಕಿತನಾಗಿ ಆಸ್ಪತ್ರೆ ಸೇರಿದ್ದ ವಿಜಯಪುರ ನಗರದ ಜಲನಗರದ ಯುವಕ ಮತ್ತು ವ್ಯಾಪಾರಿ ಸಂಜೀವ ಗುನ್ನಾಪುರ ಸಾಕಷ್ಟು ಸಂಕಷ್ಟಗಳ ನಡುವೆಯೂ ತಾವೇ ನೈತಿಕ ಸ್ಥೈರ್ಯ ಹೆಚ್ಚಿಸಿಕೊಂಡು ಗುಣಮುಖರಾಗಿದ್ದಾರೆ. ಅಂಥವರ ಬಗ್ಗೆ ಬೆಳಕು ಚೆಲ್ಲಲು ಬಸವ ನಾಡು ನಿರ್ಧರಿಸಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ಅನುಭವ ಹಂಚಿಕೊಂಡು […]

ಲಾಕಡೌನ್ ಯಶಸ್ಸಿಗಾಗಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಆದರೂ ಜನರು ಲಾಕಡೌನ್ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟರ್ ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ‌. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ […]

ನಾನಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಕೊಡುಗೆಯಾಗಿ ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಜಿಲ್ಲೆಯ ನಾನಾ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ತಿಳಿಸಿದ್ದಾರೆ. ಮೇ 19ರ ವರೆಗೆ ನಾನಾ ದಾನಿಗಳಿಂದ, ಸಂಘ-ಸಂಸ್ಥೆಗಳಿಂದ ಸ್ವೀಕರಿಸಲಾದ ಹಾಗೂ ಕಚೇರಿಯಿಂದ ಖರೀದಿಸಲಾದ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು ವೆಂಟಿಲೇಟರ್ಸ ಗಳನ್ನು […]