ಬಸವ ನಾಡಿನಲ್ಲೊಂದು ಮಾದರಿ ವಿವಾಹ- ಈ ದಂಪತಿ ಮಾಡಿದ್ದೇನು ಗೊತ್ತಾ?
ಬಸವ ನಾಡು ವಿಜಯಪುರ- ಬಸವ ನಾಡು ವಿಜಯಪುರ ಜಿಲ್ಲೆಯಲ್ಲೊಂದು ಮಾದರಿ ವಿವಾಹ ನಡೆದಿದೆ. ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಮಾರ್ಗಸೂಚಿ ಪಾಲಿಸಿದ್ದಷ್ಟೇ ಅಲ್ಲ, ಈ ದಂಪತಿ ಇತರ ವಿವಾಹಗಳಿಗೂ ಸ್ಪೂರ್ತಿಯಾಗುವ ಕೆಲಸ ಮಾಡಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂದರೆ, ಅಂಬಿಕಾ ಮತ್ತು ಪ್ರಶಾಂತ ಜೋಡಿ ಇತ್ತೀಚೆಗೆ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಆದರೆ, ಈ ಶುಭ ಸಂದರ್ಭದಲ್ಲಿ ಜನಸಾಮಾನ್ಯರೂ ಕೂಡ ಭೇಷ ಎನಿಸುವ ಮಾದರಿ ಕೆಲಸ ಮಾಡಿದೆ. ಇದು ಕೊರೊನಾ […]
ಲಾಕಡೌನ್ ಸಂದರ್ಭದಲ್ಲಿ ಬಸವ ನಾಡಿನಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಇಳಿಕೆ- ಅಧ್ಯಯನ ವರದಿ
ಬಸವ ನಾಡು ವಿಜಯಪುರ: ರಾಜ್ಯಾದ್ಯಂತ ಈಗ ಕೊರೊನಾ ಎರಡನೇ ಭೀಕರವಾಗಿದ್ದು, ದಿನೇ ದಿನೇ ತನ್ನ ಪ್ರಭಾವವನ್ನು ಹೆಚ್ಚಿಸುತ್ತ ಸಾಗಿದೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರಕಾರ ಜನತಾ ಕರ್ಫ್ಯೂ ಮತ್ತು ಲಾಕಡೌನ್ ಜಾರಿ ಮಾಡಿದೆ. ಈ ಅವಧಿಯಲ್ಲಿ ರಾಜ್ಯದ 23 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹರಡುವ ಪ್ರಮಾಣ ಹೆಚ್ಚಾಗಿದ್ದರೆ, ಉಳಿದ ಏಳು ಜಿಲ್ಲೆಗಳಲ್ಲಿ ಕಡಿಮೆಯಾಗಿದೆ.ಈ ಏಳು ಜಿಲ್ಲೆಗಳಲ್ಲಿ ಬಸವ ನಾಡು ವಿಜಯಪುರ ಜಿಲ್ಲೆಯೂ ಒಂದಾಗಿರುವುದು ಸಂತಸ ತಂದಿದೆ. ವಿಜಯಪುರ ಜಿಲ್ಲೆಯಲ್ಲಿ ಪ್ರತಿನಿತ್ಯ 300 ರಿಂದ 500ಕ್ಕೂ […]
ಕಾಲ್ ಸೆಂಟರ್ ಮೂಲಕ ಆಸ್ಪತ್ರೆಗಳಲ್ಲಿನ ರಿಯಾಲಿಟಿ ಚೆಕ್ -ಸಚಿವ ಅರವಿಂದ ಲಿಂಬಾವಳಿ
ಬಸವ ನಾಡು ಬೆಂಗಳೂರು: ಆಸ್ಪತ್ರೆಗಳಲ್ಲಿರುವ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಮತ್ತು ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕರೋನ ಸೋಂಕಿತರಿಗೆ ನೆರವು ನೀಡಲು ಸ್ಥಾಪಿಸಿರುವ 1912 ಸಹಾಯವಾಣಿಯ ಹೆಚ್ಚುವರಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದರಿಂದ ಆಸ್ಪತ್ರೆಗಳಿಂದ […]
ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಕ್ರಮ- ಡಿಸಿಎಂ ಡಾ. ಸಿ. ಎನ್. ಅಶ್ವತ್ಥ ನಾರಾಯಣ
ಬಸವ ನಾಡು ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕೆ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೊವ್ಯಾಕ್ಸಿನ್ ಲಸಿಕೆ ತಯಾರಿಕೆ ಘಟಕ ಸ್ಥಾಪನೆಯಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಮತ್ತು ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜಧಾನಿಗೆ ಹತ್ತಿರದಲ್ಲಿರುವ ಕೋಲಾರ ಜಿಲ್ಲೆಯ ಮಾಲೂರಿಗೆ ಕೋವ್ಯಾಕ್ಸಿನ್ ತಯಾರಿಕೆ ಘಟಕ ಬರುತ್ತಿದೆ. ಅಲ್ಲಿಗೆ ರೈಲು ಸೇರಿದಂತೆ ಉತ್ತಮ ಸಂಪರ್ಕ ವ್ಯವಸ್ಥೆ ಇದೆ. ಅಲ್ಲಿಯೂ ಲಸಿಕೆ ತಯಾರಾಗಲಿದೆ. ಈಗಾಗಲೇ ಸರಕಾರ ಎಲ್ಲ […]
ಅಣ್ಣನ ಜನ್ಮಸ್ಥಳದಲ್ಲಿ ಸರಳವಾಗಿ ಬಸವ ಜಯಂತಿ ಆಚರಣೆ
ಬಸವ ನಾಡು ವಿಜಯಪುರ- ಅಣ್ಣ ಬಸವಣ್ಣನವರ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಬಸವ ಜನ್ಮಸ್ಥಳದಲ್ಲಿ ಸರಳವಾಗಿ ಬಸವ ಜಯಂತಿಯನ್ನು ಆಚರಿಸಲಾಯಿತು. ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಬಸವ ಜನ್ಮ ಸ್ಮಾರಕದಲ್ಲಿ ಸಂಪ್ರದಾಯದಂತೆ ವಿರಕ್ತಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿರು. ಬಸವರಾಜ ಹಾರಿವಾಳ, ಶ್ವೇತಾ ಬಸವರಾಜ ಕಿಣಗಿ, ಸ್ಪಂದನಾ ರವೀಂದ್ರ ಕಿಣಗಿ ಅವರು ಸಾಮಾಜಿಕ ಅಂತರ ಕಾಯ್ದುಕೊಂಡು ಬಾಲ ಬಸವೇಶ್ವರರ ಬೆಳ್ಳಿಯ ಮೂರ್ತಿಯನ್ನು ತೊಟ್ಟಿಲಿನಲ್ಲಿ ಹಾಕಿ ತೂಗಿ ನಾಮಕಾರಣ ಮಾಡುವ ಮೂಲಕ ತೊಟ್ಟಿಲೋತ್ಸವ ಕಾರ್ಯಕ್ರಮ ನೆರವೇರಿಸಿದರು. […]
ವಿಜಯಪುರದಲ್ಲಿ ಸರಳವಾಗಿ ಬಸವ ಜಯಂತಿ ಆಚರಣೆ
ಬಸವ ನಾಡು ವಿಜಯಪುರ: ಕೊರೊನಾ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಬೆಳಿಗ್ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿ ಅನುಪಮ ಅಗ್ರವಾಲ, ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ ಮತ್ತು ಇತರ ಗಣ್ಯರು ಬಸವೇಶ್ವರ ಚೌಕಿನಲ್ಲಿರುವ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ […]
ಐಸಿಎಂ ಗೈಡಲೈನ್ಸ್ ಲಾಕಢೌನ್ ಬಗ್ಗೆ ಸಿಎಂ ನಿರ್ಧರಿಸುತ್ತಾರೆ- ಡಿಸಿಎಂ ಗೋವಿಂದ ಕಾರಜೋಳ
ಬಸವ ನಾಡು ವಿಜಯಪುರ- ಕೊರೊನಾ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಬೇಕೆನ್ನುವ ಐಸಿಎಂಆರ್ ಸಲಹೆಯ ಕುರಿತು ಸಿಎಂ ನಿರ್ದಾರ ಕೈಗೊಳ್ಳಲಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ಕುರಿತು ತಜ್ಞರೊಂದಿಗೆ ಚರ್ಚಿಸಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ ಸಿಎಂ ನಿರ್ಣಯ ಕೈಗೊಳ್ಳಲಿದ್ದಾರೆ. ಈ ಕುರಿತು ಈಗಲೇ ಹೇಳಲು ಸಾಧ್ಯವಿಲ್ಲ. ಸಾಧಕ ಬಾಧಕ ತಿಳಿದುಕೊಂಡು ತಜ್ಞರ ಅಭಿಪ್ರಾಯದಂತೆ […]
ಎರಡನೆ ಡೋಸ್ ಪಡೆಯುವ ಬಾಕಿ ಫಲಾನುಭವಿಗಳಿಗೆ ಕೊರೊನಾ ಲಸಿಕೆ ನೀಡಲು ಆದ್ಯತೆ- ಡಿಸಿ ಪಿ. ಸುನೀಲ ಕುಮಾರ
ಬಸವ ನಾಡು ವಿಜಯಪುರ: ಮೇ 07 ರಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳು 45 ವರ್ಷ ಮೇಲ್ಪಟ್ಟವರಿಗೆ ಹಂಚಿಕೆಯಾದ ಕೊರೊನಾ ಲಸಿಕೆಗಳನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ 18 ರಿಂದ 44 ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಮೊದಲನೇ ಡೋಸ್ ಪಡೆದ ಅನೇಕ ಫಲಾನುಭವಿಗಳು ಎರಡನೇ ಡೋಸ್ ಲಸಿಕೆ ಪಡೆಯಬೇಕಾಗಿದೆ. […]
ಲಾಕಡೌನ್ ಹಿನ್ನೆಲೆ ವಿಜಯಪುರದಲ್ಲಿ ಸದ್ದುಗದ್ದಲವಿಲ್ಲದೇ ನಡೆದಿದೆ ಅನ್ನದಾಸೋಹ ಕಾರ್ಯ
ಬಸವ ನಾಡು ವಿಜಯಪುರ- ಒಂದೆಡೆ ಕೊರೊನಾ ಸಂಕಷ್ಟ ಮತ್ತೋಂದೆಡೆ ಲಾಕಡೌನ್ ಮಧ್ಯೆ ಕೊರೊನಾ ರೋಗಿಗಳ ಜೊತೆ ಅವರ ಸಂಬಂಧಿಕರೂ ಸಂಕಷ್ಟ ಎದುರಿಸುತ್ತಿದ್ದಾರೆ. ವಿಜಯಪುರ ನಗರದ ನಾನಾ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರು ದಾಖಲಾಗಿದ್ದರೆ ರೋಗಿಗಳ ಜೊತೆ ಬಂದಿರುವ ಸಂಬಂಧಿಕರಿಗೂ ಲಾಕಡೌನ್ ಬಿಸಿ ಬಲವಾಗಿಯೇ ತಟ್ಟಿದೆ. ಇದನ್ನು ಅರಿತ ವಿಜಯಪುರದ ಗಜಾನನ ಮಹಾಮಂಡಳ ನಾನಾ ಆಸ್ಪತ್ರೆಗಳಿಗೆ ತೆರಳಿ ಕೊರೊನಾ ಸೋಂಕಿತರ ಸಂಬಂಧಿಕರಿಗೆ ಒಂದಲ್ಲ, ಎರಡು ಹೊತ್ತು ಉತ್ತಮ ಗುಣಮಟ್ಟದ ಊಟದ ಪಾಕೀಟ್ ನೀಡಿವ ಮೂಲಕ ಮೌನವಾಗಿಯೇ ಅನ್ನ ದಾಸೋಹ ಕಾರ್ಯದಲ್ಲಿ […]
ಜನರ ಪ್ರಾಥಮಿಕ ನಿರ್ಲಕ್ಷ ಬೆಡ್, ಆಕ್ಸಿಜನ್ ಬೇಡಿಕೆ ಹೆಚ್ಚಳಕ್ಕೆ ಕಾರಣ- ಡಿಸಿಎಂ ಗೋವಿಂದ ಕಾರಜೋಳ
ವಿಜಯಪುರ- ಜನರು ಕೊರೊನಾ ವಿಚಾರದಲ್ಲಿ ಬೇಗನೇ ಚಿಕಿತ್ಸೆ ಪಡೆಯದೆ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಆತಂಕ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆ ಬುರಣಾಪುರ ಬಳಿ ಅಧಿಕಾರಿಗಳ ಜೊತೆ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ವೇಳೆ ವಕೀಲರೊಬ್ಬರು ಮೊಬೈಲ್ ಕರೆ ಮಾಡಿದ್ದರು. ಈ ಸಂದರ್ಭದಲ್ಲಿ ಪೋನ್ ಸಂಭಾಷಣೆಯಲ್ಲಿ ತೊಡಗಿದಾಗ ಕಾರಜೋಳ ಈ ರೀತಿ ಹೇಳಿದರು. ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದರೂ ಎಂಟ್ಹತ್ತು ದಿನ ಮನೆಯಲ್ಲಿಯೇ ಮಲಗುತ್ತಾರೆ. ನಂತರ ಉಸಿರಾಟ ಸಮಸ್ಯೆ ಎದುರಾದ ತಕ್ಷಣ ಆಸ್ಪತ್ರೆಯಲ್ಲಿ ಬೆಡ್, […]