ನಿನ್ನೆ ಪೊಲೀಸರಿಂದ ಬೆತ್ತ ಏಟು ತಿಂದ ಯುವಕ- ಇಂದು ಕೋರ್ಟಿನಲ್ಲಿ ದಂಡ ಕಟ್ಟಿ ಬಂದು ಪೊಲೀಸರ ಕ್ಷಮೆಯಾಚನೆ- ಯಾಕೆ ಗೊತ್ತಾ?

ಬಸವ ನಾಡು ವಿಜಯಪುರ- ನಿನ್ನೆ ಸೋಮವಾರ ಪೊಲೀಸರ ಮೇಲೆ ಕಾರು ಹತ್ತಿಸಲು ಹೋಗಿ ಬೆತ್ತದ ರುಚಿ ಉಂಡಿದ್ದ ಯುವಕನ ವಿಡಿಯೋ ವೈರಲ್ ಆಗಿತ್ತು. ಇಂದು ಅದೇ ಯುವಕ ಪೊಲೀಸರಿಗೆ ಕ್ಷಮೆಯಾಚಿಸಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾನೆ.ಅಷ್ಟಕ್ಕೂ ಆಗಿದ್ದೇನೆಂದರೆ ನಿನ್ನೆ ಬಸವೇಶ್ವರ ಸರ್ಕಲ್ ನಲ್ಲಿ ಪೊಲೀಸರು ಕಾರಿನಿಂದ ಇಳಿಸಿ ಯುವಕನೊಬ್ಬನಿಗೆ ಬೆತ್ತದ ರುಚಿ ತೋರಿಸಿದ್ದರು. ಈ ಕುರಿತಾದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ, ಅದರ ಹಿಂದಿನ ಅಸಲಿಯತ್ತು ಇಂದು ಬಯಲಾಗಿದೆ.ಬಸವರಾಜ ಶಾಂತಯ್ಯ ಕರಜಗಿ ನಿನ್ನೆ ತನ್ನ ಕಾರು ಸಂಖ್ಯೆ KA-22.P-0202 […]

ನ್ಯೂ ವಿಸ್ತಾ ಯೋಜನೆ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಬಳಸಿ- ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ, ಕೇಂದ್ರ ಸರಕಾರಗಳು ವಿಫಲ- ಎಂ. ಬಿ. ಪಾಟೀಲ

ಬಸವ ನಾಡು ವಿಜಯಪುರ- ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೊರೊನಾ ಎರನಡೇ ಅಲೆಯನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.ವಿಜಯಪುರದಲ್ಲಿ ಬಿ ಎಲ್ ಡಿ ಇ ವಿವಿಯಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ಪಾಲಿನ ರೆಮಿಡಿಸಿವರ್ ಔಷಧಿ ನಮಗೆ ಹಂಚಿಕೆಯಾಗಿಲ್ಲ. ಆಕ್ಸಿಜನ್ ವಿಷಯದಲ್ಲಿಯೂ ಹಾಗೇ ಆಗಿದೆ. ಆದರೆ, ಸುಪ್ರೀಂ ಕೋರ್ಟ್ ಉಪಕಾರದಿಂದ ನಮಗೆ ಆಕ್ಸಿಜನ್ ಸಿಗುತ್ತಿದೆ ಎಂದು […]

ವಿಜಯಪುರ ಎಂಸಿಎಚ್ ಆಸ್ಪತ್ರೆ ವೈದ್ಯರ ಅಧ್ವಾನ- ಬಿ ಎಲ್ ಡಿ ಇ ಆಸ್ಪತ್ರೆ ವೈದ್ಯರಿಂದ ಗರ್ಭಿಣಿ, ಮಗುವಿಗೆ ಜೀವದಾನ- ತಡವಾಗಿ ಬೆಳಕಿಗೆ ಬಂದ ಘಟನೆ

ಬಸವ ನಾಡು ವಿಜಯಪುರ- ಬಸವನಾಡು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ(ಎಂಸಿಎಚ್) ಅಧ್ವಾನದ ಕೇಂದ್ರವಾಗುತ್ತಿದೆ. ಇಲ್ಲಿಗೆ ಬರುವ ಗರ್ಭಿಣಿ ಮಹಿಳೆಯರಿಗೆ ಸೂಕ್ತ ಚಿಕಿತ್ಸೆ ನೀಡದೇ ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.ಪೂಜಾ ಬಿಜ್ಜರಗಿ ಎಂಬ ಗರ್ಭಿಣಿ ಮಹಿಳೆ ಏ. 19 ರಂದು ಬೆಳಿಗ್ಗೆ 6 ಗಂಟೆಗೆ ಹೆರಿಗೆಗಾಗಿ ಜಿಲ್ಲಾಸ್ಪತ್ರೆಯ ಎಂಸಿಎಚ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಯುವತಿಗೆ ಇದು ಎರಡನೇ ಹೆರಿಗಯಾಗಿತ್ತು. ಅದೇ ದಿನ ಬೆ. 11.30ರ ಸುಮಾರಿಗೆ ಹೆರಿಗೆ ನೋವಿದ್ದರೂ ನೆಲಮಹಡಿಯಿಂದ […]

ಸರಕಾರದಿಂದ ಬಿ ಎಲ್ ಡಿ ಇ ಆಸ್ಪತ್ರೆ ಕೊರೊನಾ ರೋಗಿಗಳಿಗೆ ಸಂಕಷ್ಟ- ಸೂಕ್ತ ಪ್ರಮಾಣದಲ್ಲಿ ರೆಮಿಡಿಸಿವಿರ್ ಎಂಜೆಕ್ಷನ್ ನೀಡದೇ ರಾಜಕೀಯ?

ಬಸವ ನಾಡು ವಿಜಯಪುರ- ವಿಜಯಪುರದಲ್ಲಿ ಕೊರೊನಾ ರೋಗಿಗಳು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಈಗಾಗಲೇ ಸರಕಾರಕ್ಕಿಂತ ಕಡಿಮೆ ದರದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಮತ್ತು ಜಿಲ್ಲಾಸ್ಪತ್ರೆಗಿಂತಲೂ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಗೆ ಸರಕಾರದ ಅಸಹಕಾರ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಸಮಯಕ್ಕೆ ಔಷಧಿ ಸಿಗದೆ ರೋಗಿಗಳು ಇದೀಗ ಸಂದಿಗ್ಧ ಪರಿಸ್ಥಿತಿಯಲ್ಲಿರುವಂತಾಗಿದೆ. […]

ಕೊರೊನಾ ನಿಯಂತ್ರಣ ಕುರಿತು ಸಚಿವ ಮುರುಗೇಶ ನಿರಾಣಿ ಅವರಿಂದ ವಿಜಯಪುರದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಬಸವ ನಾಡು ವಿಜಯಪುರ- ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಕೊರೊನಾವನ್ನು ನಿಯಂತ್ರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.ವಿಜಯಪುರದಲ್ಲಿ ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಸಿದ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಬಳ್ಳಾರಿ, ಚಾಮರಾಜನಗರ, ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಗೆ ಹೋಲಿಸಿದಾಗ, ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಮುತು ವರ್ಜಿಯಿಂದ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. […]

ಸರಕಾರ ಆಕ್ಸಿಜನ್, ರೆಮಿಡಿಸಿವಿರ್ ಪೂರೈಕೆ ಜೊತೆಗೆ ಕೊರೊನಾ ತಡೆಗಟ್ಟಲು ಸೂಕ್ತವಾಗಿ ಕೆಲಸ ಮಾಡಲಿ ಶಾಸಕ ಎಂ. ಬಿ. ಪಾಟೀಲ

ಬಸವ ನಾಡು ವಿಜಯಪುರ- ರಾಜ್ಯಾದ್ಯಂತ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳಬೇಕಿದೆ ಎಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ಆಗ್ರಹಿಸಿದ್ದಾರೆ.ವಿಜಯಪುರದಲ್ಲಿ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಮತ್ತು ರಾಜ್ಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸರಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.ಸಚಿವುರ ಕೇವಲ ಟಿವಿಯಲ್ಲಿ ಹೇಳಿಕೆಯನ್ನು ನೀಡುವ […]

ಲಾಕಡೌನ್ ಮಧ್ಯೆ ವಿಜಯಪುರ ಜಿಲ್ಲಾಧಿಕಾರಿಗಳಿಂದ ಅಗತ್ಯ ವಸ್ತುಗಳ ಖರೀದಿಗೆ ಸಮಯ, ದರ ನಿಗದಿ

ಬಸವ ನಾಡು ವಿಜಯಪುರ- ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಲಾಕಡೌನ್ ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕೂಡ ಆದೇಶ ಹೊರಡಿಸಿದ್ದಾರೆ.ಸಧ್ಯಕ್ಕೆ ಮಾರುಕಟ್ಟೆಯಲ್ಲಿ ಆಗುತ್ತಿರುವ ಜನಸಂದಣಿ, ನೂಕುನುಗ್ಗಲು ತಪ್ಪಿಸಲು ಮೇ 2 ರಿಂದಲೇ ಅನ್ವಯವಾಗುವಂತೆ ಎಲ್ಲ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಪ್ರತಿದಿನ ಬೆ. 6 ರಿಂದ ಸಂ. 6.00 ಗಂಟೆಯವರೆಗೆ ಹಾಪಕಾಮ್ಸ್, ಎಲ್ಲಾ ಹಾಲಿನ ಭೂತಗಳು, ತಳ್ಳುವ ಗಾಡಿ ಮೂಲಕ ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯ ಬೆಲೆಗನುಗುಣವಾಗಿ […]

ಶಾಸಕ ಯತ್ನಾಳ ಅವರಿಂದ ಕೊರೊನಾ ಲಸಿಕೆ ಅಭಿಯಾನ ಮುಂದುವರಿಕೆ

ಬಸವ ನಾಡು ವಿಜಯಪುರ- ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಂಡು ಕೊರೊನಾದಿಂದ ಮುಕ್ತರಾಗಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.ವಿಜಯಪುರ ನಗರದ ನಾನಾ ಕಡೆ ಕೊರೊನಾ ಲಸಿಕೆ ಅಭಿಯಾನ ಮುಂದುವರೆಸಿರುವ ಅವರು ನಾನಾ ಕಡೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಮನೆ- ಮನೆಗೆ ಉಚಿತ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮದ ಅಂಗವಾಗಿ ವಿಜಯಪುರ ನಗರದ ವಾರ್ಡ್ ಸಂಕ್ಯೆ 21ರ ಕನಕದಾಸ ಬಡಾವಣೆಯ ಶ್ರೀ ಹನುಮಾನ ಗುಡಿ ಹತ್ತಿರದ […]

ಬಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯ ನಾನಾ ಕೊರೊನಾ ಲಸಿಕಾ ಕೇಂದ್ರಗಳಿಗೆ ಶಾಸಕ ಎಂ. ಬಿ. ಪಾಟೀಲ ಭೇಟಿ, ಪರಿಶೀಲನೆ

ಬಸವ ನಾಡು ವಿಜಯಪುರ- ಎಲ್ಲರೂ ಕೊರೊನಾ ಲಸಿಕೆ ಹಾಕಿಸಿ ಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್, ಸೈನಿಟೈಸರ್ ಬಳಸುವುದರಿಂದ ನಿಯಂತ್ರಣಕ್ಕೆ ಸಾಧ್ಯ. ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು, ಈ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದರು.ವಿಜಯಪುರ ಜಿಲ್ಲೆಯ ತಮ್ಮ ಸ್ವಕ್ಷೇತ್ರ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿರುವ ಕೊರೊನಾ ಲಸಿಕೆ ಅಭಿಯಾನ ಅಂಗವಾಗಿ ನಾನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಮಮದಾಪುರದಲ್ಲಿ ಮಾತನಾಡಿದರು. […]

ರೆಮಿಡಿಸಿವಿರ್ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ತಾರತಮ್ಮ – ಪ್ರಧಾನಿ, ಸಚಿವರಿಗೆ ಟ್ವೀಟ್ ಮೂಲಕ ಗಮನ ಸೆಳೆಯಲು ಶಾಸಕ ಎಂ. ಬಿ. ಪಾಟೀಲ ನಿರ್ಧಾರ

ಬಸವ ನಾಡು ವಿಜಯಪುರ- ಕರ್ನಾಟಕದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನ ದನೇ ಹೆಚ್ಚುತ್ತಿದ್ದರೂ, ರೋಗಿಗಳ ಸಂಖ್ಯೆಗೆ ಅನುಗುಣವಾಗಿ ರೆಮಿಡಿಸಿವಿಯರ್ ಎಂಜೆಕ್ಶನ್ ಸರಬರಾಜು ಮಾಡದೇ, ಕೇಂದ್ರ ಸರಕಾರ ತಾರತಮ್ಯ ಎಸಗುತ್ತಿದೆ ಎಂದು ಮಾಜಿ ಸಚಿವ, ಬಿ. ಎಲ್. ಡಿ. ಇ ಸಂಸ್ಥೆ ಅಧ್ಯಕ್ಷ ಹಾಗೂ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.ವಿಜಯಪುರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ವೈದ್ಯರ ಸಭೆ ನಡೆಸಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸಾ […]