ನಾನು ಸಿಎಂ ಆಗುವುದನ್ನು ತಡೆಯಲು ಬೇರೆಯವರನ್ನು ಮುಖ್ಯಮಂತ್ರಿ ಮಾಡಿದ್ದಾರೆ- ಯತ್ನಾಳ ವಾಗ್ದಾಳಿ
ವಿಜಯಪುರ: ಪ್ರಾಣ ಹೋದರೂ ಪರವಾಗಿಲ್ಲ. ಯತ್ನಾಲನನ್ನು ಸಿಎಂ ಮಾಡಬಾರದು ಎಂದು ಮಾಜಿ ಸಿಎೞ ಬಿ. ಎಸ್. ಯಡಿಯೂರಪ್ಪ ಕಂಡಿಶನ್ ಹಾಕಿದ್ದರು. ಹೀಗಾಗಿ ನಾನು ಸಿಎಂ ಆಗುವುದನ್ನು ತಡೆಯಲು ಅನನುಭವಿಗಳಿಗೆ ಸಿಎಂ ಮಾಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಾಣ ಹೋದರೂ ಪರವಾಗಿಲ್ಲ, ಯತ್ನಾಳನನ್ನು ಸಿಎಂ ಮಾಡಬಾರದು ಎಂದು ಬಿ. ಎಸ್. ಯಡಿಯೂರಪ್ಪ ಕಂಡಿಶನ್ ಹಾಕಿದ್ದರು. ಹೀಗಾಗಿ ತಾವು […]
ಸಿಎಂ ಆದ ಮೇಲೆ ಮೊದಲ ಬಾರಿಗೆ ದೆಹಲಿಗೆ ತೆರಳಿ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ
ನವದೆಹಲಿ: ನೂತನ ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರು ಮತ್ತು ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ. ರಕ್ಷಣಾ ಸಚಿವರ ಭೇಟಿ ನವದೆಹಲಿಯಲ್ಲಿ ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಅಲ್ಲದೇ, ಮಾತುಕತೆ ನಡೆಸಿದರು. ಜಲಶಕ್ತಿ ಸಚಿವರ ಭೇಟಿ ಇದೇ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ […]
ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಿಂದ 4.20 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ- ಬಸವ ನಾಡಿನ 10 ಗ್ರಾಮಗಳ ಬೆಳೆ ಜಲಾವೃತ
ವಿಜಯಪುರ: ನೆರೆಯ ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಲೆಯಿಂದಾಗಿ ಬಸವ ನಾಡು ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಷಯಕ್ಕೆ ನೀರಿನ ಒಳ ಮತ್ತು ಹೊರ ಹರಿವು ಮತ್ತಷ್ಟು ಹೆಚ್ಚಾಗಿದೆ. ಕೃಷ್ಣಾ ನದಿಯಲ್ಲಿ ಭಾರಿ ಪ್ರಮಾಮದಲ್ಲಿ ನೀರು ಹರಿದು ಬರುತ್ತಿರುವುದರಿಂದ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಷಯದಿಂದ ಹೊರ ಹರಿವಿನ ಪ್ರಮಾಣವನ್ನು 4.20 ಲಕ್ಷ ಕ್ಯೂಸೆಕ್ ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ ಅಚ್ಚುಕಟ್ಟು ಪ್ರದೇಶದ ಹತ್ತಾರು ಗ್ರಾಮಗಳ ಕೃಷಿ ಭೂಮಿ ಜಲಾವೃತವಾಗಿದೆ. ಜಲಾಷಯಕ್ಕೆ ಈಗಲೂ 4.20 ಲಕ್ಷ ಕ್ಯೂಸೆಕ್ ನೀರು ಹರಿದು […]
ಮುಳವಾಡ ಕೈಗಾರಿಕೆ ಪ್ರದೇಶದಲ್ಲಿ ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ನಿವೇಶನಕ್ಕೆ ತಲಾ ಒಂದು ಎಕರೆ ನೀಡಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ
ವಿಜಯಪುರ: ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 34 ಜನ ಎಸ್ಸಿ ಮತ್ತು ಎಸ್ಟಿ ಅರ್ಹ ಫಲಾನುಭವಿಗಳಿಗೆ ತಲಾ ಒಂದು ಎಕರೆಯಂತೆ ನಿವೇಶನ ಹಂಚಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ, ಸುನೀಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಕೈಗಾರಿಕೆ ಪ್ರದೇಶದಲ್ಲಿ 307.27 ಎಕರೆ ಜಮೀನನ್ನು ಅಭಿವೃದ್ಧಿ ಪಡಿಸಿ ಅದರಲ್ಲಿ 69.59 ಎಕರೆ ಜಮೀನನ್ನು ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ […]
ಉತ್ತರ ಕನ್ನಡ ಜಿಲ್ಲೆಯ ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತವಾದ ಯಲ್ಲಾಪುರ ತಾಲೂಕಿನ ನಾನಾ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ನಾನಾ ವಿಭಾಗಗಳ ಜೊತೆಗೆ ಕೋವಿಡ್-19 ಲಸಿಕೆ ನೀಡುವ ಕೇಂದ್ರನ್ನೂ ಪರಿಶೀಲಿಸಿದರು. ನಂತರ ಒಳ ಹಾಗೂ ಹೊರ ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಈ […]
ಹುಬ್ಬಳ್ಳಿಯಲ್ಲಿ ಸಿಎಂ ಗೆ ಆಶೀರ್ವದಿಸಿದ ರಂಭಾಪುರ ಶ್ರೀಗಳು- ಶುಭ ಕೋರಿದ ಸಭಾಪತಿ ಬಸವರಾಜ ಹೊರಟ್ಟಿ
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಭೇಟಿಗಾಗಿ ಆಗಮಿಸಿರುವ ಸಿಎಂ ಬಸವರಾಜ ಹೊರಟ್ಟಿ ಹುಬ್ಬಳ್ಳಿಗೆ ಬಂದಿದ್ದಾರೆ. ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ನೂತನ ಸಿಎಂ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹುಬ್ಬಳ್ಳಿಯಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿದ ಬಳಿಕ ಅವರು ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಬೆಳೆಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಯಾದ ಬಳಿಕ ಹುಬ್ಬಳ್ಳಿಗೆ ಇದೇ ಮೊದಲ ಬಾರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ […]
ಬಸವ ನಾಡಿನಲ್ಲಿ ನನ್ನ ಗಿಡ ನನ್ನ ಭೂಮಿ ಸಂಘಟನೆಯಿಂದ ಸಂವಾದ
ವಿಜಯಪುರ: ವಿಜಯಪೂರ ನಗರದ ನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ಜ್ಞಾನಯೋಗಾಶ್ರಮದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರ ನಗರದ ಗಣ್ಯರು ಮತ್ತು ಮೂರ್ತಿ ತಯಾರಕರು ಪಾಲ್ಗೋಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಮಾತನಾಡಿ, ನಾವು ಎಲ್ಲರೂ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಪ್ರತಿಷ್ಠಾಪಿಸಿ ಪರಿಸರ ಸಂರಕ್ಷಣೆ ಮುಂದಾಗೋಣ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ನಾನಾ ಸ್ವಾಮೀಜಿಗಳು, ಬಿಜೆಪಿ ಮುಖಂಡರಾದ ಚಂದ್ರಶೇಖರ […]
ಹುಬ್ಬಳ್ಳಿ-ಧಾರವಾಡ ನಗರಗಳ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವೆ- ನೂತನ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿವೆ. ಈ ಅವಳಿ ನಗರಗಳ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಮಾತನಾಡಿದರು. ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ […]
ಕೃಷ್ಣಾ ಮೇಲ್ದಂಡೆ ಯೋಜನೆ- ಮಹಾರಾಷ್ಟ್ರ ಜೊತೆ ಸೇರಿ ಕಾನೂನು ಹೋರಾಟ- ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆ ಬಗ್ಗೆ ತಮಗೆ ಸಂಪೂರ್ಣ ಅರಿವಿದ್ದು, ಈ ವಿಚಾರದಲ್ಲಿ ಮಹಾರಾಷ್ಟ್ರದ ಜೊತೆ ಸೇರಿ ಕಾನೂನು ಹೋರಾಟ ನಡೆಸುವುದಾಗಿ ನೂತನ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬ್ರಿಜೇಶ ಕುಮಾರ ವಿಶ್ರಾ ನೇತೃತ್ವದ ಕೃಷ್ಣಾ ನ್ಯಾಯಾದೀಕರಣ ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀಟರ್ ಗೆ ಹೆಚ್ಚಿಸಲು ಒಪ್ಪಿಗೆ ನೀಡಿದೆ. ಯುಕೆಪಿ ಮೂರನೇ ಹಂತದ ಆರ್ ಆಂಡ್ ಆರ್ ರೂಪಿಸಬೇಕಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸುವ ಹಂತದಲ್ಲಿ ಆಂಧ್ರ ಪ್ರದೇಶ […]
ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸೇರಲ್ಲ ಎಂದ ಜಗದೀಶ ಶೆಟ್ಟರ- ನಿಜವಾದ ಕಾರಣವೇನು ಗೊತ್ತಾ?
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟಕ್ಕೆ ತಾವು ಸೇರುವುದಿಲ್ಲ ಎಂದು ಮಾಜಿ ಸಿಎಂ ಮತ್ತು ಯಡಿಯೂರಪ್ಪ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಜಾರಿಯಲ್ಲಿದ್ದು, 2-3 ದಿನಗಳಲ್ಲಿ ಪೂರ್ಣವಾಗುವ ನಿರೀಕ್ಷೆಯಿದೆ. ನಾನು ರಾಜ್ಯ ಮಾಜಿ ಮುಖ್ಯಮಂತ್ರಿಯಾಗಿ, ಹಿರಿಯ ನಾಯಕನಾಗಿ ಸಚಿವ ಸಂಪುಟದಲ್ಲಿ ಸೇರದಿರಲು ನಿರ್ಧರಿಸಿದ್ದೇನೆ. ಮಾಜಿ ಸಿಎಂ ಎಂಬ ನೈತಿಕ ಕಾರಣದಿಂದ ಸಂಪುಟ […]