ಯಡಿಯೂರಪ್ಪ ಕಾರ್ಯವೈಖರಿ ಶ್ಲಾಘಿಸಿ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಲ್ಲದೇ, ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನ ವರ್ಣಿಸಲು ಶಬ್ದಗಳು ಸಾಲದು. ಕಳೆದ ಅನೇಕ ದಶಕಗಳಿಂದ ಯಡಿಯೂರಪ್ಪ ಕಷ್ಟಪಟ್ಟು ರಾಜ್ಯಾದ್ಯಂತ ಸಂಚರಿಸಿ ಜನರೊಂದಿಗೆ ಬೆರೆತು ಪಕ್ಷವನ್ನು ಬೆಳೆಸಿದ್ದಾರೆ. ಅವರ ಈ […]
ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರದಿಂದ ಹಿಡಿದು ಕಚೇರಿಗೆ ತೆರಳಿ ಪೂಜೆ ಸಲ್ಲಿಸುವವರೆಗಿನ ಮಾಹಿತಿ ಇಲ್ಲಿದೆ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ ನೂತನ ಸಿಎಂಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ವೇದಿಕೆಗೆ ಆಹ್ವಾನಿಸಿದ ಬಸವರಾಜ ಬೊಮ್ಮಾಯಿ ಅವರು ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಕೂಡ ಉಪಸ್ಥಿತರಿದ್ದರು. ಇದೇ ವೇಳೆ ವೇದಿಕೆಗೆ ತೆರಳಿದ ಡಿಸಿಎಂ ಗೋವಿಂದ ಕಾರಜೋಳ ಕೂಡ ವೇದಿಕೆಯ ಮೇಲೆ ತೆರಳಿ […]
ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಬೆಂಗಳೂರಿನಲ್ಲಿ ದೇವಸ್ಥಾನಕ್ಕೆ ಭೇಟಿ
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಿಯೋಜಿತ ಸಿಎಂ ಜೊತೆ ಮಾಜಿ ಸಚಿವ ಭೈರತಿ ಬಸವರಾಜ ಜೊತೆಯಲ್ಲಿದ್ದರು.
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ನಡೆದು ಬಂದ ದಾರಿಯ ಕುರಿತ ಚಿತ್ರಗಳು ಇಲ್ಲಿವೆ
ವಿಜಯಪುರ: ಮಾಜಿ ಸಿಎಂ ಪುತ್ರ ಈಗ ಹಾಲಿ ಸಿಎಂ. ಮಾಜಿ ಸಿಎಂ ದಿ. ಎಸ್. ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಬಸವರಾಜ ಬೊಮ್ಮಾಯಿ ವಿವಾದಾತೀತ ನಾಯಕ. ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪಕ್ಕಾ ಶಿಷ್ಯ. ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯಿತ ಸಮುದಾಯದ ಲೀಡರ್. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಬಿಜೆಪಿ 2023ರ ಚುನಾವಣೆಯತ್ತ ದೃಷ್ಠಿ ನೆಟ್ಟು ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿ […]
ಬಿಜೆಪಿ ಕಚೇರಿಗೆ ಭೇಟಿ ನೀಡಿದ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ನೇರವಾಗಿ ರಾಜಭವನಕ್ಕೆ ತೆರಳಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ನಾಳೆ ಬುಧವಾರ ಬೆ. 11ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಆಹ್ವಾನ ನೀಡಿದ್ದಾರೆ. ರಾಜಭವನದಿಂದ ನೇರವಾಗಿ ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿದರು. ಬಳಿಕ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ತೆರಳಿದ ಬೊಮ್ಮಾಯಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಶಾಲು ಹೊದಿಸಿ ಸನ್ಮಾನಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ […]
ನಾಳೆ ಬುಧವಾರ ಬೆ. 11ಕ್ಕೆ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಬೊಮ್ಮಾಯಿಯನ್ನು ಆಹ್ವಾನಿಸಿದ ರಾಜ್ಯಪಾಲರು- ಸಚಿವ ಸಂಪುಟ ವಿಸ್ತರಣೆ ನಂತರ ನಿರ್ಧಾರ
ಬೆಂಗಳೂರು: ಬಸವರಾಜ ಬೊಮ್ಮಾಯಿ ನಾಳೆ ಬುಧವಾರ ಬೆ. 11ಕ್ಕೆ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ, ಕೇಂದ್ರ ವೀಕ್ಷಕರಾದ ಅರುಣಸಿಂಗ್, ಧರ್ಮೇಂದ್ರ ಪ್ರಧಾನ, ಕಿಶನರೆಡ್ಡಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಮಾಜಿ ಸಚಿವರಾದ ಆರ್. ಅಶೋಕ, ಸಿ. ಟಿ. ರವಿ, ಕೆ. ಎಸ್. ಈಶ್ವರಪ್ಪ ಮತ್ತೀತರರ ಜೊತೆ ರಾಜಭವನಕ್ಕೆ […]
ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ನಾಳೆ ಪ್ರಮಾಣ ವಚನ ಸ್ವೀಕಾರ- 3 ಜನ ಡಿಸಿಎಂ ಸೇರಿ 15 ಜನ ಸಚಿವರಾಗಿ ಪ್ರಮಾಣ ಸಾಧ್ಯತೆ
ಬೆಂಗಳೂರು: ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪರಮಾಪ್ತ ಮತ್ತು ಮಾಜಿ ಸಿಎಂ ದಿ. ಎಸ್. ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಹಂಗಾಮಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಸೂಚಿಸಿದರು. ಈ ಹೆಸರಿಗೆ ಮಾಡಿ ಡಿಸಿಎಂ ಗೋವಿಂದ ಕಾರಜೋಳ ಅನುಮೋದನೆ ನೀಡಿದರು. ಕೇಂದ್ರದಿಂದ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವ […]
ಕೇಂದ್ರ ವೀಕ್ಷಕರನ್ನು ಭೇಟಿ ಮಾಡಿದ ಮಾಜಿ ಸಚಿವ ಬಸವರಾಜ ಬೊಮ್ಮಾಯಿ- ಸಿಎಂ ಆಗ್ತಾರಾ ಮಾಜಿ ಸಿಎಂ ಪುತ್ರ?
ಬೆಂಗಳೂರು: ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ ಮತ್ತು ಕಿಶನರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ಧಯುತ ಭೇಟಿ ಎಂದು ಹೇಳಲಾಗುತ್ತಿದೆಯಾದರೂ, ಈಗ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಹೆಸರು ಮುಂಚೂಣಿಗೆ ಬಂದಿದೆ. ಬಸವರಾಜ ಬೊಮ್ಮಾಯಿ ಜೊತೆ ಮಾಜಿ ಸಿಎಂ ಜಗದೀಶ ಶೆಟ್ಟರ ಕೂಡ ಕೇಂದ್ರ ವೀಕ್ಷಕರನ್ನು ಭೇಟಿಯಾಗಿದ್ದಾರೆ. ಇಂದು ರಾತ್ರಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಅಭ್ಯರ್ಥಿಯ ಆಯ್ಕೆ ನಡೆಯಬಹುದಾಗಿದೆ. ಬಸವರಾಜ ಬೊಮ್ಮಾಯಿ […]
ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಂದ ಕೇಂದ್ರ ವೀಕ್ಷಕ ಧರ್ಮೇಂದ್ರ ಪ್ರಧಾನ ಭೇಟಿ- ಯಾಕೆ ಗೊತ್ತಾ?
ಬೆಂಗಳೂರು: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆಗಾಗಿ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಬೆಂಗಳೂರಿಗೆ ಕೇಂದ್ರ ಬಿಜೆಪಿ ವೀಕ್ಷಕರ ತಂಡ ಆಗಮಿಸಿದೆ. ಕೇಂದ್ರ ವೀಕ್ಷಕರ ತಂಡದ ಸದಸ್ಯರಾಗಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಸಚಿವರನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಕೂಡ ಗೋವಿಂದ ಕಾರಜೋಳ ಅವರೊಂದಿಗೆ ತೆರಳಿ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೊಂದು ಸೌಜನ್ಯದ ಭೇಟಿಯಾಗಿದೆ […]
ಕೃಣಾಲ ಪಾಂಡ್ಯಗೆ ಕೊರೊನಾ ಪಾಸಿಟಿವ್- ಭಾರತ- ಶ್ರೀಲಂಕಾ ಟಿ-20 ನಾಳೆಗೆ ಮುಂದೂಡಿಕೆ
ವಿಜಯಪುರ: ಭಾರತ ಮತ್ತು ಶ್ರೀಲಂಕಾ ಮಧ್ಯೆ ಇಂದು ರಾತ್ರಿ ನಡೆಯಬೇಕಿದ್ದ ಟಿ-20 ಕ್ರಿಕೆಟ್ ಪಂದ್ಯಾವಳಿಯನ್ನು ನಾಳೆಗೆ ಮುಂದೂಡಲಾಗಿದೆ. ಈ ಕುರಿತು ಬಿಸಿಸಿಐ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಭಾರತೀಯ ಕ್ರಿಕೆಟ್ ತಂಡದ ಆಲರೌಂಡರ್ ಕೃಣಾಲ ಪಾಂಡ್ಯ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಆರಂಭವಾಗಬೇಕಿದ್ದ ಟಿ- 20 ಕ್ರಿಕೆಟ್ ಪಂದ್ಯವನ್ನು ನಾಳೆಗೆ ಜು. 28ಕ್ಕೆ ಮುಂದೂಡಲಾಗಿದೆ. ಕೊರೊನಾ ಸೋಂಕು ಹೆಚ್ಚಾಗುವುದನ್ನು ತಡೆಯಲು ಇಂದು ಭಾರತ ಮತ್ತು ಶ್ರೀಲಂಕಾ […]