ಡಾ. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಡಿಸಿ, ಜಿ. ಪಂ ಸಿಇಓ, ಎಸ್ಪಿ ದಿಢೀರ್ ಭೇಟಿ, ಪರಿಶೀಲನೆ, ಅಹವಾಲು ಆಲಿಕೆ
ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ. ಪಂ. ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾಚಣೆ ಅವರು ಬೆಳಿಗ್ಗೆ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕ್ರೀಡಾಂಗಣದ ಆವರಣ ಪರಿವೀಕ್ಷಣೆ ನಡೆಸಿದ ಅವರು, ಕ್ರೀಡಾಂಗಣದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕ್ರೀಡಾಂಗಣ ಸ್ವಚ್ಛತೆಯೂ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿರುವ ಮಾಹಿತಿ ಪಡೆದುಕೊಂಡ ಅವರು, ಈ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ […]
ಅಪಘಾತ ತಗ್ಗಿಸಲು ಸುರಕ್ಷತಾ ಉಪಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಗ್ನಲ್ ರೋಡ ಬ್ಯಾರಿಕೇಡ್, ಮಾಹಿತಿ ಫಲಕ, ತಿರುವು ರಸ್ತೆಗಳ ಮಾಹಿತಿ, ವೃತ್ತಗಳ ಮಾಹಿತಿ ಅಳವಡಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾಡಿದ ಅವರು, ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳುವಳಿಕೆ ನೀಡಬೇಕು. ರಸ್ತೆಯ ಸುಧಾರಣೆ ಕೈಗೊಂಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದ […]
ಗುಂಟಾ ನಿವೇಶನಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಡಿಸಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ನಗರಾದ್ಯಂತ ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕೆಲ ಭೂ ಮಾಲೀಕರು ತಮ್ಮ ಕೃಷಿ ಜಮೀನುಗಳನ್ನು ಖಾಸಗಿಯಾಗಿ ವಿಭಾಗಿಸಿ ಗುಂಟೆವಾರು ನಿವೇಶನಗಳನ್ನು ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರವಾಗಿದ್ದು, ಈ ರೀತಿಯ ಅನಧಿಕೃತ ಗುಂಟಾ ನಿವೇಶನಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಸರಕಾರದಿಂದ ಅನುಮೋದನೆಯಾದ ಮಹಾಯೋಜನೆಯಲ್ಲಿ ಪ್ರಸ್ತಾಪಿಸಿರುವ ರಸ್ತೆಗಳಲ್ಲಿ ನಿವೇಶನ-ಕಟ್ಟಡಗಳನ್ನು […]
ಗುಮ್ಮಟ ನಗರಿಯಲ್ಲಿ ಜೆಸಿಬಿ ಘರ್ಜನೆ- ಬೆಳ್ಳಂಬೆಳಿಗ್ಗೆ ಅತೀಕ್ರಮಣ ತೆರವು
ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿವೆ. ನಗರದ ಗಾಂಧಿಚೌಕಿನ ಆಜಾದ್ ರಸ್ತೆಯಲ್ಲಿರುವ ಅಂಗಡಿಗಳ ಅಕ್ರಮ ಭಾಗ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ. 10ಕ್ಕೂ ಹೆಚ್ಚು ಅಕ್ರಮ ಅಂಗಡಿಗಳು ಅತೀಕ್ರಮಿಸಿರುವ ಕಟ್ಟೆದ ಭಾಗವನ್ನು ತೆರವು ಮಾಡಲಾಗುತ್ತಿದೆ. ಒಟ್ಟು ನಾಲ್ಕು ಜೆಸಿಬಿಗಳನ್ನು ಈ ಕಾರ್ಯಾಚರಣೆಗೆ ಬಳಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಾಂಧಿಚೌಕ್ ಪೊಲೀಸರು ಬಿಗೀ ಬಂದೋಬಸ್ತ್ ಕೈಗೊಂಡಿದ್ದಾರೆ. ಅಂಗಡಿ ಮಾಲಿಕರ ವಿರೋಧ […]
ನಂದಿ ಸಕ್ಕರೆ ಕಾರ್ಖಾನೆ ಉಳಿಸಿ, ಈ ಬಾರಿ ಕಬ್ಬು ನುರಿಸಲು ಶಕ್ತಿ ಮೀರಿ ಪ್ರಯತ್ನಿಸುವೆ- ಸಚಿವ ಎಂ. ಬಿ. ಪಾಟೀಲ
ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ ಈ ವರ್ಷದ ಹಂಗಾಮಿನಲ್ಲಿ ಕಬ್ಬು ನುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ನೀಡಿದ್ದಾರೆ. ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದ ಇಲ್ಲಿನ ಕಾರ್ಮಿಕರು ಕಾರ್ಖಾನೆ ಉಳಿಸಿ ಎಂದು ಕೈಮುಗಿದು ಬೇಡಿಕೊಂಡ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಅಲ್ಲಿದ್ದವರ ಕರುಳು […]
ವಿಶ್ವವಿಖ್ಯಾತ ಗೋಳಗುಮ್ಮಟಕ್ಕೆ ಸೌರಶಕ್ತಿ ವಿದ್ಯುತ್ ದೀಪಾಂಲಕಾರಕ್ಕೆ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ವಿಶ್ವವಿಖ್ಯಾತ ಗೋಳಗುಮ್ಮಟಕ್ಕೆ ಸೌರಶಕ್ತಿ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೋಳಗುಮ್ಮಟಕ್ಕೆ ಭೇಟಿ ನೀಡಿದ ಅವರು, ಪ್ರವಾಸಿಗರ ಅನುಕೂಲಕ್ಕಾಗಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳು ಮತ್ತು ದೀಪಾಲಂಕಾರ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವವಿಖ್ಯಾತ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ನೋಡುಗರಿಗೆ ಆಕರ್ಷಕಗೊಳಿಸಲು ಸ್ಮಾರಕದ ನಾಲ್ಕೂ ದಿಕ್ಕಿನಲ್ಲಿ ದೀಪಾಂಲಕಾರ ಮಾಡಬೇಕು. ರಿನಿವ್ ಎನರ್ಜಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಸಿಎಸ್‍ಆರ್ ಅನುದಾನದಡಿ ಸೌರಶಕ್ತಿ […]
ಜು. 13ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ- ಜಿಲ್ಲಾ ನ್ಯಾಯಾಧೀಶ ಶಿವಾಜಿ ನಲವಡೆ
ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜು. 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‍ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ. ಕಕ್ಷಿದಾರರು ಈ ಅದಾಲತ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹೇಳೀದ್ದಾರೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವಾನ್ವಿತ ರಾಷ್ಟ್ರೀಯ ಕಾನೂನು […]
ನೈರ್ಮಲ್ಯವನ್ನು ಪಾಲಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ- ಶಿಫಾ ಜಮಾದಾರ
ವಿಜಯಪುರ: ನೈರ್ಮಲ್ಯವನ್ನು ಪಾಲಿಸುವಲ್ಲಿ ವಿದ್ಯಾರ್ಥಿಗಳು ಮತ್ತು ಸ್ವಚ್ಚತೆಯ ಪ್ರಾಮುಖ್ಯತೆ ಹಾಗೂ ನೈರ್ಮಲ್ಯದ ವಾತಾವರಣವನ್ನು ಪ್ರೇರೆಪಿಸುವಲ್ಲಿ ಶಾಲೆ- ಕಾಲೇಜುಗಳ ಪಾತ್ರ ಮುಖ್ಯವಾಗಿದೆ ಎಂದು ಲಾಡಲಿ ಫೌಂಡೇಶನ ಟ್ರಸ್ಟಿನ ಸ್ವಚ್ಚತಾ ರಾಯಭಾರಿ ಶಿಫಾ ಜಮಾದಾರ ಅಭಿಪ್ರಾಯಪಟ್ಟಿದ್ದಾರೆ. ನಗರದ ಅಫಜಲಪೂರ ಟಕ್ಕೆಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಖ್ಯೆ- 49ರಲ್ಲಿ ನವದೆಹಲಿಯ ಲಾಡಲಿ ಫೌಂಡೇಶನ್ ಮತ್ತು ವಿಜಯಪುರ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ ಶಾಲೆಯ ಮಕ್ಕಳಲ್ಲಿ ಸ್ವಚ್ಚತೆಯ ಅರಿವು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನೈರ್ಮಲ್ಯ ಮತ್ತು ನೈರ್ಮಲ್ಯದ ಮೂಲ […]
ಸಚಿವ ವಿ. ಸೋಮಣ್ಣ ಭೇಟಿ ಮಾಡಿ ಉ. ಕ ರೇಲ್ವೆ ಯೋಜನೆ ಬೇಡಿಕೆ ಸಲ್ಲಿಸಿದ ಶಾಸಕ ಯತ್ನಾಳ
ನವದೆಹಲಿ: ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ವಿಜಯಪುರ ನಗರದಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ನಾನಾ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರೊಂದಿಗೆ ಮಾತನಾಡಿದ ಅವರು, ವಿಜಯಪುರ ನಗರವು ಸುಮಾರು 10 ಲಕ್ಷ ಜನಸಂಖ್ಯೆ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಹುಟಗಿ- ಗದಗ ನಡುವೆ ಡಬ್ಲಿಂಗ್ ಟ್ರ್ಯಾಕ್ […]
ದಕ್ಷಿಣ ಭಾರತದಲ್ಲಿ ಸತತವಾಗಿ 7ನೇ ಬಾರಿ ಸಂಸದನಾಗಿ ಆಯ್ಕೆಯಾದರೂ ಸಚಿವ ಸ್ಥಾನ ನೀಡಿಲ್ಲ- ದಲಿತರು ಬಿಜೆಪಿಗೆ ಮತ ಹಾಕಿಲ್ವಾ? ರಮೇಶ ಜಿಗಜಿಣಗಿ ಬೇಸರದ ನುಡಿ
ವಿಜಯಪುರ: ದಕ್ಷಿಣ ಭಾರತದಲ್ಲಿ ಸತತ ಏಳನೇ ಬಾರಿ ದಲಿತ ಸಮುದಾಯದಿಂದ ಸಂಸದನಾಗಿ ಆಯ್ಕೆಯಾಗಿದ್ದರೂ ಕೇಂದ್ರದಲ್ಲಿ ನನಗೆ ಸಚಿವ ಸ್ಥಾನ ನೀಡದಿರುವುದು ನೋವು ತಂದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಸಂಸದರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ದಲಿತ ಸಮುದಾಯದಿಂದ ಸತತವಾಗಿ ಏಳು ಬಾರಿ ಸಂಸದನಾಗಿ ನಾನೊಬ್ಬನೇ ಆಯ್ಕೆಯಾಗಿದ್ದೇನೆ. ಹೀಗಿದ್ದರೂ ಸಚಿವ ಸ್ಥಾನಗಳನ್ನು ಮೇಲ್ವರ್ಗದವರಿಗೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲ. ನನಗೆ ಜನ ಅವಶ್ಯವಾಗಿದ್ದಾರೆ. ಸಚಿವನಾಗಬೇಕು […]