ಕಾಂಗ್ರೆಸ್ ಶಾಸಕರು ಇನ್ನೊಂದು ತಿಂಗಳಲ್ಲಿ ಬಂಡಾಯವೇಳಲಿದ್ದಾರೆ- ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272ಕ್ಕೇರಲಿದೆ- ಶಾಸಕ ಯತ್ನಾಳ

ವಿಜಯಪುರ: ಇನ್ನೊಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯವೇಳಲಿದ್ದಾರೆ.  ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272 ಆಗಲಿದೆ ಎಂದು ವಿಜಯಪುjರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಗ್ಯಾರಂಟಿ‌ ಯೋಜನೆಗಳ ಮಧ್ಯೆಯೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದೆ.  ಜನರು‌ ಗ್ಯಾರಂಟಿ ಬಗ್ಗೆ ಬೇಸತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಎಲ್ಲದರ ಬೆಲೆ ಏರಿಕೆ ಮಾಡುತ್ತಿದ್ದಾರೆ.  […]

ವಿಶ್ವ ರಕ್ತದಾನ ದಿನದ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ವಿಜಯಪುರ: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗಶಾಸ್ತ್ರ ವಿಭಾಗದ ವತಿಯಿಂದ ಶುಕ್ರವಾರ ಬೀದಿ ನಾಟಕದ ಮೂಲಕ ರಕ್ತದಾನದ ಮಹತ್ವದ ಕುರಿತು ಜನ ಜನಜಾಗೃತಿ ಮೂಡಿಸಲಾಯಿತು   ರಕ್ತ ದಾನ ಜಾಗೃತಿ ಮತ್ತು ರಕ್ತ ದಾನಿಗಳಿಗೆ ಕೃತಜ್ಞತೆ ಅರ್ಪಿಸುವ ಕಾರ್ಯಕ್ರಮ ಘೋಷಣೆಯಡಿ ನಗರದ ಬಿ.ಎಲ್‌.ಡಿ.ಇ ಆಸ್ಪತ್ರೆಯ ಎದುರು, ಶ್ರೀ ಸಿದ್ದೇಶ್ವರ ದೇವಸ್ಥಾನದ ಮುಂಭಾಗ, ಗಾಂಧಿ ಚೌಕ್ ಹಾಗೂ ಕೇಂದ್ರ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು.  ಈ ಬೀದಿ ನಾಟಕದಲ್ಲಿ ಪಾಲ್ಗೊಂಡ ಎಂಬಿಬಿಎಸ್ ವಿದ್ಯಾರ್ಥಿಗಳು ರಕ್ತದಾನದ ಕುರಿತು ಜಾಗೃತಿ ಮತ್ತು […]

ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳಕ್ಕೆ ವಿರೋಧ- ಬೈಕ್ಗೆ ಹಗ್ಗಕಟ್ಟಿ ಎಳೆದು ಬಿಜೆಪಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಬೈಕಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದರು.  ನಗರದ ಗಾಂಧಿಚೌಕಿನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಡಾ. ಬಿ. ಆರ್. ಅಂಬೇಡ್ಕರ್ ವೃತ್ತದವರೆಗೂ ಬೈಕ್‌ಗೆ ಹಗ್ಗಕಟ್ಟಿ ಎಳೆದುಕೊಂಡು ಬಂದರು. ಈ ಸಂದರ್ಭದಲ್ಲಿ ಮಾತನಾಡಿದ ದೇವರ ಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ರಾಜ್ಯದ ಜನತೆಗೆ ನೆಮ್ಮದಿಯ ಬದುಕು ನೀಡಲು ಸಾಧ್ಯವಿಲ್ಲದಿದ್ದರೆ, ಈ ಸರಕಾರ ಅಧಿಕಾರ ಬಿಟ್ಟು […]

ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು- ಜ್ಞಾನದಿಂದ ಜೀವನದಲ್ಲಿ ಸಾಧನೆ ಸಾಧ್ಯ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಸಾಹಿತ್ಯದ ಬಗ್ಗೆ ಎಲ್ಲರೂ ಅಭಿರುಚಿ ಬೆಳೆಸಿಕೊಳ್ಳಬೇಕು.  ಜ್ಞಾನದಿಂದ ಜೀವನದಲ್ಲಿ ಅನೇಕ ಸಾಧನೆ ಮಾಡಬಹುದು ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾಹಿತಿ ಶ್ರೀ ಎನ್. ಆರ್. ಕುಲಕರ್ಣಿ ಅವರ ಬಕುಲ ಪುಷ್ಪ ಅಭಿನಂದನೆ ಗ್ರಂಥ ಬಿಡುಗಡೆ ಮತ್ತು ಗ್ರಂಥ ತುಲಾಭಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂಪತ್ತಿನಿಂದ ಜ್ಞಾನ ಸಂಪಾದಿಸಲು ಸಾಧ್ಯವಿಲ್ಲ.  ಆದರೆ, ಜ್ಞಾನ ಸಂಪಾದಿಸಿದರೆ ಅದರಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು.  ಎನ್. ಆರ್. ಕುಲಕರ್ಣಿ ಅವರಂತೆ […]

ಗುಮ್ಮಟ ನಗರಿಯಲ್ಲಿ ಬಕ್ರೀದ್ ಆಚರಣೆ- ನಾನಾ ಈದ್ಗಾಗಳಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ‌ ಪ್ರಾರ್ಥನೆ

ವಿಜಯಪುರ: ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರು ಬಕ್ರೀದ್ ಹಬ್ಬವನ್ನು ವಿಜಯಪುರ ಜಿಲ್ಲಾದ್ಯಂತ ಆಚರಿಸಲಾಗುತ್ತಿದೆ. ಗುಮ್ಮಟ ನಗರಿ ವಿಜಯಪುರದಲ್ಲಿ‌ರು ಈದ್ಗಾಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅಲ್ಲಾಹ ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ‌ ಕರುಣಿಸಲಿ ಎಂದು ಪ್ರಾರ್ಥಿಸಿದರು.  ಬಳಿಕ ಪರಸ್ಪರ ಶುಭಾಷಯ ಕೋರಿದರು. ದಖನಿ‌ ಶಾಹಿ‌ ಈದ್ಗಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ‌ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವಿರಪೀರಾ ಹಾಶ್ಮಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿ ಪವಿತ್ರ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ […]

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಸಂಬಂಧವಿಲ್ಲ- ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ.   ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಹೆಲಿಪ್ಯಾಡ್ ನಲ್ಲಿ ಮಾಧ್ಮಯ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷದ ನಾಯಕ ಆರ್. ಅಶೋಕ ಅವರು ಸೇಡಿಗಾಗಿ ತೈಲಬೆಲೆ ಏರಿಕೆ ಮಾಡಲಾಗಿದೆ ಎಂಬ  ಹೇಳಿಕೆಗೆ ಸಿಎಂ ಪ್ರತಿಕ್ರಿಯ ನೀಡಿದರು. ವಿಜಯಪುರದಲ್ಲಿ ನಾವು ಸೋತಿದ್ದೇವೆ.  ಕರ್ನಾಟಕದಲ್ಲಿ […]

ಮುಂಗಾರು ಹಂಗಾಮಿನಲ್ಲಿ ಬೀಜ-ರಸಗೊಬ್ಬರ ಕೊರತೆಯಾಗದಂತೆ ಸಮರ್ಪಕ ವಿತರಣೆ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ .ಪಾಟೀಲ

ವಿಜಯಪುರ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 711370 ಹೆಕ್ಟೇರ್ ಗುರಿಗೆ 19567 ಹೆಕ್ಟೇರ್ ಬಿತ್ತನೆಯಾಗಿದೆ. ಮಳೆ ಬಿಡುವಿನ ನಂತರ ಬಿತ್ತನೆ ಪ್ರಗತಿಯಾಗಲಿದ್ದು, ಮುಂಗಾರು ಹಂಗಾಮಿನಲ್ಲಿ ಯಾವುದೇ ಬೀಜ, ರಸಗೊಬ್ಬರದ ಕೊರತೆಯಾದಂತೆ ಸಮರ್ಪಕವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸೂಚನೆ ನೀಡಿದ್ದಾರೆ.    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ […]

ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ನೇಮಕ

ವಿಜಯಪುರ: ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಕರ್ನಾಟಕ ಬಾಲ‌ವಿಕಾಸ ಅಕಾಡೆಮಿಗೆ ಸತಕಾರ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ವಿಜಯಪುರದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರನ್ನು ನೇಮಕ ಮಾಡಲಾಗಿದೆ.  ಅಮ್ಮ ಚಾರಿಟೆಬಲ್ ಸಂಸ್ಥೆಯ ಸಙಸ್ಥಾಪಕ ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಚಾರ ಸಮಿತಿ ವಕ್ತಾರರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಸಂಗಮೇಶ.ಅಪ್ಪಾಸಿ ಬಬಲೇಶ್ವರ ಅವರು ಧಾರವಾಡ ನಗರದ ಯಾಲಕ್ಕಿಶೆಟ್ಟರ್ ಕಾಲನಿಯಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ನೀಟ್ ಪ್ರವೇಶ ಪರಿಕ್ಷೇಯಲ್ಲಿ ಅವ್ಯವಹಾರ ಆರೋಪ- ನ್ಯಾಯಾಂಗ ತನಿಕೆಗೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ನಿಂದ ಮನವಿ ಪತ್ರ ಸಲ್ಲಿಕೆ

ವಿಜಯಪುರ: ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಗಾಂಧಿಚೌಕಿನಿಂದ ಅಂಬೇಡ್ಕರ್ ಚೌಕ್ ವರೆಗೆ ಜಾಥಾ ನಡೆಸಿದ ಕಾರ್ಯಕರ್ತರು, ಅಪರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ, ದೇಶದಲ್ಲಿರುವ ಶೋಷಿತ ಸಮಾಜದ ಜನರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜೀವನವನ್ನೇ ತೆಯ್ದು ಶಿಕ್ಷಣದ ವ್ಯಾಪಾರೀಕರಣದ ವ್ಯವಸ್ಥೆಯ […]

ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡದಿದ್ದರೆ ರಾಜಕೀಯ ತ್ಯಾಗಕ್ಕೂ ಸಿದ್ಧ- ಶಾಸಕ ಸಿ. ಎಸ್. ನಾಡಗೌಡ

ವಿಜಯಪುರ: ರಾಜ್ಯದಲ್ಲಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಆಗದಿದ್ದರೆ ನನಗೆ ಮುಂದೆ ರಾಜಕಾರಣ ಮಾಡುವ ಇಚ್ಛೆ ಇಲ್ಲ.  ರಾಜಕೀಯ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ. ಎಸ್. ನಾಡಗೌಡ ಹೇಳಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಕೆ ಬಿ ಜೆ ಎನ್ ಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಾನಾ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆ ನಡೆಸಿದರು.  ಇದಾದ […]