CBSE Exam: ಶ್ರೀ ಬಿ. ಎಂ. ಪಾಟೀಲ ಸ್ಕೂಲ್ ವಿದ್ಯಾರ್ಥಿ ವಿಜಯಪುರ, ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ

ವಿಜಯಪುರ: ಇತ್ತೀಚೆಗೆ ನಡೆದ ಸಿ.ಬಿ.ಎಸ್.ಸಿ 10 ನೇ ತರಗತಿ ಪರೀಕ್ಷೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಿಹೀರ್ ಮಹೇಶ ದೇಶಪಾಂಡೆ ಶೇ.98 ಅಂಕ ಪಡೆದು ವಿಜಯಪುರ ಮತ್ತು ಬಾಗಲಕೋಟೆ ಎರಡು ಜಿಲ್ಲೆಗಳಿಗೆ ದ್ವಿತೀಯ ಗಳಿಸಿದ್ದಾನೆ. ಅಲ್ಲದೇ, ಈ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ಪಾಸಾಗುವ ಮೂಲಕ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಲು ಕಾರಣರಾಗಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಶಾಲೆಯ ಪ್ರಾಚಾರ್ಯ ಬಂದನಾ ಬ್ಯಾನರ್ಜಿ, ಈ ಬಾರಿ […]

ಫೋರ್ಟೀಸ್ ಆಸ್ಪತ್ರೆ: ಕೊನೆ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್‌ ತಂತ್ರಜ್ಞಾನ ಬಳಸಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್‌ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. ಯೆಮೆನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿ ಈ ಇಬ್ಬರಿಗೂ ರೋಬೋಟ್‌ ತಂತ್ರಜ್ಞಾನ ಬಳಸಿ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುರೋ ಆಂಕೊಲಾಜಿಸ್ಟ್‌ ಡಾ. […]

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಭಗಿರಥ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಭಗಿರಥ ಜಯಂತಿಯನ್ನು ಆಚರಿಸಲಾಯಿತು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಶ್ರೀ ಭಗಿರಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಅಯ್ಯೂಬ ದ್ರಾಕ್ಷಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಜಕ್ಕಪ್ಪ ಯಡವೆ, […]

ಭೂತನಾಳ ಕೆರೆಗೆ ಆಲಮಟ್ಟಿ ನೀರು ಹರಿದು ಬಂತು- ವಿಜಯಪುರ ಜನರಲ್ಲಿ ಸಂತಸ ತಂತು

ವಿಜಯಪುರ: ನಗರದ ಕುಡಿಯುವ ನೀರಿನ ತೊಂದರೆ ನೀಗಿಸಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಕೈಗೊಂಡ ಪ್ರಯತ್ನ ಫಲ ನೀಡಿದ್ದು, ಈಗ ಭೂತನಾಳ ಕೆರೆಗೆ ನೀರು ಹರಿದು ಬರುತ್ತಿದೆ. ಭೀಕರ ಬರ ಹಾಗೂ ಬೇಸಿಗೆ ಇರುವದರಿಂದ ಕಾಲುವೆಗಳ ಮೂಲಕ ಕುಡಿಯುವ ನೀರು ಪೂರೈಸಲು ಸಚಿವರು ಒಂದು ತಿಂಗಳಿನಿಂದ ನಿರಂತರವಾಗಿ ಜಿಲ್ಲಾಧಿಕಾರಿಗಳ ಮೂಲಕ ಪ್ರಾದೇಶಿಕ ಆಯುಕ್ತರಿಗೆ ಕೋರಿದ್ದರು.  ಅದಕ್ಕೆ ಆಯುಕ್ತರು ಸ್ಪಂದಿಸಿದ್ದು, ಚುನಾವಣೆ ಆಯೋಗದ ಅನುಮತಿ ಪಡೆದು ನೀರು ಬಿಡುಗಡೆ […]

ವಿದ್ಯಾರ್ಥಿಯನ್ನು ಶೈಕ್ಷಣಿಕವಾಗಿ ದತ್ತು ಪಡೆದು ಬಸವ ಜಯಂತಿ ಆಚರಿಸಿದ ಶರಣ ಸಂಗಮೇಶ ಬಬಲೇಶ್ವರ ದಂಪತಿ

ವಿಜಯಪುರ: ನಗರದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕ ಮತ್ತು ಶರಣ ಸಂಗಮೇಶ ಬಬಲೇಶ್ವರ ದಂಪತಿ ಬಡ ವಿದ್ಯಾರ್ಥಿಯೊಬ್ಬನನ್ನು ಶೈಕ್ಷಣಿಕವಾಗಿ ದತ್ತು ಪಡೆದು ಬಸವ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ನಗರದಲ್ಲಿರುವ ಟ್ರಸ್ಚಿನ ಕಾರ್ಯಾಲಯದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿದ್ಯಾರ್ಥಿ ಅಶೋಕ ಜಾಧವ ಅವರನ್ನು ದತ್ತು ಪಡೆದು ಸಂಗಮಶ ಮತ್ತು ಅವರ ಪತ್ನಿ ಶ್ವೇತಾ ಬಬಲೇಶ್ವರ ದಂಪತಿ ಬಸವೇಶ್ವರರ ಆಶಯಗಳಿಗೆ ತಕ್ಕಂತೆ ಸಮಾಜಮುಖಿ ಕಾರ್ಯ ಮಾಡಿದರು. ದತ್ತು ಪಡೆಯಲು […]

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಇಂಗ್ಲಿಷ್, ಕನ್ನಡ, ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಸನ್ಮಾನ

ವಿಜಯಪುರ: ಸತತ ಪರಿಶ್ರಮ ಹಾಗೂ ಆತ್ಮಸ್ಥೈರ್ಯದಿಂದ ಬದುಕಿನಲ್ಲಿ ಸಾಧನೆ ಮಾಡಲು ಸಾಧ್ಯ.  ಬಡತನ ಮತ್ತು ಬದುಕಿನ ಕಷ್ಟ ಕಾರ್ಪಣ್ಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಸತತ ಓದಿನಿಂದ ಏನನ್ನಾದರೂ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.  ‘ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಂಗ್ಲಿಷ್, ಕನ್ನಡ ಹಾಗೂ ಉರ್ದು ಮಾಧ್ಯಮಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು […]

ಬಸವ ನಾಡಿನಲ್ಲಿ ಜಿಲ್ಲಾಡಳಿತದಿಂದ ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ಲೋಕಸಭೆ ಚುನಾವಣೆ ಹಿನ್ನೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ ಕವಿತಾ ಅವರು ಬಸವಣ್ಣ ಮತ್ತು ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು. ಇದಕ್ಕೂ ಮೊದಲು […]

ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸಾಧನೆ: ಡಿಸಿ ಟಿ. ಅಭಿನಂದನೆ

ವಿಜಯಪುರ: ರಾಜ್ಯದಲ್ಲಿ ಮಾರ್ಚ್– ಏಪ್ರಿಲ್‌ ನಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಭಿನಂದನೆ ತಿಳಿಸಿದ್ದಾರೆ. ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ವಿಜಯಪುರ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 11 ನೇ ಸ್ಥಾನ (ಕಳೆದ ಬಾರಿಯೂ 11 ನೇ ಸ್ಥಾನ) ಪಡೆದಿದ್ದು, ಶೇ. 79.31 ಫಲಿತಾಂಶ ಹೊಂದಿದೆ. ಪರೀಕ್ಷೆಗೆ […]

SSLC Exam: ಬಿದರಕುಂದಿಯ ಪವಿತ್ರ ಎಂ. ಕೊಣ್ಣೂರ ಜಿಲ್ಲೆಗೆ ಪ್ರಥಮ‌ ಸ್ಥಾನ

ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಸರಕಾರಿ‌ ಶಾಲೆಯ ವಿದ್ಯಾರ್ಥಿನಿ ಪವಿತ್ರ ಮಡಿವಾಳಪ್ಪಗೌಡ ಕೊಣ್ಣೂರ ಜಿಲ್ಲೆಗೆ ಪ್ರಥಮ‌ ಸ್ಥಾನ ಪಡೆದಿದ್ದಾಳೆ. ಸರಕಾರಿ ಆದರ್ಶ ವಿದ್ಯಾಲಯ ಆರ್.ಎಂ.ಎಸ್.ಎ ಶಾಲೆಯಲ್ಲಿ‌ ಓದುತ್ತಿರುವ ಈ ವಿದ್ಯಾರ್ಥಿನಿ 625ಕ್ಕೆ 623 ಅಂಕ ಪಡೆದು ಗಮನ ಸೆಳೆದಿದ್ದಾಳೆ. ಸಾಧನೆ ಮಾಡಿರುವ ವಿದ್ಯಾರ್ಥಿನಿಯನ್ನು ಶಾಲೆಯ ಶಿಕ್ಷಕರು ಸನ್ಮಾನಿಸಿ ಗೌರವಿಸಿದರು.

ಪ್ರೊ. ರಾಜು ಆಲಗೂರ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ತಾರೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಮತ್ತೀತರ ಕಾರ್ಯತಂತ್ರಗಳ ಕುರಿತು ಬ್ಯೂಸಿಯಾಗಿದ್ದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಈಗ ಮತದಾನ ಮುಕ್ತಾಯವಾಗಿರುವ ಹಿನ್ನೆಯಲ್ಲಿ ರಿಲ್ಯಾಕ್ಸ್ ಮೂಡಿನಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರ ಗೆಲುವಿನ ಅಂತರ, ಅದಕ್ಕೆ ಪೂರವಾಗಿರುವ ಅಂಶಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪ್ರತಿದಿನ ಬೆಳಿಗ್ಗೆಯಿಂದಲೇ ನಾನಾ ಗ್ರಾಮಗಳಿಗೆ ತೆರಳಿ ಮತದಾರರನ್ನು ಭೇಟಿ ಮಾಡಿದ ಸಚಿವರು ಪ್ರೋ. ರಾಜು ಆಲಗೂರ ಪರ ಮತಯಾಚಿಸಿದ್ದರು. […]