ವಿಶ್ವಖ್ಯಾತಿಯ ಬಿಜೆಎಂ ನಿಯತಕಾಲಿಕೆ ಸಹಸಂಪಾದಕರಾಗಿ ಡಾ. ಅರುಣ ಚಂ. ಇನಾಮದಾರ ಆಯ್ಕೆ

ವಿಜಯಪುರ: ಜಗತ್ತಿನ‌ ಖ್ಯಾತ ಬ್ರಿಟಿಷ ವೈದ್ಯಕೀಯ ಪ್ರಕಾಶನ ಸಂಸ್ಥೆಯ ಬಿ ಎಂ ಜೆ ಕೇಸ್ ರಿಪೋರ್ಟ ವೈದ್ಯಕೀಯ ವಿಜ್ಞಾನ ಮಾಸಿಕ ನಿಯತಕಾಲಿಕೆಯ ಅಸೋಸಿಯೇಟದ ಎಡಿಟರ್ ಅಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಚಂ. ಇನಾಮದಾರ ಆಯ್ಕೆ ಆಗಿದ್ದಾರೆ. ಚರ್ಮರೋಗ ಖ್ಯಾತ ತಜ್ಞವೈದ್ಯ ಡಾ. ಅರುಣ ಚಂ. ಇನಾಮದಾರ  ಈ ಮೂಲಕ ವಿಶ್ವದ ಪ್ರತಿಷ್ಠಿತ ನಿಯತಕಾಲಿಕೆಯ ಅಸೋಸಿಯೇಟ್ ಎಡಿಟರ್ ಆಗಿ ಆಯ್ಜೆಯಾದ ಭಾರತದ ಮೊದಲ‌ ಚರ್ಮರೋಗ ತಜ್ಞ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಇಂದಿನಿಂದ ಅಂದರೆ ಜೂನ್ […]

ಸಂಸ್ಕೃತ, ವೈದಿಕ ಸಂಸ್ಕಾರ ಒಂದು ತಿಂಗಳ ಶಿಬಿರ ಮುಕ್ತಾಯ- ಸಮಾರೋಪ ಸಮಾರಂಭದಲ್ಲಿ ನಾಗಠಾಣ ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಭಾಗಿ

ವಿಜಯಪುರ: ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಮತ್ತು ಗುರುಪಾದಯ್ಯ ಶ್ರೀಶೈಲ ಗಚ್ಚಿನಮಠ ಇವರ ಸಹಯೋಗದೊಂದಿಗೆ ನಗರದ ಸಂಗನಬಸವ ಮಂಗಲ ಕಾರ್ಯಾಲಯದಲ್ಲಿಆಯೋಜಿಸಲಾಗಿದ್ದ ಸಂಸ್ಕೃತ ಮತ್ತು ವೈದಿಕ ಸಂಸ್ಕಾರ ಕುರಿತ ಒಂದು ತಿಂಗಳ ಶಿಬಿರ ಮುಕ್ತಾಯವಾಗಿದೆ. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ನಾಗಠಾಣ ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ, ವೀರಶೈವ ಪರಂಪರೆಯಲ್ಲಿ ಆಚಾರ, ವಿಚಾರ, ವೈದಿಕತ್ವ ಸಂಸ್ಕಾರಗಳಂಥ ಶಿಬಿರಗಳನ್ನು ಆಯೋಜಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಇದೇ ವೇಳೆ ಗುರುಪಾದಯ್ಯ ಗಚ್ಚಿನಮಠ ಮತ್ತು ವಿಜಯಮಾಹಾಂತೇಶ್ವರಿ ಗುರುಪಾದಯ್ಯ ಗಚ್ಚಿನಮಠ ದಂಪತಿಯ 25ನೇ ವಿವಾಹ ವಾರ್ಷಿಕೋತ್ಸವ […]

ಭೂಅಕ್ರಮ ತನಿಖೆ ಸಿಓಡಿಗೆ ವಹಿಸಲು ಆಗ್ರಹ- ಸಿಎಂ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಅಪ್ಪು ಪಟ್ಟಣಶೆಟ್ಟಿ

ಬೆಂಗಳೂರು: ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ನಕಲಿ ಭೂದಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿರುವ ಭೂಮಾಫಿಯಾ ಮಟ್ಟ ಹಾಕಲು ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಓಡಿಗೆ ವಹಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ಅವರು, ಜಿಲ್ಲೆಯಲ್ಲಿ ಭೂ ಅಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಸುದೀರ್ಘವಾಗಿ ಮಾಹಿತಿ ನೀಡಿದರು. ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಭೂದಾಖಲೆ ಸೃಷ್ಟಿಸಿ ಜಿಲ್ಲೆಯಲ್ಲಿ ಭೂಮಿ […]

ಕನಿಷ್ಠ ಒಂದು ಮತದಿಂದಾದರೂ ಗೆಲ್ಲುವೆ- ಚುನಾವಣೆ ಬಳಿಕ ರಾಜ್ಯ ಸರಕಾರ ತಂತಾನೆ ಪತನವಾಗಲಿದೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಕನಿಷ್ಠ ಒಂದು ಮತದ ಅಂತರದಿಂದಾದರೂ ಗೆಲ್ಲುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಜಯಪುರದಲ್ಲಿ ಒನ್ ಸೈಡೆಡ್ ಚುನಾವಣೆ ನಡೆದಿದೆ ಎಂದು ತಿಳಿಸಿದರು. ದೇವರು ಒಳ್ಳೆಯದನ್ನು ಮಾಡುತ್ತಾನೆ ಎಂದು ಸಂಪೂರ್ಣ ವಿಶ್ವಾಸವಿದೆ.  ನನ್ನ ಜೀವನದಲ್ಲಿ ಇದು ಹೊಸ ಅನುಭವ.  ನಾನೇನು ಮೇಲಿನಿಂದ ಬಂದವನಲ್ಲ.  ನಾನು ಏಕಾಏಕೆ ಬಂದು ಎಂಎಲ್ಎ, ಮಂತ್ರಿಯಾದವನಲ್ಲ.  ಹಂತಹಂತವಾಗಿ ಪ್ರತಿಯೊಬ್ಬ ಕಾರ್ಯಕರ್ತರ ಭಾವನೆ, ಅಭಿಪ್ರಾಯಗಳಿಗೆ ಮನ್ನಣೆ ನೀಡಿ ರಾಜಕಾರಣದಲ್ಲಿ ಬೆಳೆದು […]

ತೊರವಿ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಎವಿಎಸ್ ಆಯುರ್ವೇದ್ ಕಾಲೇಜು ವಿದ್ಯಾರ್ಥಿಗಳಿಂದ ಎನ್.ಎಸ್.ಎಸ್ ಶಿಬಿರ

ವಿಜಯಪುರ: ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ತೊರವಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಏಳು ದಿನಗಳ ಎನ್.ಎಸ್.ಎಸ್ ಶಿಬಿರದ ಅಂಗವಾಗಿ ಮಂಗಳವಾರ ಜಲ ಸಂರಕ್ಷಣೆ ಅಭಿಯಾನದ ಉದ್ಘಾಟನೆ ನಡೆಯಿತು. ಪರಿಸರ ತಜ್ಞ ಮತ್ತು ಹೈ ಲರ್ನ್ ಎಜ್ಯುಟೆಕ್ ಇನ್ಸ್ಟಿಟ್ಯೂಟ್ ನಿರ್ದೇಶಕರಾಗಿದ್ದರು. ಸಿರಾಜುದ್ದೀನ್ ಹೊರಗಿನಮನಿ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪರಿಸರ ಮತ್ತು ಜಲಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಕುರಿತು ಎನ್.ಎಸ್.ಎಸ್ ಶಿಬಿರಾರ್ಥಿಗಳು ಜನ […]

ಭೂಹಗರಣ ಸಿಓಡಿ ತನಿಖೆಗೆ ವಹಿಸಿ- ಸಚಿವ ಎಂ. ಬಿ. ಪಾಟೀಲ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿಿ

ವಿಜಯಪುರ ಜಿಲ್ಲೆಯಲ್ಲಿ ನಡೆದಿರುವ ಭೂ ಹಗರಣ ಕುರಿತು ಸಿಓಡಿ ತನಿಖೆ ನಡೆಸುವಂತೆ ಆಗ್ರಹಿಸಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅಪ್ಪು ಪಟ್ಟಣಶೆಟ್ಟಿ, ತಮ್ಮ ಬೇಡಿಕೆಗೆ ಸ್ಪಂದಿಸಿರುವ ಸಚಿವರು ತಾವೂ ಕೂಡ ಈ ನಿಟ್ಟಿನಲ್ಲಿ ಸರಕಾರಕ್ಕೆ ಮನವರಿಗೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ತಾವು ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ನಕಲಿ ಭೂ-ದಾಖಲೆ […]

ತಡವಲಗಾ ಕೆರೆಗೆ ಹರಿದ ನೀರು- ಭಾರತೀಯ ಕಿಸಾನ್ ಸಂಘದ ಹೋರಾಟಕ್ಕೆ ಸಿಕ್ಕ ಫಲ

ವಿಜಯಪುರ: ಇಂಡಿ ತಾಲೂಕಿನ ತಡವಲಗಾ ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ನಡೆಸಿದ ಎರಡು ದಿನಗಳ ಅಹೋರಾತ್ರಿ ಹೋರಾಟಕ್ಕೆ ಫಲ ಸಿಕ್ಕಿದೆ.  ಅನ್ನದಾತರ ಹೋರಾಟಕ್ಕೆ ಮಣಿದ ಅಧಿಕಾರಿಗಳು ಕೊನೆಗೂ ತಡವಲಗಾ ಕೆರೆಗೆ ನೀರು ಹರಿಸಿದ್ದು, ರೈತರು ಹೋರಾಟವನ್ನು ಹಿಂಪಡೆದಿದ್ದಾರೆ. ತಡವಲಾಗ ಕೆರೆಗೆ ನೀರು ಹರಿಸಿ ಈ ಭಾಗದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ ನೇತೃತ್ವದಲ್ಲಿ ರೈತರು ಇಂಡಿ ತಾಲೂಕಿನ ತಡವಲಗಾ […]

ವಿಶ್ವದಲ್ಲಿಯೇ ಮೊದಲ ಬಾರಿಗೆ ಮೂರು ವಿಭಿನ್ನ ಕಾಯಿಲೆಗೆ ಏಕಕಾಲದಲ್ಲಿ ಸಂಕೀರ್ಣ ಶಸ್ತ್ರಚಿಕಿತ್ಸೆ: ಫೋರ್ಟಿಸ್‌ ವೈದ್ಯರ ತಂಡದ ಸಾಧನೆ

ಬೆಂಗಳೂರು: ವಿಶ್ವದಲ್ಲಿಯೇ ಇದೇ ಮೊದಲ ಬಾರಿಗೆ ಏಕಕಾಲದಲ್ಲೇ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯಕೀಯ ತಂಡ ಯಶಸ್ವಿಯಾಗಿ ನಡೆಸಿದೆ. ಕನ್ನಿಂಗ್‌ಹ್ಯಾಮ್‌ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಇದು ವಿಶ್ವದಲ್ಲಿಯೇ ಮೊದಲ ಪ್ರಕರಣವಾಗಿದೆ. ಫೋರ್ಟಿಸ್ ಆಸ್ಪತ್ರೆಯ ಹೃದಯತಜ್ಞ ಡಾ. ವಿವೇಕ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ […]

ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ: ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.   ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಅವರು ಸಲಹೆ ಸೂಚನೆ ನೀಡಿದರು. ಮತ ಎಣಿಕೆ ಪ್ರಕ್ರಿಯೆ ಜೂ. 4ರಂದು ವಿಜಯಪುರ ಸೈನಿಕ ಶಾಲೆಯಲ್ಲಿ […]

ವಿಜಯಪುರ ಜಿಲ್ಲಾಸ್ಪತ್ರೆಗೆ ಡಿಸಿ ಟಿ. ಭೂಬಾಲನ್ ಭೇಟಿ- ವ್ಯವಸ್ಥೆಯ ಕುರಿತು ಮೆಚ್ಚುಗೆ

ವಿಜಯಪುರ: ಜಿಲ್ಲಾಸ್ಪತ್ರೆಗೆ ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿ ಹಾಗೂ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ವೈದ್ಯರು ಹಾಗೂ ರೋಗಿಗಳಿಂದ ಆಸ್ಪತ್ರೆಯ ಮಾಹಿತಿ ಪಡೆದುಕೊಂಡರು. ಒಪಿಡಿ, ಆಪರೇಶನ್ ಥೀಯೆಟರ್, ಚಿಕ್ಕಮಕ್ಕಳ ವಿಭಾಗ, ಮೆಡಿಸಿನ್ ವ್ಯವಸ್ಥೆ, ಸರ್ಜರಿ ವಿಭಾಗ, ಅರ್ಥೋಪೆಡಿಸ್, ಕಣ್ಣಿನ ವಿಭಾಗ, ಇಎನ್‌ಟಿ ವಿಭಾಗ, ಪ್ರಯೋಗಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿನ ಸ್ವಚ್ಚತೆ ಹಾಗೂ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಅವರು, ಮಕ್ಕಳ ವಿಭಾಗ, ಹೆರಿಗೆ ವಿಭಾಗಗಳಲ್ಲಿ […]