ವಿಜಯಪುರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ವಿಜನ್ ಏನು ಗೊತ್ತಾ?

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ ತಾವು ಹೊಂದಿರುವ ವಿಜನ್ ನನ್ನು ಬಿಚ್ಚಿಟ್ಟಿದ್ದಾರೆ.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಾವು ಗೆಲುವು ಸಾಧಿಸಿದರೆ 10 ಅಂಶಗಳ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಪ್ರೊ. ರಾಜು ಆಲಗೂರ ಅವರ ವಿಜನ್ ಏನು? ಇಲ್ಲಿದೆ ಮಾಹಿತಿ. ನೀರಾವರಿ   1. ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೃμÁ್ಣ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಲು […]

ಸಚಿವ ಎಂ. ಬಿ. ಪಾಟೀಲ ಅವರಿಂದ ಪ್ರೊ. ರಾಜು ಆಲಗೂರ ಪರ ಬಾಬಾನಗರ, ಬಿಜ್ಜರಗಿ, ಟಕ್ಕಳಕಿ, ಜಾಲಗೇರಿಯಲ್ಲಿ ಬಿರುಸಿನ ಪ್ರಚಾರ

ವಿಜಯಪುರ: ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಾಬಾನಗರ ಮತ್ತು ಬಿಜ್ಜರಗಿಯಲ್ಲಿ ಪ್ರಚಾರ ಕೈಗೊಂಡ ಅವರು, ಪ್ರಾಮಾಣಿಕವಾಗಿ ದುಡಿದವರಿಗೆ ನಿಯತ್ತಿನಿಂದ ಮತಹಾಕಿ ಗೆಲ್ಲಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ದೇಶವನ್ನು ಕಟ್ಟುವ ಕೆಲಸ ಮಾಡಿದೆ. ಬ್ರಿಟೀಷರು ಎಲ್ಲವನ್ನೂ ಲೂಟಿ ಮಾಡಿದ ದೇಶದಲ್ಲಿ ನೆಹರು ಸಾರ್ವಜನಿಕ ಮತ್ತು ಖಾಸಗಿ ಉದ್ದಿಮೆ ಸ್ಥಾಪಿಸಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ […]

ವಿಜಯಪುರ ಸ್ಮಾರಕಗಳನ್ನು ವಿಶ್ವಪರಂಪರೆ ಪಟ್ಟಿಗೆ ಸೇರಿಸಲು ಶತಪ್ರಯತ್ನ ಮಾಡುವೆ- ಪ್ರೊ. ರಾಜು ಆಲಗೂರ

ವಿಜಯಪುರ: ನಗರದಲ್ಲಿರುವ ಗೋಳಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸಲು ಶತ ಪ್ರಯತ್ನ ಮಾಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದರು. ನಗರದಲ್ಲಿ ನಡೆದ ಆದಿ ಬಣಜಿಗ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮತಯಾಚಿಸಿ ಮಾತನಾಡಿದರು. ನೀರಾವರಿಗೆ ಇನ್ನೂ ಹೆಚ್ಚಿನ ಒತ್ತು ನೀಡಿ ಆಲಮಟ್ಟಿ ಎತ್ತರವನ್ನು ಹೆಚ್ಚಿಸಲು ಸಂಸತ್ತಿನಲ್ಲಿ ದನಿ ಎತ್ತಿ ಸಾಕಾರಗೊಳಿಸುವೆ.  ನನಗೊಂದು ಅವಕಾಶ ನೀಡಿದರೆ ನಿಮ್ಮೆಲ್ಲರ ಹಿತ ಕಾಪಾಡಲು ಶ್ರಮಿಸುತ್ತೇನೆ.  ವ್ಯಾಪಾರ ವಹಿವಾಟು ಹೆಚ್ಚಿಸಲು, ರೈತರಿಗೆ ಯೋಗ್ಯ ಬೆಲೆ, ಜೀವನ ಮಟ್ಟ ಸುಧಾರಣೆ, ರೈಲು-ವಿಮಾನಯಾನ ಮೇಲ್ದರ್ಜೆಯಂಥ […]

ಲೋಕಸಭೆ ಚುನಾವಣೆ ಬಗ್ಗೆ ಜನ ಜಾಗೃತರಾಗಿದ್ದಾರೆ- ಸುನೀಲಗೌಡ ಪಾಟೀಲ

ವಿಜಯಪುರ: ಲೋಕಸಭೆ ಚುನಾವಣೆ ಬಗ್ಗೆ ಜನ ಜಾಗೃತರಾಗಿದ್ದು, ಇದು ಒಳ್ಳೆಯ ಬೆಳವಣಿಗೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಚುನಾವಣೆ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾ. ಪಂ., ವಿಧಾನಸಭೆಯಂತೆ ಲೋಕಸಭೆ ಕ್ಷೇತ್ರವೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು. ನಮ್ಮ ಸಮಸ್ಯೆಗಳ ಪರಿಹಾರಕ್ಕೆ ಸಂಸದರ ಪಾತ್ರವೂ ಮುಖ್ಯವಾಗಿದೆ.  ಜಿಲ್ಲೆಯಲ್ಲಿ ನೀರಾವರಿ ಯೋಜನೆಯಿಂದ ಬಹಳ ಅಭಿವೃದ್ಧಿಯಾಗಿದೆ.  ರಾಜ್ಯ ಸರಕಾರ, ಸಚಿವ ಎಂ. ಬಿ. ಪಾಟೀಲ ಅವರ […]

ರಕ್ತಬಸಿದು ಪಕ್ಷ ಕಟ್ಟಿದ್ದೇನೆ ಆದರೆ ನನ್ನನ್ನು ಡಿಸಿಎಂ ಸ್ಥಾನ ಕಿತ್ತುಕೊಂಡರು ಬಿಜೆಪಿ ವಿರುದ್ಧ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ

ವಿಜಯಪುರ: ರಕ್ತಬಸಿದು ಪಕ್ಷ ಕಟ್ಟಿದ್ದೇನೆ.  ಆದರೆ, ನನ್ನ ಡಿಸಿಎಂ ಸ್ಥಾನ ಕಿತ್ತುಕೊಂಡರು ಎಂದು ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಲಕ್ಷ್ಣಣ ಸವದಿಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂಬ ಆರೋಪದ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅಂಥದ್ದೇನೂ ಇಲ್ಲ.  ನಾನು ಬಿಜೆಪಿ ಸೇರಿದಾಗ ಅಥಣಿ ಮತ್ತು ‌ಕಾಗವಾಡ ಸುತ್ತಮುತ್ತ ಗ್ರಾಮ ಪಂಚಾಯಿತಿಯಿಂದ ಹಿಡಿದು ಎಲ್ಲಿಯೂ ಬಿಜೆಪಿಯ ಜನಪ್ರತಿನಿಧಿ‌ ಇರಲಿಲ್ಲ.  ನಾನು ರಕ್ತಬಸಿದು […]

ಮತದಾರರು ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ- ಶಾಸಕ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಈಗ ಆಗಿರುವ ಮತ್ತು ಮುಂದೆ ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿಟ್ಟುಕೊಂಡು ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಮತ ನೀಡಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮನವಿ ಮಾಡಿದ್ದಾರೆ. ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಮತಯಾಚಿಸಿ ಮಾತನಾಡಿದರು. ಪ್ರೊ. ರಾಜು ಆಲಗೂರ ಅವರು ಸಂಸದರಾಗುವ ಎಲ್ಲ ಲಕ್ಷಣಗಳಿವೆ.  ಅವರು ವಿದ್ಯಾವಂತರಾಗಿದ್ದು, ನಿಮ್ಮ ಸಮಸ್ಯೆಗಳನ್ನು ಸಂಸತ್ತಿನಲ್ಲಿ […]

ಏ. 29 ರಂದು ಬಾಗಲಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ- ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ ಪರ ಮತಾಯನೆ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಏ. 29 ರಂದು ಬಾಗಲಕೋಟೆಗೆ ಆಗಮಿಸಲಿದ್ದು, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ ಪತ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.29 ರಂದು ಬೆ. 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ‌ ಮೋದಿಯವರು ಉಭಯ ಜಿಲ್ಲೆಯ ಜನತೆಯನ್ನುದ್ದೇಶಿಸಿ […]

ಭಾರತ ಬಲಿಷ್ಠಾವಾಗಿರಬೇಕಾದರೆ ಸಮುದಾಯ ಆರೋಗ್ಯದ ಪಾತ್ರ ಬಹುಮುಖ್ಯವಾಗಿದೆ- ಡಾ. ವೈ. ಎಂ. ಜಯರಾಜ

ವಿಜಯಪುರ: ಭಾರತ ಬಲಿಷ್ಠವಾಗಿರಬೇಕಾದರೆ ಸಮುದಾಯ ಆರೋಗ್ಯ ಪಾತ್ರ ಬಹುಮುಖ್ಯವಾಗಿದೆ ಎಂದು ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜು, ರಾಜೀವ ಗಾಂಧಿ ವಿಶ್ವವಿದ್ಯಾಲಯ, ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯ, ಸೊಸೈಟಿ ಕಮ್ಯೂನಿಟಿ ನರ್ಸಿಂಗ್ ಆಫ್ ಇಂಡಿಯಾ ಸಹಯೋಗದಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ಪ್ರಾರಂಭವಾದ ಸಮುದಾಯ ಆರೋಗ್ಯ ಶುಶ್ರೂಷಾ ಶಿಕ್ಷಣ ಕೌಶಲ್ಯ […]

ದ್ವಿತೀಯ ಪಿಯುಸಿ ಪರೀಕ್ಷೆ- 2 ಸೂಸುತ್ರವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಒಟ್ಟು 5 ಕೇಂದ್ರಗಳಲ್ಲಿ ಏಪ್ರೀಲ್ 29 ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿವೆ. ಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯೋನ್ಮುಖರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಭಗಣದಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆ- 2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ದಿನದಂದು ಜಿಲ್ಲಾ ಖಾಜಾನೆ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಗಳನ್ನು […]

ಮನೆಯಿಂದಲೇ ಮತದಾನ ವ್ಯವಸ್ಥೆಗೆ ಹಿರಿಹಿರಿ ಹಿಗ್ಗಿದ ಹಿರಿಯ ನಾಗರಿಕರು, ವಿಶೇಷ ಚೇತನ ಮತದಾರರು

ವಿಜಯಪುರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಆಯೋಗವು 85 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಜಿಲ್ಲೆಯ ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರು ತಮ್ಮ ಹಕ್ಕು ಚಲಾಯಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಏ. 27 ರಂದು ಮನೆಯಿಂದ ಮತದಾನ ಮಾಡಲು ಒಪ್ಪಿಗೆ ಪತ್ರ ನೀಡಿರುವ 85 ವರ್ಷಕ್ಕೂ ಮೇಲ್ಪಟ್ಟವರು ಮತ್ತು  ವಿಕಲಚೇತನ ಮತದಾರರ ಮನೆಗಳಿಗೆ ವೇಳಾಪಟ್ಟಿ ಮತ್ತು ರೂಟ್ ಮ್ಯಾಪ್ ಸಿದ್ದಪಡಿಸಿಕೊಂಡಿರುವ ಮತಗಟ್ಟೆ ಸಿಬ್ಬಂದಿ ತೆರಳಿ ಮತದಾನ […]