ಕೈ ಸಚಿವ, ಶಾಸಕರಿಂದ ಒಗ್ಗಟ್ಟು ಪ್ರದರ್ಶನ- ಬಸವನಾಡಿನಿಂದ ಪ್ರೊ. ರಾಜು ಆಲಗೂರ ಪ್ರಚಾರಕ್ಕೆ ಚಾಲನೆ
ವಿಜಯಪುರ: ಜಿಲ್ಲೆಯ ಕಾಂಗ್ರೆಸ್ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಸವಣ್ಣನ ತವರು ಬಸವನ ಬಾಗೇವಾಡಿಯಿಂದ ಕೈ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಎಸ್. ಪಾಟೀಲ, ಶಾಸಕರಾದ ಸಿ. ಎಸ್. ನಾಡಗೌಡ, ಯಶವಂತರಾಯಗೌಡ ವಿ. ಪಾಟೀಲ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮನಗೂಳಿ, ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮಾಜಿ ಶಾಸಕ ಶರಣಪ್ಪ ಸುಣಗಾರ, […]
ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ವಿಜಯಪುರ: ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಕೊಲೆ ಖಂಡಿಸಿ ಮತ್ತು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಗಾಂಧಿ ಚೌಕ್, ಬಸವೇಶ್ವರ ಚೌಕ್ ಮಾರ್ಗವಾಗಿ ಡಾ. ಬಿ. ಆರ್.ಅಂಬೇಡ್ಕರ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಯಿತು. ಮೆರವಣಿಯಲ್ಲಿ ಬೋಲೋ ಭಾರತ್ ಮಾತಾ ಕೀ ಜೈ, ಮತಾಂದ್ ಶಕ್ತಿಗಳಿಗೆ ಧಿಕ್ಕಾರ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಬೇಜವಾಬ್ದಾರಿ […]
ಲೋಕಸಭೆ ಚುನಾವಣೆ: ವಿಜಯಪುರದಲ್ಲಿ ಅಂತಿಮವಾಗಿ ಎಂಟು ಜನ ಕಣದಲ್ಲಿ
ವಿಜಯಪುರ: ಲೋಕಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಗಿದ್ದು, ಒಟ್ಟು 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದು, ಅಂತಿಮವಾಗಿ ಕಣದಲ್ಲಿ ಎಂಟು ಅಭ್ಯರ್ಥಿಗಳು ಇದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಕಣದಲ್ಲಿರುವ ಅಭ್ಯರ್ಥಿಗಳು 1. ಬಿಜೆಪಿ- ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, 2. ಕಾಂಗ್ರೇಸ್- ರಾಜು ಆಲಗೂರ, 3. […]
ಕಿತ್ತೂರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಎಲ್ಲ 12 ಸ್ಥಾನಗಳನ್ನು ಗೆಲ್ಲಲಿದೆ- ಎಚ್. ಕೆ. ಪಾಟೀಲ
ವಿಜಯಪುರ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಎಲ್ಲ 12 ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಕಿತ್ತೂರು ಕರ್ನಾಟಕದ ಏಳು ಮತ್ತು ಕಲ್ಯಾಣ ಕರ್ನಾಟಕದ 5 ಸೇರಿದಂತೆ ಎಲ್ಲ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಸುಳ್ಳು […]
ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ- ಪ್ರಕಾಶ ಅಕ್ಕಲಕೋಟ
ವಿಜಯಪುರ: ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದ ಅವಿನಾಭಾವ ಸಂಬಂಧವಿದ್ದು, ಇಂದಿಗೂ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತಾ ನಮಗೆ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹೇಳಿದ್ದಾರೆ. ನಗರದ ಬಿಜೆಪಿ ಚುನಾವಣೆ ಕಾರ್ಯಾಲಯದಲ್ಲಿ ನಡೆದ ಭಗವಾನ್ ಮಹಾವೀರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದಲ್ಲಿಯೇ ಅತೀ ಹೆಚ್ಚು ಶ್ರೀಮಂತಿಕೆ ಸಮಾಜವಾಗಿದ್ದರೂ ಜೈನರು ತಮ್ಮ ಶೇ. 70 ರಷ್ಟು ಆದಾಯವನ್ನು ಸಮಾಜಕ್ಕೆ ಅರ್ಪಿಸುವ ಹೃದಯಶ್ರೀಮಂತಿಕೆ ಹೊಂದಿದ್ದಾರೆ. ದೇಶದಲ್ಲಿಯೇ ಅತೀ ಹೆಚ್ಚು […]
ಮೋದಿ ವಿಶ್ವಗುರುವಾಗಿದ್ದರೆ ಬೇರೆ ಪಾರ್ಟಿ ಜೊತೆ ಮೈತ್ರಿ ಯಾಕೆ ಬೇಕು? ಜನಾರ್ಧನ ರೆಡ್ಡಿ ಯಾಕೆ ಮರು ಸೇರ್ಪಡೆಯಾಗಬೇಕು- ಸಚಿವ ಸಂತೋಷ ಲಾಡ ಪ್ರಶ್ನೆ
ವಿಜಯಪುರ: ಮೋದಿ ವಿಶ್ವಗುರುವಾಗಿದ್ದರೆ ಬೇರೆ ಪಕ್ಷಗಳೊಂದಿಗೆ ಯಾಕೆ ಮೈತ್ರಿ ಮಾಡಿಕೊಳ್ಳಬೇಕು? ಜನಾರ್ಧನ ರೆಡ್ಡಿಯನ್ನು ಯಾಕೆ ಬಿಜೆಪಿಗೆ ಮರಳಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸುಳ್ಳು ಪ್ರಚಾರಗಳ ಮೂಲಕ ಮತಯಾಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಮೋದಿ ಅವರು ವಿಶ್ವ ಗುರು ಅಂತಾರೆ. ಹಾಗಿದ್ದರೆ ಬಿಜೆಪಿಯವರು ಜೆಡಿಎಸ್ ಜೊತೆ ಏಕೆ ಮೈತ್ರಿ ಮಾಡಿಕೊಂಡರು? ಜನಾರ್ಧನ ರೆಡ್ಡಿಯನ್ನು ಯಾಕೆ ಬಿಜೆಪಿಗೆ ವಾಪಸ್ ಸೇರಿಸಿಕೊಂಡರು? ಅವರಿಗೆ ಸೋಲುವ […]
Election: ಜಿಗಜಿಣಗಿ, ಆಲಗೂರ ಸೇರಿ 12 ಅಭ್ಯರ್ಥಿಗಳ ನಾಮಪತ್ರ ಸ್ವೀಕಾರ- 9 ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ
ವಿಜಯಪುರ: ಲೋಕಸಭೆ ನಾಮಪತ್ರ ಪರಿಶೀಲನೆ ಪೂರ್ಣಗೊಂಡಿದ್ದು, ಬಿಜೆಪಿ, ಕಾಂಗ್ರೆಸ್, ಬಿಎಸ್ಪಿ ಸೇರಿ 12 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿದ್ದು, ಒಂಬತ್ತು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿವೆ. ಏ. 19 ರಂದು ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ಒಟ್ಟು 21 ಅಭ್ಯರ್ಥಿಗಳು 35 ನಾಮಪತ್ರ ಸಲ್ಲಿಸಿದ್ದರು. ಈ ನಾಮಪತ್ರಗಳ ಪರಿಶೀಲನೆ ನಡೆಯಿತು. ಈ ಸಂದರ್ಭದಲ್ಲಿ 12 ಅಭ್ಯರ್ಥಿಗಳ ಅಭ್ಯರ್ಥಿಗಳ ನಾಮಪತ್ರ ಸ್ವೀಕಾರವಾಗಿದ್ದು, ಒಂಬತ್ತು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ. ನಾಮಪತ್ರ ಸ್ವೀಕತವಾದ ಅಭ್ಯರ್ಥಿಗಳು, ಪಕ್ಷದ ಮಾಹಿತಿ. ಮಲ್ಲು ಹಾದಿಮನಿ- ಬಿಎಸ್ಪಿ ರಮೇಶ ಜಿಗಜಿಣಗಿ-ಬಿಜೆಪಿ ಹಣಮಂತರಾವ […]
ಬಿ.ಎಲ್.ಡಿ.ಇ ತಾಂತ್ರಿಕ ಮಹಾವಿದ್ಯಾಲಯದ 51 ವಿದ್ಯಾರ್ಥಿಗಳಿಗೆ ಕೆ.ಎಸ್.ಸಿ.ಎಸ್.ಟಿ ವತಿಯಿಂದ ಪ್ರಾತ್ಯಕ್ಷಿಕೆಗೆ ಅನುದಾನ
ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ 51 ವಿದ್ಯಾರ್ಥಿಗಳು ಕರ್ನಾಟಕ ಸ್ಟೆಟ್ ಕೌನ್ಸಿಲ್ ಫಾರ್ ಸೈನ್ಸ್ ಆಂಡ್‌ಟೆಕ್ನಾಲಜಿ(ಕೆ.ಎಸ್.ಸಿ.ಎಸ್.ಟಿ)ಯ 2023-24ನೇ ಆರ್ಥಿಕ ವರ್ಷದ ಸೃಜನಶೀಲ, ನವೀನ ಯೋಜನೆಗಳ 14 ಅತ್ತುತಮ ಪ್ರಾತ್ಯಕ್ಷಿಕೆಗಳು ಆಯ್ಕೆಯಾಗಿವೆ. 51 ವಿದ್ಯಾರ್ಥಿಗಳಿಗೆ ರೂ.69000 ಧನ ಸಹಾಯ ಸಿಗಲಿದೆ. ಅಲ್ಲದೇ ವಿದ್ಯಾರ್ಥಿಗಳಲ್ಲಿರುವ ಸೂಪ್ತ ಪ್ರತಿಭೆಯನ್ನು ಮತ್ತು ಸಂಶೋಧನೆ ಯೋಜನೆಗಳನ್ನು ರೂಪಿಸಲು ಪ್ರೋತ್ಸಾಹ ಸಿಗಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಪದಾಧಿಕಾರಿಗಳು ಅಭಿನಂದನೆ […]
ನೇಹಾ ಹಿರೇಮಠ ಕೊಲೆ ಖಂಡಿಸಿ ವಿಜಯಪುರದಲ್ಲಿ ಜಂಗಮ ಸಮಾಜದ ವತಿಯಿಂದ ಪ್ರತಿಭಟನೆ
ವಿಜಯಪುರ: ಹುಬ್ಬಳ್ಳಿಯಲ್ಲಿ ಯುವತಿ ನೇಹಾ ನಿರಂಜನ ಹಿರೇಮಠ ಕೊಲೆ ಖಂಡಿಸಿ ಮತ್ತು ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ನಗರದಲ್ಲಿ ಜಂಗಮ ಸಮಾದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಂಗಮ ಸಮಾಜ ಮುಖಂಡ ಸಂಜೀವ ಹಿರೇಮಠ ಮತ್ತು ಪ್ರಧಾನ ಕಾರ್ಯದರ್ಶಿ ಎಸ್. ಕೆ. ಸಾವಳಗಿಮಠ, ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ನಿರಂಜನ ಹಿರೇಮಠ ಅವರನ್ನು ಹಾಡು ಹಗಲೇ ಕಾಲೇಜಿನ ಆವರಣದಲ್ಲಿ ಚಾಕುವಿನಿಂದ ಹಿರಿದು ಕ್ರೂರವಾಗಿ […]
ಇಂಚಗೇರಿ ಮಠಕ್ಕೆ ತೆರಳಿ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ
ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಸುಕ್ಷೇತ್ರ ಇಂಚಗೇರಿ ಮಠಕ್ಕೆ ಭೇಟಿ ನೀಡಿ ಶ್ರೀ ರೇವಣಸಿದ್ದೇಶ್ವರ ಮಹಾರಾಜರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರೊ. ರಾಜು ಆಲಗೂರ ಅವರಿಗೆ ಆಶೀರ್ವದಿಸಿದ ಶ್ರೀಗಳು, ನಿಮಗೆ ಒಳ್ಳೆಯದಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಡಿ.ಎಲ್. ಚವ್ಹಾಣ, ಜಿ. ಪಂ. ಮಾಜಿ ಸದಸ್ಯ ಕಾಳು ಬೆಳ್ಳುಂಡಗಿ, ಮುಖಂಡರಾದ ಅಶೋಕ ಬೆಳ್ಳುಂಡಗಿ, ಮಲ್ಲಣ್ಣ ಸಕ್ರಿ(ಸಾಲಿ), ಕೆ. ಎಂ. ಅರವತ್ತಿ, ರೇವಣಸಿದ್ದ […]