ಭೀಮಾ ನದಿಗೆ ನೀರು ಹರಿಸಲು ಆಗ್ರಹ- ಶಾಸಕ ಯಶವಂತರಾಯಗೌಡ ಪಾಟೀಲ ನೇತೃತ್ವದಲ್ಲಿ ಡಿಸಿಎಂ ಭೇಟಿ- 1.50 ಟಿಎಂಸಿ ನೀರು ಬಿಡಲು ಸಚಿವರ ಸೂಚನೆ
ಬೆಂಗಳೂರು: ವಿಜಯಪುರ ಜಿಲ್ಲೆಯ ಚಡಚಣ, ಇಂಡಿ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗಿದ್ದು, ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ನೇತತ್ವದಲ್ಲಿ ಅಫಝಲಪುರ ಶಾಸಕ ಎಂ. ವೈ. ಪಾಟೀಲ ಮತ್ತೀತರರು ಜಲಸಂಪನ್ಮೂಲ ಸಚಿವ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಈ ಬಾರಿ ಭೀಕರ ಬರದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ನದಿ, ಕೆರೆ-ಕಟ್ಟೆಗಳು, ಹಳ್ಳ-ಕೊಳ್ಳಗಳು […]
ಬಾಹುಬಲಿಗೆ ನೈವೇದ್ಯ ಕಟಂಬಲಿ- ಬಸವ ನಾಡಿನಲ್ಲಿ ವಿಶಿಷ್ಠ ಜಾತ್ರೆಗೆ ಸಾಕ್ಷಿಯಾದ ರಂಭಾಪುರ ಜನತೆ
ವಿಜಯಪುರ: ದೇಶದಲ್ಲಿಯೇ ಅತೀ ಹೆಚ್ಚು ಜಾತ್ರೆ ನಡೆಯುವ ಜಿಲ್ಲೆ ಬಸವನಾಡಿನ ವಿಜಯಪುರ. ಈ ಲ್ಲೆಯಲ್ಲಿ ಪ್ರತಿದಿನ ಒಂದಿಲ್ಲೋಂದು ಊರಿನಲ್ಲಿ ಒಂದಿಲ್ಲೋಂದು ಜಾತ್ರೆಗಳು, ದೇವಸ್ಥಾನದ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ಒಂದೊಂದು ಊರಿನಲ್ಲಿ ಒಂದು ವಿಶೇಷ ಜಾತ್ರೆಗಳು ನಡೆಯುತ್ತವೆ. ಕೆಲವು ಜಾತ್ರೆಗಳನ್ನು ಊರಿನ ಗ್ರಾಮಸ್ಥರೆಲ್ಲರೂ ಸೇರಿ ಆಚರಿಸಿದರೆ, ಮತ್ತೆ ಹಲವು ಜಾತ್ರೆಗಳನ್ನು ಒಂದೊಂದು ಕುಟುಂಬಗಳು ಕಾರ್ಯಕ್ರಮದ ರೂಪದಲ್ಲಿ ಆಚರಿಸುತ್ತವೆ. ಇಂಥ ವಿಶೇಷ ಜಾತ್ರೆಯೊಂದು ಗುಮ್ಮಟ ನಗರಿ ವಿಜಯಪುರದ ಹೊರಭಾಗದಲ್ಲಿರುವ ರಂಭಾಪುರ ಗ್ರಾಮದಲ್ಲಿ ನಡೆಯಿತು. […]
ಸಾಮರಸ್ಯ, ಸಹಬಾಳ್ವೆ ಸಾರುವ ಮಾನವ ಧರ್ಮಕ್ಕೆ ಜಯವಾಗಲಿ- ಸೋಮನಾಥ ಶಿವಾಚಾರ್ಯರು
ವಿಜಯಪುರ: ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ, ಸರ್ವರಿಗೂ ಒಳಿತನ್ನು ಬಯಸುವ ಮಾನವ ಧರ್ಮಕ್ಕೆ ಜಯವಾಗಲಿ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಜಗದ್ಗುರು ರೇಣುಕಾಚಾರ್ಯರ ಆಶೀರ್ವಾದ ಸದಾ ಎಲ್ಲರ ಮೇಲಿರಲಿ ಎಂದು ಕನ್ನೂರಿನ ಸೋಮನಾಥ ಶಿವಾಚಾರ್ಯರು ಹೇಳಿದ್ದಾರೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ನಡೆದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಗುಡ್ಡಾಪುರದ ಗುರುಪಾದೇಶ್ವರ ಶಿವಾಚಾರ್ಯರು, ಯುವ ಮುಖಂಡ ಗುರುಪಾದಯ್ಯ ಗಚ್ಚಿನಮಠ, ಸಂಜು ಹಿರೇಮಠ, ಚಿದಾನಂದ ಹಿರೇಮಠ, ಸಚೀನ ಬೂದಿಹಾಳಮಠ, ಅಭಿಷೇಕ […]
Video News: ಇದು ನನ್ನ ಲಾಸ್ಟ್ ಎಲೆಕ್ಷನ್- ಕನಿಷ್ಠ ಒಂದು ವೋಟ್ ಅಂತರದಿಂದಾದರೂ ಗೆಲ್ಲುತ್ತೇನೆ- ರಮೇಶ ಜಿಗಜಿಣಗಿ
ವಿಜಯಪುರ: ಇದು ನನ್ನ ಕೊನೆಯ ಚುನಾವಣೆ. ಎಲ್ಲ ಪ್ರಚಾರ ಸಭೆಗಳಲ್ಲಿಯೂ ಹೇಳಿದ್ದೇನೆ. ಕನಿಷ್ಠ ಒಂದು ಮತದ ಅಂತರದಿಂದಾದರೂ ಗೆಲ್ಲುತ್ತೇನೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚಾರ ಮಾಡುತ್ತಿದ್ದೇನೆ. ನೀವು ಬರಬೇಡಿ, ನಾವು ಮತ ಹಾಕುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೂ ಕೂಡ ಚುನಾವಣೆಗಾಗಿ ಜಿಲ್ಲೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದೇನೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ನಡೆಸುವ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ. […]
ಲೋಕಸಭೆ ಚುನಾವಣೆ 2024: ಗ್ರಾಮೀಣ ಭಾಗದಲ್ಲಿ ಡಿಸಿ ಟಿ. ಭೂಬಾಲನ್ ಪ್ರವಾಸ- ವಿಕಲಚೇತನರು, 85 ವರ್ಷ ಮೇಲ್ಪಟ್ವರಿಗೆ ಮತದಾನ ಮಾಹಿತಿ
ವಿಜಯಪುರ: ಪ್ರಜಾಪ್ರಭುತ್ವದ ಸಂವಿಧಾನಿಕ ಹಕ್ಕಾಗಿರುವ ಮತದಾನದಿಂದ ಯಾವುದೇ ಮತದಾರರು ವಂಚಿತರಾಗಬಾರದೆನ್ನುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯಲ್ಲಿ 85ವರ್ಷ ಮೇಲ್ಪಟ್ಟವರಿಗೆ ಮತ್ತು ವಿಕಲಚೇತನರಿಗೆ ಮನೆಯಲ್ಲಿಯೇ ಮತ ಚಲಾವಣೆ ಮಾಡುವ ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲೆಯ ಮನಗೂಳಿ ಮತ್ತು ಯರನಾಳ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಈ ಕುರಿತು ಮಾಹಿತಿ ನೀಡಿದರು ಅಲ್ಲದೇ, ಮತಗಟ್ಟೆಗೆ ಬಂದು ಮತದಾನ ಮಾಡಲು ಅಶಕ್ತರಾಗಿರುವವರನ್ನು ಮತಗಟ್ಟೆಯ ಬಿಎಲ್‌ಓ ಗಳು ಗುರುತಿಸಿ ಅರ್ಜಿ ನಮೂನೆ 12ಡಿ […]
ಪ್ರಸವಪೂರ್ವ ಲಿಂಗಪತ್ತೆ ಕಾನೂನು ಬಾಹಿರ: ಟಿ. ಭೂಬಾಲನ್
ವಿಜಯಪುರ: ಗಂಡು ಮತ್ತು ಹೆಣ್ಣಿನ ನಡುವೆ ಸಮಾನ ಅನುಪಾತ ತರುವ ನಿಟ್ಟಿನಲ್ಲಿ ಪ್ರಸವಪೂರ್ವ ಲಿಂಗಪತ್ತೆ ನಿಷೇಧ ಕಾನೂನನ್ನು ಕಡ್ಡಾಯವಾಗಿ ಎಲ್ಲಾ ಸ್ವಾನಿಂಗ್ ಸೆಂಟರ್‌ಗಳು ಪಾಲಿಸತಕ್ಕದ್ದು, ಒಂದುವೇಳೆ ಕಾನೂನು ಬಾಹಿರವಾಗಿ ನಡೆದುಕೊಂಡಲ್ಲಿ ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಿಸಿ, ಪಿಎನ್‌ಡಿಟಿಯು ಜಿಲ್ಲಾ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಪಾಸಣ ಮತ್ತು ಮೇಲ್ವಿಚಾರಣ ಸಮಿತಿಯ ತುರ್ತುಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಕ್ಯಾನಿಂಗ್ […]
ಹೆಣ್ಣು ಅಬಲೆಯಲ್ಲ ಸಬಲೆ: ಶೈಲಜಾ ಪಾಟೀಲ
ವಿಜಯಪುರ: ಹೆಣ್ಣು ಅಬಲೆಯಲ್ಲ ಸಬಲೆ ಎಂದು ಶ್ರೀ ಸಿದ್ದೇಶ್ವರ ಅಕ್ಕನ ಬಳಗದ ಅಧ್ಯಕ್ಷೆ ಶೈಲಜಾ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಶ್ರೀ ಸಿದ್ಧೇಶ್ವರ ಕಲಾಭವನದಲ್ಲಿ ಸಮಸ್ತ ವಿಜಯಪುರ ಮಹಿಳೆಯರ ಶ್ರೀ ಸಿದ್ದೇಶ್ವರ ಅಕ್ಕನ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಅಂತeರಾಷ್ಟೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಂದು ಪುರುಷನಿಗಿಂತ ಒಂದು ಕೈ ಮೇಲೆ ಎನ್ನುವಷ್ಟರ ಮಟ್ಟಿಗೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಹೇಳಿದರು. ಕಣ್ಮರೆ ಆಗುತ್ತಿರುವ ವಚನ, ಪ್ರವಚನಗಳನ್ನು ಪ್ರಸಕ್ತ ಹಾಗೂ ಮುಂದಿನ […]
ಬಸವ ನಾಡಿನಲ್ಲಿ ಮತದಾನ ಜಾಗೃತಿ ಜಾಥಾ- ಸಾವಿರಾರು ಜನ ಭಾಗಿ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಎನ್.ಎಸ್.ಎಸ್ ಘಟಕ, ಬಿ.ಎಲ್.ಡಿ.ಇ ಸಂಸ್ಥೆಯ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯ, ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಮತದಾನ ಜಾಗೃತಿ ಬೃಹತ್ ಜಾಥಾ ನಡೆಯಿತು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಜಾಥಾ ಗಾಂಧಿ ಚೌಕಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ಘೋಷಿಸುವುದರ ಮೂಲಕ ಜನರಲ್ಲಿ ಮತದಾನದ ಮಹತ್ವದ ಕುರತು ಅರಿವು ಮೂಡಿಸಲಾಗಿಯಿತು. […]
ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಆರಂಭ- ಜಿ. ಪಂ. ಸಿಇಓ ರಿಷಿ ಆನಂದ
ವಿಜಯಪುರ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಎದುರಾಗದಂತೆ, ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ನಿವಾರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಜಿಲ್ಲಾ ಪಂಚಾಯಿತಿ ವಿಜಯಪುರ(08352-277293), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ(08352-277941) ಇವರನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೇ ತಾಲೂಕು ಮಟ್ಟದಲ್ಲಿ ಮುದ್ದೇಬಿಹಾಳ(08356-200606), ತಾಳಿಕೋಟೆ(08356-200103), ಸಿಂದಗಿ(08488-221772), ದೇವರಹಿಪ್ಪರಗಿ (08424-200114), ಆಲಮೇಲ(08488-298900), ವಿಜಯಪುರ(08352-254044), ಬಬಲೇಶ್ವರ(08355-200005), ತಿಕೋಟಾ(08352-200129), […]
ವಿಜಯಪುರ ನಗರದ ಸಿಂದಗಿ ನಾಕಾ ಚೆಕಪೋಸ್ಟ್ ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ
ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಸಿಂದಗಿ ನಾಕಾ ಬಳಿ ತೆರೆಯಲಾಗಿರುವ ಚೆಕಪೋಸ್ಟ್ ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಂಗಳವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರ ನಗರಕ್ಕೆ ಒಳಬರುವ ಮತ್ತು ನಗರದಿಂದ ಹೊರ ಹೋಗೂುವ ಎಲ್ಲಾ ವಾಹನಗಳ ತಪಾಸಣೆ ಕಾರ್ಯ ವೀಕ್ಷಿಸಿಸಿದ ಅವರು, ಚೆಕಫೋಸ್ಟ್ ನಲ್ಲಿ ದಿನದ 24 ಗಂಟೆ ಪಾಳಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು. ಬೇಸಿಗೆ ಇರುವುದರಿಂದ ಚೆಕಫೋಸ್ಟಗಳಲ್ಲಿ ಅಗತ್ಯ ಮೂಲಭೂತ […]