ರೂ. 2.53 ಕೋ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹಣ ಜಪ್ತಿ ಮಾಡಿದ ವಿಜಯಪುರ ಸಿಇಎನ್ ಪೊಲೀಸರು
ವಿಜಯಪುರ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ. 2,93,50000 ಕೋ. ನಗದನ್ನು ವಿಜಯಪುರ ಸಿಇಎನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ವಿಜಯಪುರ ಎಸ್ಪಿ ಋಷಿಕೇಶ ಸೋನಾವಣೆ, ತೆಲಂಗಾಣದ ಹೈದರಾಬಾದಿನಿಂದ ರಾಜ್ಯದ ಹುಬ್ಬಳ್ಳಿಗೆ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಸೋಮವಾರ ರಾತ್ರಿ ಸಿಇಎನ್ ಪೊಲೀಸ್ ಠಾಣೆಯ ಸಿಪಿಐ ಸುನೀಲಕುಮಾರ ನಂದೇಶ್ವರ, ಸಿಬ್ಬಂದಿಯಾದ ಎಂ. ಕೆ. ಹಾವಡಿ, ಡಿ. ಆರ್. ಪಾಟೀಲ, ಎಂ. ಬಿ. ಪಾಟೀಲ, ಮಲ್ಲು ಹೂಗಾರ […]
ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನ್ನಿ ಎಸ್. ಗವಿಮಠ ನೇಮಕ
ವಿಜಯಪುರ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಸನ್ನಿ ಎಸ್. ಗವಿಮಠ(ತ್ರಿಲೋಚನ) ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಈ ನೇಮಕ ಮಾಡಿ ಆದೇಶ ಪತ್ರ ನೀಡಿ ಗೌರವಿಸಿದ್ದಾರೆ. ಸನ್ನಿ ಎಸ್. ಗವಿಮಠ ಮೂಲತಃ ಬಿಜೆಪಿ ಕಾರ್ಯಕರ್ತನಾಗಿದ್ದು, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರ ಬೆಂಬಲಿಗನಾಗಿದ್ದಾನೆ. ಆದರೆ, ಕಳೆದ ವರ್ಷ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು […]
ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯಿಂದ ಮಾ. 24 ರಿಂದ ಏ. 7ರ ವರೆಗೆ ಶ್ರೀಶೈಲವರೆಗೆ ಪಾದಯಾತ್ರೆ
ವಿಜಯಪುರ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶ್ರೀಶೈಲ ಮಲ್ಲಯನ ದರ್ಶನಕ್ಕೆ ಪಾದಯಾತ್ರೆ ಪ್ರಾರಂಭಿಸಿದ ಖ್ಯಾತಿಯ ವಿಜಯಪುರ ನಗರದ ಜೋರಾಪುರ ಪೇಠ ಮಲ್ಲಯ್ಯನ ಓಣಿಯ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯ ಕಾರ್ಯಕ್ರಮ ಮಾ. 24 ರಿಂದ ಏ. 7ರ ವರೆಗೆ ನಡೆಯಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಮಿತಿಯ ಮುಖಂಡ ರವೀಂದ್ರ ಸಿದ್ದಯ್ಯ ಕರ್ಪೂರಮಠ, 31ನೇ ವರ್ಷದ ಪಾದಯಾತ್ರೆ ಇದಾಗಿದ್ದು, ಹೋಳಿ ಹುಣ್ಣಿಮೆಯ ದಿನದಿಂದ ಯುಗಾದಿಯವರೆಗೆ 15 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಾ. 24 […]
Video News: ಪಿಎಸ್ಐ ಆಗಬೇಕೆಂದಿದ್ದೆ, ಊರ ಗೌಡರು ರಾಜಕಾರಣಿ ಮಾಡಿದರು- ಓಟಿಎಸ್ ಸಾಲ ಪಡೆದ ರೈತರ ಪರ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ- ರಮೇಶ ಜಿಗಜಿಣಗಿ
ವಿಜಯಪುರ: ಡಿಗ್ರಿ ಮುಗಿಸಿದ ಮೇಲೆ ಪಿಎಸ್‌ಐ ಆಗಬೇಕೆಂದುಕೊಂಡಿದ್ದೆ. ಆದರೆ, ಊರ ಗೌಡರ ಒತ್ತಾಯದ ಹಿನ್ನೆಲೆ ರಾಜಕೀಯ ಪ್ರವೇಶಿಸಿ ಆರು ಬಾರಿ ಸಂಸದನಾಗಿದ್ದೇನೆ ಎಂದು ವಿಜಯಪುರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಇಂಡಿ ಪಟ್ಟಣದಲ್ಲಿ ಬಿಜೆಪಿ ಚುನಾವಣೆ ನಿರ್ವಹಣೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಾನು ಬಿ.ಎ ಮುಗಿದ ಮೇಲೆ ಪಿಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸಲು ತೆರಳಿದ್ದೆ. ಆಗ ಊರ ಗೌಡರು ನಮ್ಮೂರಿನ ದಲಿತ ವಿದ್ಯಾವಂತ ಯುವಕ ಪಿಎಸ್‌ಐ ಆದರೆ ಸಾಲದು. ಜನಪ್ರತಿನಿಧಿಯಾಗಿ ಇನ್ನಷ್ಟು ಸೇವೆ […]
ಹೆಣ್ಣು ಸೃಷ್ಠಿಯ ಮೂಲ- ಸ್ತ್ರೀ ದೇವತೆಯ ಸ್ವರೂಪ- ಬಿಇಓ ಬಸವರಾಜ ತಳವಾರ
ವಿಜಯಪುರ: ಹೆಣ್ಣು ಸೃಷ್ಠಿಯ ಮೂಲ. ಸ್ತ್ರೀ ದೇವತೆಯ ಸ್ವರೂಪ ಎಂದು ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು. ನಗರದ ನೌಕರರ ಭವನದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ವಿಜಯಪುರ ನಗರ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಚಿಂತನ ಗೋಷ್ಠಿ ಕಾರ್ಯಕ್ರಮ ಉದ್ಗಾಟಿಸಿ ಅವರು ಮಾತನಾಡಿದರು. ಇಂದಿನ ಮಹಿಳೆಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸಮಾಜದಲ್ಲಿ ಹೆಚ್ಚಿನ ಅವರಿಗೆ ಹೆಚ್ಚಿನ ಗೌರವವಿದೆ ಎಂದು ಅವರು ಹೇಳಿದರು. ಡಾ. ಸವಿತಾ ಝಳಕಿ ಮಹಿಳಾ ಅಸ್ಮಿತತೆಯ […]
ಲೋಕಸಭೆ ಚುನಾವಣೆ- ಈ ಬಾರಿ 1919048 ಮತದಾರರು- 85 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 17159
ವಿಜಯಪುರ: ಕೇಂದ್ರ ಚುನಾವಣೆ ಆಯೋಗ ಲೋಕಸಭೆಗೆ ದಿನಾಂಕ ನಿಗದಿಯಾಗಿದ್ದು, ಮಾ. 16 ರಿಂಂದಲೇ ಚುನಾವಣೆ ನೀತಿ ಸಂಹಿತೆ ಆರಂಭವಾಗಿದೆ. ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 19 ಲಕ್ಷ 19 ಸಾವಿರದ 48 ಜನ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜೂನ್ 6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏ. 12 […]
7ನೇ ವೇತನ ಆಯೋಗದಿಙದ ಸಿಎಂ ಎಸ್. ಸಿದ್ಧರಾಮಯ್ಯ ಅವರಿಗೆ ವರದಿ ಸಲ್ಲಿಕೆ
ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ ಅಧ್ಯಕ್ಷತೆಯ ರಾಜ್ಯದ 7ನೇ ವೇತನ ಆಯೋಗವು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಆಯೋಗದ ಸದಸ್ಯರಾದ ಪಿ. ಬಿ. ರಾಮಮೂರ್ತಿ, ಶ್ರೀಕಾಂತ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಡಾ. ಕೆ. ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ. ಸಿ. ಜಾಫರ, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ […]
ಲಿಂಬೆ ಬೆಳೆಗಳ ರಕ್ಷಣೆಗೆ ಕ್ರಮ: ಶಾಸಕ ಯಶವಂತರಾಯಗೌಡ ಪಾಟೀಲ
ವಿಜಯಪುರ: ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು ಇಂಡಿ ಭಾಗದಲ್ಲಿ ಅತೀ ಹೆಚ್ಚು ಲಿಂಬೆ ಬೆಳಗಾರರಿದ್ದಾರೆ. ರೈತರ ಲಿಂಬೆ ಗಿಡಗಳನ್ನು ರಕ್ಷಿಸಲು ನಾವು ಮುಂದಾಗಬೇಕು ಎಂದು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಭಾಗದಲ್ಲಿ ನೀರಿನ ಮಟ್ಟ ಕುಸಿದಿದ್ದು ರೈತರು ನೀರಿನ ಅಭಾವದಿಂದ ಲಿಂಬೆ ಬೆಳೆಗಳನ್ನು ರಕ್ಷಿಸಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಈ ಭಾಗದ ರೈತರ ಜಮೀನುಗಳಿಗೆ ಖುದ್ದಾಗಿ ಭೇಟಿ […]
ಇಬ್ಬರು ವೈದ್ಯರು, ಓರ್ವ ಎಂಜಿನಿಯರ್ ಸೇರಿ ಮೂವರಿಗೆ ಕೇಂದ್ರ ಸರಕಾರದ ಪೇಟೆಂಟ್- ಯಾವುದಕ್ಕೆ ಗೊತ್ತಾ?
ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಇಬ್ಬರು ವೈದ್ಯರು ಹಾಗೂ ಓರ್ವ ಎಂಜಿನೀಯರ್ ನಡೆಸಿದ ಸಂಶೋಧನೆಗೆ ಕೇಂದ್ರ ಸರಕಾರದಿಂದ ಪೇಟೆಂಟ್ ದೊರೆತಿದೆ. ಆಸ್ಪತ್ರೆಯ ಜಿಲ್ಲಾ ವಿಕಲಚೇತನ ಮತ್ತು ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಮತ್ತು ಅಂಗರಚನಾ ಶಾಸ್ತç ವಿಭಾಗದ ಡಾ. ಈಶ್ವರ ಬ. ಬಾಗೋಜಿ, ಎಂಜಿನೀಯರ್ ಕೆ. ಸಿ. ಮೊಹಂತಿ ಹಾಗೂ ಎಲಬು ಮತ್ತು ಕೀಲು ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಿರೀಶ ಖೋದ್ನಾಪೂರ […]
ಬಸವ ನಾಡಿನಲ್ಲಿ ತೆನೆ ಇಳಿಸಿ ಕೈ ಹಿಡಿದ ಜೆಡಿಎಸ್ ಕಾರ್ಯಕರ್ತರು- ರಾಜು ಆಲಗೂರ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಮರುಸೇರ್ಪಡೆ
ವಿಜಯಪುರ: ನಾಗಠಾಣ ಮತಕ್ಷೇತ್ರದ ಜೆಡಿಎಸ್ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ತಮ್ಮ ಬೆಂಗಲಿಗರೊಂದಿಗೆ ಕಾಂಗ್ರೆಸ್ಸಿಗೆ ಮರುಸೇರ್ಪಡೆಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಅವರ ಸಮ್ಮುಖದಲ್ಲಿ ಕುಮಟಗಿ ಎಲ್.ಟಿ., ಆಹೇರಿ, ಮದಬಾವಿ, ಹಡಗಲಿಯ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ದೇಸು ಗೇಮು ಚವ್ಹಾಣ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿರುವುದರಿಂದ ನಾಗಠಾಣ ಮತ್ತು ವಿಜಯಪುರ ಲೋಕಸಭೆ […]