ಧೂಳಖೇಡ ಸೌಹಾರ್ದ ಬ್ಯಾಂಕ್ ಕಳ್ಳತನ ಪ್ರಕರಣ- ಆರು ಜನ ಅಂತಾರಾಜ್ಯ ಕಳ್ಳರ ಬಂಧಿಸಿದ ಝಳಕಿ ಪೊಲೀಸರು
ವಿಜಯಪುರ: ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಸೌಹಾರ್ದ ಬ್ಯಾಂಕಿನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಝಳಕಿ ಪೊಲೀಸರು ಭೇದಿಸಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಝಳಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಋಷಿಕೇಶ ಸೋನಾವಣೆ, ಫೆ. 28 ರಂದು ಮಧ್ಯರಾತ್ರಿ ಸೌಹಾರ್ದ ಬ್ಯಾಂಕ್ ನಲ್ಲಿದ್ದ ರೂ. 19.45 ಲಕ್ಷ ಹಣವನ್ನು ಕಳ್ಳತನ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಝಳಕಿ ಪೊಲೀಸರು 6 ಜನ ಆರೋಪಿಗಳನ್ನು ಕಳುವಾದ […]
ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆ ಕಾಂತಾ ನಾಯಕ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನ
ವಿಜಯಪುರ: ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಕಾಂತಾ ನಾಯಕ ಅವರನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು. ಡಿಸಿಸಿ ಕಚೇರಿಗೆ ಭೇಟಿ ನೀಡಿದ ಕಾಂತಾ ನಾಯಕ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂರ‍್ಭದಲ್ಲಿ ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ್ (ಯಾಳಗಿ) ಪಕ್ಷದ ಮುಖಂಡರಾದ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ), […]
ಬಬಲೇಶ್ವರದಲ್ಲಿ ತಾಲೂಕು ಆಡಳಿತ ಸೌಧ ಲೋಕಾರ್ಪಣೆ: ಒಂದೇ ಸ್ಥಳದಲ್ಲಿ ನಾನಾ ಸರಕಾರಿ ಸೇವೆ ಪಡೆಯಲು ಅನುಕೂಲ- ಎಂ. ಬಿ. ಪಾಟೀಲ
ವಿಜಯಪುರ: ಬಬಲೇಶ್ವರ ಪಟ್ಟಣದ ಅಡವಿಸಂಗಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ರೂ.10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಸೌಧ(ಮಿನಿ ವಿಧಾನಸೌಧ) ನೂತನ ಕಟ್ಟಡ, ಕಟ್ಟಡವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಿದರು. ಶನಿವಾರ ಬಬಲೇಶ್ವರದಲ್ಲಿ ಆಯೋಜಿಸಲಾದ ನೂತನ ತಾಲೂಕಾಡಳಿತ ಕಟ್ಟಡ ಉದ್ಘಾಟನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಈ ಕಟ್ಟಡದ ನೆಲಮಹಡಿಯಲ್ಲಿ ತಹಸೀಲ್ದಾರ ಕಚೇರಿ, […]
ದಲಿತರು ಸಿಎಂ ಆದರೆ ತಪ್ಪೇನಿಲ್ಲ- ವಿಜಯಪುರದಿಂದ ರಾಜು ಆಲಗೂರ ಗೆಲ್ತಾರೆ- ಸಚಿವ ಎಂ. ಬಿ. ಪಾಟೀಲ
ವಿಜಯಪುರ: ರಾಜ್ಯದಲ್ಲಿ ದಲಿತರು ಸಿಎಂ ಆಗುವುದರಲ್ಲಿ ತಪ್ಪೇನಿಲ್ಲ. ಆದರೇ, ಈಗ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಎಚ್. ಸಿ. ಮಹಾದೇವಪ್ಪ ನೀಡಿರುವ ಹೇಳಿಕ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿದಲಿತರು ಸಿಎಂ ಆಗಬೇಕು. ಇದರಲ್ಲಿ ತಪ್ಪೇನಿಲ್ಲ. ಈಗ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಸಿಎಂ ಆಗಿದ್ದಾರೆ. ಸೂಕ್ತ ಸಂದರ್ಭ ಬಂದಾಗ ದಲಿತರು […]
ಪ್ರೊ. ರಾಜು ಆಲಗೂರ ಸೇರಿ ರಾಜ್ಯದ ಏಳು ಜನರಿಗೆ ಲೋಕಸಭೆ ಟಿಕೆಟ್ ಘೋಷಿಸಿದ ಕಾಂಗ್ರೆಸ್
ವಿಜಯಪುರ: ಮಾಜಿ ಶಾಸಕ ಪ್ರೊ. ರಾಜು ಆಲಗೂರ ಸೇರಿದಂತೆ ಏಳು ಜನ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಒಟ್ಟು 28 ಕ್ಷೇತ್ರಗಳನ್ನು ಕರ್ನಾಟಕ ಹೊಂದಿದ್ದು, ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಏಳು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ. ಎಂ. ಎಂ, ಎಂ. ಫಿಲ್ ಪದವೀಧರರಾಗಿರುವ ಪ್ರೊ. ರಾಜು ಆಲಗೂರ ಅವರು, ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1999 ಬಳ್ಳೊಳ್ಳಿ ಮತ್ತು 2013ರಲ್ಲಿ ನಾಗಠಾಣ ಮೀಸ,ಲು ಕ್ಷೇತ್ರಗಳಿಂದ ಅವರು […]
ಶಾಸಕ ಯತ್ನಾಳ ಆಗ್ರಹ- ನಾಸೀರ ಹುಸೇನ್ ಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು
ವಿಜಯಪುರ: ಪಾಕಿಸ್ತಾನ್ ಪರ ಘೋಷಣೆ ಪ್ರಕರಣದ ತನಿಖೆ ಮುಗಿಯುವವರೆಗೂ ರಾಜ್ಯಸಭೆ ನೂತನ ಸಂಸದ ನಾಶೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರ ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ವರೆಗೂ ಹೋಗಬಹುದು. ಪಾಕಿಸ್ತಾನ ಪರ ಘೋಷಣೆ ಹಾಕಿದ ವ್ಯಕ್ತಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ ಜೊತೆಗೂ ಬಾಂಧವ್ಯ ಹೊಂದಿದ್ದಾನೆ. ಪಾಕಿಸ್ತಾನ ಪರ ಘೋಷಣೆ […]
ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನಾ ಧರಣಿ
ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು. ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಬೇಕು. ರೇವಣಸಿದ್ಧೇಶ್ವರ ಏತ ನೀರಾವರಿಯ ಯೋಜನೆಯ 2 ಮತ್ತು 3ನೇ ಹಂತದ ಕಾಮಗಾರಿ ಟೆಂಡರ್ ಕರೆಯಬೇಕು ಹಾಗೂ ಜಿಲ್ಲೆಯ ಶಾಶ್ವತ ನೀರಾವರಿಗಾಗಿ ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಗೆ ಎತ್ತರಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು. ಬರದಿಂದಾಗಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಲಿಂಬೆ, ಮಾವು, […]
ರಂಗೋಲಿ ಮೂಲಕ ರಾಷ್ಟ್ರೀಯ, ಅಂತಾರಾಷ್ಟೀಯ ದಾಖಲೆಗೆ ಸಿದ್ಧರಾದ ವೈದ್ಯಕೀಯ ವಿದ್ಯಾರ್ಥಿಗಳು- ವಿನೂನತ ಪ್ರಯತ್ನಕ್ಕೆ ಆಲ್ ದಿ ಬೆಸ್ಟ್
ವಿಜಯಪುರ: 1500 ವೈದ್ಯಕೀಯ ವಿದ್ಯಾರ್ಥಿಗಳು, 40 ಮಾರ್ಗದರ್ಶಕರು ಮತ್ತು 20 ಜನ ಮೇಲ್ವಿಚಾರಕರು, 50 ಸಾವಿರ ಚದುರ ಅಡಿ ಪ್ರದೇಶದಲ್ಲಿ ಚಿತ್ರ ಬಿಡಿಸಲು 10 ಟನ್ ರಂಗೋಲಿ ಖರೀದಿ. ಅರೇ, ಇದೇನಿದು ವಿಚಿತ್ರ ಎಂದು ನೀವು ಅಂದುಕೊಳ್ಳಬಹುದು. ಆದರೆ, ಇದೆಲ್ಲ ಮಾಡುತ್ತಿರುವುದು ಕೈಯ್ಯಲ್ಲಿ ಪುಸ್ತಕ ಹಿಡಿದು ಕಲಿಯುವಾಗಲೇ ಸ್ಟೆಥೋಸ್ಕೋಪ್ ಬಳಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಬೇಕಾದ ವೈದ್ಯರು. ಅದೂ ಕೂಡ ಒಂದು ವಿನೂತನ ಕಾರ್ಯಕ್ರಮಕ್ಕಾಗಿ. ಇದು ಬಸವನಾಡು ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ […]
3 ಬಾರಿ ಕುತ್ತಿನಿಂದ ಪಾರಾದ ಸಂಸದ ಜಿಗಜಿಣಗಿ- ಸೌಂದತ್ತಿ ಯಲ್ಲಮ್ಮನ ದರ್ಶನ ಪಡೆದು ಬಸವನಾಡಿಗೆ ವಾಪಸ್- ಮಹಾಶಿವರಾತ್ರಿ ನಂತರ ಸಾರ್ವಜನಿಕರ ಭೇಟಿ
ವಿಜಯಪುರ: ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಶ್ಚ್ಯಾರ್ಜ್ ಆಗಿದ್ದಾರೆ. ಮೆದುಳಿನಲ್ಲಿ ನೀರು ತುಂಬಿಕೊಂಡಿದ್ದರಿಂದ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾಗಿದ್ದ, ಅವರಿಗೆ ಇತ್ತೀಚೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಅವರು ಗುಣಮುಖರಾಗಿದ್ದು, ಬುಧವಾರ ಮಧ್ಯಾಹ್ನ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿ ಬಸವನಾಡು ವಿಜಯಪುರಕ್ಕೆ ವಾಪಸ್ಸಾಗಿದ್ದಾರೆ. ಈ ಕುರಿತು ಬಸವನಾಡು ವೆಬ್ ಜೊತೆ ದೂರವಾಣಿ ಮೂಲಕ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿಗೆ ಹೋದಾಗ ಏರಪೋರ್ಟ್ ನಲ್ಲಿ ಆರೋಗ್ಯ ಸಮಸ್ಯೆ ಎದುರಾಗಿತ್ತು. ಬೆಂಗಳೂರಿನಲ್ಲಿ ಮನೆಗೆ […]
ಸಂಸದ ರಮೇಶ ಜಿಗಜಿಣಗಿ ಪ್ರಯತ್ನದ ಫಲ- ಆಲಮಟ್ಟಿ ರೈಲು ನಿಲ್ದಾಣದಲ್ಲಿ ಎಕ್ಸಪ್ರೆಸ್ ರೈಲು ನಿಲುಗಡೆ- ಬೆಳ್ಳುಬಿ, ಶಹಾಪುರ ಅವರಿಂದ ಚಾಲನೆ
ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಅವರ ಪ್ರಯತ್ನದ ಫಲವಾಗಿ ನಿಡಗುಂದಿ ತಾಲೂಕಿನ ಆಲಮಟ್ಟಿ ರೈಲು ನಿಲ್ದಾಣದಲ್ಲಿ ಎಕ್ಸಪ್ರೆಸ್ ರೈಲುಗಳ ನಿಲುಗಡೆ ಆರಂಭವಾಗಿದೆ. ಬೆಳಿಗ್ಗೆ ನಿಲ್ದಾಣಕ್ಕೆ ಆಗಮಿಸಿದ ಶಿರಡಿ ಸಾಯಿನಗರ- ಮೈಸೂರು ರೈಲು ನಿಲುಗಡೆಗೆ ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ ಮತ್ತು ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ಹಸಿರು ನಿಶಾನೆ ತೋರಿಸಿದರು. ಬೆ. 10.20ಕ್ಕೆ ಆಲಮಟ್ಟಿ ರೈಲು ನಿಲ್ದಾಣಕ್ಕೆ ಆಗಮಿಸಿದ 16218 ಈ ರೈಲು ಒಂದು ನಿಮಿಷ ನಿಲುಗಡೆಯಾಯಿತು. ಇದೇ ರೀತಿ ಯಶವಂತಪುರ- ಬಿಕಾನೇರ-ಯಶವಂತಪುರ […]