ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆ ವಿತರಣೆ, ವೈದ್ಯಕೀಯ ಶಿಬಿರ ಆಯೋಜನೆ- ಸದುಯೋಗ ಪಡೆದುಕೊಳ್ಳಲು ರಿಷಿ ಆನಂದ ಮನವಿ
ವಿಜಯಪುರ: ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಅಡಿಯಲ್ಲಿ ವಿಶೇಷ ಅಗತ್ಯವುಳ್ಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳಿಗಾಗಿ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಬಸವನಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕಿಗೆ ಸಂಬಂಧಿಸಿದಂತೆ ಅ.28ರಂದು ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿಯ ದೇವರಹಿಪ್ಪರಗಿ ರಸ್ತೆಯಲ್ಲಿರುವ ಎಂ.ಜಿ.ಕೋರಿ ಡಾ:ಬಿ.ಜಿ.ಬ್ಯಾಕೋಡ್ ಪದವಿ ಪುರ್ವ ಮಹಾವಿದ್ಯಾಲಯದಲ್ಲಿ, ಇಂಡಿ, ಚಡಚಣ, ಸಿಂದಗಿ ತಾಲೂಕಿಗೆ ಸಂಬಂಧಿಸಿದಂತೆ ಅ.29ರಂದು ಇಂಡಿ ನಗರದ ಬಸ್ ಸ್ಟ್ಯಾಂಡ್ ಹತ್ತಿರದ ಯುಬಿಎಂಪಿಎಸ್ […]
ಡೋಣಿ ನದಿ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್-ಜಿ.ಪಂ.ಸಿಇಓ ರಿಷಿ ಆನಂದ ಡೋಣಿ ನದಿಗೆ ಭೇಟಿ- ಪರಿಶೀಲನೆ
ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾಧಿಕಾರಿ ರಿಷಿ ಆನಂದ ಅವರು ಬುಧವಾರ ಜಿಲ್ಲೆಯ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ […]
ಬಡ, ಪ್ರತಿಭಾವಂತ ವಿದ್ಯಾರ್ಥಿನಿಗೆ ಎಂ.ಬಿ.ಬಿ.ಎಸ್ ಓದಲು ಬಿ.ಎಲ್.ಡಿ.ಇ ಸಂಸ್ಥೆಯಿಂದ ಆರ್ಥಿಕ ನೆರವು- ಶಾಸಕ ಸುನೀಲೌಗಡ ಪಾಟೀಲರಿಂದ ಚೆಕ್ ವಿತರಣೆ
ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ವಿದ್ಯಾರ್ಥಿನಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಸಹಾಯಹಸ್ತ ಚಾಚಿದ್ದು, ಕೋರ್ಸಿನ ಸಂಪೂರ್ಣ ವೆಚ್ಚವನ್ನು ಭರಿಸಲಿದ್ದಾರೆ. ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಭಾಗ್ಯಶ್ರಿ ದೇವರ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಯಲ್ಲಿ 49707 ರ್ಯಾಂಕ್ ಪಡೆದಿದ್ದು, ಚಿಕ್ಕಬಳ್ಳಾಪುರ ಇನಸ್ಟಿಟ್ಯೂಟ್ ಆಫ್ ಸಾಯಿನ್ಸ್ ನಲ್ಲಿ ವೈದ್ಯಕೀಯ ಸೀಟು ಪಡೆದಿದ್ದಾಳೆ. ಈ ವಿದ್ಯಾರ್ಥಿನಿಗೆ ಪೋಷಕರಿಗೆ ಸಂಸ್ಥೆಯ ವತಿಯಿಂದ ಎಂ.ಬಿ.ಬಿ.ಎಸ್. ಕೋರ್ಸಿನ ಮೊದಲ […]
ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ವತಿಯಿಂದ ಬೈಕಥಾನ್ ಆಯೋಜನೆ
ಬೆಂಗಳೂರು: ಸ್ತನಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ವತಿಯಿಂದ ಪಿಂಕ್ ವುಮೆನ್ಸ್ ಶೀರ್ಷಿಕೆಯಡಿ ಬೈಕಥಾನ್ ಆಯೋಜಿಸಿತ್ತು. ಸ್ತನಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್ ಕೆ.ಆರ್. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ […]
ವೃಕ್ಷೋತ್ಥಾನ ಹೆರಿಟೇಜ್ ರನ್- 2024- ಯಶಸ್ಸಿಗೆ ಎಲ್ಲರೂ ಕೈಜೋಡಿಸಿ ಜನಜಾಗೃತಿ ಮೂಡಿಸಲು ಡಿಸಿ ಟಿ. ಭೂಬಾಲನ್ ಕರೆ
ವಿಜಯಪುರ, ಅ. 22: ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷೋತ್ಥಾನ ಹೆರಿಟೇಜ್ ರನ್-2024 ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾನಾ ಕಾಲೇಜುಗಳ ಪ್ರಾಚಾರ್ಯರೊಂದಿಗೆ ಸಭೆ ನಡೆಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೋಂಡಿದ್ದರು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಓಟಗಾರರು ಪಾಲ್ಗೋಳ್ಳಲು ಈಗಿನಿಂದಲೇ ನೋಂದಣಿ ಪ್ರಕ್ರಿಯೆಗೆ ವೇಗ ನೀಡಬೇಕು. ಅಲ್ಲದೇ, […]
ಬಡ, ಪ್ರತಿಭಾವಂತ ಐದು ವಿದ್ಯಾರ್ಥಿಗಳಿಗೆ ಸಚಿವ ಎಂಬಿಪಿ ಸಹಾಯ ಹಸ್ತ- ವೈದ್ಯರಾಗುವ ಕನಸು ನನಸಾಗಲು ಆರ್ಥಿಕ ನೆರವು
ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗ ಕೋರ್ಸಿಗೆ ಅಗತ್ಯವಾಗಿರುವ ಸಂಪೂರ್ಣ ಆರ್ಥಿಕ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ. ಇಂದು ಸೋಮವಾರ ವಿಜಯಪುರದಲ್ಲಿರುವ ಗೃಹ ಕಚೇರಿಯಲ್ಲಿ ತಿಕೋಟಾ ತಾಲೂಕಿನ ಬಾಬಾನಗರದ ವಿಶಾಲ ರಾಯಗೊಂಡ ಕೋರೆಗಾಂವ, ಅರಕೇರಿಯ ಕರಣ […]
ಅಯೋಡಿನ್ ಕೊರತೆಯ ಬಗ್ಗೆ ಜಾಗೃತಿ ಅವಶ್ಯಕ: ಸಚಿವ ಡಾ. ಎಂ.ಸಿ. ಸುಧಾಕರ್
ಬೆಂಗಳೂರು: ಅಯೋಡಿನ್ ಕೊರತೆಯ ಬಗ್ಗೆ ಗರ್ಭಿಣಿಯರು, ಹಾಲುಣಿಸುವ ತಾಯಂದಿರುವ ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ (ಐಜಿಡಿ) ಅವರ ವಿನೂತನ “ಆಶೀರ್ವಾದ್ ಸ್ಮಾರ್ಟ್ ಇಂಡಿಯಾ” ಕಾರ್ಯಕ್ರಮ ಹೆಚ್ಚು ಪ್ರಸ್ತುತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಹೇಳಿದರು. ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ “ಆಶಿರ್ವಾದ್ ಸ್ಮಾರ್ಟ್ ಇಂಡಿಯಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಯೋಡಿನ್ ಕೊರತೆ […]
ಗಡಿ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ -ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ- ಸಚಿವ ಶಿವರಾಜ ಎಸ್. ತಂಗಡಗಿ ಭರವಸೆ
ವಿಜಯಪುರ: ರಾಜ್ಯದ 742 ಗಡಿ ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ, ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕನ್ನಡಿಗರು ವಾಸಿಸುವ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ವಿಜಯಪುರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗುಡ್ಡಾಪುರ […]
ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು- ಡಾ. ಮಂಜುನಾಥ ಸಾವಂತ
ವಿಜಯಪುರ: ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಇದನ್ನು ಗುಣಪಡಿಸಬಹುದಾಗಿದೆ. ಇಲ್ಲದಿದ್ದರೆ ಅದು ನೇರವಾಗಿ ನರಮಂಡಲದ ಮೇಲೆ ಪರಿಣಾಮ ಬೀರಿ ಮೆದುಳಿಗೆ ಘಾಸಿಯಾಗಿ ಮಾರಣಾಂತಿಕವಾಗಬಹುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ ಹೇಳಿದ್ದಾರೆ. ಶನಿವಾರ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯ ಬಿ.ಎಲ್.ಡಿ.ಇ ಪಿಯು ಕಾಲೇಜಿನಲ್ಲಿ ಶ್ರೀ ಬಿ. ಎಂ. ಪಾಟೀಲ, ವೈದ್ಯಕೀಯ ಮಹಾವಿದ್ಯಾಲಯ, ಸಮುದಾಯ ವೈದ್ಯಕೀಯ ವಿಭಾಗ ಹಾಗೂ ಶಸ್ತ್ರ […]
ಉಕ್ಕಲಿಯಲ್ಲಿ ವೈದ್ಯಕೀಯ, ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಸೇವಾ ಅಭಿಯಾನ
ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರ ವರೆಗೆ ಸ್ವಚ್ಛತಾ ಹಿ ಸೇವಾ-2024 ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸ್ವಚ್ಛತೆ ಅಭಿಯಾನದ ಅಂಗವಾಗಿ ಗುರುವಾರ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಸರಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಸ್ವಚ್ಛತೆ ಪ್ರತಿಜ್ಞೆ ಮಾಡಿಸಲಾಯಿತು. ಪ್ರತಿವಾರ ಎರಡು ಗಂಟೆಯಂತೆ ವರ್ಷಕ್ಕೆ 100 ಗಂಟೆ ಸ್ವಚ್ಛತೆಗೆ ಮೀಸಲಿಡಲು ಮತ್ತು ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕದಿರಲು ಕುರಿತು ಗ್ರಾಮಸ್ಥರಲ್ಲಿ ಅರಿವು ಜನಜಾಗೃತಿ […]