ವೃತ್ತಿ ಬದುಕಿನ ಆಯ್ಕೆಯಲ್ಲಿ ಪೂರಕ ಮಾಹಿತಿ ಸರಿಯಾಗಿ ಬಳಸಿಕೊಳ್ಳಬೇಕು- ಪ್ರೊ. ಬಿ. ಕೆ. ತುಳಸಿಮಾಲಾ

ವಿಜಯಪುರ: ವೃತ್ತಿ ಬದುಕಿನ ಆಯ್ಕೆಯಲ್ಲಿ ಪೂರಕ ಮಾಹಿತಿ ಅವಶ್ಯಕ ಹಾಗೂ ಇರುವ ಮಾಹಿತಿಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಹೇಳಿದ್ದಾರೆ.  ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ವೃತ್ತಿ ಮಾರ್ಗದರ್ಶನ ಕೋಶ ಮತ್ತು ಅಹಲ್ಯಬಾಯಿ ಸಂಶೋಧನಾ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಅಂತರಾಷ್ಟ್ರೀಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವೃತ್ತಿ ಅನ್ವೇಷಕರಿಗೆ ವೃತ್ತಿ ಮಾಹಿತಿ ಬೆಂಬಲ ಕುರಿತ ಒಂದು […]

ಲೋಕಸಭೆ ಚುನಾವಣೆ: 11 ಆಕಾಂಕ್ಷಿಗಳಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ- ಪ್ರೊ. ರಾಜು ಆಲಗೂರ

ವಿಜಯಪುರ: ವಿಜಯಪುರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ 11 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.  ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ವಿಜಯಪುರ ಎಸ್ ಸಿ ಮೀಸಲು ಕ್ಷೇತ್ರದ ಟಿಕೆಟ್ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ ಯಾವ ತೀರ್ಮಾನ ಕೈಗೊಳ್ಳತ್ತೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಸರಕಾರದಿಂದ ಬಡವರ ಸರ್ವಾಂಗೀಣ ಅಭಿವೃದ್ಧಿ  ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ […]

ಗ್ರಾಫಿಕ್ ಡಿಸೈನ್ ಬಹುಬೇಡಿಕೆಯ ಕಲೆಯಾಗಿದೆ- ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ

ವಿಜಯಪುರ: ಗ್ರಾಫಿಕ್ ಡಿಸೈನ್ ಎನ್ನುವುದು ಪ್ರಸ್ತುತ ದಿನಮಾನದಲ್ಲಿ ಬಹುಬೇಡಿಕೆಯ ಕಲೆಯಾಗಿದೆ. ಇದರ ಕುರಿತಾದ ಈ ಕಾರ್ಯಾಗಾರದಲ್ಲಿ ನೀವೆಲ್ಲರೂ ಸಕ್ರೀಯವಾಗಿ ಪಾಲ್ಗೊಂಡು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾಲಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ.  ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂಹನ ಹಾಗೂ ಅಹಲ್ಯಬಾಯಿ ಸಂಶೋಧನಾ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾದ ಗ್ರಾಫಿಕ್ ಡಿಸೈನಿಂಗ್ ಕಾರ್ಯಗಾರ ಉದ್ಘಾಟಿಸಿ  ಅವರು ಮಾತನಾಡಿದರು. ಕ್ಷಣಕ್ಷಣಕ್ಕೂ ತಂತ್ರಜ್ಞಾನದ ವೇಗ ಹೆಚ್ಚುತ್ತಿದೆ. ಅದರ […]

ಡಾ. ಅಂಬೇಡ್ಕರ್ ಮಾರ್ಗದಲ್ಲಿ ನಡೆದರೆ ಯಶಸ್ಸು ನಿಶ್ಚಿತ- ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಅಭಿಮತ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ತೋರಿದ ಮಾರ್ಗದಲ್ಲಿ ನಡೆದು ಅವರ ತತ್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ.  ಅದಕ್ಕೆ ನಾನೇ ಜೀವಂತ ಉದಾಹರಣೆ ಎಂದು ಕರ್ನಾಟಕ ಸಿವಿಲ್ ನ್ಯಾಯಾಧೀಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಹೇಳಿದ್ದಾರೆ. ಬೌದ್ಧ ವಿಹಾರ ನಿರ್ಮಾಣ ಸಮಿತಿ ವತಿಯಿಂದ ನಗರದ ಸಾರಿಪುತ್ರ- ಬೋಧಿಧಮ್ಮ ಬುದ್ಧ ವಿಹಾರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. 2016ರಿಂದ ಬುದ್ಧವಿಹಾರದೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ ಅವರು, […]

ಜ್ಞಾನಕ್ಕಿಂತ ಮಿಗಿಲಾದುದು ಯಾವುದು ಇಲ್ಲ: ಮಹಾನಗರ ಪಾಲಿಕೆ ಆಯಕ್ತ ಬದ್ರೂದ್ದೀನ್ ಸೌದಾಗರ

ವಿಜಯಪುರ: ಜ್ಞಾನಕ್ಕಿಂತ ಮಿಗಿಲಾದುದು ಯಾವುದು ಇಲ್ಲ.  ಎಲ್ಲ ಕಡೆ ಶಿಕ್ಷಣವಂತರಿಗೆ ಮಾತ್ರ ಬೆಲೆಯಿದ್ದು, ಪ್ರತಿಯೊಬ್ಬರೂ ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಜೀವನ ರೂಪಿಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಬಿ. ಎಯ ಸೌದಾಗರ ಹೇಳಿದ್ದಾರೆ. ನಗರದ ಮನಗೂಳಿ ಅಗಸಿ ಹತ್ತಿರದ ಫತ್ಹೇ ದರವಾಜಾ ಮಸೀದಿ ಜಮಾತ್ ವತಿಯಿಂದ ವಕ್ಫ ಸಲಹಾ ಸಮಿತಿ ಪದಾಧಿಕಾರಿಗಳು ಮತ್ತು ಚಿನ್ನದ ಪದಕ ಪಡೆದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಉತ್ತಮ ಶಿಕ್ಷಣದಿಂದಲೇ ನಮ್ಮ ಜೀವನ ರೂಪಗೊಳ್ಳುತ್ತದೆ.  ಸಮಾಜದಲ್ಲಿ ಹುದ್ದೆಗಳು […]

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ಪತನ- ರಾಜ್ಯದಲ್ಲಿ 50 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ- ಶಾಸಕ ಯತ್ನಾಳ ಭವಿಷ್ಯ

ವಿಜಯಪುರ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಸ್ವೀಕಾರ ಮಾಡಿರುವುದರಿಂದ ಸರಕಾರ ಪತನವಾಗಲಿದೆ.  50-60 ಶಾಸಕರಿಂದ ಸರಕಾರ ಬೀಳಲಿದೆ.  ಈ ಸರಕಾರ ಬಹಳ ದಿನ ಮುಂದೆವರೆಯುವುದಿಲ್ಲ ಎಂದು ಅವರು ತಿಳಿಸಿದರು. ಜಾತಿ ಗಣತಿ ಸ್ವಿಕಾರ ವಿಚಾರವಾಗಿ ಕಾಂಗ್ರೆಸ್ಸಿನಲ್ಲಿ ಅಸಮಧಾನ ಭುಗಿಲೆದ್ದಿದೆ.  ಕಾಂಗ್ರೆಸ್ಸಿನ ಶಾಸಕರಾದ ಶಾಮನೂರ ಶಿವಶಂಕ್ರಪ್ಪ, ವಿನಯ ಕುಲಕರ್ಣಿ, ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಮಧು ಬಂಗಾರಪ್ಪ […]

ಬಸವ ನಾಡಿನಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಸಚಿವ ಎಂ. ಬಿ. ಪಾಟೀಲ ಚಾಲನೆ

ವಿಜಯಪುರ: ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ವರೆಗೆ ಹಮ್ಮಿಕೊಂಡ ಪೋಲಿಯೋ ಲಸಿಕಾ ಅಭಿಯಾನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದರು. ರವಿವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮೇಯರ್ ಮಹೇಜಬಿನ್ ಅಬ್ದುಲ್ ರಜಾಕ್ ಹೊರ್ತಿ ಜೊತೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ  ಮಾತನಾಡಿದರು. ಜಿಲ್ಲೆಯಲ್ಲಿ 0 […]

ಜಿಗಜಿಣಗಿ ಸಾಹೇಬ್ರು ಅರಾಮ ಅದಾರ- ಯಾರೂ ಗಾಬರಿಯಾಗಬ್ಯಾಡ್ರಿ- ಪುತ್ರ ವಿನೋದ, ಆಪ್ತ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಆರೋಗ್ಯದಿಂದಿದ್ದು ಯಾರೂ ಆತಂಕ ಪಡಬಾರದು ಎಂದು ಸಂಸದ ಪುತ್ರ ವಿನೋದ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ದೂರವಾಣಿ ಮೂಲಕ ಮಾತನಾಡಿರುವ ಅವರು, ತಂದೆಯವರಿಗೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಶನಿವಾರ ಬೆಳಗಾವಿಗೆ ತೆರಳಿದ್ದರು.  ಆರೋಗ್ಯದ ಸ್ವಲ್ಪ ಏರುಪೇರಾದ ಹಿನ್ನೆಲೆ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ 97 ವರ್ಷದ ಅತ್ತೆ ರಾಧಾಬಾಯಿ(ಸಂಸದ ರಮೇಶ ಜಿಗಜಿಣಗಿ ಅವರ ಅಕ್ಕ) ನಿಧನರಾಗಿದ್ದರು.  ಸಂಸದರು ಹಿರಿಯ […]

ಸಮಾಜ ಸೇವಕ ಫಯಾಜ್ ಕಲಾದಗಿಗೆ ನೇಪಾಳ ದೇಶದ ಪ್ರಶಸ್ತಿ- ಯಾವುದು ಗೊತ್ತಾ?

ವಿಜಯಪುರ: ಸಮಾಜ ಸೇವಕ ಫಯಾಜ್ ಕಲಾದಗಿ ಅವರಿಗೆ ನೇಪಾಳ ದೇಶದ ಬಿರಾಟ ನಗರದದ ಸಮತಾ ಸಾಹಿತ್ಯ ಪ್ರತಿಷ್ಠಾನ ಅಂತಾರಾಷ್ಟ್ರೀಯ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿ ಘೋಷಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರವವ ಸಮತಾ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಶಿವನಾರಾಯಣ ಸಿಂಗ್ಲೆ ಮತ್ತು ಕಾರ್ಯದರ್ಶಿ ಸರಿತಾ ತುಳದಾರ, ಈ ಬಾರಿಯ ಅತ್ಯುತ್ತಮ ಸಮಾಜ ಸೇವಕ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಫಯಾಜ್ ಕಲಾದಗಿ ಅವರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಫಯಾಜ ಕಲಾದಗಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು […]

ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ: ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ನಾನಾ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.  ಆಹಾರ ಸಂಸ್ಕøರಣ ಘಟಕಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಬೆಳೆಯಲಾದ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳಿಗೆ ಉತ್ತಮ ಬೆಲೆ ದೊರಕಿ ಆರ್ಥಿಕತೆ ವೃದ್ದಿಯಾಗಿ, ಸ್ಥಳೀಯವಾಗಿಯೇ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದ್ದು, ಜಿಲ್ಲೆಯ ಸರ್ವಾಂಗೀರ್ಣ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ತಿಕೋಟಾದಲ್ಲಿ ರೂ. 10 ಕೋ. ವೆಚ್ಚದಲ್ಲಿ ನಿರ್ಮಿಸಲಾದ ಮಿನಿ ವಿಧಾನಸೌಧ ಉದ್ಘಾಟನೆ ಹಾಗೂ […]