ಬಿ.ಎಲ್.ಡಿ.ಇ ಸಂಸ್ಥೆಯ ಡಾ. ಫ.ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ A+ ಮಾನ್ಯತೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲ್ಯಾಂಕ ಮಂಡಳಿ (NAAC) 2023-2028ರ ಅವಧಿಗೆ A+ ಗ್ರೇಡ್ (3.28 ಅಂಕ) ಮಾನ್ಯತೆ ನೀಡಿದೆ. ಕಳೆದ ವರ್ಷ ಡಿಸೆಂಬರ್ 7 ಮತ್ತು 8 ರಂದು ಕಾಲೇಜಿಗೆ ಭೇಟಿ ನೀಡಿದ್ದನ್ಯಾಕ್ ಕಮಿಟಿ, ಮಹಾವಿದ್ಯಾಲಯದಲ್ಲಿರುವ ಸೌಲಭ್ಯಗಳು, ಶೈಕ್ಷಣಿಕ ಗುಣಮಟ್ಟ, ಸಂಶೋಧನಾ ಪ್ರಗತಿ, ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಉದ್ಯೋಗಾವಕಾಶ, ಸಾಮಾಜಿಕ ಸಮನ್ವತೆಯನ್ನು ಕೂಲಕಂಷವಾಗಿ ಪರಿಶಿಲಿಸಿ […]
ಸೈಕಲ್ ಮೇಲೆ ಪ್ರಧಾನಿ ಮೋದಿ ಸಾಧನೆಗಳ ಪ್ರಚಾರ: ವಿದ್ಯಾಕಾಶಿಯಿಂದ ಬಸವನಾಡಿಗೆ ಬಂದ ಯುವಕನಿಗೆ ಸ್ವಾಗತಿಸಿ ಗೌರವಿಸಿದ ಉಮೇಶ ಕಾರಜೋಳ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳ ಕುರಿತು ಸೈಕಲ್ ಮೇಲೆ ಸಂಚರಿಸುತ್ತ ಪ್ರಚಾರ ಮಾಡುತ್ತಿರುವ ಧಾರವಾಡದ ಭರತ ಜೈನ್ ವಿಜಯಪುರ ನಗರಕ್ಕೆ ಆಗಮಿಸಿದ್ದು, ಅವರನ್ನು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು. ಸೈಕಲ್ ಮೇಲೆ ಹಳ್ಳಿಗಳಿಗೆ ತೆರಳು ಪ್ರಚಾರ ಮಾಡುತ್ತಿರುವ ಭರತ ಜೈನ ಧಾರವಾಡ ಜಿಲ್ಲೆಯ ಮಂಟೂರ ಗ್ರಾಮದವರಾಗಿದ್ದು, ವೃತ್ತಿಯಲ್ಲಿ ಅಟೋ ಚಾಲಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಅವರು ಸ್ವಯಂ ಪ್ರೇರಣೆಯಿಂದ […]
ಭೂತ್ನಾಳ ಕೆರೆಗೆ ಸಚಿವ ಎಂ. ಬಿ. ಪಾಟೀಲ ಭೇಟಿ- ನೀರು ತುಂಬಿಸುವ ಯೋಜನೆ ಪರಿಶೀಲನೆ

ವಿಜಯಪುರ: ಈ ಬಾರಿ ಭೀಕರ ಬರಗಾಲವಿದೆ. ಮುಂಬರುವ ಬೇಸಿಗೆಯಲ್ಲಿ ಜನ ಜಾನುವಾರಗಳಿಗೆ ನೀರಿನ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ, ಅಧಿಕಾರಿಗಳು ಪೂರ್ವ ಯೋಜನೆಯೊದಿಗೆ ಕಾರ್ಯ ನಿರ್ವಹಿಸಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸಮಪರ್ಕವಾಗಿ ಕುಡಿಯುವ ನೀರು ಒದಗಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಭೂತನಾಳ ಕೆರೆಯನ್ನು ತಿಡಗುಂದಿ ಅಕ್ವಾಡೆಕ್ಟ್ ಮೂಲಕ ನೀರು ತುಂಬಿಸುವ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ […]
ಆಲಮೇಲ, ಸಿಂದಗಿ ತಾಲೂಕಿನ ನಾನಾ ಸ್ಥಳಗಳಿಗೆ ಜಿ. ಪಂ. ಸಿಇಓ ರಿಷಿ ಆನಂದ ಭೇಟಿ, ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲನೆ

ವಿಜಯಪುರ: ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕುಡಿಯುವ ನೀರಿಗೆ ಪ್ರಥಮಾಧ್ಯತೆ ನೀಡಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆ.24ರಂದು ಸಿಂದಗಿ ಹಾಗೂ ಆಲಮೇಲ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಇಲಾಖೆಗಳಡಿ ಕೈಗೊಂಡ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು ಒದಗಿಸಲು ಕ್ರಮವಹಿಸಿಬೇಕು. ಯಾವುದೇ ರೀತಿಯ ಸಮಸ್ಯೆಯಾಗದಂತೆ ಗಮನ ಹರಿಸಿ ಕಾರ್ಯ ನಿರ್ವಹಿಸಬೇಕು ಎಂದು ಗ್ರಾಮೀಣ […]
ಇಂಡಿಯಲ್ಲಿ ಗಾಣಿಗರ ಬೃಹತ್ ಶಕ್ತಿ ಪ್ರದರ್ಶನ- ಪಕ್ಷಾತೀತ, ಜಾತ್ಯತೀತವಾಗಿ ಪಾಲ್ಗೊಂಡ ಜನಪ್ರತಿನಿಧಿಗಳು

ವಿಜಯಪುರ: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಮಧ್ಯೆಯೇ ಇಂಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಣಿಗ ಸಮಾಜದ ಶಕ್ತಿ ಪ್ರದರ್ಶನ ನಡೆದಿದೆ. ಜ್ಞಾನಯೋಗಿ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಸಭಾ ಭವನದ ಭೂಮಿ ಪೂಜಾ ಕಾರ್ಯಕ್ರಮ ಹಾಗೂ ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಬೃಹತ್ ಸಮಾವೇಶ ಗಾಣಿಗರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ ಈ ಸಮಾವೇಶವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ […]
ದೀಪ ಆರುವ ಮುಂಚೆ ದೊಡ್ಡದಾಗಿ ಉರಿಯುತ್ತದೆ- ಅನಂತಕುಮಾರ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ

ವಿಜಯಪುರ: ದೀಪ ಆರುವ ಮುಂಚೆ ದೊಡ್ಡದಾಗಿ ಉರಿಯುತ್ತದೆ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ ವಿರುದ್ಧ ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಸಂಸದ ಅನಂತಕುಮಾರ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅನಂತಕುಮಾರ ಹೆಗಡೆ ರಾಜಕೀಯವಾಗಿ ಕಳೆದು ಹೋಗುವ ಮುನ್ನ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವವನ್ನು ತಾವೇ ಕಳೆದುಕೊಳ್ಳುತ್ತಿರುವುದು ಪ್ರಾರಂಭವಾಗಿದೆ. ವಿನಾಶ […]
ಎಸ್.ಯು.ಸಿಐ ಕಮ್ಯೂನಿಷ್ಟ್ ಪಕ್ಷದ ಕಾರ್ಯಕರ್ತರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಎಸ್.ಯು.ಸಿ.ಐ ಕಮ್ಯೂನಿಷ್ಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಿಜಯಪುರ ನಗರದಲ್ಲಿ ಸಿಟಿ ಬಸ್ಸುಗಳ ಮತ್ತು ಜಿಲ್ಲೆಯಲ್ಲಿ ಸಾಮಾನ್ಯ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ನವಭಾಗ ಮುಖ್ಯ ರಸ್ತೆ ಸೇರಿದಂತೆ ನಗರದಲ್ಲಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಸಂಕಷ್ಟದಲ್ಲಿರುವ ಎಲ್ಲಾ ರೈತರಿಗೆ ಬರ ಪರಿಹಾರ ಒದಗಿಸಬೇಕು. ಜಿಲ್ಲೆಯಲ್ಲಿ ಸರಕಾರಿ ಎಂಜಿನೀಯರಿಂಗ್ ಮತ್ತು ಮೆಡಿಕಲ್ ಕಾಲೇಜ್‌ಗಳನ್ನು ಪ್ರಾರಂಭಿಸಬೇಕು. ಸರಕಾರಿ ಆಸ್ಪತ್ರೆ ಖಾಸಗೀಕರಣ ಮಾಡುವುದನ್ನು ಕೈ ಬಿಡಬೇಕು. ಜಿಲ್ಲಾ ಕ್ರೀಡಾಂಗಣವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿ […]
ವ್ಯಾನಿಟಿ ಬ್ಯಾಗ್ ಗಳಿಗೆ ಕನ್ನ ಹಾಕುತ್ತಿದ್ದ ಮೂರು ಜನ ಕಳ್ಳಿಯರ ಬಂಧಿಸಿದ ಗಾಂಧಿಚೌಕ್ ಪೊಲೀಸರು- ಚಿನ್ನಾಭರಣ ವಶ

ವಿಜಯಪುರ: ನಗರ ಕೇಂದ್ರ ಮತ್ತು ಸೆಟಲೈಟ್ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ವ್ಯಾನಿಟಿ ಬ್ಯಾಗ್ ಗೆ ಕನ್ನ ಹಾಕಿ ಚಿನ್ನಾಭರಣ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಗಾಂಧಿಚೌಕ್ ಪೊಲೀಸರು ಮೂರು ಜನ ಅಂತರ್ ಜಿಲ್ಲಾ ಕಳ್ಳಿಯರನ್ನು ಬಂಧಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಎಸ್ಪಿ ಋಷಿಕೇಶ ಸೋನಾವಣೆ, ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸುಗಳನ್ನು ಹತ್ತುವಾಗ ಅವರ ವ್ಯಾನಿಟಿ ಬ್ಯಾಗಗಳಲ್ಲಿನ ಚಿನ್ನಾಭರಣ ಕಳ್ಳತನವಾದ ಕುರಿತು ಐದು ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, […]
ದ್ವಿತೀಯ ಪಿಯು ಪರೀಕ್ಷೆ: ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ

ವಿಜಯಪುರ: ಜಿಲ್ಲಾದ್ಯಂತ ಮಾರ್ಚ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 59 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 31,921 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಯುವ ದಿನಗಳಂದು ಜಿಲ್ಲಾ ಭದ್ರತಾ ಕೊಠಡಿಯಿಂದ ಗೌಪ್ಯ […]
ಮಹಿಳಾ ವಿವಿ ಸ್ಕೌಟ್ಸ್, ಗೌಡ್ಸ್ ವಿದ್ಯಾರ್ಥಿನಿಯರಿಗೆ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ

ವಿಜಯಪುರ: ರಾಜ್ಯ ಅಕ್ಕಮiಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚವ್ಹಾಣ, ಭವಾನಿ ಅಂಗಡಿ, ವಿದ್ಯಾಶ್ರೀ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ವರ್ಷದ ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ನೀಡಿಲಾಗಿದೆ. ಈ ಪುರಸ್ಕಾರ ಪಡೆದ ವಿದ್ಯಾರ್ಥಿನಿಯರಿಗೆ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಸಂಯೋಜಕ ಡಾ. ಶ್ರೀನಿವಾಸ ಮತ್ತಿತರರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.