ಕೇಂದ್ರ ಜಲ ಶಕ್ತಿ ತಂಡದಿಂದ ಇಂಡಿ ತಾಲೂಕಿನ ನಿಂಬಾಳ ಕೆ. ಡಿ., ಕೊಳುರಗಿ, ಬಬಲಾದ, ಹೊರ್ತಿ, ಚವಡಿಹಾಳ ಕ್ಷೇತ್ರ ಭೇಟಿ

ವಿಜಯಪುರ:   ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು(ಬಿ), ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಶ್ ಕೇಶರ್ವಾಣಿ ಅವರು ಇಂಡಿ ತಾಲೂಕಿನ ನಿಂಬಾಳ ಕೆ. ಡಿ, ಕೊಳುರಗಿ, ಬಬಲಾದ, ಹೊರ್ತಿ ಹಾಗೂ ಚವಡಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು. ನಿಂಬಾಳ ಕೆ.ಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಬೋರ್‌ವೆಲ್ ಮರುಪೂರಣ ಘಟP,À ಕೊಳುರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಸಾಮಾಜಿಕ ಅರಣ್ಯ […]

ನಿಯಮಿತ ವ್ಯಾಯಾಮ, ಆರೋಗ್ಯ ಪೂರ್ಣ ಆಹಾರ ಸೇವನೆಯಿಂದ ಕ್ಯಾನ್ಸರ ರೋಗ ತಡೆಗಟ್ಟಬಹುದು- ಟಿ. ಭೂಬಾಲನ್

ವಿಜಯಪುರ: ನಿಯಮಿತ ವ್ಯಾಯಾಮ ಮತ್ತು ಆರೋಗ್ಯ ಪೂರ್ಣ ಆಹಾರ ಸೇವನೆಯಿಂದ ಕ್ಯಾನ್ಸರ್ ರೋಗ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದಲ್ಲಿ ಭಾರತೀಯ ರೆಡ್‌ಕ್ರಾಸ ಸೊಸೈಟಿ ವಿಜಯಪುರ ಜಿಲ್ಹಾ ಶಾಖೆ ಮತ್ತು ಜಿಲ್ಹಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ ರೋಗದ ಅರಿವು ಮತ್ತು ಮುಂಜಾಗ್ರತೆ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಕ್ಯಾನ್ಸರ ರೋಗ ಕುರಿತು 25 ಸಾವಿರ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಕ್ಯಾನ್ಸರ್ ಕುರಿತು ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ […]

ಕಾರ್ಯನಿರತ ಪತ್ರಕರ್ತರ ಸಂಘದಿಂದ ಉತ್ತಮ ಜಿಲ್ಲಾ ಸಂಘ ಪ್ರಶಸ್ತಿ ಪ್ರದಾನ: ವಿಜಯಪುರ ಘಟಕ ಚಟುವಟಿಕೆಗೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಂಸೆ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದಿಂದ ಉತ್ತಮ ಜಿಲ್ಲಾ ಸಂಘ ಪ್ರಶಸ್ತಿಗೆ ಪುರಸ್ಕೃತವಾದ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಗೆ ಪುರಸ್ಕೃತವಾದ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಸಂಘದ ಸದಸ್ಯರ ಹರ್ಷೋದ್ಘಾರಗಳ ಮಧ್ಯೆ ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು. ಶಶಿಕಾಂತ ಪ್ರಶಸ್ತಿ ಸ್ವೀಕಾರ : […]

ಕೇಂದ್ರ ಜಲ ಶಕ್ತಿ ತಂಡದಿಂದ ಜಿಲ್ಲೆಯ ನಾನಾ ಗ್ರಾಮ ಪಂಚಾಯಿತ್ಗಿಳಿಗೆ ಭೇಟಿ, ಪರಿಶೀಲನೆ

ವಿಜಯಪುರ: ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿ ಅವರನ್ನೊಳಗೊಂಡ ತಂಡ ವಿಜಯಪುರ ತಾಲೂಕಿನ ಹೆಗಡಿಹಾಳ, ಐನಾಪುರ ಹಾಗೂ ಹಡಗಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಪರಿಶೀಲನೆ ನಡೆಸಿತು. ಹೆಗಡಿಹಾಳ ಗ್ರಾಮ ಅಮೃತ ಸರೋವರ, ಬೋರ್ ವೆಲ್ ಮರು ಪೂರಣ ಘಟಕ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ನಂತರ ಅಮೃತ […]

ಕ್ರಿಕೆಟ್, ಪುಟಬಾಲ್ ಜೊತೆ ಅಥ್ಲೇಟಿಕ್ಸ್ ಗೂ ಪ್ರೋತ್ಸಾಹ ಅಗತ್ಯ- ಪ್ರೋ. ಆರ್. ಸಿ. ಬಿದರಿ

ವಿಜಯಪುರ: ಕ್ರಿಕೆಟ್ ಮತ್ತು ಪುಟಬಾಲ್ ಜೊತೆ ಅಥ್ಲೇಟಿಕ್ಸ್ಗೂ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜನರಲ್ ಮೆಡಿಸೀನ್ ವಿಭಾಗದ ಪ್ರಾಧ್ಯಾಪಕ ಪ್ರೋ. ಡಾ. ಆರ್. ಸಿ. ಬಿದರಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಕ್ರೀಡಾಂಗಣದಲ್ಲಿ ರವಿವಾರ ದಿ. ಡಾ. ಸಿ. ಆರ್. ಬಿದರಿ ಸ್ಮರಣಾರ್ಥ ಆಯೋಜಿಸಲಾಗಿದ್ದ 9ನೇ ಅಂತರಶಾಲಾ ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ತಂದೆ ಡಾ. ಸಿ. ಆರ್. […]

ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಣೆ ಮೇಲ್ವಿಚಾರಕರ ಜವಾಬ್ದಾರಿಯಾಗಿದೆ. ಸರ್ಕಾರ ಒದಗಿಸುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯಾದ ಮತ್ತು ಪೌಷ್ಟಿಕ ಆಹಾರ ಒದಗಿಸುವ ಮತ್ತು […]

ಫೆ. 26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ- ನಿರುದ್ಯೋಗಿಗಳು ನೊಂದಾಯಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಹಾಗೂ 27 ರಂದು ರಾಜ್ಯ ಮಟ್ಟದ ಯುವ ಬೃಹತ್ ಉದ್ಯೋಗ ಮೇಳ-2024 ಅಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಭಾಗವಹಿಸಲು ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಗಳ ಸಭಾ ಭವನದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯಲ್ಲಿ, ಸದರಿ ಉದ್ಯೋಗ https://skillconnect.kaushalkar.com  ಪೋರ್ಟಲ್ ನಲ್ಲಿ ನೋಂದಣಿ […]

ಸಂಸದ ಡಿ. ಕೆ. ಸುರೇಶ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚಾದಿಂದ ವಿಜಯಪುರದಲ್ಲಿ ಪ್ರತಿಭಟನೆ

ವಿಜಯಪುರ: ಬೆಂಗಳೂರು ಗ್ರಾಮೀಣ ಸಂಸದ ಡಿ. ಕೆ. ಸುರೇಶ ನೀಡಿರುವ ಭಾರತ ವಿಭಜನೆ ಹೇಳಿಕೆ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಭೋಧಿಸಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.   ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚೋ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ ರಾಠೋಡ, […]

ರಾಜ್ಯದಲ್ಲಿ ರಾಮಮಂದಿರಗಳ ಪುನರುಜ್ಜೀವನ ಸ್ವಾಗತಾರ್ಹ- ಬಿ. ವೈ. ವಿಜಯೇಂದ್ರ

ವಿಜಯಪುರ: ರಾಜ್ಯದಲ್ಲಿ ನೂರು ರಾಮಮಂದಿರ ಪುನಶ್ಚೇಚೇತನ ಮಾಡುವ ಸರಕಾರದ ತೀರ್ಮಾಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ.  ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮನ ಅಸ್ತಿತ್ವವನ್ನುಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ರಾಮಮಂದಿರ ಪುನಶ್ಚೇತನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ.  ಒಳ್ಳೆಯ ಕೆಲಸ ಮಾಡುತ್ತಿರುವವರಿಗೆ ನಾವು ಹಾರೈಸುತ್ತೇವೆ.  ಭಗವಾನ್ ರಾಮನನ್ನು ಅವರು ಒಪ್ಪಿಕೊಂಡಿರುವುದು ತುಂಬಾ ಸಂತೋಷಕರ ಸಂಗತಿಯಾಗಿದೆ ಎಂದು ಹೇಳಿದರು. ಬೆಳಗಾವಿಯಲ್ಲಿ ಜಿಲ್ಲೆಯ ಎಂ. ಕೆ. ಹುಬ್ಬಳ್ಳಿಯಲ್ಲಿ ಭಗವಾ ಧ್ವಜ ಗಲಾಟೆ ವಿಚಾರ ಬೆಳಗಾವಿ ಜಿಲ್ಲೆಯ ಎಂ‌. ಕೆ.  ಹುಬ್ಭಳ್ಳಿಯಲ್ಲಿ […]

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ. ವಿ. ಪ್ರಭಾಕರ

ದಾವಣಗೆರೆ : ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ ಆತಂಕ ವ್ಯಕ್ತಪಡಿಸಿದ್ದಾರೆ.   ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ ಇದ್ದಾರೆ. ಸಾವಿನ ಸುದ್ದಿಯನ್ನಾದರೂ ಪ್ರಕಟಿಸುವ ಮೊದಲು ಪರಿಶೀಲಿಸಿಕೊಳ್ಳದಿದ್ದರೆ ಹೇಗೆ […]