Rajeshwari Gayakwad: ಸತತ ಪರಿಶ್ರಮ, ಶ್ರದ್ಧೆ, ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು- ಅಂತಾರಾಷ್ಟ್ರೀಯ ಕ್ರಿಕೆಟ್ ಮಹಿಳಾ ಆಟಗಾರ್ತಿ ರಾಜೇಶ್ವರಿ ಗಾಯಕವಾಡ

ವಿಜಯಪುರ: ಸತತ ಪರಿಶ್ರಮ, ಶ್ರದ್ಧೆ ಮತ್ತು ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು. ಇಲ್ಲಿ ಯಾವುದೇ ಶಾರ್ಟ್ ಕಟ್ ಇರುವುದಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿಯವರ ಪುಣ್ಯಸ್ಮರಣೆ ಅಂಗವಾಗಿ ಇಂದು ರವಿವಾರ ಆಯೋಜಿಸಲಾಗಿದ್ದ ಬಿ. ಎಲ್. ಡಿ. ಇ […]
ಅಡ್ವಾಣಿಗೆ ಭಾರತರತ್ನ ಸ್ವಾಗತಾರ್ಹ- ಶಿವಕುಮಾರ ಸ್ವಾಮೀಜಿಗೂ ನೀಡಲಿ- ಡಿಕೆಶಿಗೆ ಮುಂದೆ ಸಿಎಂ ಆಗುವ ಅರ್ಹತೆ ಇದೆ- ರಂಭಾಪುರಿ ಶ್ರೀ

ವಿಜಯಪುರ: ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಉಪಪ್ರಧಾನಿ ಎಲ್. ಕೆ. ಆಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ಹಿರಿಯ ನಾಯಕನಿಗೆ ಭಾರತ ರತ್ನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷ ಕಟ್ಟುವಲ್ಲಿ ಲಾಲ ಕೃಷ್ಣ ಅಡ್ವಾಣಿ ಪ್ರಮುಖ ಪಾತ್ರ ವಹಿಸಿದ್ದಾರೆ. […]
ಕಾರಜೋಳ ಗ್ರಾಮದ ಬಳಿ ಬಾಕಿ 500 ಎಕರೆಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಕಾರಜೋಳ ಬಳಿ ಬಾಕಿ ಉಳಿದಿರುವ 500 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತ ಗ್ರಾಮಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಇದರಿಂದ ಗ್ರಾಮ ಸ್ವರಾಜ್ಯ ಸಾಧ್ಯ ಎಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೇಳಿದ್ದರು. […]
ಸಂಪೂರ್ಣ ಗುಣಮುಖನಾಗಿದ್ದೇನೆ- ವಿಕ್ಷಿಪ್ತ ಮನಸುಗಳ ಅಪಪ್ರಚಾರ ನೋವು ತಂದಿದೆ- ರಮೇಶ ಜಿಗಜಿಣಗಿ

ವಿಜಯಪುರ: ನಾನು ಈಗ ಸಂಪೂರ್ಣ ಆರೋಗ್ಯವಾಗಿದ್ದು, ಕೆಲವು ವಿಕ್ಷಿಪ್ತ ಮನಸ್ಸುಗಳು ನನ್ನ ಆರೋಗ್ಯದ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದು ನೋವುಂಟು ಮಾಡಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಹಜವಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಆದರೆ ಕೆಲವೊಂದು ವಿಕ್ಷಿಪ್ತ ಮನಸ್ಸುಗಳು ತಮ್ಮ ಸ್ವಾರ್ಥ ರಾಜಕಾರಣದ ಬೆಳೆ ಬೇಯಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳ ಮೂಲಕ ಅಪಪ್ರಚಾರ ಮಾಡುತ್ತಿರುವುದು ನನ್ನ ಮನಸ್ಸಿಗೆ ನೋವು ಉಂಟು ಮಾಡಿದೆ ಎಂದು ತಿಳಿಸಿದ್ದಾರೆ. ನನ್ನ […]
ಬಿಜೆಪಿಗೆ ಆಪರೇಶನ್ ಕಮಲ, ದುಡ್ಡು ಕೊಟ್ಟು ಕೊಂಡುಕೊಳ್ಳುವುದೇ ಕೆಲಸವಾಗಿದೆ- ಸಿಎಂ ಎಸ್ ಸಿದ್ಧರಾಮಯ್ಯ ವಾಗ್ದಾಳಿ

ವಿಜಯಪುರ: ಬಿಜೆಪಿಯವರಿಗೆ ಆಪರೇಶನ್ ಬಿಟ್ಟರೆ ಬೇರೇನೂ ಗೊತ್ಲಿಲ. ದುಡ್ಡ ಕೊಟ್ಟು ಕೊಂಡು ಕೊಳ್ಳೊದೇ ಅವರ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳೆಗ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಜಗದೀಶ ಶೆಟ್ಟರ ಅವರ ರೀತಿ ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೀಡಿರುವ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, […]
ವಿಜಯಪುರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ

ವಿಜಯಪುರ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಇಲ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗ, ಸರಕಾರಿ ಪಾಲಿಟೆಕ್ನಿಕ್, ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಈ ಶಿಬಿರವನ್ನು ಆರ್. ಸಿ. ಎಚ್. ಅಧಿಕಾರಿ ಡಾ. ಕೆ. ಡಿ. ಗುಂಡಬಾವಾಡಿ ಉದ್ಘಾಟಿಸಿದರು. […]
ವಿಜಯಪುರ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ- ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಸದಸ್ಯರು

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಘಟಕ ಕೊಡಮಾಡುವ ಉತ್ತಮ ಸಾಧನೆಗೈದ ಸಂಘ ಪ್ರಶಸ್ತಿಗೆ ಪುರಸ್ಕೃತವಾಗಿದ್ದುö, ಸಂಘದ ಸದಸ್ಯರ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ. ರಾಜ್ಯದ ಮೂರು ಜಿಲ್ಲಾ ಘಟಕಗಳಿಗೆ ಈ ಪ್ರಶಸ್ತಿ ಲಭಿಸಿದ್ದುö, ಅದರಲ್ಲಿ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘವೂ ಈ ಪ್ರಶಸ್ತಿಗೆ ಪಾತ್ರವಾಗಿದ್ದುö, ಸಂಘದ ಸದಸ್ಯರು ಹಾಗೂ ಪದಾಕಾರಿಗಳ ಹರ್ಷದ ಹೊನಲಿಗೆ ಕಾರಣವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ. […]
ಬಸವ ನಾಡಿನಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ- ವಚನಗಳ ಮೂಲಕ ಸಮ ಸಮಾಜಕ್ಕೆ ಶರಣರು ಶ್ರಮಿಸಿದ್ದಾರೆ- ಮಹಾದೇವ ಮುರಗಿ

ವಿಜಯಪುರ: ಕಲ್ಯಾಣ ಕರ್ನಾಟಕದ ಬಸವ ಕಲ್ಯಾಣದ ಅನುಭವ ಮಂಟಪದ 12ನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಪ್ರತಿಪಾದಿಸಿದ ಮಡಿವಾಳ ಮಾಚಿದೇವ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವರ ಮುರಗಿ ಹೇಳಿದರು. ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶರಣರ ಅಂದು ಹಾಕಿಕೊಟ್ಟ ಹಾಗೂ ತಿಳಿಸಿದ ವಿಚಾರಗಳು ಇಂದಿಗೂ […]
ಸಿಎಂ ಜೊತೆ ಸಚಿವ ಎಂ. ಬಿ. ಪಾಟೀಲ ನೇತೃತ್ವದ ನಿಯೋಗದ ಸಭೆ: ನಂದಿ ಸಕ್ಕರೆ ಕಾರ್ಖಾನೆಗೆ ₹150 ಕೋ. ನೆರವಿಗೆ ಮನವಿ

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 100 ಕೋಟಿ ರೂ. ಬಡ್ಡಿರಹಿತ ಸಾಲ ನೀಡುವಂತೆ ಮತ್ತು 50 ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸುವಂತೆ ಕೋರಿ, ಕಾರ್ಖಾನೆಯ ಆಡಳಿತ ಮಂಡಲಿಯು ಸರಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತ ಮಟ್ಟದ ನಿಯೋಗ ಸಚಿವ ಎಂ. […]
ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಜಿಲ್ಲಾಡಳಿತದಿಂದ ಮೌನಾಚರಣೆ ಮೂಲಕ ನಮನ

ವಿಜಯಪುರ: ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನ ಪ್ರತಿದಿನ ಆ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಭಾರತೀಯ ಸೇವಾದಳ, ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಹಾಗೂ ನೆಹರು ಯುವ ಕೇಂದ್ರ ಇವರ ಸಹಯೋಗದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಹುತಾತ್ಮರ (ಮೀನಾಕ್ಷಿ ಚೌಕ್) ವೃತ್ತದಲ್ಲಿರುವ ಸ್ಮಾರಕಕ್ಕೆ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ […]