ಬಂಜಾರಾ ಕಸೂತಿ ಕಲೆ ಉತ್ತೇಜನಕ್ಕಾಗಿ ತರಬೇತಿ ಶಿಬಿರ ಆಯೋಜನೆ- ಆಶಾ ಎಂ. ಪಾಟೀಲ

ವಿಜಯಪುರ: ಬಂಜಾರಾ ಕಸೂತಿ ಕಲೆಯನ್ನು ಪ್ರೋತ್ಸಾಹಿಸಲು ಬಂಜಾರಾ ಕಸೂತಿ ಕಸೂತಿ ಸಂಸ್ಥೆ ಸ್ಥಾಪಿಸಿ ತರಬೇತಿ ಶಿಬಿರಗಳ ಆಯೋಜನೆ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ.ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮಹಿಳಾ ಸಬಲೀಕರಣ ಘಟಕ ಮತ್ತು ಬಂಜಾರಾ ಕಸೂತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಬಂಜಾರಾ ಕಸೂತಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದ ಸಾಂಸ್ಕøತಿಕ ವೆಶಿಷ್ಟ್ಯತೆಯ ಸಂಕೇತವಾಗಿರುವ ಬಂಜಾರಾ ಕಸೂತಿ ಗ್ರಾಮೀಣ ಕರಕುಶಲ […]

ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿ ಇ ಆಸ್ಪತ್ರೆ ಬದ್ಧವಾಗಿದೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಪತ್ರಕರ್ತರು ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ ಮಾಡಲ್ಲ. ಅಂಥ ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿಇ ಆಸ್ಪತ್ರೆ ಬದ್ಧವಾಗಿದೆ ಎಂದು ಬಿಎಲ್ ಡಿ ಸಂಸ್ಥೆಯ ಅಧ್ಯಕ್ಷರೂ‌ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.‌ ನಗರದ ಬಿಎಲ್ ಡಿಇ ಆಸ್ಪತ್ರೆಯ ಟ್ರಾಮಾ ಸೆಂಟರ್ ಸಭಾಂಗಣದಲ್ಲಿ ಸೋಮವಾರ ಬಿಎಲ್ ಡಿಇ ಆಸ್ಪತ್ರೆಯ ಆರೋಗ್ಯ ಭಾಗ್ಯ ಯೋಜನೆಯಡಿ […]

ಶಾಸಕ ಸಿ. ಎಸ್. ನಾಡಗೌಡ ಸೇರಿ 35 ಜನರಿಗೆ ನಿಗಮ, ಮಂಡಳಿ ಅಧ್ಯಕ್ಷರಾಗಿ ನೇಮಕ- ಯಾರಿಗೆ ಯಾವ ನಿಗಮ, ಮಂಡಳಿ ಜವಾಬ್ದಾರಿ? ಇಲ್ಲಿದೆ ಮಾಹಿತಿ.

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ ಸೇರಿದಂತೆ 35 ಜನ ಶಾಸಕರಿಗೆ ನಾನಾ ನಿಗಮ ಮತ್ತು ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.  ಅಲ್ಲದೇ, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಎರಡು ವರ್ಷಗಳ ಅವಧಿಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಇದರಲ್ಲಿ ವಿಜಯಪುರ ಜಿಲ್ಲೆಗೆ ಕೇವಲ ಒಂದು ನಿಗಮಕ್ಕೆ ಮಾತ್ರ ಅಧ್ಯಕ್ಷ ಸ್ಥಾನ ನೀಡಲಾಗಿದ್ದರೆ, ಪಕ್ಕದ ಬಾಗಲಕೋಟೆ ಜಿಲ್ಲೆಯ ಮೂರು ಜನ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. […]

ಗಣರಾಜ್ಯೋತ್ಸವದ ವೇಳೆ ಗಾಳಿಯಲ್ಲಿ ಗುಂಡು- ಗ್ರಾ. ಪಂ. ಅಧ್ಯಕ್ಷೆಗೆ ಗಾಯ- ಆಸ್ಪತ್ರೆಯಲ್ಲಿ ಚೇತರಿಕೆ

ವಿಜಯಪುರ: ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ಅಚಾನಕ್ಕಾಗಿ ಹಾರಿದ ಗುಂಡು ಗ್ರಾ. ಪಂ. ಅಧ್ಯಕ್ಷೆಯ ಕಾಲಿಗೆ ತಾಗಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ. 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋಮವ್ವ ಹೊಸಮನಿ ಧ್ವಜಾರೋಹಣ ಮಾಡಿ ನಿಂತಿದ್ದರು.  ಆಗ ಕಾಲಿಗೆ ಏಕಾಏಗ ಏನೋ ಬಡಿದಂತಾಗಿ ಕೆಳಗೆ ಕುಳಿತಿದ್ದಾರೆ.  ನಂತರ ಪರಿಶೀಲಿಸಿದಾಗ ಗುಂಡು ತಗುಲಿರುವುದು ಪತ್ತೆಯಾಗಿದೆ. ಇದೀಗ ಗ್ರಾ. ಪಂ. ಅಧ್ಯಕ್ಷೆ ಸೋಮವ್ವ ಹೊಸಮನಿ […]

ಗಣರಾಜ್ಯೋತ್ಸವ: ಬಸವ ನಾಡಿನಲ್ಲಿ ಸಚಿವ ಎಂ. ಬಿ. ಪಾಟೀಲ ಧ್ವಜಾರೋಗಣ

ವಿಜಯಪುರ: ಗಣರಾಜ್ಯೋತ್ಸವದ ಅಂಗವಾಗಿ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಧ್ವಜಾರೋಹಣ ನೆರವೇರಿಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರಯ ನಂತರ ನಾನಾ ಪದಾತಿ ದಳಗಳನ್ನು ವೀಕ್ಷಿಸಿದರು‌ ಅಲ್ಲದೇ, ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.     ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ […]

ಶಾಸಕ ಸುನೀಲಗೌಡ ಪಾಟೀಲ ಪ್ರಯತ್ನದ ಫಲಶೃತಿ- ಗಣರಾಜ್ಯೋತ್ಸವ ದಿನದಿಂದ ವಿಜಯಪುರದಿಂದ ಬೆಂಗಳೂರಿಗೆ ಎಸಿ ಸ್ಲೀಪರ್ ಕೋಚ್ ಬಸ್ ಪ್ರಾರಂಭ

ವಿಜಯಪುರ: ವಿಜಯಪುರ ದಿಂದ ಬೆಂಗಳೂರಿಗೆ ಎ.ಸಿ ಮಲ್ಟಿ ಎಕ್ಸಲ್ ವೋಲ್ವೋ ಸ್ಲೀಪರ್ ಬಸ್ ಸೇವೆ ಪ್ರಾರಂಭಿಸುವAತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಮಾಡಿದ ಮನವಿಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಜನೇವರಿ 26 ಶುಕ್ರವಾರ ಗಣರಾಜೋತ್ಸವ ದಿನದಿಂದ ವಿಜಯಪುರ ದಿಂದ ಬೆಂಗಳೂರಿಗೆ ಬಸ್ ಸಂಚಾರ ಪ್ರಾರಂಭವಾಗಲಿದೆ. ಈ ಬಸ್ ಸಂಚಾರ ಪ್ರಾರಂಭಿಸುವಂತೆ ಸುನೀಲಗೌಡ ಪಾಟೀಲ ಅವರು ಕಳೆದ ಎರಡು ವರ್ಷಗಳಿಂದ ಸರಕಾರವನ್ನು ಆಗ್ರಹಿಸಿದ್ದರು. ಅಲ್ಲದೇ, ವಿಧಾನ ಪರಿಷತ್ ಕಲಾಪದಲ್ಲಿಯೂ ಈ ಕುರಿತು ಪ್ರಸ್ತಾಪಿಸಿದ್ದರು. ಜೊತೆಗೆ ಕಳೆದ […]

ದೇಶದ ಅಭ್ಯುದಯಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ- ಸಂತೋಶ ಕುಂದರ ಕರೆ

ವಿಜಯಪುರ: ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಕರೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ […]

ಎನ್ಇಪಿ ಮುಂದುವರಿಸಲು ಆಗ್ರಹ- ಪಿಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ನಿಂದ ರಾಜ್ಯಪಾಲರಿಗೆ ವರದಿ ಸಲ್ಲಿಕೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಮುಂದುವರೆಸುವಂತೆ ಆಗ್ರಹಿಸಿ ಪಿಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶಷನ್ ವತಿಯಿಂದ ರಾಜ್ಯಪಾಲ ಥಾವರಚಂದ ಗೆಹ್ಲೊಟ್ ಅವರಿಗೆ ವರದಿಯನ್ನು ಸಲ್ಲಿಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ-2020 ಅಳವಡಿಕೆಯನ್ನು ರಾಜ್ಯದಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಫೋರಮ್ ವತಿಯಿಂದ ರಾಜ್ಯಾದ್ಯಂತ ಸಹಿ ಸಂಗ್ರಹಿಸಲಾಗಿದೆ.  34 ಶೈಕ್ಷಣಿಕ ಜಿಲ್ಲೆಗಳ 168 ತಾಲೂಕುಗಳ 2630 ಶಾಲೆಗಳು, 83600 ಶಿಕ್ಷಕರು ಮತ್ತು ಆಡಳಿತ ಮಂಡಳಿಯ ಸದಸ್ಯರು, 26980 ಪೋಷಕರು, 19327 ಆನಲೈನ್ ಮೂಲಕ ಕ್ಯಾಂಪೇನ್ ಸಹಿ, 8,88,173 ವಿದ್ಯಾರ್ಥಿಗಳು ಸೇರಿ ಒಟ್ಟು 10 […]

ಓಐಡಿವೈಓ ವತಿಯಿಂದ ನೇತಾಜಿ ಸುಭಾಸಚಂದ್ರ ಬೋಸ ಅವರ 127ನೇ ಜನ್ಮದಿನಾಚರಣೆ

ವಿಜಯಪುರ: ಎಐಡಿವೈಓ ವತಿಯಿಂದ ನಗರದ ಹುತಾತ್ಮ ಸರ್ಕಲ್ ಮತ್ತು ಸರಕಾರಿ ಐಟಿಐ ಕಾಲೇಜ್‌ನಲ್ಲಿ ಎಐಡಿವೈಒ ಸಂಘಟನೆಯ ನೇತೃತ್ವದಲ್ಲಿ ನೇತಾಜಿ ಸುಭಾಸಚಂದ್ರ ಬೋಸ್‌ರವರ 127ನೇ ಜನ್ಮದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ಇಂದಿನ ಯುವಜನರಿಗೆ ನೇತಾಜಿಯವರ ಜೀವನ ಚರಿತ್ರೆ ಆದರ್ಶವಾಗಿರಬೇಕು.  ನೇತಾಜಿಯವರು ಜೀವನದುದ್ದಕ್ಕೂ ಸಂಧಾನತೀತವಾಗಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದರು.  ಎರಡು ಬಾರಿ ಕಾಂಗ್ರೆಸ್ ಸಮ್ಮೇಳನದ ಅಧ್ಯಕ್ಷರಾಗಿ ಪೂರ್ಣ ಸ್ವರಾಜ್ಯದ ಬಗ್ಗೆ ಹಾಗೂ ಕಾರ್ಮಿಕ ವರ್ಗ ಅಧಿಕಾರಕ್ಕೆ ಬರಬೇಕು ಎಂದು ಸ್ಪಷ್ಟವಾದ […]

ಆರೋಗ್ಯ ಎಲ್ಲ ಸಂಪತ್ತಿಗಿಂತ ದೊಡ್ಡದು- ಹಿಟ್ಟಿನಹಳ್ಳಿ ಕೃಷಿ ಕಾಲೇಜಿನ ವಿದ್ಯಾಧಿಕಾರಿ ಡಾ. ಭೀಮಪ್ಪ

ವಿಜಯಪುರ: ಮನುಷ್ಯನಿಗೆ ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ಬಹಳ ದೊಡ್ಡದು.  ಅದನ್ನು ಸರಿಯಾಗಿ ಕಾಯ್ದುಕೊಳ್ಳಬೇಕೆಂದು ವಿಜಯಪುರ ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ. ಬೀಮಪ್ಪ ಹೇಳಿದರು. ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರ. ಜಿಲ್ಲಾ ಆಡಳಿತ. ಜಿಲ್ಲಾ ಪಂಚಾಯಿತಿ. ಹಿಟ್ಟಿನಹಳ್ಳಿ ಕೃಷಿ ಮಹಾವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ. ಜಿಲ್ಲಾ ಆಸ್ಪತ್ರೆ ಪಿಪಿಟಿಸಿಟಿ ವಿಭಾಗ ವಿಜಯಪುರ. ಇವುಗಳ ಸಂಯುಕ್ತ ಆಶ್ರಯದಲ್ಲಿ ಎರಡನೇ ಹಂತದ ಸಮುದಾಯ ಆಧಾರಿತ ಆರೋಗ್ಯ […]