ರಾಮ ಮಂದಿರ ಉದ್ಘಾಟನೆ ಬಳಿಕ ವಿಶ್ವದಲ್ಲಿ ಹಿಂದುಯುಗ ಪ್ರಾರಂಭವಾಗಲಿದೆ- ಕಾಂಗ್ರೆಸ್ ಕೌರವರು, ರಾವಣನ ಪಾತ್ರ ವಹಿಸುತ್ತಿದೆ- ಶಾಸಕ ಯತ್ನಾಳ ವಾಗ್ದಾಳಿ

ವಿಜಯಪುರ: ರಾಮ ಮಂದಿರ ಉದ್ಘಾಟನೆ ಬಳಿಕ ಜಗತ್ತಿನಲ್ಲಿ ಹಿಂದುಯುಗ ಪ್ರಾರಂಭವಾಗಲಿದೆ. ವಿಶ್ವ ಹಿಂದೂಮಯವಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರುವ ಕ್ರಮವನ್ನು ಅವರು ಕಟುವಾಗಿ ಟೀಕಿಸಿದರು. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರದಲ್ಲಿ ಶಂಕರಾಚಾರ್ಯ ಪೀಠಗಳ ವಿರೋಧ ವಿಚಾರ ಅವರವರಿಗೆ ಬಿಟ್ಟದ್ದು. ಒಂದು ತಿಳಿದುಕೊಳ್ಳಿ. ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಬಳಿಕ ದೇಶದಲ್ಲಿ ಹೊಸ ಹಿಂದೂ ಯುಗ […]
ಸಿಂದಗಿಯಲ್ಲಿ ಸಿಗರೇಟ್ ಕಳ್ಳತನ ಪ್ರಕರಣ- ಓರ್ವನನ್ನು ಬಂಧಿಸಿದ ಪೊಲೀಸರು- ನಿಟ್ಟುಸಿರು ಬಿಟ್ಟ ವಾರದ ಕುಟುಂಬ

ವಿಜಯಪುರ: ಸಿಂದಗಿ ಪಟ್ಟದಲ್ಲಿ ಕಳೆದ ವರ್ಷ ಡಿಸೆಂಬರ್ 24 ರಂದು ನಡೆದ ಸುಮಾರು ರೂ. 42 ಲಕ್ಷ ಮೌಲ್ಯದ ಸಿಗರೇಟ್ ಕಳ್ಳತನ ಪ್ರಕರಣವನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 24 ರಂದು ನಡೆದಿದ್ದ ಮತ್ತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣವನ್ನು ಎಸ್ಪಿ ಋಷಿಕೇಶ ಸೋನಾವಣೆ ಅವರು ಗಂಭೀರವಾಗಿ ಪರಿಗಣಿಸಿದ್ದರು. ಅದವರ ಸೂಚನೆಯಂತೆ ನಡೆದ ಕಾರ್ಯಾಚರಣೆಯ ಬಳಿಕ ಇದೀಗ ಈ ಪ್ರಕರಣವನ್ನು ಸಿಂದಗಿ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣ ಸಂಬಂಧ ರಾಜಸ್ತಾನದ ಜಿತೇಂದ್ರಕುಮಾರ ಮಾಂಗಿಲಾಲ್ ಗೆಹ್ಲೊಟ್(26) […]
ವಿಜಯಪುರ ನಗರದ ಶ್ರೀ ಶಿವಾಜಿ ಮಹಾರಾಜ ಸೊಸಾಯಿಟಿಯಲ್ಲಿ ರಾಜಮಾತಾ ಜೀಜಾವು, ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ವಿಜಯಪುರ: ನಗರದ ಶ್ರೀ ಶಿವಾಜಿ ಮಹಾರಾಜ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಯಲ್ಲಿ ರಾಜಮಾತಾ ಜೀಜಾವು ಮತ್ತು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಪ್ರಾಧಾಪ್ಯಕ ಡಾ. ಸದಾಶಿವ ಪವಾರ, ರಾಜಮಾತಾ ಜೀಜಾವು ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರಿಗೆ ಬಾಲ್ಯದಿಂದಲೂ ಯುದ್ಧ ಕೌಶಲ್ಯಗಳು ಮತ್ತು ಹಿಂದು ಧರ್ಮದ ರಕ್ಷಣೆಯ ಕುರಿತು ನೀತಿ ಪಾಠಗಳನ್ನು ಹೇಳುತ್ತಿದ್ದರು. ಅವರ ಪಾಠಗಳ ಪ್ರೇರಣೆಯಿಂದಲೇ ಛತ್ರಪತಿ ಶಿವಾಜಿ ಮಹಾರಾಜರು ಹಿಂದು ಧರ್ಮಕ್ಕಾಗಿ ಶ್ರಮಿಸಿದರು ಎಂದು ಹೇಳಿದರು. ಸ್ವಾಮಿ ವಿವೇಕಾನಂದರು […]
ವಿಜಯಪುರ ಜಿಲ್ಲಾ ಮಟ್ಟದ ಥ್ರೊಬಾಲ್ ಚಾಂಪಿಯನ್ ಆದ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು- ರಾಜ್ಯ ಮಟ್ಟಕ್ಕೆ ಆಯ್ಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಎಬಿವಿಪಿ ವಿಜಯಪುರ ಘಟಕ ಆಯೋಜಿಸಿದ್ದ ಜಿಲ್ಲಾ ಮಟ್ಟದ ಥ್ರೊಬಾಲ್ ವಿವೇಕ್ ಟ್ರೊಫಿ-2024 ಪಂದ್ಯಾವಳಿಯನ್ನು ಗೆದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಜ್ಞಾನ-ಶೀಲ-ಏಕತೆ ಸಾರಿದ ಸ್ವಾಮಿ ವಿವೇಕಾನಂದರ ಜಯಂತಿ ಸಾಕ್ಷೀಕರಿಸಲು ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವ ಪೀಳಿಗೆಯ ಸರ್ವಾಂಗೀಣ ಅಭಿವೃದ್ದಿಗಾಗಿ ಎಬಿವಿಪಿ ವಿಜಯಪುರ ಘಟಕ ಖೇಲೋ ಭಾರತ ಅಡಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಜನೇವರಿ 10 ರಂದು ಗುರುವಾರ ನಗರದ ಡಾ. ಬಿ.ಆರ್.ಅಂಬೇಡ್ಕರ […]
ಹಂಚನಾಳ ಕೆರೆ ಸೇರಿದಂತೆ ನಾನಾ ಸ್ಥಳಗಳಿಗೆ ಡಿಸಿ, ಪೌರಾಯುಕ್ತರ ಭೇಟಿ- ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹಂಚನಾಳ ಕೆರೆ ಸೇರಿದಂತೆ ವಿಜಯಪುರ ನಗರದ ನಾನಾ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆ ವ್ಯಾಪ್ತಿಯ ಇಂಡಿ ರಸ್ತೆಯಲ್ಲಿರುವ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಸ ಪ್ರತ್ಯೇಕಿಸುವ ಯಂತ್ರದ ಅಳವಡಿಕೆಯ ಯಂತ್ರದ ಅಳವಡಿಕೆ ಕೆಲಸವನ್ನು ಬೇಗನೆ ಪೂರ್ಣಗೊಳಿಸಬೇಕು. ಈ ಸ್ಥಳದಲ್ಲಿರುವ ಘನ ತ್ಯಾಜ್ಯವನ್ನು ಕೂಡಲೇ ವಿಲೇವಾರಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಸುತ್ತಮುತ್ತಲಿನ ಗಿಡ ಮರಗಳಿಗೆ ಬೇಸಿಗೆ […]
ಬಬಲೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ

ವಿಜಯಪುರ: ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಬಬಲೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶೀತಲ ಕಿಣಗಿ ಅವರು, ಎಲ್ಲ ಗರ್ಭಿಣಿ ಮಹಿಳೆಯರು ಎಚ್ಐವಿ, ಎಚ್‌ಬಿಎಸ್‌ಎಜಿ, ಸಿಫಿಲ್ಸ್ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಏಡ್ಸ್ ಪ್ರೇವೆನ್ಶನ್ ಸೊಸೈಟಿ ವತಿಯಿಂದ ಒಳ್ಳೆಯ ಕಾರ್ಯಕ್ರಮ ಮಾಡುತ್ತಿದ್ದಾರೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿಯೊಬ್ಬರಿಗೂ ಜನಜಾಗೃತಿ ಬಹಳ ಮುಖ್ಯವಾಗಿದೆ. ಆಶಾ ಕಾರ್ಯ ಕರ್ತೆಯರು ಮನೆ ಮನೆಗೆ ಹೋಗಿ ನಿರಂತರವಾಗಿ ಮಾಹಿತಿಯನ್ನೂ ನೀಡಬೇಕು. ಮೊದಲನೆಯ ತ್ರೈಮಾಸಿಕದಲ್ಲಿ […]
ಬೆಂಗಳೂರು ಜೈಲಿನಿಂದ ಬಿಡುಗಡೆಯಾಗಿ ಬಂದ ಕರವೇ ಮುಖಂಡರಿಗೆ ಗುಮ್ಮಟ ನಗರಿಯಲ್ಲಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

ವಿಜಯಪುರ: ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ನಡೆದ ಹೋರಾಟದಲ್ಲಿ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ಜೊತೆ ಬಂಧಿತರಾಗಿ ಜೈಲು ಸೇರಿದ್ದ ವಿಜಯಪುರ ಜಿಲ್ಲಾಧ್ಯಕ್ಷ ಎಂ. ಸಿ. ಮುಲ್ಲಾ ಮತ್ತು ಉಪಾಧ್ಯಕ್ಷ ಮಹಾದೇವ ರಾವಜಿ ಅವರು ನಗರಕ್ಕೆ ಮರಳಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರಿದಂ ಅವರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಎಂ. […]
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಜವಾಬ್ದಾರಿಯಿಂದ […]
ಅಥಣಿ ಶ್ರೀ ಮೋಟಗಿಮಠದ ಬಸವಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಎಂ. ಎಸ್. ಮದಭಾವಿಗೆ ಅಭಿನಂದನೆಗಳ ಮಹಾಪೂರ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಡಾ. ಎಂ. ಎಸ್. ಮದಭಾವಿ ಅವರಿಗೆ ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿಮಠ ಈ ವರ್ಷದ ಬಸವಭೂಷಣ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಉತ್ತರ ಕರ್ನಾಟಕದ ಗಡಿಯಲ್ಲಿರುವ ಶ್ರೀ ಮೋಟಗಿಮಠವು ಶತಮಾನಗಳಿಂದ ನಾಡು, ನುಡಿ, ಸಂಸ್ಕೃತಿ ಸಂವರ್ಧನೆಗಾಗಿ ಶ್ರಮಿಸುತ್ತ ಬಂದಿದೆ. ಪ್ರತಿವರ್ಷ ಶರಣಸಂಸ್ಕೃತಿ ಗಡಿನಾಡ ನುಡಿಹಬ್ಬ ಆಚರಿಸುವ ಈ ಮಠ ಗಡಿಯಲ್ಲಿ ಕನ್ನಡದ ಏಳಿಗೆಗಾಗಿ ಶ್ರಮಿಸುತ್ತಿದೆ. ಭಾಷಾ ಭಾವೈಕ್ಯತೆ, ಧರ್ಮ, […]
ತ್ಯಾಗವೀರ, ಜ್ಞಾನದಾಸೋಹಿ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಸಮಾಜಮುಖಿ ಕಾರ್ಯಗಳಿಗಾಗಿ ಸರ್ವಸ್ವ ತ್ಯಾಗ ಮಾಡಿದ್ದಾರೆ- ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ

ವಿಜಯಪುರ: ತ್ಯಾಗವೀರ, ಜ್ಞಾನ ದಾಸೋಹಿ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರು ಸಮಾಜಮುಖಿ ಕೆಲಸಗಳಿಗಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ ಎಂದು ಕವಲಗಿ ಕೂಡವಕ್ಕಲಿಗ ಮಠದ ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರ 163ನೇ ಜಯಂತಿ ಮತ್ತು ಶ್ರೀ ಸಿರಸಂಗಿ ಲಿಂಗರಾಜ ವೃತ್ತ ಉದ್ಗಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರು ಅಂದಿನ ಕಾಲದಲ್ಲಿ ರಾಜ್ಯದಲ್ಲಿ […]