ವಿಜಯಪುರಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಭೇಟಿ- ಸ್ವಾಗತಕ್ಕೆ ಸಜ್ಜಾದ ಕಾರ್ಯಕರ್ತರು

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಶಾಸಕ ಬಿ. ವೈ. ವಿಜಯೇಂದ್ರ ಇದೇ ಮೊದಲ ಬಾರಿಗೆ ಬಸವ ನಾಡು ವಿಜಯಪುರ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.  ಮೊದಲಿಗೆ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರಕ್ಕೆ ಭೇಟಿ ನೀಡಲಿರುವ ಅವರು, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಬಬಲೇಶ್ವರ ಮತ್ತು ಬೀಳಗಿ ತಾಲೂಕು ಘಟಗಳು ಆಯೋಜಿಸಿರುವ ವಿಜಯಪುರ ಮತ್ತು ಬಾಗಲಕೋಟೆ ದಿಲ್ಲೆ ಬಣಜಿಕ ಸಮಾಜದ ಸಂಘಟನಾ ಸಮಾವೇಶ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಬಣಜಿಗ […]

ಎ.ಎಸ್.ಪಿ ಕಾಮರ್ಸ್ ಕಾಲೇಜಿನಲ್ಲಿ ಬಿಬಿಎ ವಿಭಾಗದಿಂದ ಮಂಚಾ-ಮಚ್ಚಾ ವೃತ್ತಿಪರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಿ. ಕಾಮರ್ಸ್ ಕಾಲೇಜಿನ ಬಿಬಿಎ ವಿಭಾಗ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿದ್ದ ಜಿಲ್ಲಾ ಮಟ್ಟದ ಮಂಚ್- ಮಚ್ಚಾ ವೃತ್ತಿಪರ ಸ್ಪರ್ಧೆಯಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವರಣದಲ್ಲಿರುವ ಬಿಬಿಎ ಕಾಲೇಜಿನಲ್ಲಿ ನಡೆದ ಈ ವೃತ್ತಿಪರ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್, ಟೀಮ್ ಬಿಲ್ಡಿಂಗ್, ರಸಪ್ರಶ್ನೆ, ಅಡುಗೆ, ಛಾಯಾಚಿತ್ರ ಸ್ಪರ್ಧೆಗಳು ನಡೆದವು.  ಜಿಲ್ಲೆಯ ನಾನಾ ಭಾಗಗಳಿಂದ 29 ಪಿಯು […]

ವಿಜಯಪುರ ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ

ವಿಜಯಪುರ: ಜ್ಞಾನಪೀಠ ಪುರಸ್ಕೃತ ಕನ್ನಡದ ಮೊದಲ ಸಾಹಿತಿ, ಕನ್ನಡ ನಾಡು-ನುಡಿಗೆ ತಮ್ಮ ಜೀವನವ ಮುಡಿಪಾಗಿಟ್ಟು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ರಾಷ್ಟ್ರ ಕವಿ, ವಿಶ್ವ ಮಾನವರಾಗಿ ರಾಷ್ಟ್ರದಲ್ಲಿ ತಮ್ಮ ಸಾಹಿತ್ಯ ಸಂಚಲನದಿAದ ಮೆರಗು ನೀಡಿ ರಾಷ್ಟ್ರ ಕವಿ ಎನಿಸಿಕೊಂಡವರು ಕುವೆಂಪು ಅವರು ಮಾತ್ರ ಎಂದು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು […]

ಯುರೊ ಕಿಡ್ಸ್ ಪ್ರೀ ಸ್ಕೂಲ್ ವತಿಯಿಂದ ಮಕ್ಕಳು, ಪೋಷಕರಿಗೆ ವಾರ್ಷಿಕ ಕ್ರೀಡಾಕೂಟ

ವಿಜಯಪುರ: ನಗರದ ಘೇವರಚಂದ ಕಾಲನಿಯಲ್ಲಿರುವ ಯುರೋ ಕಿಡ್ಸ್ ಪ್ರೀ ಸ್ಕೂಲಿನ ಮಕ್ಕಳು ಮತ್ತು ಪೋಷಕರಿಗಾಗಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶ್ರೀ ಶಿವಾಜಿ ಕೋ-ಆಪ್. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸಂಜಯ ವಿ. ಜಾಧವ ಕ್ರೀಡಾಕೂಟ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಶಾಲೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ಆರೋಗ್ಯದ ದೃಷ್ಟಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ತುಂಬಾ ಮುಖ್ಯವಾಗಿದೆ.  ಪೋಷಕರು ಮತ್ತು ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯೆಯ ಜೊತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮಕ್ಕಳು […]

ಡಾ. ಬಿ. ಆರ್. ಅಂಬೇಡ್ಕರ ಅವರ ಬದುಕು, ಸಾಧನೆ: ವಿಶೇಷ ಉಪನ್ಯಾಸಕ ಕಾರ್ಯಕ್ರಮ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಓದು ಎಂಬ ಡಾ. ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿಶೇಷ ನಗರದ ದರಬಾರ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ. ವಿ. ಬಿ. ಗ್ರಾಮ ಪುರೋಹಿತ ಅವರು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರಲ್ಲಿನ ಓದಿನ ಹಂಬಲ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಪ್ರಾಚಾರ್ಯ […]

ಗ್ರಾಂ. ಪಂ. ಸದಸ್ಯರ ಹಿತರಕ್ಷಣೆಯೇ ಸದಾ ಸಿದ್ಧನಿದ್ದೇನೆ- ಎಂಎಲ್‌ಸಿ ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರ ಹಿತ ಕಾಪಾಡಲು ಸದಾ ಸಿದ್ಧನಿರುತ್ತೇನೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಇಂದು ಗುರುವಾರ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಆಶ್ರಯದಲ್ಲಿ 2023-24ನೇ ವರ್ಷದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವ ಧನ ಹೆಚ್ಚಳಕ್ಕೆ ಸದನದ ಒಳಗೆ […]

ಮುಂದಿನ ವರ್ಷ ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ- ದಿನಾಂಕ ಯಾವುದು ಗೊತ್ತಾ?

ವಿಜಯಪುರ: ಬಹುನಿರೀಕ್ಷಿತ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.  ಕಾರ್ಪೋರೇಟರ್ ಗಳಾಗಿ ಆಯ್ಕೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ ಮೇಯರ್ ಮತ್ತು ಉಪಮೇಯರ್ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಈ ಹಿಂದೆ ಮೂರ್ನಾಲ್ಕು ಬಾರಿ ಚುನಾವಣೆ ದಿನಾಂಕ ನಿಗದಿಯಾಗಿತ್ತು.  ಆದರೆ, ನಾನಾ ಕಾರ್ಪೋರೇಟರ್ ಗಳು ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ನಿಗದಿಯಾಗಿರುವ ಮೀಸಲಾತಿ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು.  ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ […]

ಭೀಮಾ ತೀರದ ಚಡಚಣ ಪ. ಪಂ. ಚುನಾವಣೆ- ಶೇ. 73.93 ಮತದಾನ- ಡಿ. 30 ರಂದು ಶನಿವಾರ ಬೆಳಿಗ್ಗೆ 8.30ರೊಳಗೆ ಎಲ್ಲ ಫಲಿತಾಂಶ ಪ್ರಕಟ ನಿರೀಕ್ಷೆ

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಶೇ. 73.93 ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದು, ಶಾಂತಿಯುತ ಮತದಾನ ನಡೆದಿದೆ. ಚಡಚಣ ಪಟ್ಟಣ ಪಂಚಾಯಿಯ 16 ವಾರ್ಡುಗಳಿಗೆ ಚುನಾವಣೆ ನಡೆಯುತ್ತಿದ್ದು, 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಬೆಳಿಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಒಟ್ಟು 16080 ಮತದಾರಲ್ಲಿ 11888 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.  ಇವರಲ್ಲಿ ಒಟ್ಟು 8062 ಪುರುಷರಲ್ಲಿ 6020 ಮತ್ತು 8018 ಮಹಿಳೆಯರಲ್ಲಿ 5868 ಮತದಾರರು ತಮ್ಮ ಹಕ್ಕು […]

ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ- ಡಿ. 29ರ ಸಭೆ ರದ್ದು ಪಡಿಸಬೇಕು- ಮಾಜಿ ಎಂಎಲ್ಸಿ ಅರುಣ ಶಹಾಪುರ

ವಿಜಯಪುರ: ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ.  ಹೀಗಾಗಿ ಡಿಸೆಂಬರ್ 29 ರಂದು ಈ ಕುರಿತು ಕರೆಯಲಾದ ಸಭೆಯನ್ನು ರದ್ದು ಪಡಿಸಬೇಕು ಎಂದು ವಿಧಾನ ಪರಿಷತ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ನೂತನ ಜಿಲ್ಲೆ ಮಾಡುವ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಸಿಂದಗಿ ತಹಸೀಲ್ದಾರರು ಡಿಸೆಂಬರ್ 29 ರಂದು ಸಭೆ ಕರೆದಿದ್ದಾರೆ.  ಇದು ಸರಿಯಲ್ಲ.  ಸರಕಾರ ವಿಜಯಪುರ ಜಿಲ್ಲೆಯನ್ನು ವಿಭಜಿಸುವ ಪ್ರಸ್ತಾಪ ಹೊಂದಿದೆಯೇ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು […]

ಭ್ರಷ್ಚಾಚಾರ ಆರೋಪ- ಶಾಸಕರ ವಿಚಾರಣೆ ನಡೆಸಬೇಕು- ಬಿಜೆಪಿ ನಾಯಕರ ಮೌನ, ಸಮ್ಮತಿ ಲಕ್ಷಣಂ ಎಂಬಂತಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಬಿಜೆಪಿ ಸರಕಾರದ ಅವಧಿಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ರೂ. 40 ಸಾವಿರ ಕೋ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಿಚಾರಣೆ ನಡೆಸಿ ಮತ್ತಷ್ಟು ಸತ್ಯಾಂಶ ಹೊರಬರಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರ ಹೇಳಿಕೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು.  ಈ ಕುರಿತು ಯತ್ನಾಳ ಅವರನ್ನು ವಿಚಾರಣೆ ನಡೆಸಿದರೆ ಮತ್ತಷ್ಟು ಸತ್ಯಾಂಶ ಹೊರಬರಲಿದೆ.  ಹೀಗಾಗಿ […]