ಜಮೀರ್ ಅಹ್ಮದ್ ಜೊತೆಗುಡಿ ಹಾದಿ ಬಿಟ್ಟಿದ್ದಾರೆ- ಕಾಶಿ ಮಥುರಾ ದೇವಸ್ಥಾನಗಳೂ ನಮ್ಮ ಪಾಲಾಗಲಿವೆ- ಶಾಸಕ ಯತ್ನಾಳ ವಾಗ್ದಾಳಿ

ವಿಜಯಪುರ: ಸಿಎಂ ಎಸ್. ಸಿದ್ಧರಾಮಯ್ಯ ಅವರು ಜಮೀರ್ ಅಹ್ಮದ್ ಜೊತೆಗೂಡಿ ಹಾದಿ ಬಿಟ್ಟಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ವಿಜಯಪುರ ನಗರದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಗಳ ಜೊತೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ ವಿಮಾನದಲ್ಲಿ ಪ್ರಯಾಣ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ […]
ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರಕಾರ ಸ್ಪಂದಿಸಬೇಕು: ಸಂಗಮೇಶ ಬಬಲೇಶ್ವರ

ವಿಜಯಪುರ: ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂ ಮಾಡುವಂತೆ ಕಳೆದ 29 ದಿನಗಳಿಂದ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರಕಾರ ಶೀಘ್ರ ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ. ನಗರದಲ್ಲಿ ಜಿಲ್ಲಾಧಿಕಾರಿ ಆವರಣದ ಬಳಿ ಕಳೆದ 29 ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಪನ್ಯಾಸಕರನ್ನು ಭೇಟಿ ಮಾಡಿ ಅವರ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ಕಳೆದ 20 ವರ್ಷದಿಂದ ಸಾವಿರ ರೂಪಾಯಿ […]
ಜ. 15ರೊಳಗೆ ಸೈಕ್ಲಿಂಗ್ ವೆಲೊಡ್ರಂ ಕಾಮಗಾರಿ ಪೂರ್ಣಗೊಳಿಸಿ: ಸಿಇಓ ರಾಹುಲ್ ಶಿಂಧೆ ಸೂಚನೆ

ವಿಜಯಪುರ: ವಿಜಯಪುರ ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಇದೇ ಜನವರಿ 15ರೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್ ವೆಲೋಡ್ರಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೈಕ್ಲಿಂಗ ವೆಲೊಡ್ರೊಂ ಕಾಮಗಾರಿಯು ಆರಂಭವಾಗಿ ಬಹಳ ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಈ ಭಾಗದ ಸೈಕ್ಲಿಸ್ಟ್ ಗಳಿಗೆ ತೊಂದರೆಯಾಗುತ್ತಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಥಮಾಧ್ಯತೆಯಲ್ಲಿ ಬಾಕಿ ಉಳಿದ ಕಾಮಗಾರಿಯನ್ನು […]
ವೃಕ್ಷಾಥಾನ್ ಹೆರಿಟೇಜ್ ರನ್- 2023: ಯಾವ ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತೆ? ಪ್ರಶಸ್ತಿ ಮೊತ್ತವೇನಿದೆ? ಇಲ್ಲಿದೆ ಮಾಹಿತಿ

ವಿಜಯಪುರ: ಗುಮ್ಮಟ ನಗರಿಯಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಎರಡೇ ದಿನ ಬಾಕಿ ಉಳಿದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈಗಾಗಲೇ ಪ್ರಶಸ್ತಿ ಮೊತ್ತ, ಮಾರ್ಗ, ಪದಕಗಳನ್ನು ಅಂತಿಮಗೊಳಿಸಲಾಗಿದ್ದು, ಶನಿವಾರ ಬಿಬ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು. ಈ ಬಾರಿ ಒಟ್ಟು ರೂ. 10 ಲಕ್ಷ ಬಹುಮಾನ ನಿಗದಿ ಪಡಿಸಲಾಗಿದ್ದು, ನಾಲ್ಕು ಕೆಟೆಗರಿಯಲ್ಲಿ ಒಟ್ಟು ತಲಾ 38 ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್- […]
ನಗರವನ್ನು ಸ್ವಚ್ಚ ಹಾಗೂ ಸುಂದರವನ್ನಾಗಿಸಿ – ಲೋಕಾಯುಕ್ತ ಎಸ್. ಪಿ ಹಣಮಂತರಾಯ

ವಿಜಯಪುರ: ಜಿಲ್ಲೆಯು ಐತಿಹಾಸಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿದ್ದು, ಇದೊಂದು ಪ್ರವಾಸಿ ತಾಣವಾಗಿದೆ. ದೇಶ- ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದು, ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಲೋಕಾಯುಕ್ತ ಎಸ್ಪಿ ಹನಮಂತರಾಯ ಹೇಳಿದ್ದಾರೆ. ನಗರದ ಸೆಟ್‌ಲೈಟ್ ಬಸ್ ನಿಲ್ದಾಣ, ಶಿವಾಜಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಕೋರ್ಟ್, ಗಗನ ಮಹಲ್ ಹಾಗೂ ಎಪಿಎಸಿ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು. ಸೆಟ್‌ಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಗೋಡೆ ಆವರಣ ಸುತ್ತಲೂ ನಾನಾ ಗಿಡ ಮರಗಳ […]
ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶ- ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿಕೊಳ್ಳf- ಟಿ. ಭೂಬಾಲನ ಕರೆ

ವಿಜಯಪುರ: ನಮ್ಮ ಜಿಲ್ಲೆಯು ಪ್ರಮುಖವಾಗಿ ಕೃಷಿ ಆಧಾರಿತವಾಗಿದೆ. ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರವನ್ನು ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. […]
ವಿಜಯಪುರದಲ್ಲಿ ಮಾನವ ಹಕ್ಕು, ಪೋಕ್ಸೋ ಕುರಿತು ಕಾನೂನು ಅರಿವು ಕಾರ್ಯಕ್ರಮ

ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ತುಂಗಳ ಪಿಯು ಕಾಲೇಜ್‌ನಲ್ಲಿ ಮಾನವ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಈ ಅರಿವು ಕಾರ್ಯಕ್ರಮದಲ್ಲಿ ಕಾಲೇಜಿನ 350 ವಿದ್ಯಾರ್ಥಿ- ವಿದ್ಯಾಥಿನಿಯರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಕಾನೂನಿನ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ […]
ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ಧರಾಮಯ್ಯ- ಬರ ಪರಿಹಾರ ಶೀಘ್ರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ ರೂ. 18177.44 ಕೋ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ ರೂ. 4663.12 ಕೋ. ಇನ್‌ಪುಟ್ ಸಬ್ಸಿಡಿ, ರೂ. 12,577.86 ಕೋ. ತುರ್ತು ಪರಿಹಾರ, ರೂ. 566.78 ಕೋ. ಕುಡಿಯುವ ನೀರಿಗಾಗಿ ಹಾಗೂ ರೂ. 363.68 ಕೋ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, […]
ವಿಜಯ ದಿವಸ ಕಾರ್ಯಕ್ರಮ: ದೇಶಕ್ಕೆ ವೀರ ಯೋಧರ ಕೊಡುಗೆ ಅಪಾರ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಇಂಡೋ-ಪಾಕ್ 1971ರ ಯುದ್ಧದಲ್ಲಿ ಭಾಗವಹಿಸಿದ ಕೊಡುಗೆ ಯೋಧರು ಇಂದಿನ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನಮ್ಮೆಲ್ಲರಿಗೂ ಹೆಮ್ಮೆ ಹಾಗೂ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಸೈನಿಕ ಶಾಲೆಯ ಸಭಾಭವನದಲ್ಲಿ ಇತ್ತಿಚೆಗೆ ನಡೆದ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ, ಯುದ್ಧದಲ್ಲಿ ಪಾಲ್ಗೊಂಡ ಯೋಧರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸೈನಿಕ ಶಾಲೆಯ ಪ್ರಾಂಶುಪಾಲರಾದ […]
Vrukshothon: ವೃಕ್ಷಥಾನ್ ಹೆರಿಟೇಜ್ ರನ್- 2023: ರೂ. 10 ಲಕ್ಷ ಪ್ರಾಯೋಜಕತ್ವ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಕೋಟಿವೃಕ್ಷ ಅಭಿಯಾನ(Crore Tree Planting) ಅಂಗವಾಗಿ ಡಿಸೆಂಬರ್ 24(December 24) ರವಿವಾರ(Sunday) ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2023(Vrukshoton Heritage Run-2023) ಪ್ರೊತ್ಸಾಹಿಸಲು ವಿಜಯಪುರ ನಗರ ಶಾಸಕ(Vijayapura City MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal)ರವರು ರೂ. 10 ಲಕ್ಷ ಪ್ರಾಯೋಜಕತ್ವ(Rs. 10 Lakh Sponsorship) ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು, ಮರಗಳನ್ನಾಗಿ ಬೆಳೆಸಿ, ಅರಣ್ಯ ಪ್ರಮಾಣ ಹೆಚ್ಚಿಸುವುದು. ವಿಜಯಪುರ ನಗರದಲ್ಲಿನ ವಿವಿಧ ಐತಿಹಾಸಿಕ ಸ್ಮಾರಕಗಳ ಕುರಿತು ಜಾಗೃತಿ ಮೂಡಿಸಿ, ಹೆಚ್ಚಿನ ಪ್ರವಾಸಿಗರನ್ನು ಆರ‍್ಷಿಸಿ, […]