ವೃಕ್ಷತ್ಥಾನ್ ಹೆರಿಟೇಜ್ ರನ್- 2023: ಸಾರ್ವಜನಿಕರು, ಸಂಘ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಕೈ ಜೋಡಿಸಿ ಯಶಸ್ವಿಗೊಳಿಸಿ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವವಹನ್ನು ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ನಗರದಲ್ಲಿ ಡಿ. 24ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್- 2023ನ್ನು ಜಿಲ್ಲೆಯ ನಾನಾ ಸಂಘ ಸಂಸ್ಥೆಗಳ ಸಹಾಯ, ಸಹಕಾರದೊಂದಿಗೆ ಯಶಸ್ವಿಯಾಗಿ ಆಯೋಜಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ,  ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.   ನಗರದ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಾನಾ ಸಂಘ- ಸಂಸ್ಥೆಗಳೊಂದಿಗೆ […]

ಮೂರು ರಾಜ್ಯಗಳಲ್ಲಿ ಗೆಲುವು ಹಿನ್ನೆಲೆ- ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ವಿಜಯಪುರ: ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ವಿಜಯಪುರ ಗ್ರಾಮದೇವತೆ ಶ್ರೀ ಸಿದ್ದೇಶ್ವರ ಗುಡಿಯ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ನೇತೃತ್ವದಲ್ಲಿ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಬಿಜೆಪಿ ಪರ ಘೋಷಣೆ ಹಾಕಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್. ಎಸ್. ಪಾಟೀಲ ಕೂಚಬಾಳ, ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸಘಢ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, […]

ಗ್ರಾಮ-ನಗರ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯ- ಜಿ. ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

ವಿಜಯಪುರ: ಗ್ರಾಮ ನಗರ ಸ್ವಚ್ಛತೆಯನ್ನು ಹೆಚ್ಚಿಸುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಸಮಾಜದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ನಗರಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ವತಿಯಿಂದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರಿಗೆ ಇ.ಎಸ್.ಐ, ಪಿಎಫ್ ವಿಮೆ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ […]

ವಿಜಯಪುರ ಜಿಲ್ಲೆಯ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಲ್ಲಿ ಕಾರ್ಯನಿರ್ವಹಿಸುತ್ತಿರುವ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ವಿತರಣೆ ಮಾಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಂದ ನೇಮಕಾತಿ ಆದೇಶ ಪಡೆದುಕೊಂಡರು.ಆದೇಶ ಪ್ರತಿ ಪಡೆದ ಪೌರಕಾರ್ಮಿಕರು ಅಪಾರ ಸಂತಸ ವ್ಯಕ್ತಪಡಿಸಿ, ನಮ್ಮ ಬಾಳಿಗೆ ಬೆಳಕು ಕಲ್ಪಿಸಿದ ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳಿಗೆ […]

ಬಸವ ನಾಡಿನಲ್ಲಿ ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ- ಮಠಾಧೀಶರ ಸಾನಿಧ್ಯದಲ್ಲಿ ಬಂದು ಹರಸಿದರು ಲಕ್ಷಾಂತರ ಜನ

ವಿಜಯಪುರ:ಬಸವ ನಾಡಿನಲ್ಲಿ ನಡೆಯಿತು ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ.  ಮಠಾಧೀಶರ ಸಾನಿಧ್ಯದ ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಬಂದು ಹರಸಿದರು ಲಕ್ಷಾಂತರ ಜನ.   ಇದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ದಂಪತಿಯ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ನಿರ್ದೇಶಕ ಬಸನಗೌಡ ಪಾಟೀಲ ಹಾಗೂ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದ ಝಲಕ್.  ನಾಡಿನ […]

ದಾಸ ಸಾಹಿತ್ಯಕ್ಕೆ ವೈಚಾರಿಕ ನೆಲೆಗಟ್ಟನ್ನು ಒದಗಿಸಿದ ಸಂತ ಕನಕದಾಸರು- ಸಚಿವ .ಎಂ. ಬಿ. ಪಾಟೀಲ

ವಿಜಯಪುರ: ದಾಸ ಸಾಹಿತ್ಯಕ್ಕೆ ವೈಚಾರಿಕೆ ನೆಲೆಗಟ್ಟನ್ನು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಂತ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಚಿಂತನೆಗಳು ದಾಸ ಸಾಹಿತ್ಯಕ್ಕೆ […]

ನಳಂದ ಕಾಲೇಜಿನ ವಿದ್ಯಾರ್ಥಿ ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಜಯಪರ:  ನಗರದ ನಳಂದಾ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ನವೆಂಬರ್ 24 ಮತ್ತು 25 ರಂದು ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ನಳಂದಾ ಕಾಲೇಜಿನ ಭರಮಪ್ಪ ಸಿದ್ದಲಿಂಗಪ್ಪ ದಳವಾಯಿ 66 ಕೆಜಿ ವಿಭಾಗದಲ್ಲಿ ಪ್ರಥಮ ಸ್ತಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ರಾಕೇಶ ಮಾರುತಿ ದೇವಮನೆ 55 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ […]

ಭ್ರೂಣ ಹತ್ಯೆ, ಮಕ್ಕಳ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ- ಬಿಜೆಪಿಯವರೆಲ್ಲ ಸತ್ಯ ಹರಿಶ್ಚಂದ್ರರಾ? ಎಂ. ಬಿ. ಪಾಟೀಲ ಪ್ರಶ್ನೆ

ವಿಜಯಪುರ: ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಭಾರತೀಯ ಜನತಾ ಪಕ್ಷದ ಮೋರ್ಚಾಗಳಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭ್ರೂಣಹತ್ಯೆ ವಿರುದ್ಧ ಕಿಡಿ‌ ಕಾರಿದರು.  ಅಲ್ಲದೇ, ನಿಗಮ‌, ಮಂಡಳಿ ಆಯ್ಕೆ ವಿಚಾರ ಸಿಎಂ, ಡಿಸಿಎಂ, ಕೆಪಿಸಿಸಿ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಐಟಿ, ಇಡಿ, ಸಿಬಿಐ ಯನ್ನು ತಮ್ಮ‌ ಅನುಕೂಲಕ್ಕೆ ತಕ್ಕಂತೆ‌ ಬಳಸುತ್ತಿದ್ದಾರೆ. ಆ […]

ಶಾಸಕಾಂಗ ಸಭೆಯಲ್ಲಿ ನಾನಷ್ಟೇ ಅಲ್ಲ, ಹಲವಾರು ಶಾಸಕರು ಬಿ. ಆರ್. ಪಾಟೀಲರ ಮಾತಿಗೆ ಸಹಮತ ವ್ಯಕ್ತಪಡಿಸಿದ್ದಾರೆ- ಯಶವಂತರಾಯಗೌಡ ಪಾಟೀಲ

ವಿಜಯಪುರ: ನಾನು ಆಳಂದ ಶಾಸಕ ಬಿ. ಆರ್. ಪಾಟೀಲ ಜೊತೆ ಮಾತನಾಡಿಲ್ಲ.  ನನಗೆ ಆ ವಿಷಯ ಗೊತ್ತೂ ಇಲ್ಲ.  ನಾನು ಎರಡ್ಮೂರು ದಿನಗಳಿಂದ ಮತಕ್ಷೇತ್ರದಲ್ಲಿ ಇರಲಿಲ್ಲ.  ತಿಳಿದುಕೊಂಡು ಹೇಳುತ್ತೇನೆ ಎಂದು ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟಪಡಿಸಿದ್ದರೆ.  ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಮತ್ತು ವಿಧಾನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು.  ನಾನು ಓರ್ವ ಹಿರಿಯ ಶಾಸಕರು ವ್ಯಕ್ತಪಡಿಸಿರುವ ಆತಂಕಗಳ ಹಿನ್ನೆಲೆಯಲ್ಲಿ […]

ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಾರೆ- ಸಚಿವ ಕೃಷ್ಣ ಭೈರೇಗೌಡ

ವಿಜಯಪುರ: ಕಲಬುರಗಿ ಜಿಲ್ಲೆಯ ಆಳಂದ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ ಅವರು ತಮ್ಮ ವಿರುದ್ಧ ಬರೆದಿರುವ ಪತ್ರದ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಠ ಭೈರೇಗೌಡ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ಆರ್. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ಶಾಸಕರು ಸಿಎಂ ಗೆ ಪತ್ರ ಬರೆದಿದ್ದಾರೆ.  ಈ ಪತ್ರದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ.  ನಾನು ಸದನದಲ್ಲಿ […]