ಜಿಲ್ಲಾ ಪ್ರವಾಸಿ ತಾಣಗಳಲ್ಲಿ ಬುದ್ಧವಿಹಾರ ಸೇರ್ಪಡೆ- ಯಾತ್ರಿ ನಿವಾಸ ನಿರ್ಮಾಣಕ್ಕೆ ಅನುದಾನ- ಸಚಿವ ಎಚ್. ಕೆ. ಪಾಟೀಲ ವಾಗ್ದಾನ

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿರುವ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಅವರು ನಗರದ ಸಾರಿಪುತ್ರ- ಬೋಧಿಧಮ್ಮ ಬುದ್ಧವಿಹಾರಕ್ಕೆ ಭೇಟಿ ನೀಡಿದರು. ಬುದ್ಧವಿಹಾರ ನಿರ್ಮಾಣ ಸಮಿತಿಯ ಆಡಳಿತ ಮಂಡಳಿಯ ಮನವಿಗೆ ಸ್ಪಂದಿಸಿದ ಸಚಿವ ಎಚ್.ಕೆ. ಪಾಟೀಲ ಅವರು, ಭಂತೆ ಬೋಧಿಧಮ್ಮ ಅವರಿಂದಆಶೀರ್ವಾದ ಪಡೆದು ಮಾತನಾಡಿದರು. ಬಳಿಕ ಮಾತನಾಡಿದ ಅವರು ಹೃದಯ ಭಾಗದಲ್ಲಿರುವ ಬುದ್ಧ ವಿಹಾರವನ್ನು ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಸೇರಿಸುವುದಲ್ಲದೆ ವಿಹಾರದ ಆವರಣದಲ್ಲಿ ಯಾತ್ರಿ ನಿವಾಸ ನಿರ್ಮಿಸಿ ಕೊಡುವುದಾಗಿ ವಾಗ್ದಾನ ಮಾಡಿದರು. ಅಲ್ಲದೇ, ಯಾತ್ರಿ ನಿವಾಸದ […]
ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿ- ಎಚ್. ಕೆ. ಪಾಟೀಲ

ವಿಜಯಪುರ: ಐತಿಹಾಸಿಕ ತಾಣಗಳಿಂದ ಕೂಡಿರುವ ವಿಜಯಪುರ ಜಿಲ್ಲೆಯಲ್ಲಿರುವ ಸ್ಮಾರಕಗಳ ರಕ್ಷಣೆ, ಸಂರಕ್ಷಣೆ ಸೇರಿದಂತೆ ಪ್ರವಾಸೋದ್ಯಮ ಉತ್ತೇಜನಕ್ಕೆ ಪೂರಕವಾಗಿ ಕ್ರಮವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್. ಕೆ. ಪಾಟೀಲ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಭಾರತೀಯ ಪುರಾತತ್ವ ಇಲಾಖೆ, ಕರ್ನಾಟಕ ಪ್ರಾಚ್ಯವಸ್ತು ಸಂಗ್ರಹಾಲಯ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು. ಸ್ಮಾರಕಗಳ ರಕ್ಷಣೆಗೆ ಒತ್ತು ನೀಡಿ, ಸ್ಮಾರಕಗಳಲ್ಲಿ ಸ್ವಚ್ಛತೆಗೆ […]
ನ. 24, 25 ರಂದು ಭಾವಸಾರ ಕ್ಷತ್ರೀಯ ಭವನ ಉದ್ಘಾಟನೆ- ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಭಾಗಿ

ವಿಜಯಪುರ: ನಗರದ ಭಾವಸಾರ ಕ್ಷತ್ರೀಯ ಸಮಾಜದ ನೂತನ ಸಾಂಸ್ಕೃತಿಕ ಭವನ ಉದ್ಘಾಟನೆ ಸಮಾರಂಭ ನ. 24 ಮತ್ತು 25 ರಂದು ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಭಾವಸಾರ ಕ್ಷತ್ರೀಯ ಸಮಾಜದ ಜಿಲ್ಲಾಧ್ಯಕ್ಷ ರಾಜೇಶ ದೇವಗಿರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದ ಬಿಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜ್ ಎದುರಿನ ಆನಂದ ನಗರದಲ್ಲಿ ರೂ. 2.65 ಕೋ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಭಾವಸಾರ ಕ್ಷತ್ರೀಯ ಸಮಾಜದ ಸಾಂಸ್ಕೃತಿಕ ಭವನವನ್ನು ನ.24 ರಂದು […]
ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ನಡೆಸಿದ ಸಚಿವ ಎಚ್. ಕೆ. ಪಾಟೀಲ

ವಿಜಯಪುರ: ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಅವರು ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಬಸ್‌ನ ಮೂಲಕ ಪ್ರವಾಸ ಕೈಗೊಂಡು ವಿಜಯಪುರ ಜಿಲ್ಲೆಯ ನಾನಾ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಿಸಿದರು. ಈ ಸ್ಮಾರಕಗಳಲ್ಲಿ ಅಳವಡಿಸಲಾಗಿರುವ ಕಲೆ, ಶಿಲ್ಪಕಲೆ, ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಕಲೆಯನ್ನು ವೀಕ್ಷಿಸಿ, ಐತಿಹಾಸಿಕ ಸ್ಮಾಕರಗಳ ಸಂರಕ್ಷಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬೆಳಿಗ್ಗೆ ಮುತ್ತಗಿಯಲ್ಲಿರುವ ಸ್ಮಾರಕ ಹಾಗೂ ದೇವಾಲಯಗಳ ವೀಕ್ಷಣೆ ನಡೆಸಿ, ವಿಜಯಪುರಕ್ಕೆ ಆಗಮಿಸಿದ ಸಚಿವರು, […]
ಸೈಕ್ಲಿಂಗ್ ವೆಲೊಡ್ರೊಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ- ಎನ್. ಮಂಜುನಾಥ ಪ್ರಸಾದ ಸೂಚನೆ

ವಿಜಯಪುರ: ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೊಡ್ರೊಂ ಬಾಕಿ ಕಾಮಗಾರಿ ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಸಹಕಾರ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್ ವೆಲೊಡ್ರೊಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕಾಮಗಾರಿಗೆ ಪೂರಕವಾಗಿ ಹೆಚ್ಚುವರಿ ಕಾಮಗಾರಿ ಕೈಗೆತ್ತಿಕೊಳ್ಳಲು ಅವಶ್ಯವಿರುವ ಅನುದಾನ ಕೋರಿ ಸರಕಾರಕ್ಕೆ […]
ದೇಶದ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ- ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ

ವಿಜಯಪುರ: ದೇಶದ ಸಾಮಾಜಿಕ ಮತ್ತು ಆರ್ಥಿಕತೆ ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳ ಸ್ಥಳೀಯ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸೋಲಾಪುರ ರಸ್ತೆಯ ಕಿತ್ತೂರು ಚನ್ನಮ್ಮ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ […]
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ 106ನೇ ಜನ್ಮದಿನ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತರತ್ನ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 106ನೇ ಜನ್ಮದಿನ ಆಚರಿಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ನಾನಾ ಮುಖಂಡರು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ಇಂದಿರಾ ಗಾಂಧಿ ದೇಶದ ಅವರು ಮೊದಲ ಮಹಿಳಾ ಪ್ರಧಾನಿಯಾಗಿ ಬಾಳಿನುದ್ದಕ್ಕೂ ಹೋರಾಡಿ ಭಾರತದ ಸರ್ವತೋಮುಖ ಅಬಿವೃದ್ಧಿ ಮತ್ತು ಐಕ್ಯತೆಗೆ ಶ್ರಮಿಸಿದ ದಿಟ್ಟ, ಉಕ್ಕಿನ ಮಹಿಳೆಯಾಗಿದ್ದಾರೆ. ಸ್ತ್ರೀ ಅಬಲೆಯಲ್ಲ. […]
ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷವಾಗುತ್ತದೆ- ಪತ್ರಕರ್ತ ಕೆ. ಎನ್. ರಮೇಶ

ವಿಜಯಪುರ: ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ಉಂಟಾಗುತ್ತದೆ ಎಂದು ಹಿರಿಯ ಪತ್ರಕರ್ತ ಕೆ. ಎನ್. ರಮೇಶ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ರಾಜ್ಯ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ. ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ. ಪ್ರಶಸ್ತಿಯನ್ನು ಕೇಳಿ ಪಡೆಯುವಂತಾಗಬಾರದು. ಅದು ಸಾಧನೆ ಅರಸಿ […]
ವಿಶ್ವಕಪ್ ಕ್ರಿಕೆಟ್ ಫೈನಲ್- ಪಂದ್ಯ ವೀಕ್ಷಣೆಗೆ ಬೃಹತ್ ಎಲ್ಇಡಿ ಪರದೆ ಅಳವಡಿಸಿದ ಶ್ರೀ ಚಿದಂಬರೇಶ್ವರ ಯುವಕ ಮಂಡಳಿ ಹುಡುಗರು

ವಿಜಯಪುರ: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಭಾರತ- ಆಸ್ಟ್ರೇಲಿಯಾ ಮ್ಯಾಚ್ ವೀಕ್ಷಣೆಗೆ ನಗರದ ಆಲಮಟ್ಟಿ ರಿಂಗ್ ರಸ್ತೆಯಲ್ಲಿರುವ ಶ್ರೀ ಚಿದಂಬರೇಶ್ವರ ನಗರದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದೆ. ಭಾರತ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲಲಿ ಎಂದು ಶುಭ ಹಾರೈಸಿ ರವಿವಾರ ಬೆಳಿಗ್ಗೆ 930ಕ್ಕೆ ಶ್ರೀ ಚಿದಂಬರೇಶ್ವರ ದೇವಸ್ಥಾನದಲ್ಲಿ ಯುವ ಮುಖಂಡ ವಿಜಯ ಜೋಶಿ ಮತ್ತು ಸ್ನೇಹಿತರು ವಿಶೇಷ ಪೂಜೆ ಆಯೋಜಿಸಿದ್ದಾರೆ. ಅಲ್ಲದೇ, ಮಧ್ಯಾಹ್ನ ಪಂದ್ಯ ವೀಕ್ಷಿಸಲು 6 ಅಡಿ ಎತ್ತರ […]
ವಿಶ್ವಪ್ರಕಾಶ ಟಿ ಮಲಗೊಂಡ ನಟನೆಯ ತುಷಾರ ಸಿನೇಮಾ ನಾ ನಿನ್ನ ಕಾವಲುಗಾರ ಹಾಡು ಬಿಡುಗಡೆ

ವಿಜಯಪುರ: ಯುವ ನಟ ವಿಶ್ವಪ್ರಕಾಶ ಮಲಗೊಂಡ ನಟಿಸಿರುವ ಮತ್ತು ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಾಗಿರುವ ತುಷಾರ್ ಸಿನಿಮಾದ ಹಾಡು ನಾ ನಿನ್ನ ಕಾವಲುಗಾರ ಬಿಡುಗಡೆಯಾಗಿದೆ. ಪವನಕುಮಾರ ಬೂದಿಹಾಳ ಅವರು ನಾ ನಿನ್ನ ಕಾಯೋ ಕಾವಲುಗಾರ ಹಾಡಿಗೆ ಸಾಹಿತ್ಯ ರಚಿಸಿದ್ದು, ಮಂಜು ಕವಿ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ. ಹೊಸ ಪ್ರತಿಭೆ ಆರ್ ಜೆ ನವೀನ ಈ ಹಾಡಿಗೆ ಧ್ವನಿಯಾಗಿದ್ದಾರೆ. ದೀಪಾವಳಿ ಹಬ್ಬದ ಅಂಗವಾಗಿ ಚಿತ್ರತಂಡ ಈ ಹಾಡನ್ನು Charvi Music […]