ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉ.ಕ, ಲಿಂಗಾಯಿತ, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದೆ- ಕೂಡಲ ಸಂಗಮ ಸ್ವಾಮೀಜಿ

ವಿಜಯಪುರ: ಬಿಜೆಪಿ ರಾಜ್ಯಾಧ್ಯ್ಕಕ್ಷ ಮತ್ತು ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉತ್ತರ ಕರ್ನಾಟಕ, ಲಿಂಗಾಯಿತ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕನಾಗಿ ಆರ್. ಅಶೋಕ ನೇಮಕಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು. ಬಿಜೆಪಿ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡಿದ್ದಾರೆ ಅದರ ಬಗ್ಗೆ ಮಾತನಾಡುವುದಿಲ್ಲ. […]
ನ. 20ಕ್ಕೆ ಬಸವ ನಾಡಿಗೆ ಸಿಎಂ ಸಿದ್ಧರಾಮಯ್ಯ- ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗಿ- ಶಿವಾನಂದ ಎಸ್. ಪಾಟೀಲ

ವಿಜಯಪುರ: ನಗರದಲ್ಲಿ ನ. 20 ರಂದು ನಡೆಯಲಿರುವ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಹಕಾರ ಮಹಾಮಂಡಳದಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ. 20 ರಂದು ಸೋಮವಾರ ನಡೆಯಲಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ […]
ಅಂಧ ಅನಾಥ ವೃದ್ಧೆಯ ಬಾಳಿಗೆ ಬೆಳಕಾದ ಡಾ. ಪ್ರಭುಗೌಡ ಲಿಂಗದಳ್ಳಿ- ಅಜ್ಜಿಗೆ ದೀಪಾವಳಿ ಸಂದರ್ಭದಲ್ಲಿ ದೃಷ್ಠಿ ನೀಡಿದ ವೈದ್ಯ

ವಿಜಯಪುರ: ಕಣ್ಣು ಕಾಣದ ಹಿನ್ನೆಲೆಯಲ್ಲಿ ಸಂಬಂಧಿಕರು ಬಿಟ್ಟುಹೋದ ಅಜ್ಜಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ ದೃಷ್ಠಿ ನೀಡುವ ಮೂಲಕ ಬಸವನಾಡಿನ ಖ್ಯಾತ ನೇತ್ರ ತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ ಅನಾಥ ವೃದ್ಧೆಯ ಜೀವದಲ್ಲಿ ದೀಪಾವಳಿ ಬೆಳಕು ಮೂಡಿಸಿದ್ದಾರೆ. ಇದೀಗ ಅಜ್ಜಿ ಚೇತರಿಸಿಕೊಂಡಿದ್ದು, ಆಕೆಯನ್ನು ತವರೂರಿಗೆ ಕಳುಹಿಸಿಕೊಟ್ಟಿರುವ ವೈದ್ಯರ ಮಾನವೀಯತೆ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಡಾ. ಪ್ರಭುಗೌಡ ಲಿಂಗದಳ್ಳಿ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿಯಾದ ದತ್ತನಗೌಡ ಚೋಕಾವಿ ಅವರನ್ನು ಅಜ್ಜಿಯ ಜೊತೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗೆ […]
ನ. 19ರಂದು ಡಾ. ಬಿದರಿ ಚೈಲ್ಡ್ ಅಕಾಡೆಮಿ ಲೋಕಾರ್ಪಣೆ

ವಿಜಯಪುರ: ನಗರದ ಚಿಕ್ಕಮಕ್ಕಳ ಖ್ಯಾತ ವೈದ್ಯ ಡಾ. ಎಲ್. ಎಚ್. ಬಿದರಿಯವರ 40 ವರ್ಷಗಳ ವೈದ್ಯಕೀಯ ಸೇವೆಗೆ ಮತ್ತೋಂದು ಗರಿ ಸೇರ್ಪಡೆಯಾಗಲಿದ್ದು, ಎಚ್. ಟಿ. ಬಿದರಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಡಾ. ಬಿದರಿ ಚೈಲ್ಡ್ ಅಕಾಡೆಮಿ ಇದೇ ನ. 19 ರಂದು ರವಿವಾರ ಲೋಕಾರ್ಪಣೆಯಾಗಲಿದೆ. ಅಂದು ಸಂ. 5ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರು ಪಾಲ್ಗೋಳ್ಳಲಿದ್ದಾರೆ. ಅಲ್ಲದೇ, ಜಿಲ್ಲಾಧಿಕಾರಿ ಟಿ. […]
ಜೆಎಸ್ಎಸ್ ಆಸ್ಪತ್ರೆಯಲ್ಲಿ ವಿನೂತನ ಕಾರ್ಯಕ್ರಮ- ರೋಗಿಗಳೊಂದಿಗೆ ದೀಪಾವಳಿ ಆಚರಣೆ- ಶೈಲಜಾ ಪಾಟೀಲ ಯತ್ನಾಳ ಚಾಲನೆ

ವಿಜಯಪುರ: ಆಸ್ಪತ್ರೆ ಎಂದರೆ ಕೇವಲ ಆರೋಗ್ಯ ಸುಧಾರಣz ಕೇಂದ್ರಗಳಾಗುವುದಕ್ಕಿಂತ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಜನ್ಮ ದಿನೋತ್ಸವ ಮತ್ತು ದೀಪಾವಳಿ ಅಂಗವಾಗಿ ಆಯೋಜಿಸಲಾಗಿದ್ದ ಆರೋಗ್ಯ ದೀಪೋತ್ಸವ ಹಾಗೂ ಮುತ್ಯದೆಯರಿಗೆ ಉಡಿ ತುಂಬುವ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯದ ಜೊತೆಯಲ್ಲಿ ಸಂಸ್ಕಾರ, ಸಂಸ್ಕೃತಿಯನು ಉಳಿಸುವ ಕಾಯಕವನ್ನು ಮಾಡಬೇಕು ಎನ್ನುವುದಕ್ಕೆ ನಮ್ಮ […]
ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ವೈ ಬಳಸಿಕೊಳ್ಳಲು ವಿಜಯೇಂದ್ರಕ್ಕೆ ರಾಜ್ಯಾಧ್ಯಕ್ಷ ಸ್ಥಾನ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬರುವ ಚುನಾವಣೆಯಲ್ಲಿ ತಮ್ಮ ಅನುಕೂಲಕ್ಕಾಗಿ ಬಿ. ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಈ ಹಿಂದೆ ಹೇಗೆಲ್ಲ ಬಳಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ […]
ಕುಡಿಯುವ ನೀರಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಚಿವ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂಬರುವ ದಿನಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಯೋಜನಾಬದ್ಧವಾಗಿ ಕುಡಿಯುವ ನೀರಿಗೆ ವಿಷಯದಲ್ಲಿ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸುವಂತೆ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬರ ಪರಿಸ್ಥಿತಿ ಹಾಗೂ ಬರ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, […]
ಸಚಿವ ಎಂ. ಬಿ. ಪಾಟೀಲ ಅವರಿಂದ ವಿಜಯಪುರ ಜಿಲ್ಲೆ ಬರಪೀಡಿತ ತಾಲೂಕುಗಳಿಗೆ ಭೇಟಿ- ಪರಿಶೀಲನೆ

ವಿಜಯಪುರ: ಬೃಹತ್ ಮತ್ತು ಮದ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ. ಪಾಟೀಲ ಅವರು ಜಿಲ್ಲೆಯ ಬರಪೀಡಿತ ವಿಜಯಪುರ, ಇಂಡಿ, ಚಡಚಣ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ ತಾಲೂಕಿನ ನಾನಾ ಪ್ರದೇಶಗಳಿಗೆ ಭೇಟಿ ನೀಡಿ ಬರ ನಿರ್ವಹಣೆ ಪರಿಶೀಲನೆ ಹಾಗೂ ಜನ, ಜಾನುವಾರು, ಕುಡಿಯುವ ನೀರು, ಮೇವಿನ ಪರಿಸ್ಥಿತಿ, ನರೇಗಾ ಯೋಜನೆ ಕಾಮಗಾರಿ, ಗ್ರಾಮೀಣ ಪ್ರದೇಶದವರಿಗೆ ಉದ್ಯೋಗ ಸೃಜನೆ ಸೇರಿದಂತೆ ಜಿಲ್ಲೆಯ ಬರ ಪರಿಸ್ಥಿತಿ ಕುರಿತು […]
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಂ. ಜವಾಹರಲಾಲ ನೆಹರು ಜನ್ಮದಿನೋತ್ಸವ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂ. ಜವಾಹರಲಾಲ ೆಹರು ಅವರ 135ನೇ ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಷ್ರಿಫ್, ಪಂ. ಜವಾಹರಲಾಲ ನೆಹರೂ ಅವರು ಈ ದೇಶವನ್ನು ಎತ್ತರಕ್ಕೆ ಕರೆದೊಯ್ದ ಮಹಾನ್ ನಾಯಕರಾಗಿದ್ದಾರೆ. ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಯಾಗಿ ಶಿಕ್ಷಣಕ್ಕೆ ಮತ್ತು ಆರ್ಥಿಕತೆಯ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಭದ್ರ ಬುನಾದಿ ಹಾಕಿದ್ದಾರೆ ಎಂದು ಹೇಳಿದರು. ಲೋಕತಂತ್ರ, ಜಾತ್ಯತೀತತೆ, ವಿಜ್ಞಾನ ಕ್ಷೇತ್ರ ಮತ್ತು ಔದ್ಯೋಗಿಕ ಕ್ಷೇತ್ರಗಳನ್ನು […]
ಶ್ರೀ ಸಿದ್ಧೇಶ್ವರ ಸಂಸ್ಥೆಯ ಗೋರಕ್ಷಾ ಕೇಂದ್ರದ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ

ವಿಜಯಪುರ: ಶ್ರೀ ಸಿದ್ಧೇಶ್ವರ ಸಂಸ್ಥೆಯ ಕಗ್ಗೋಡ ಶ್ರೀ ರಾಮನಗೌಡ ಬಾ ಪಾಟೀಲ(ಯತ್ನಾಳ) ಗೋ ರಕ್ಷಾ ಕೇಂದ್ರದ ಸಾವಯವ ಗೋ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಲಾಯಿತು. ನಗರದ ಶ್ರೀ ಸಿದ್ಧೇಶ್ವರ ದೇವಾಲಯದ ಪಕ್ಕದಲ್ಲಿ ಪ್ರಾರಂಭಿಸಲಾಗಿರುವ ಈ ಮಾರಾಟ ಮಳಿಗೆಯನ್ನು ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ ಮತ್ತು ಚೇರಮನ್ ಬಸಯ್ಯ ಎಸ್. ಹಿರೇಮಠ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್. ಎಚ್. ದೇಸಾಯಿ, ಬಸವರಾಜ ಸುಗೂರ, ಕೋಶಾಶದ್ಯಕ್ಷ ಶಿವಾನಂದ ನೀಲಾ, ನಿರ್ದೇಶಕ ರಮೇಶ ಹಳ್ಳದ, ಸದಾಶಿವ ಗುಡ್ಡೋಡಗಿ, ಎಂ. […]