ನೆಹರು ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ- ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ

ಬೆಂಗಳೂರು: ಜವಾಹರಲಾಲ ನೆಹರು ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ.  ಅವರ ದೂರದೃಷ್ಟಿಯ ಫಲವನ್ನು ಪ್ರತಿಯೊಬ್ಬರು  ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ 134ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿ ಇರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು.  ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ […]

ಆನಲೈನ್ ವಂಚನೆ- ನೈಜಿರಿಯಾ ಮೂಲದ ಪೀಟರ್, ಹ್ಯಾಪಿ, ಸ್ಟ್ಯಾನ್ಲಿ ಬಂಧಿಸಿದ ಬಸವ ನಾಡಿನ ಸಿಇಎನ್ ಪೊಲೀಸರು

ವಿಜಯಪುರ: ನಗರದ ಜವಳಿ ಉದ್ಯಮಿಯೊಬ್ಬರಿಗೆ ಆನಲೈನ್ ಮೂಲಕ ವಂಚಿಸಿದ್ದ ನೈಜಿರಿಯಾ ಮೂಲದ ಮೂರು ಜನರನ್ನು ಬಂಧಿಸುವಲ್ಲಿ ವಿಜಯಪುರ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ರಿಪ್ಟೋ ಮೈನಿಂಗ್ ನಲ್ಲಿ ಹೂಡಿಕೆ ಮಾಡಿದರೆ ಹಾಕಿದ ಬಂಡವಾಳದ ಹಣದ ಜೊತೆಗೆ ಶೇ. 200 ರಷ್ಟು ಲಾಭಾಂಶ ಕೊಡುವದಾಗಿ ಹೇಳಿ ಈ ಆರೋಪಿಗಳು ನಾನಾ ಸುಳ್ಳು ಸಬೂಬೂಗಳನ್ನು ಉದ್ಯಮಿಯಿಂದ ನಾನಾ ಹಂತಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಿಗೆ ರೂ. 59 ಲಕ್ಷ 12 ಸಾವಿರದ 765  ಹಣವನ್ನು ಹಾಕಿಸಿಕೊಂಡಿದ್ದರು.  ಅಲ್ಲದೇ, ಉದ್ಯಮಿಗೆ ಯಾವುದೇ ಲಾಭಾಂಶ ಕೊಡದೇ […]

ಸಚಿವ ಎಂ. ಬಿ. ಪಾಟೀಲರಿಂದ ನ. 15 ರಿಂದ 16 ರಂದು ವಿಜಯಪುರ ಜಿಲ್ಲಾ ಪ್ರವಾಸ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ನವೆಂಬರ್ 14 ರಿಂದ ನವೆಂಬರ್ 16ರ ವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 14 ರಂದು ಮಂಗಳವಾರ ರಾತ್ರಿ ವಿಜಯಪುರಕ್ಕೆ ಆಗಮಿಸಲಿರುವ ಅವರು ವಾಸ್ತವ್ಯ ಮಾಡಲಿದ್ದಾರೆ. ನವೆಂಬರ್ 15 ರಂದು ಬುಧವಾರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿಜಯಪುರ ಜಿಲ್ಲೆಯ ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲದೇ, ಬರ […]

ಚುನಾವಣೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತವೆ- ಡಾ. ಪ್ರಕಾಶ ಸಿದ್ದಾಪುರ

ವಿಜಯಪುರ: ಚುನಾವಣೆಗಳು ಪ್ರಜಾಪ್ರಭುತ್ವನ್ನು ಗಟ್ಟಿಗೊಳಿಸುತ್ತವೆ.  ಈ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೋಂಡು ತಮ್ಮ ಹಕ್ಕು ಚಲಾಯಿಸಬೇಕು ಎಂದು ತಿಕೋಟಾ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪುರ ಹೇಳಿದ್ದಾರೆ. ತಿಕೋಟಾ ಪಟ್ಟಣದಲ್ಲಿರುವ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನಲ್ಲಿ  ಶನಿವಾರ ಚುನಾವಣೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅವರು, ಮತದಾನ ಪ್ರತಿಯೊಬ್ಬರ ಹಕ್ಕು.  ಎಲ್ಲರೂ ನರ್ಸಿಂಗ್ […]

ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ 25 ಲೋಕಸಭೆ ಸೀಟುಗಳಲ್ಲಿ ಬಿಜೆಪಿ ಗೆಲುವು- ನಮ್ಮವರೇ ಪ್ರತಿಪಕ್ಷದ ನಾಯಕರಾಗ್ತಾರೆ- ಗೋವಿಂದ ಕಾರಜೋಳ

ವಿಜಯಪುರ: ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸ್ವಾಗತಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಶುಭಾಷಯ ಕೋರಿದರು.  ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದ್ನನು ಅವರು ಸ್ವಾಗತಿಸಿದರು. ಬಿಜೆಪಿ ಯುವಕರಿಗೆ ಪ್ರೋತ್ಸಾಹ ಕೊಡುತ್ತದೆ ಎಂಬುದನ್ನು ಹೈಕಮಾಂಡ್ ಮತ್ತೆ ಎತ್ತಿ ತೋರಿಸಿದೆ.  ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ […]

ಬಿಜೆಪಿ ಕೋಮುದ್ವೇಷ ಬಿತ್ತನೆಯಲ್ಲಿ ತೊಡಗಿದೆ- ಕಮಲ ಪಡೆಗೆ ಅಧಿಕಾರದ ಬರ ಕಾಡುತ್ತಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಕೋಮುದ್ವೇಷ ಬಿತ್ತನೆಯಲ್ಲಿ ತೊಡಗಿರುವ ಬಿಜೆಪಿಗೆ ಅಧಿಕಾರದ ಬರ ಕಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಆರೋಪಿಸಿದ್ದಾರೆ. ಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿಗೆ ಅಧಿಕಾರದ ಮದವೇರಿತ್ತು.  ಕಾಂಗ್ರೆಸ್ ಅಧಿಕಾರಕಕ್ಕೆ ಬಂದ ಮೇಲೆ ಕಮಲ ಪಡೆಗೆ ಅಧಿಕಾರದ ಬರ ಕಾಡುತ್ತಿದೆ.  ಇದರ ಪರಿಣಾಮವಾಗಿ ಬಿಜೆಪಿ ನಾಯಕರು ಸ್ವಾರ್ಥಕ್ಕಾಗಿ ಬರ ಅಧ್ಯಯನ ಮಾಡುತ್ತಿದ್ದಾರೆ ಹೊರತು ರೈತರ ಮೇಲಿನ ಕಾಳಜಿಯಿಂದ ಅಲ್ಲ ಎಂದು ವಾಗ್ದಾಳಿ ನಡೆಸಿದರು. ಡೋಂಗಿ ರಾಜಕಾರಣ ಮಾಡುತ್ತಿರುವ ಬಿಜೆಪಿ ನಾಯಕರಿಗೆ […]

ರೋಗಶಾಸ್ತ್ರಜ್ಞರು ವೈದ್ಯರಲ್ಲಿಯೇ ಜಾಣ ವೈದ್ಯರಾಗಿದ್ದಾರೆ- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ರೋಗಶಾಸ್ತ್ರಜ್ಞರು ವೈದ್ಯರಲ್ಲಿಯೇ ಜಾಣ ವೈದ್ಯರಾಗಿದ್ದಾರೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ. ಬುಧವಾರ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ರೋಗನಿರ್ಣಯ ಶಾಸ್ತ್ರ ದಿನಾಚರಣೆ ಉದ್ಘಾಟಿಸಿ ಅವರು ಅವರು ಮಾತನಾಡಿದರು. ಎಲ್ಲಾ ವೈದ್ಯಕೀಯ ವಿಭಾಗಗಳಲ್ಲೂ ರೋಗಗಳನ್ನು ಪತ್ತೆ ಹಚ್ಚಲು ರೋಗಶಾಸ್ತ್ರ ತಜ್ಞ ವೈದ್ಯರ ಪಾತ್ರ ಪ್ರಮುಖವಾಗಿದೆ.  ರೋಗಶಾಸ್ತ್ರ ವೈದ್ಯರು ಎಲ್ಲಾ […]

ಭೀಮಸೇನ ಕೋಕರೆ ಕೇಂದ್ರ ತೋಟಗಾರಿಕೆ ಸಮಗ್ರ ಅಭಿವೃದ್ಧಿ ಎಂಐಡಿಎಚ್ ಗೆ ಸದಸ್ಯರಾಗಿ ನೇಮಕ

ವಿಜಯಪುರ: ಪ್ರಗತಿಪರ ರೈತ ಮತ್ತು ಕೃಷಿ ಪದವೀಧರ ಭೀಮಸೇನ ಕೋಕರೆ ಅವರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಎಂಐಡಿಎಚ್ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಿಶನ್ ಫಾರ್ ಇಂಟಿಗ್ರೇಟೆಡ್ ಡೆವಲೆಪಮೆಂಟ್ ಆಫ್ ಹರ್ಟಿಕಲ್ಚ್ ಫಾರ್ ದಿ ಹೋಲಿಸ್ಟಿಕ್ ಡೆವಲೆಪಮಂಟ್ ಆಫ್ ಹರ್ಟಿಕಲ್ಚರ್ ಇನ್ ದಿ ಕಂಟ್ರಿ( ದೇಶದಲ್ಲಿ ಸಮಗ್ರ ತೋಟಗಾರಿಕೆಗಾಗಿ ತೋಟಗಾರಿಕೆ ಅಭಿವೃದ್ಧಿ ಮಿಷನ್) ಯೋಜನೆಗೆ ಈ ನೇಮಕಾತಿ ಮಾಡಲಾಗಿದೆ. ಹೊಸ ಜವಾಬ್ದಾರಿ ಸಿಕ್ಕಿರುವುದಕ್ಕೆ ದ್ರಾಕ್ಷಿ ಬೆಳೆಗಾರರೂ ಆಗಿರುವ ಬಿ. ಎಂ. […]

ಸಿಎಂ ಭೇಟಿಯಾದ ಶಾಸಕ ಯಶವಂತರಾಯಗೌಡ ವಿ. ಪಾಟೀಲ- ಇಂಡಿ ಮತಕ್ಷೇತ್ರದ ಕೆರೆ, ಕಾಲುವೆಗಳಿಗೆ ನೀರು ಬಿಡುಗಡೆಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಇಂಡಿ ಮತಕ್ಷೇತ್ರದ ಕೊನೆಯ ಭಾಗದವರೆಗೆ ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸದಿದ್ದರೆ ಮತ್ತು ಇಂಡಿ ನೂತನ ಜಿಲ್ಲೆಯಾಗಿ ಘೋಷಣೆ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸಿಎಂ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, 07.11.2023ರಂದು ಸುದ್ದಿ ಗೋಷ್ಠಿ ನಡೆಸಿ ಇಂಡಿ ಭಾಗದಲ್ಲಿ ನೀರಾವರಿ ಯೋಜನೆಗಳು ಭೌತಿಕವಾಗಿ ಪೂರ್ಣಗೊಂಡಿದ್ದರೂ ಕಳೆದ 22 ವರ್ಷಗಳಿಂದ ನೀರು ಬರುತ್ತಿಲ್ಲ.  ಈಗಿನ ಬರ […]

ಗುಮ್ಮಟ ನಗರಿಯಲ್ಲಿ ಟಿಪ್ಪು ಜಯಂತಿ ಸಂಭ್ರಮ- ಟಿ. ಎಸ್. ಎಸ್. ಸಂಘಟನೆಯಿಂದ ಆಯೋಜನೆ

ವಿಜಯಪುರ: ನಗರದ ಟಿಪ್ಪು ಸುಲ್ತಾನ ಸರ್ಕಲ್‌ನಲ್ಲಿ ಟಿ. ಎಸ್. ಎಸ್ ಸಂಘಟನೆಯ ವತಿಯಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಜಯಂತಿಯವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಭಾವಚಿತ್ರಕ್ಕೆ ಸರ್ವಧರ್ಮಿಯರು ಒಗ್ಗೂಡಿ ಪುಷ್ಪಾರ್ಚನೆ ಸಲ್ಲಿಸಿ ಟಿಪ್ಪು ಧ್ವಜಾರೋಹಣ ನೆರವೇರಿಸಿ ಜೈಕಾರ ಹಾಕಿದರು.  ಈ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಉರ್ದು ಪತ್ರಕರ್ತ ರಫೀ ಭಂಡಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ […]