ಅನಾಥಾಶ್ರಮ ಮಕ್ಕಳಿಗೆ ದೀಪಾವಳಿ ಗಿಫ್ಟ್ ನೀಡಿದ ವಿಜಯಪುರದ ನಾಗರಾಳೆ ಶಿಕ್ಷಣ ಸಂಸ್ಥೆ ಹಾರೈಕೆ

ವಿಜಯಪರ: ನಗರದ ನಾಗರಾಳೆ ಶಿಕ್ಷಣ ಸಂಸ್ಥೆ ವತಿಯಿಂದ ದೀಪಾವಳಿ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಸವ ನಗರದಲ್ಲಿರುವ ಅನಾಥಾಶ್ರಮದ ಮಕ್ಕಳಿಗೆ ಸಿಹಿ ಮತ್ತು ಸ್ವೇಟರ್ ವಿತರಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸಿದರಾಯ ಬಿ. ನಾಗರಾಳೆ, ಇಲ್ಲಿ ವಾಸವಾಗಿರುವ ಅನಾಥ ಮಕ್ಕಳಿಗೆ ಸ್ವೇಟರ್ ನೀಡಿದ್ದು ಅತೀವ ಸಂತಸವನ್ನುಂಟು ಮಾಡಿದೆ.  ಈ ಎಲ್ಲ ಮಕ್ಕಳಿಗೆ ದೇವರು ಆರೋಗ್ಯವನ್ನು ನೀಡಲಿ.  ದೀಪಾವಳಿ ಇವರ ಬಾಳಲ್ಲಿ ಹೊಸ ಹುಮ್ಮಸ್ಸನ್ನು ತರಲಿ ಎಂದು ಶುಭ ಹಾರೈಸಿದರು. ಕರ್ನಾಟಕ ರಾಜ್ಯ ಕಾರ್ಮಿಕರ ಮತ್ತು […]

ಬಸವ ನಾಡಿನಲ್ಲಿ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ- ಬಿ. ವೈ. ವಿಜಯೇಂದ್ರ ಪರ ಜಯಕಾರ

ವಿಜಯಪುರ: ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರದಲ್ಲಿ ಬಿ ಜೆ ಪಿ ಕಾರ್ಯಕರ್ತರು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಆದೇಶ ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪರಸ್ಪರ ಕರೆ ಮಾಡಿ ಸಂಭ್ರಮಿಸಲವು ನಿರ್ಧರಿಸಿದರು.  […]

ಶಾಸಕ ಬಿ. ವೈ. ವಿಜಯೇಂದ್ರ ದೀಪಾವಳಿ ಗಿಫ್ಟ್- ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ ಜೆ. ಪಿ. ನಡ್ಡಾ

ವಿಜಯಪುರ: ದೀಪಾವಳಿ ಗಿಫ್ಟ್ ಎಂಬಂತೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಪುತ್ರ ಮತ್ತು ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕ ಮಾಡಿ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.  ಈವರೆಗೆ ರಾಜ್ಯಾಧ್ಯಕ್ಷರಾಗಿದ್ದ ನಳೀನಕುಮಾರ ಕಟೀಲ ಅವರ ಬದಲಾವಣೆ ಮಾತು ಬಹಳ ದಿನಗಳಿಂದಲೇ ಕೇಳಿ ಬರುತ್ತಿತ್ತು.  ಈ ಮಧ್ಯೆ ಕೇಂದ್ರ […]

ಸರಕಾರಿ ಗಂಡು, ಹೆಣ್ಣು ಮಕ್ಕಳ ಮರಾಠಿ ಶಾಲೆಯಲ್ಲಿ ವಿಶ್ವ ಆಹಾರ ದಿನಾಚರಣ

ವಿಜಯಪುರ: ನಗರದ ಸರಕಾರಿ ಮರಾಠಿ ಗಂಡು ಮಕ್ಕಳ ಶಾಲೆ ಸಂಖ್ಯೆ 1 ಮತ್ತು ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸಂಖ್ಯೆ 11ಯಲ್ಲಿ ಬಿ. ಎಲ್. ಡಿ. ಈ ಸಂಸ್ಥೆಯ ಎ. ವಿ. ಎಸ್ ಆಯರ್ವೇದ ಮಹಾವಿದ್ಯಾಲಯ ವತಿಯಿಂದ ವಿಶ್ವ ಆಹಾರ ದಿನಾಚರಣೆಯ ಆಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಸಂಹಿತಾ ಸಿದ್ದಾಂತ ವಿಭಾಗದ ಮುಖ್ಯಸ್ಥೆ ಪ್ರೊ. ರೇಣುಕಾ ತೆನಹಳ್ಳಿ, ಪ್ರತಿನಿತ್ಯ ಪೌಷ್ಠಿಕ ಆಹಾರ ಸೇವನೆ ವಿಧಾನ ಮತ್ತು […]

ಕೃಷ್ಣಾನಗರ ನಂದಿ ಶಾಲೆಯ ವಿದ್ಯಾರ್ಥಿಗಳ ಸಾಧನೆ- ಜಿಲ್ಲಾ ಮಟ್ಟದ ಕಬ್ಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಶ್ರಯದಲ್ಲಿ ನಡೆಯುತ್ತಿರುವ ಬಿ. ಟಿ. ಪಾಟೀಲ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ವಿದ್ಯಾರ್ಥಿನಿಯರು ಇತ್ತೀಚೆಗೆ ಸಿಂದಗಿಯ ಲೊಯೋಲ ಸಿಬಿಎಸ್ಇ ಶಾಲೆಯಲ್ಲಿ ನಡೆದ ಅಂತರಶಾಲಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಈ ಕ್ರೀಡಾಕೂಟದಲ್ಲಿ ಒಟ್ಟು 13 ಸಿಬಿಎಸ್ಇ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.  ಈ ಕಬಡ್ಡಿ ತಂಡದಲ್ಲಿರುವ ಮಧು ಕಂಕಾಳಿ, ಪೂರ್ವಿ ನಾಯಿಕ, ಕೃತಿಕಾ ಕೊರ್ತಿ, ಮಾಯಾ ಶೇಗುಣಶಿ, ಲಕ್ಷ್ಮಿ ಬರಗಿ, ತ್ರೀಕ್ಷಾ […]

ದೆಹಲಿಯಲ್ಲಿ ಹವಾಮಾಲಿನ್ಯ ಪ್ರಮಾಣ AQI 400+, ಬಸವನಾಡಿನಲ್ಲಿ ಕೇವಲ 30- ಹೇಗೆ ಅಳೆಯುತ್ತಾರೆ ಗೊತ್ತಾ?

ವಿಜಯಪುರ: ರಾಜಧಾನಿ ದೆಹಲಿ ಈಗ ವಿಶ್ವದ ಅತೀ ಹೆಚ್ಚು ಹವಾಮಾಲಿನ್ಯದ ನಗರಗಳಲ್ಲಿ ಒಂದಾಗಿದ್ದು, ಜನ ಉಸಿರಾಡಲು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಇದೆ.  ಅಲ್ಲಿನ ಹವಾಮಾನ ನಿಗದಿತ ಪ್ರಮಾಣಕ್ಕಿಂತ ಏಳೆಂಟು ಪ್ರಮಾಣ ಹೆಚ್ಚಾಗಿದ್ದು, ಶಾಲೆ, ಕಾಲೇಜುಗಳಿಗೆ ರಜೆಯನ್ನೂ ನೀಡಲಾಗಿದೆ.  ಆದರೆ, ಇದೇ ನಮ್ಮ ಬಸವ ನಾಡು ಈಗಲೂ ಕೂಡ ಶುದ್ಧ ಗಾಳಿಯಿಂದ ಜನಮನ ತಣಿಸುತ್ತಿದೆ.  ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು AQI ಅಂದರೆ ಹವಾಮಾನ ಗುಣಮಟ್ಟದ ಸೂಚ್ಯಂಕ 433ಕ್ಕೂ ಹೆಚ್ಚಾಗಿದ್ದರೆ, ಇತ್ತ ವಿಜಯಪುರ ನಗರದಲ್ಲಿ […]

ವೀರಯೋಧ ಕಾಶೀರಾಯ ಬಮ್ಮನಳ್ಳಿ ಸ್ಮರಣಾರ್ಥ ಸರ್ವಧರ್ಮ ಸಮ್ಮೇಳನ- ದೇಶಪ್ರೇಮ ಬೆಳೆಸಿಕೊಳ್ಳಲು ಗೋವಿಂದ ಕಾರಜೋಳ ಕರೆ

ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯರು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಿಎಲ್‌ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ […]

ಕೇಂದ್ರ ಸರಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ- ಸಂಸದ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ  ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ […]

ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿ ಡಿಪಿಆರ್ ತಯಾರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿ- ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ  ಅವರು  ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ 10,000 ಮೆಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.  ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು NABCONS ಸಂಸ್ಥೆಯಿxದ ಎx.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, SONNE Infrastructure ಹಾಗೂ ವಿ. ಭರತ, ಯೋಜನಾ ಸಲಹೆಗಾರರು, NABCONS ಮತ್ತು ವ್ಯವಸ್ಥಾಪಕ ನಿರ್ದೇಶಕರು, […]

ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ಯಶಸ್ವಿ

ವಿಜಯಪುರ: ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನವೆಂಬರ್ 1 ಬುಧವಾರದಿಂದ ನವೆಂಬರ್ 3ರ ಶುಕ್ರವಾರದ ವರೆಗೆ ನಡೆಯಿತು. ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸೈಟಿಯ ಈ ಸಮ್ಮೇಳನವನ್ನು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೊಧನಾ ಕೇಂದ್ರದ ಶರೀರ ಕ್ರಿಯಾ ಶಾಸ್ತ್ರ ವಿಭಾಗ ಆಯೋಜಿಸಿತ್ತು. ಸಮ್ಮೆಳನದ ಮೊದಲ ದಿನ ನಿರಂತರ ವೈದ್ಯಕೀಯ ಶಿಕ್ಷಣ ಹಾಗೂ ಕಾರ್ಯಾಗಾರವನ್ನು ನಡೆಯಿತು. ಈ ಕಾರ್ಯಾಗಾರದಲ್ಲಿ […]