ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ- ಡಾ.ರಿ ಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಉದ್ಭವಿಸಬಹುದಾದ ಸಮಸ್ಯೆಗಳನ್ನು ಯೋಜನಾಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ಯಾವುದೇ ಸಮಸ್ಯೆ ಬರದಂತೆ ನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿ ಇರುವುದರಿಂದ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ […]
ಶುದ್ಧ ಅಂತಿಮ ಮತದಾರ ಪಟ್ಟಿ ಪ್ರಕಟಣೆಗೆ ಸಹಕರಿಸಿ: ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ್

ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : 01-01-2024ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ 5 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದ್ದು, 18 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಮನ್ವಯತೆ ಸಾಧಿಸಲು ಬಿಎಲ್‍ಎಗಳ ನೇಮಕ ಮಾಡಿಕೊಂಡು ಶುದ್ಧ ಅಂತಿಮ ಮತದಾರರ ಪಟ್ಟಿಗೆ ಸಹಕರಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ […]
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಡಿ. ಕುಮಾನಿ ಅವರನ್ನು ಸನ್ಮಾನಿಸಿ ಗೌರವಿಸಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ

ವಿಜಯಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಿ ಹಿರಿಯ ಸಮಾಜ ಸೇವಕ ಸಿದ್ರಾಮಪ್ಪ ದುಂಡಪ್ಪ ಕುಮಾನಿ ಅವರ ನಿವಾಸಕ್ಕೆ ತೆರಳಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ ಸನ್ಮಾನಿಸಿ ಗೌರವಿಸಿದರು. ಜಲಗನರದ ಸ್ನೇಹಿತರೊಂದಿಗೆ ಸಿದ್ರಾಮಪ್ಪ ದುಂಡಪ್ಪ ಕುಮಾನಿ ಅವರ ಮನೆಗೆ ತೆರಳಿದ ಅವರು, ಗೌರವ ಸಮರ್ಪಿಸಿ ಆಶೀರ್ವಾದರು. ಬಳಿಕ ಮಾತನಾಡಿದ ಪ್ರೇಮಾನಂದ ಬಿರಾದಾರ, ವಿಜಯಪುರ ನಗರದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಪರದಾಡುತ್ತಿದ್ದ ಹಮಾಲರಿಗೆ ಪ್ರತ್ಯೇಕವಾಗಿ ಒಂದು ಬಡಾವಣೆ ಮಾಡಲು ಕುಮಾನಿ ಅವರು ಕಾರಣರಾಗಿದ್ದಾರೆ. ಮೂರ್ನಾಲ್ಕು ದಶಕಗಳ ಹಿಂದೆ ಅವರು ಮಾಡಿದ ಸಮಾಜಪ ಸೇವೆಯಿಂದಾಗಿ […]
ಜೈಲಿನ ಕೈದಿಗಳಿಗೆ ಉನ್ನತ ಶಿಕ್ಷಣ- ಕೌಶಲ್ಯಾಧಾರಿತ ವೃತ್ತಿಪರ ಕೋರ್ಸ್ಗಳ ಅಧ್ಯಯನ ಕೇಂದ್ರ ಉದ್ಘಾಟನೆ

ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಗರದ ಕೇಂದ್ರ ಕಾರಾಗೃಹದಲ್ಲಿ ಮೈಸೂರು ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಬಂಧಿಗಳಿಗೆ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಧಾರಿತ ವೃತ್ತಿಪರ ಕೋರ್ಸ್ಗಳ ಅಧ್ಯಯನ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕೇಂದ್ರದ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕಾರಾಗೃಹದ ಬಂಧಿಗಳು ಬಿಡುಗಡೆಯ ನಂತರದ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಉನ್ನತ ಶಿಕ್ಷಣ ಕೇಂದ್ರಗಳು ಅತೀ ಅಗತ್ಯವಾಗಿವೆ. ಬಂದಿಗಳ ಭವಿಷ್ಯದ ಕೌಶಲ್ಯಾಭಿವೃದ್ದಿ ತರಬೇತಿಗಳನ್ನು ಆಯೋಜಿಸಲು ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು. […]
ಕೇಂದ್ರ ಬರ ಅಧ್ಯಯನ ತಂಡ ನ. 4ರಂದು ವಿಜಯಪುರ ಜಿಲ್ಲೆಗೆ ಭೇಟಿ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಅಧ್ಯಯನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ನೇತೃತ್ವದ ತಂಡ ನ. 4ರಂದು ಭೇಟಿ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಂಡದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಪಿ. ರಾಜೀವ, ವೀರಣ್ಣ ಚರಂತಿಮಠ, ಎ. ಎಸ್. ಪಾಟೀಲ ನಡಹಳ್ಳಿ, ಸಿದ್ದು ಸವದಿ ಇರಲಿದ್ದಾರೆ ಎಂದು ತಿಳಿಸಿದರು. […]
ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ- ಬೀದರಿನ ಡಾ. ಶಿವಕುಮಾರ ಮಹಾಸ್ವಾಮೀಜಿ

ವಿಜಯಪುರ: ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಇಂದಿಗೂ ಎಲ್ಲರಿಗೂ ದಾರಿದೀಪವಾಗಿವೆ ಎಂದು ಬೀದರಿನ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಹೇಳಿದ್ದಾರೆ. ನಗರದ ಸೋಲಾಪುರ ರಸ್ತೆ ಬಳಿಯ ಸಂಸ್ಕೃತಿ ಕಾಲನಿ ಹತ್ತಿರವಿರುವ ಶ್ರೀ ಸಿದ್ಧಾರೂಢರ ಮಠದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ಸಿದ್ಧಾರೂಢರ ಮೂರ್ತಿ ಪ್ರತಿಷ್ಠಾಪನೆಯ 17ನೇ ವಾರ್ಷಿಕೋತ್ಸವ ಹಾಗೂ ಮಾತೋಶ್ರೀ ಪಾರ್ವತಮ್ಮನವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ 5ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀ ಸಿದ್ಧಾರೂಢರು ತಮ್ಮ ಅವಧಿಯಲ್ಲಿ ಅನೇಕ ಪವಾಡಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 12ನೇ […]
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ- ಅಕ್ರಮ ತಡೆಯದಿದ್ದರೆ ಕಠಿಣ ಕ್ರಮ- ಸಚಿವ ಎಂ. ಬಿ. ಪಾಟೀಲ ಎಚ್ಚರಿಕೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಗಂಭೀರವಾಗಿ ತೆಗೆದುಕೊಳ್ಳಬೇಕು. ನೀರಿನ ವಿಷಯದಲ್ಲಿ ಯಾವುದೇ ನೆಪ ಸಹಿಸುವುದಿಲ್ಲ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಲ್ಲಿ ಲೋಪ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಕಂದಗಲ್ ಶ್ರೀ […]
ಹೆಸರು ಬದಲಾವಣೆ, ಜಿಲ್ಲೆ ವಿಭಜನೆ, ಮೆಟ್ರೋಗೆ ಹೊಸ ಹೆಸರು ಕುರಿತು ಸಚಿವ ಎಂ. ಬಿ. ಪಾಟೀಲ ಪ್ರತಿಕ್ರಿಯೆ

ವಿಜಯಪುರ: 12ನೇ ಶತಮಾನದ ಸಮಾನತೆಯ ಹರಿಕಾರ ಬಸವಣ್ಣನವರು ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ವಿಚಾರದಿಂದ ಹಿಡಿದು ಹೊಸ ಹೆಸರಿಡುವ ಕುರಿತು ಕೇಳಲಾದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ನಮ್ಮ ಜಿಲ್ಲೆಯ ಹೆಸರು ಬಿಜಾಪುರದಿಂದ ವಿಜಯಪುರ ಎಂದು ಬದಲಾಯಿಸಲಾಗಿದೆ. […]
ಸಿಎಂ ರನ್ನು ಕೆಳಗಿಳಿಸುವ ಹುನ್ನಾರ ನಡೆದಿದೆ- ಸರಕಾರ ತನ್ನ ತಪ್ಪಿನಿಂದ ಪತನವಾಗಲಿದೆ- ಶಾಸಕ ಯತ್ನಾಳ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆದಿದೆ. ಸಿಎಂ ರನ್ನು ಕೆಳಗಿಳಿಸಲು ದೆಹಲಿಯಲ್ಲಿ ಯಾರಾರನ್ನು ಭೇಟಿ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ ಹೆಸರು ಹೇಳದೇ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಕೆಳಗಿಳಿಸಲು ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೂ ಇದೆ ಎಂದು ಹೇಳಿದರು. ಚೆನ್ನಗಿರಿ ಶಾಸಕ ಡಿ. ಕೆ. ಶಿವಕುಮಾರ ಪರ 70 […]
ಉದ್ಯಮಿಯಾಗಿ ಹೆಚ್ಚೆಚ್ಚು ಉದ್ಯೋಗ ಸೃಷ್ಠಿಸಿ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು- ಎಚ್. ಕೆ. ಪಾಟೀಲ

ವಿಜಯಪುರ: ಉದ್ಯಮಿಯಾಗಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯಲ್ಲಿ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾಗುವ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭ ಮತ್ತು ವಿಜಯಪುರ ನಗರದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸ್ಥೆ ವತಿಯಿಂದ ನಿರ್ಮಿಸಲಾಗುತ್ತಿರುವ ಆಂಗ್ಲ ಮಾಧ್ಯಮ ಶಾಲೆಯ ಕಟ್ಡಡ ಮತ್ತು ವಿದ್ಯಾರ್ಥಿ ವಸತಿ ನಿಲಯದ […]