ಬಸವೇಶ್ವರರ ಜನ್ಮಭೂಮಿ ಅಭಿವೃದ್ಧಿ ಪಡಿಸಿ ಕುರುಹು ಉಳಿಸುವ ಕೆಲಸವಾಗಬೇಕು- ಸಚಿವ ಶಿವಾನಂದ ಎಸ್. ಪಾಟೀಲ

ವಿಜಯಪುರ: ಬಸವಣ್ಣನವರ ಜನ್ಮಭೂಮಿ ಬಸವನ ಬಾಗೇವಾಡಿ ಅಭಿೃವೃದ್ಧಿ ಪ್ರಾಧಿಕಾರ ರಚಿಸಬೇಕು.  ಅವರ ಕುರುಹು ಉಳಿಸುವ ಕೆಲಸ ನಡೆಯಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎ. ಪಿ. ಎಂ. ಸಿ. ಸಚಿವ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸವೇಶ್ವರರ ಹೆಸರು ಈಗಾಗಲೇ ಪ್ರಚಲಿತವಾಗಿದೆ.  ಬಸವೇಶ್ವರರ ಹುಟ್ಟಿದ್ದು ವಿಜಯಪುರ ಜಿಲ್ಲೆಯಲ್ಲಿ ಎಂಬುದು ಜಗತ್ತಿಗೆ ಜಗಜ್ಜಾಹೀರು ಆಗಿದೆ.  ಆದರೆ, ಯಾವುದೇ ಸರಕಾರ ಬರಲಿ.  ಈ ಸರಕಾರವೇ ಇರಲಿ, ಬೇರೆ […]

ಮತದಾರರ ಕರಡು ಪಟ್ಟಿ ಪ್ರಕಟ- ತಿದ್ದುಪಡಿ, ಸೇರ್ಪಡೆ, ಡಿಲೀಟ್ ಆಕ್ಷೇಪಣೆ ಸಲ್ಲಿಸಲು ಡಿ. 12ರ ವರೆಗೆ ಅವಕಾಶ- ಡಿಸಿ ಟಿ. ಭೂಬಾಲನ್

ವಿಜಯಪುರ: ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹೆಸರು ಸೇರ್ಪಡೆ, ತೆಗೆದು ಹಾಕುವುದು, ತಿದ್ದಪುಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 9ನೇ ಡಿಸೆಂಬರ್ 2023ರ ವರೆಗ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ 25.09.2023ರ ಅನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತೆ ದಿನಾಂಕ 01.01.2024ಕ್ಕೆ ಸಂಬಂಧಿಸಿದಂತೆ […]

ವಿದ್ಯುತ್, ನೀರು ಪೂರೈಕೆ ಸಮಸ್ಯೆ ಬಗೆಹರಿಸಲು ಆಗ್ರಹ- ಸಾಲಮನ್ನಾಕ್ಕೆ ಒತ್ತಾಯ- ನಾನಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಸಮರ್ಪಕ ವಿದ್ಯುತ್ ಪೂರೈಸಬೇಕು ಮತ್ತು ಕಾಲುವೆಗಳಿಗೆ ಸರಿಯಾಗಿ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ. ಕಿಸಾನ ಸಂಘದ ರಾಜ್ಯಾಧ್ಯಕ್ಷ ಭೀಮಸೇನ್ ಕೋಕರೆ ಅವರ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೇರಿದಂತೆ ನಾನಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬರ ಹಿನ್ನೆಲೆಯಲ್ಲಿ ಬೆಳೆಗಳು ನಷ್ಟವಾಗುತ್ತಿವೆ.  ಮಳೆಯಾಗದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೆಲವು ರೈತರು ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ.  ಇದರಿಂದಾ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು. ರೈತರ […]

ಹೃದಯಾಘಾತ, ಪ್ರಾಥಮಿಕ ಚಿಕಿತ್ಸೆ ಕುರಿತು ಕಾರ್ಯಾಗಾರ- ಡಾ. ಚುಳಕೆ, ಡಾ. ಕಡೇಲಿ ಅವರಿಂದ ಪ್ರಾತ್ಯಕ್ಷಿಕೆ ಮೂಲಕ ವಿವರಣೆ

ವಿಜಯಪುರ: ಹೃದಯಾಘಾತ ಮತ್ತು ಪ್ರಥಮ ಚಿಕಿತ್ಸೆ ಕುರಿತ ಕಾರ್ಯಾಗಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಗುರುವಾರ ನಡೆಯಿತು. ಪಾರ್ಮಸಿ ಕಾಲೇಜು ಮತ್ತು ರಾಘವೇಂದ್ರ ಕಾರ್ಡಿಯೊ ಕೇರ್ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ. ಸಿ. ಸಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೃದಯ ರೋಗ ಖ್ಯಾತ ವೈದ್ಯರಾದ ಡಾ. ಕಿರಣ್ ಚುಳಕಿ ಮತ್ತು ಡಾ. ದೀಪಕ ಕಡೇಲಿ ಅವರು ಹೃದಯಾಘಾತ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾಗಿ ಪ್ರಾತ್ಯಕ್ಷಿಕೆ […]

ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ- ಸಂಜಯ ಶೆಟ್ಟೆಣ್ಣವರ

ವಿಜಯಪುರ: ಇದೇ ತಿಂಗಳು 30 ನಡೆಯಬೇಕಿದ್ದ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಎರಡೂ ಸ್ಥಾನಗಳಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು.  ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ.  ಈ ಅರ್ಜಿಯ ವಿಚಾರಣೆ ಅ.30 ರಂದು ನಡೆಯಲಿದೆ.  ಹೀಗಾಗಿ  ಅಲ್ಲಿಯವರೆಗೆ ಚುನಾವಣೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ.  ಈ ಹಿನ್ನೆಲೆಯಲ್ಲಿ ಅ. 30 ರಂದು ನಡೆಯಬೇಕಿದ್ದಮೇ ಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ […]

ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಿವಾನಂದ ಪಾಟೀಲ, ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಪುನರಾಯ್ಕೆ

ವಿಜಯಪುರ: ರಾಜ್ಯದ ಪ್ರತಿಷ್ಠಿತ ವಿಜಯಪುರ ಜಿಲ್ಲಾ ‌ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಪುನರಾಯ್ಕೆಯಾಗಿದ್ದಾರೆ. 2023 ರಿಂದ 2028ರ ವರೆಗೆ‌ ಐದು ವರ್ಷಗಳ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಜವಳಿ, ಕಬ್ಬು, ಸಕ್ಕರೆ ಅಭಿವೃದ್ಧಿ ಮತ್ತು ಎ.ಪಿಎಂ.ಸಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಅವಿರೋಧವಾಗಿ ಆಯ್ಕೆಯಾದರು. ಶಿವಾನಂದ ಎಸ್. ಪಾಟೀಲ ಅವರು 1997 ರಿಂದ 2023ರ ವರೆಗೆ ಸತತವಾಗಿ […]

ನಾನಾ ನಿಗಮ ಮಂಡಳಿಗಳ ನೇಮಕಾತಿಗೆ ಅ. 28, 29ರಂದು ಸ್ಪರ್ಧಾತ್ಮಕ ಪರೀಕ್ಷೆ- ವ್ಯವಸ್ಥಿತ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ನಾನಾ ನಿಗಮ ಮಂಡಳಿಗಳ ನೇಮಕಾತಿಗೆ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 28 ಹಾಗೂ 29 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದ್ದಾರೆ. ನಗರದ ಗಾಂಧಿಚೌಕ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ್ ಶಾರದಾ ಭವನದಲ್ಲಿ ಆಯೋಜಿಸಲಾಗಿದ್ದ  ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು,  ವ್ಯವಸ್ತಿತ ಪರೀಕ್ಷೆಗಾಗಿ 21 ಮಾರ್ಗಾಧಿಕಾರಿಗಳ ತಂಡ, ಪ್ರತಿ ಪರೀಕ್ಷಾ ಕೇಂದ್ರಕ್ಕೆ  ಓರ್ವ ವೀಕ್ಷಕರಂತೆ 64 ವೀಕ್ಷಕರು ಪ್ರತಿ […]

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿ ಪೌರ ಕಾರ್ಮಿಕರ ಆರೋಗ್ಯ ಕಾಪಾಡಲು- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಜಿಲ್ಲೆಯ ಪೌರಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಆರೋಗ್ಯ ಜಾಗೃತಿ ಮೂಡಿಸಬೇಕು. ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿನ 2013ರ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಮಾಜದ ಸ್ವಾಸ್ಥ ಕಾಪಾಡುವ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಆರೋಗ್ಯ ತಪಾಸಣೆ ಅತಿ ಮುಖ್ಯವಾಗಿದೆ. […]

ರೈತರಿಗೆ ದಸರಾ ಶುಭ ಸಂದರ್ಭ ಅಂಗವಾಗಿ ಒಂದು ಗಂಟೆ ಹೆಚ್ಚಿಗೆ ವಿದ್ಯುತ್- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ರೈತರಿಗೆ ಕೃಷಿಗಾಗಿ ಇನ್ನು ಮುಂದೆ ಒಂದು ಗಂಟೆ ಹೆಚ್ಚಿಗೆ ವಿದ್ಯುತ್ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಡಿಸಿ, ಜಿ. ಪಂ. ಸಿ ಇ ಓ, ಎಸ್ಪಿ ಹಾಗೂ ಹೆಸ್ಕಾಂ ಅಧಿಕಾರಿಗಳೊಂದಿ ಸಭೆ ನಡೆಸಿ ಅವರು ಮಾತನಾಡಿದರು. ಈವರೆಗೆ ರೈತರಿಗೆ ಐದು ಗಂಟೆ ತ್ರಿ- ಫೇಸ್ ವಿದ್ಯುತ್ ನೀಡಲಾಗುತ್ತಿದೆ.  ಇನ್ನು ಮುಂದೆ ದಸರಾ ಕೊಡುಗೆಯಾಗಿ ಒಂದು ಗಂಟೆ ಹೆಚ್ಚಿಗೆ […]

ದಸರಾ ಅಂಗವಾಗಿ ಸಾರ್ವಜನಿಕರೊಂದಿಗೆ ಶಾಸಕ ಯತ್ನಾಳ ಅವರಿಂದ ಬನ್ನಿ ವಿನಿಮಯ

ವಿಜಯಪುರ: ವಿಜಯ ದಶಮಿ ಅಂಗವಾಗಿ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡರು. ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ ಶಾಸಕರು, ಫಲ್ಲಕ್ಕಿಯೊಂದಿಗೆ ನಗರದ ಎಪಿಎಂಸಿ ಹತ್ತಿರದ ನೀಲಕಂಠೇಶ್ವರ ದೇವಸ್ಥಾನದ ಬಳಿ ತೆರಳಿ ಬನ್ನಿ ಮುಡಿಯುವ ಕಾರ್ಯದಲ್ಲಿ ಭಾಗಿಯಾದರು. ನಂತರ ಮರಳಿ ಸಿದ್ದೇಶ್ವರ ದೇವಸ್ಥಾನ ಆವರಣಕ್ಕೆ ಆಗಮಿಸಿ, ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ರೈತರು, ಮುಖಂಡರು, […]