ಯಕ್ಕುಂಡಿಯಲ್ಲಿ ಶ್ರೀ ಹನುಮಾನ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ- ಕಾಶಿ ಜಗದ್ಗುರುಗಳು ಭಾಗಿ

ವಿಜಯಪುರ: ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಬದರಿನಾಥ ಶೈಲಿಯ ಶಿಖರದ ಕಳಸಾರೋಣದ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಆರತಿ ಮತ್ತು ಕುಂಭಮೇಳದೊಂದಿಗೆ ಕಾಶಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ, ಶಿಖರದ ಪಂಚ ಕಳಸ ಮೆರವಣಿಗೆ ಹಾಗೂ ಧರ್ಮಸಭೆ ನಡೆಯಿತು.  ಈ ಧರ್ಮಸಭೆಯನ್ನು ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಗದ್ಗುರುಗಳು, ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದು ಗ್ರಾಮಸ್ಥರ […]

ರಾಷ್ಟ್ರೀಯ ಶಸ್ತ್ರ ಚಿಕಿತ್ಸೆ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರಿಂದ ರಕ್ತದಾನ

ವಿಜಯಪುರ: ರಾಷ್ಟ್ರೀಯ ಶಸ್ತ್ರ ಚಿಕಿತ್ಸೆ ವೈದ್ಯರ ದಿನಾಚರಣೆ ಅಂಗವಾಗಿ ನಗರದ ಬಿ ಎಲ್ ಡಿ ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ರಕ್ತ ನಿಧಿ ಕೇಂದ್ರದಲ್ಲಿ ಸೋಮವಾರ ವೈದ್ಯರಿಂದ ರಕ್ತದಾನ ಶಿಬಿರ ನಡೆಯಿತು. ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಭಾರತೀಯ ಶಸ್ತ್ರ ಚಿಕಿತ್ಸಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಈ ರಕ್ತದಾನ ಶಿಬಿರದಲ್ಲಿ ಸುಮಾರು 15 ಜನ ವೈದ್ಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಡಾ. ಎಂ. ಬಿ. […]

ಗ್ರಾ. ಪಂ ಶೇ. 10ರಷ್ಟು ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಿ- ಜಿ, ಪಂ ಸಿಇಒ ರಿಷಿ ಆನಂದ

ವಿಜಯಪುರ: ಗ್ರಾ. ಪಂ ಗಳಿಂದ ಪ್ರಸ್ತುತ ಶೇ.4 ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದ್ದು, ಮುಂದಿನ ಒಂದು ವಾರದಲ್ಲಿ ಶೇ. 10ರಷ್ಟು ಗುರಿ ತೆರಿಗೆ ಸಂಗ್ರಹಿಸುವ ಗುರಿ ಸಾಧಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.   ಸಿಂದಗಿ ತಾಲೂಕಿನ ಕನ್ನೊಳ್ಳಿ ಹಾಗೂ ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾ. ಪಂ. ಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಸಂಗ್ರಹವಾದ ತೆರಿಗೆಯಲ್ಲಿ ಶೇ.6ರಷ್ಟು ಗ್ರಂಥಾಲಯಗಳಿಗೆ ಪುಸ್ತಕಗಳು […]

ಗಾಂಧೀಜಿಯವರ ಗ್ರಾಮ ಸ್ವರಾಜ್ಯ ನನಸು ಮಾಡಲು ಎನ್.ಎಸ್.ಎಸ್ ಶಿಬಿರಗಳು ಸಹಕಾರಿಯಾಗಿವೆ- ಶ್ರೀ ನರೇಶಾನಂದ ಸ್ವಾಮೀಜಿ

ವಿಜಯಪುರ: ಮಹಾತ್ಮ ಗಾಂಧೀಜಿಯವರ ಕನಸಿನಂತೆ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ನನಸು ಮಾಡಲು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ(ಎನ್.ಎಸ್.ಎಸ್.)ಗಳು ಸಹಕಾರಿಯಾಗಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನರೇಶಾನಂದ ಸ್ವಾಮೀಜಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೋಮವಾರ ನಡೆದ ಎನ್.ಎಸ್.ಎಸ್ ವಿಶೇಷ ಶಿಬಿರವನ್ನು […]

ಬಸವ ನಾಡಿನಲ್ಲಿ ಕಂದಾಯ ದಿನಾಚರಣೆ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ

ವಿಜಯಪುರ: ಜಿಲ್ಲಾಡಳಿತ ಮತ್ತು ಕಂದಾಯ ಇಲಾಖಾ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕಂದಾಯ ದಿನ ಆಚರಣೆಯ ಅಂಗವಾಗಿ ಶ್ರಮದಾನದ ಮೂಲಕ ಸ್ವಚ್ಚತೆ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಕಂದಾಯ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿ,ಸಿಬ್ಬಂದಿ ಜೊತೆಗೂಡಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಚತಾ ಶ್ರಮದಾನ ಕೈಗೊಂಡು, ನಂತರ ಜಿಲ್ಲಾ ಪಂಚಾಯಿತಿಯ ರಸ್ತೆಯಲ್ಲಿರುವ ಚುನಾವಣಾ ವ್ಹೇರ್ ಹೌಸ್ ಆವರಣದಲ್ಲಿ ಗಿಡ ನೆಟ್ಟು ಸಸಿಗೆ ನೀರೆರೆದು ಮಾತನಾಡಿದ ಅವರು, ಸ್ವಚ್ಚತಾ ಕಾರ್ಯಕ್ರಮವು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನವು […]

ಶಾಸಕ ಯತ್ನಾಳ ವಕ್ಫ್ ಬಗ್ಗೆ ತಿಳಿದುಕೊಂಡು‌ ಮಾತನಾಡಲಿ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಕ್ಫ್ ಬಗ್ಗೆ ತಿಳಿದುಕೊಂಡು‌ ಮಾತನಾಡಲಿ ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ರೀಚೆಗೆ ಬಿಜೆಪಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಯತ್ನಾಳ‌ ಅವರು ವಕ್ಫ್ ಕಾನೂನು ರದ್ದುಪಡಿಸಲು‌ ಪ್ರಧಾನಿಗೆ ಪತ್ರ ಬರೆಯುವಿದಾಗಿ ಹೇಳಿದ್ದಾರೆ. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿಯೇ ವಕ್ಫ್ ಕಾನೂನು ಇದೆ. ಮುಜರಾಯಿಯಂತೆ ವಕ್ಫ್ ನಲ್ಲೂ ಇದೆ. ಮುಸ್ಲಿಂ ಸಮಾಜಕ್ಕೆ ಸೇರಿದ ವ್ಯಕ್ತಿಗಳು, ವಸ್ತು ಅಥವಾ ಆಸ್ತಿಯನ್ನು ಅಲ್ಲಾ(ದೇವರು)ನ ಹೆಸರು ಮೇಲೆ […]

ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇಂಡಿ ತಾಲೂಕಿನ ಝಳಕಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ವಲ್ಲಭ ಕಬಾಡೆ ಅಧ್ಯಕ್ಷತೆ ವಹಿಸಿದ್ದರು.  ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಮೇತ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನ ಉಪನ್ಯಾಸಕ ಡಾ. ರಮೇಶ ತೇಲಿ ಅವರು ಉಪನ್ಯಾಸ ನೀಡಿದರು. ಹಲಸಂಗಿ ಗೆಳೆಯರು 800 ತ್ರಿಪದಿ, ಗರತಿ ಹಾಡು ಸಂಗ್ರಹಿಸಿ ಅಚ್ಚರಿ ಮೂಡಿಸಿದ್ದಾರೆ.  […]

ಕೃಷಿ, ಶಿಕ್ಷಣ, ವ್ಯವಹಾರ ಸಾಲಗಳಿಗೆ ಒತ್ತು ನೀಡಿ ಪ್ರಗತಿ ಸಾಧಿಸಲು ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ನಾನಾ ಬ್ಯಾಂಕುಗಳಿಂದ ಒಟ್ಟು ರೂ. 17093 ಕೋ. ಸಾಲ ಒದಗಿಸಿದ್ದು, ಕಳೆದ ವರ್ಷಕ್ಕಿಂತ ಶೇ. 3.88 ರಷ್ಟು ಪ್ರಗತಿ ಸಾಧಿಸಲಾಗಿದೆ.  ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣೀಯ ಬ್ಯಾಂಕ್ ತ್ರೈಮಾಸಿಕ ಜಿಲ್ಲಾ ಸಲಹಾ […]

ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೌಲಭ್ಯ- ಗರ್ಭಿಣಿ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಲು ಕರೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು  ಎಂದು ಬಿ.ಎಲ್.ಡಿ.ಇ‌ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ‌ ಡಾ. ರಾಜೇಶ ಹೊನ್ನುಟಗಿ ಕರೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು […]

ಸಿಎಂ ಬದಲಾವಣೆ ಅಪ್ರಸ್ತುತ- ಅವರು ಆರೋಗ್ಯದಿಂದ, ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ- ದಿನೇಶ ಗುಂಡೂರಾವ

ವಿಜಯಪುರ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ.  ಈ ಕುರಿತು ಚರ್ಚೆಯೂ ನಡೆಯುತ್ತಿಲ್ಲ.  ವಿಷಯ ಈಗ ಅಪ್ರಸ್ತುತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಜಿಲ್ಲಾಸ್ಪತ್ರೆಯಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾ ಸೆಂಟರ್ ಅಸ್ಥಿ ಚಿಕಿತ್ಸಾ ಕೇಂದ್ರಕ್ಕೆ ಭೇಟಿದ ಬಳಿಕ ಅವರು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ.  ಈ ಬಗ್ಗೆ ಯಾವ ಚರ್ಚೆಯೂ ನಡೆಯುತ್ತಿಲ್ಲ.  ಸಿಎಂ ಬದಲಾವಣೆ ವಿಚಾರ ಈಗ ಅಪ್ರಸ್ತುತವಾಗಿದೆ.  ಉಳಿದವರು ಏನೇ […]