ಗರ್ಭಾವಸ್ಥೆಯಲ್ಲಿ ಅಪರೂಪದ ಸ್ತನಕ್ಯಾನ್ಸರ್- ಬೆಂಗಳೂರಿನಲ್ಲಿ ಮಹಿಳೆಗೆ ಯಶಸ್ವಿ ಚಿಕಿತ್ಸೆ
ಬೆಂಗಳೂರು: ಅವಳಿ ಶಿಶುಗಳ ಗರ್ಭಾವಸ್ಥೆಯಲ್ಲೇ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದ 37 ವರ್ಷದ ಗರ್ಭಿಣಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಂಕೊಲಾಜಿ ಸಲಹೆಗಾರರಾದ ಡಾ ಭರತ್ ಜಿ, ಮೆಡಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರ ಡಾ ವಿವೇಕ್ ಬೆಳತ್ತೂರ್ ಹಾಗೂ ಸರ್ಜಿಕಲ್ ಆಂಕೊಲಾಜಿ ಮತ್ತು ರೊಬೊಟಿಕ್ ವಿಭಾಗದ ನಿರ್ದೇಶಕ ಡಾ ಸಂದೀಪ್ ನಾಯಕ್ ಪಿ ನೇತೃತ್ವದ ತಂಡ ಈ ಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಶಸ್ತ್ರಚಿಕಿತ್ಸಕ ಆಂಕೊಲಾಜಿಯ […]
ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆ ವಿತರಣೆ, ವೈದ್ಯಕೀಯ ಶಿಬಿರ ಆಯೋಜನೆ- ಸದುಯೋಗ ಪಡೆದುಕೊಳ್ಳಲು ರಿಷಿ ಆನಂದ ಮನವಿ
ವಿಜಯಪುರ: ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಅಡಿಯಲ್ಲಿ ವಿಶೇಷ ಅಗತ್ಯವುಳ್ಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳಿಗಾಗಿ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಬಸವನಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕಿಗೆ ಸಂಬಂಧಿಸಿದಂತೆ ಅ.28ರಂದು ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿಯ ದೇವರಹಿಪ್ಪರಗಿ ರಸ್ತೆಯಲ್ಲಿರುವ ಎಂ.ಜಿ.ಕೋರಿ ಡಾ:ಬಿ.ಜಿ.ಬ್ಯಾಕೋಡ್ ಪದವಿ ಪುರ್ವ ಮಹಾವಿದ್ಯಾಲಯದಲ್ಲಿ, ಇಂಡಿ, ಚಡಚಣ, ಸಿಂದಗಿ ತಾಲೂಕಿಗೆ ಸಂಬಂಧಿಸಿದಂತೆ ಅ.29ರಂದು ಇಂಡಿ ನಗರದ ಬಸ್ ಸ್ಟ್ಯಾಂಡ್ ಹತ್ತಿರದ ಯುಬಿಎಂಪಿಎಸ್ […]
ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ವತಿಯಿಂದ ಬೈಕಥಾನ್ ಆಯೋಜನೆ
ಬೆಂಗಳೂರು: ಸ್ತನಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ವತಿಯಿಂದ ಪಿಂಕ್ ವುಮೆನ್ಸ್ ಶೀರ್ಷಿಕೆಯಡಿ ಬೈಕಥಾನ್ ಆಯೋಜಿಸಿತ್ತು. ಸ್ತನಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್ ಕೆ.ಆರ್. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ […]
ವೃಕ್ಷೋತ್ಥಾನ ಹೆರಿಟೇಜ್ ರನ್- 2024- ಯಶಸ್ಸಿಗೆ ಎಲ್ಲರೂ ಕೈಜೋಡಿಸಿ ಜನಜಾಗೃತಿ ಮೂಡಿಸಲು ಡಿಸಿ ಟಿ. ಭೂಬಾಲನ್ ಕರೆ
ವಿಜಯಪುರ, ಅ. 22: ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷೋತ್ಥಾನ ಹೆರಿಟೇಜ್ ರನ್-2024 ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾನಾ ಕಾಲೇಜುಗಳ ಪ್ರಾಚಾರ್ಯರೊಂದಿಗೆ ಸಭೆ ನಡೆಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೋಂಡಿದ್ದರು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಓಟಗಾರರು ಪಾಲ್ಗೋಳ್ಳಲು ಈಗಿನಿಂದಲೇ ನೋಂದಣಿ ಪ್ರಕ್ರಿಯೆಗೆ ವೇಗ ನೀಡಬೇಕು. ಅಲ್ಲದೇ, […]
ಅಯೋಡಿನ್ ಕೊರತೆಯ ಬಗ್ಗೆ ಜಾಗೃತಿ ಅವಶ್ಯಕ: ಸಚಿವ ಡಾ. ಎಂ.ಸಿ. ಸುಧಾಕರ್
ಬೆಂಗಳೂರು: ಅಯೋಡಿನ್ ಕೊರತೆಯ ಬಗ್ಗೆ ಗರ್ಭಿಣಿಯರು, ಹಾಲುಣಿಸುವ ತಾಯಂದಿರುವ ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ (ಐಜಿಡಿ) ಅವರ ವಿನೂತನ “ಆಶೀರ್ವಾದ್ ಸ್ಮಾರ್ಟ್ ಇಂಡಿಯಾ” ಕಾರ್ಯಕ್ರಮ ಹೆಚ್ಚು ಪ್ರಸ್ತುತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ ಹೇಳಿದರು. ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ “ಆಶಿರ್ವಾದ್ ಸ್ಮಾರ್ಟ್ ಇಂಡಿಯಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಯೋಡಿನ್ ಕೊರತೆ […]
ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು- ಡಾ. ಮಂಜುನಾಥ ಸಾವಂತ
ವಿಜಯಪುರ: ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಇದನ್ನು ಗುಣಪಡಿಸಬಹುದಾಗಿದೆ. ಇಲ್ಲದಿದ್ದರೆ ಅದು ನೇರವಾಗಿ ನರಮಂಡಲದ ಮೇಲೆ ಪರಿಣಾಮ ಬೀರಿ ಮೆದುಳಿಗೆ ಘಾಸಿಯಾಗಿ ಮಾರಣಾಂತಿಕವಾಗಬಹುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ ಹೇಳಿದ್ದಾರೆ. ಶನಿವಾರ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯ ಬಿ.ಎಲ್.ಡಿ.ಇ ಪಿಯು ಕಾಲೇಜಿನಲ್ಲಿ ಶ್ರೀ ಬಿ. ಎಂ. ಪಾಟೀಲ, ವೈದ್ಯಕೀಯ ಮಹಾವಿದ್ಯಾಲಯ, ಸಮುದಾಯ ವೈದ್ಯಕೀಯ ವಿಭಾಗ ಹಾಗೂ ಶಸ್ತ್ರ […]
ದೇಶದಲ್ಲಿಯೇ ಮೊದಲು- ರೊಬೋಟ್ ನೆರವಿನಿಂದ ಸ್ತನವನ್ನು ಪುನರ್ನಿರ್ಮಾಣ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್ ಆಸ್ಪತ್ರೆ ವೈದ್ಯರು
ಬೆಂಗಳೂರು: ಮೂರನೇ ಹಂತದ ಸ್ತನಕ್ಯಾನ್ಸರ್‌ನಿಂದ ಬಳಲುತ್ತಿದ್ದ 38 ವರ್ಷದ ಮಹಿಳೆಗೆ ದೇಶದಲ್ಲೇ ಮೊದಲ ಬಾರಿಗೆ ತನ್ನದೇ ದೇಹದ ಮತ್ತೊಂದು ಭಾಗವನ್ನು ಬಳಸಿಕೊಂಡು ರೊಬೋಟ್ ಸಹಾಯದ ಮೂಲಕ ಯಶಸ್ವಿಯಾಗಿ ಸ್ತನವನ್ನು ಪುನರ್ ನಿರ್ಮಿಸಲಾಗಿದೆ. ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಆಂಕೊಲಾಜಿ ಮತ್ತು ರೊಬೊಟಿಕ್ ಮತ್ತು ಲ್ಯಾಪರೊಸ್ಕೋಪಿಕ್ ಸರ್ಜರಿ ವಿಭಾಗದ ನಿರ್ದೇಶಕ ಡಾ. ಸಂದೀಪ್ ನಾಯಕ್ ಪಿ ಅವರ ವೈದ್ಯ ತಂಡ ಈ ಸಾಧನೆ ಮಾಡಿದೆ. ಈ ಕುರಿತು ಮಾತನಾಡಿದ ಡಾ. ಸಂದೀಪ್ ನಾಯಕ ಪಿ., 38 ವರ್ಷದ ರೇಹಾ […]
ರಸ್ತೆ ಅಪಘಾತದಲ್ಲಿ ತೀವ್ರವಾಗಿ ತಲೆಗೆ ಪೆಟ್ಟಾಗಿದ್ದ 19 ವರ್ಷದ ಯುವಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ, 19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ […]
ಬಿ.ಎಲ್.ಡಿ.ಇ ಟ್ರಾಮಾ ಆ್ಯಂಡ್ ಎಮರ್ಜೆನ್ಸಿ ನೂತನ ಕಟ್ಟಡ ಉದ್ಘಾಟನೆ- ಸಂಸ್ಥೆಯನ್ನು ಕಟ್ಟಿ ಬೆಳಿಸಿದ ಮಹನೀಯರ ಸ್ಮರಣೆ ಕಾರ್ಯಕ್ರಮ
ವಿಜಯಪುರ: ಶತಮಾನದ ಹಿಂದೆ ಈ ಭಾಗದ ಶರಣರು ಮತ್ತು ಮಹನೀಯರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕದ ಜನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾಗಲು ಕಾರಣರಾಗಿದ್ದಾರೆ ಎಂದು ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ಚೇರಮನ್ ಮತ್ತು ಕಾಹೆರ ಕುಲಾಧಿಪತಿ ಪ್ರಭಾಕರ ಬಿ. ಕೋರೆ ಹೇಳಿದ್ದಾರೆ. ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಪಘಾತ ಮತ್ತು ತುರ್ತು ಚಿಕಿತ್ಸೆ ವಿಭಾಗದ ಕಟ್ಟಡ(ಟ್ರಾಮಾ ಸೆಂಟರ್ ಮತ್ತು ಎಮರ್ಜೆನ್ಸಿ ಮೆಡಿಸೀನ್) ಉದ್ಘಾಟಿಸಿದ ಅವರು, ಬಿ.ಎಲ್.ಡಿ.ಇ ಸಂಸ್ಥೆಯನ್ನು ಕಟ್ಟಿ […]
ಇಂಡಿಯಲ್ಲಿ ಡೆಂಗ್ಯು ಜನಜಾಗೃತಿ ಜಾಥಾಕ್ಕೆ ಡಿಸಿ ಟಿ. ಭೂಬಾಲನ್ ಚಾಲನೆ
ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕರೆ ನೀಡಿದ್ದಾರೆ. ಇಂಡಿ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಡೆಂಗ್ಯು ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಳೆಗಾಲ ಆರಂಭವಾಗಿರುವುದರಿಂದ ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ಜಾಗೃತೆ ವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇವಾರಿ ಮಾಡಬೇಕು, […]