ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೌಲಭ್ಯ- ಗರ್ಭಿಣಿ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಲು ಕರೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಕರೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು […]
ರಂಗೋಲಿ ಮೂಲಕ ರಾಷ್ಟ್ರೀಯ, ಅಂತಾರಾಷ್ಟೀಯ ದಾಖಲೆಗೆ ಸಿದ್ಧರಾದ ವೈದ್ಯಕೀಯ ವಿದ್ಯಾರ್ಥಿಗಳು- ವಿನೂನತ ಪ್ರಯತ್ನಕ್ಕೆ ಆಲ್ ದಿ ಬೆಸ್ಟ್
ವಿಜಯಪುರ: 1500 ವೈದ್ಯಕೀಯ ವಿದ್ಯಾರ್ಥಿಗಳು, 40 ಮಾರ್ಗದರ್ಶಕರು ಮತ್ತು 20 ಜನ ಮೇಲ್ವಿಚಾರಕರು, 50 ಸಾವಿರ ಚದುರ ಅಡಿ ಪ್ರದೇಶದಲ್ಲಿ ಚಿತ್ರ ಬಿಡಿಸಲು 10 ಟನ್ ರಂಗೋಲಿ ಖರೀದಿ. ಅರೇ, ಇದೇನಿದು ವಿಚಿತ್ರ ಎಂದು ನೀವು ಅಂದುಕೊಳ್ಳಬಹುದು. ಆದರೆ, ಇದೆಲ್ಲ ಮಾಡುತ್ತಿರುವುದು ಕೈಯ್ಯಲ್ಲಿ ಪುಸ್ತಕ ಹಿಡಿದು ಕಲಿಯುವಾಗಲೇ ಸ್ಟೆಥೋಸ್ಕೋಪ್ ಬಳಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಬೇಕಾದ ವೈದ್ಯರು. ಅದೂ ಕೂಡ ಒಂದು ವಿನೂತನ ಕಾರ್ಯಕ್ರಮಕ್ಕಾಗಿ. ಇದು ಬಸವನಾಡು ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ […]
ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆ ವೈದ್ಯರ ಸಾಧನೆ- ಒಂದೇ ದಿನ ಎಂಟು ಮಕ್ಕಳು ಸೇರಿ 13 ಜನರಿಗೆ ಹೃದಯ ಸಂಬಂಧಿ ಯಶಸ್ವಿ ಶಸ್ತ್ರಚಿಕಿತ್ಸೆ
ವಿಜಯಪುರ: ನಗರದ ಡಾ. ಬಿದರಿಯವರ ಅಶ್ವಿನಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯರು ಬೆಂಗಳೂರಿನ ವೈದ್ಯರ ಜೊತೆ ಸೇರಿ ಒಂದೇ ದಿನ ಎಂಟು ಮಕ್ಕಳು ಸೇರಿ ಒಟ್ಟು 13 ಜನರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನೀಡಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದ ಖ್ಯಾತ ಹೃದಯರೋಗ ತಜ್ಞ ಡಾ. ಪಿ. ವಿ. ಸುರೇಶ, ಅಶ್ವಿನಿ ಆಸ್ಪತ್ರೆಯ ಡಾ. ಗೌತಮ ವಗ್ಗರ, ಡಾ. ಗೋಪಾಲಕೃಷ್ಣ ದೇಶಪಾಂಡೆ, ಡಾ. ಬಸವರಾಜ ಉಟಗಿ ಸೇರಿಕೊಂಡು ಎಂಟು ಮಕ್ಕಳ ಡಿವೈಸ್ ಕ್ಲೋಸರ್ ಅಂದರೆ ಹೃದಯ ರಂಧ್ರ […]
ಬಸವ ನಾಡಿನ ವೈದ್ಯರಿಂದ ಯಶಸ್ಸಿ ಕಿಡ್ನಿ ಕಸಿ- ಬಿಹಾರ ಮೂಲದ ಯುವಕನಿಗೆ ಉಚಿತವಾಗಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ
ವಿಜಯಪುರ: ರೋಗಿಗಳಿಗೆ ಶಸ್ತ್ರಚಿಕಿತ್ಸೆಗಳೆಂದರೆ ಸಾಕು ಅವರಿಗಷ್ಟೇ ಅಲ್ಲ ಅವರ ಸಂಬಂಧಿಕರಿಗೆ ಚಿಂತೆ ಎದುರಾಗುತ್ತದೆ. ಅದರಲ್ಲೂ ಬಡವರಿಗೆ ಮೂತ್ರಪಿಂಡ ಕೃಸಿ ಶಸ್ತ್ರಚಿಕಿತ್ಸೆ ಬಗ್ಗೆ ಕೇಳಿದರೂ ಆತಂಕ ಉಂಟಾಗುತ್ತದೆ. ಅದರ ಚಿಕಿತ್ಸಾ ವೆಚ್ಚದ ಬಗ್ಗೆಯೂ ಗಾಬರಿಯಾಗುತ್ತದೆ. ಬಡವರ ಪಾಲಿಗೆ ಈ ಶಸ್ತ್ರಚಿಕಿತ್ಸೆಗಳು ಕೈಗೆಟುಕದಂತಾಗಿ ಬಿಡುತ್ತದೆ. ಆದರೆ, ಬಸವನಾಡು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯರು ಬಿಹಾರ ಮೂಲದ 17 ವರ್ಷದ ಯುವಕನೊಬ್ಬನಿಗೆ ಉಚಿತವಾಗಿ ಕಿಡ್ನಿಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಿಡ್ನಿಕಸಿ […]
ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮೊದಲ ತೆರೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ- ಡಾ. ಆರ್. ಎಸ್. ಮುಧೋಳ
ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು. ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳು ಮತ್ತು ಜನಪರ ಆರೋಗ್ಯ ಸೇವೆಗಳ ಮೂಲಕ ಜನರನ್ನು ತಲುಪುತ್ತಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಮತ್ತು ಸಚಿವರಾದ ಶ್ರೀ […]
ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಅಸಂಘಟಿತ ಕಾರ್ಮಿಕರ ಆರೋಗ್ಯಕ್ಕಾಗಿ ಫ್ಯಾಮಿಲಿ ಹೆಲ್ತ್ ಕಾರ್ಡ್ ವಿತರಣೆ- ಇದರ ವಿಶೇಷತೆ ಏನು ಗೊತ್ತಾ?
ವಿಜಯಪುರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಬಿ.ಎಲ್.ಡಿ.ಇ ಆಸ್ಪತ್ರೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಫ್ಯಾಮಿಲಿ ಹೆಲ್ತ್ ಕಾರ್ಡ್ ವಿತರಣೆ ಆರಂಭಿಸಿದೆ. ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ.ಪಾಟೀಲ ಅವರ ಜನ್ಮದಿನದ ಅಂಗವಾಗಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆಯಡಿ ಕುಟುಂಬದ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮಕ್ಕೆ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, […]
ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ತೆರೆದ ಹೃದಯ, ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ- ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ
ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಅತೀ ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಟ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ತೆರೆದ ಹೃದಯ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ […]
ಮೀರಜ್, ಸೋಲಾಪುರ ವೈದ್ಯರು ನಿರಾಕರಿಸಿದ ರೋಗಿಗೆ ಬಸವ ನಾಡಿನ ಡಾಕ್ಟರ್ ರಿಂದ ಸ್ಪಂದನೆ- 9 ತಿಂಗಳಿಂದ ಹಾಸಿಗೆಯಲ್ಲಿದ್ದ 85 ವರ್ಷದ ಅಜ್ಜ ನಡೆದಾಡುವಂತೆ ಮಾಡಿದ ವೈದ್ಯರು
ವಿಜಯಪುರ: ಮಹಾರಾಷ್ಟ್ರದ ಮೀರಜ್ ಮತ್ತು ಸೋಲಾಪುರಗಳಲ್ಲಿ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದ ಮತ್ತು ಕಳೆದ ಒಂಬತ್ತು ತಿಂಗಳಿಂದ ನಡೆಯಲಾಗದೇ ಹಾಸಿಗೆ ಹಿಡಿದಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವಿಜಯಪುರದ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯರು ಗಮನ ಸೆಳೆದಿದ್ದಾರೆ. ಇಂಡಿ ತಾಲೂಕಿನ 85 ವರ್ಷದ ವೃದ್ದರೊಬ್ಬರು ಬಿದ್ದು ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಎಡ ಚಪ್ಪೆ ಮುರಿದ ಕಾರಣ ನಡೆಯಲೂ ಅವರಿಗೆ ಆಗುತ್ತಿರಲಿಲ್ಲ. ಅಲ್ಲದೇ, ಹಾಸಿಗೆಯಲ್ಲಿಯೇ ಇದ್ದ ಕಾರಣ ಬಲಗಾಲಿನ ಚರ್ಮಕ್ಕೂ ಗಂಭೀರ ಗಾಯವಾಗಿತ್ತು. ಮೇಲಾಗಿ ಈ ರೋಗಿ ಹೃದಯ […]
ಮೆದುಳು, ಬೆನ್ನುಹುರಿ ಚಿಕಿತ್ಸೆಗೆ ಈ ಆಸ್ಪತ್ರೆ ವರದಾನ- ಡಾ. ಮಲ್ಲಪ್ಪ ಹುಗ್ಗಿಯವರ ಕೈಗುಣಕ್ಕೆ ರೋಗಿಗಳು ಫುಲ್ ಖುಷ್
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯರು ರೋಗಿಯೊಬ್ಬನ ಮೆದುಳಿನಲ್ಲಿ ಬೆಳೆದಿದ್ದ ಗಡ್ಡೆಯನ್ನು ತೆಗೆಯುವ ಮೂಲಕ ಅಪರೂಪದ ಶಸ್ತçಚಿಕಿತ್ಸೆಯನ್ನು ನಡೆಸಿದ್ದಾರೆ. 52 ವರ್ಷದ ವ್ಯಕ್ತಿಯೊಬ್ಬರು ತೀವ್ರ ತೆಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ರೋಗಿಯನ್ನು ಪರೀಕ್ಷಿಸಿದ ನರರೋಗ ತಜ್ಞ ಡಾ. ಮಲ್ಲಪ್ಪ ವಿ. ಹುಗ್ಗಿ ಎಲ್ಲ ವ್ಯದ್ಯಕೀಯ ತಪಾಸಣೆ ನಡೆಸಿದಾಗ ರೋಗಿಯ ತಲೆಯಲ್ಲಿ ಗಡ್ಡೆ ಬೆಳೆದಿರುವುದು ಪತ್ತೆಯಾಗಿದೆ. ಆಗ ವೈದ್ಯರು ಸತತ ನಾಲ್ಕು […]
ದೇಶದಲ್ಲಿಯೇ ಮೊದಲು- ಸುಮಾರು 600 ಜನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಮನೆಮನೆಗೆ ತೆರಳಿ ಜನಜಾಗೃತಿ- ಅಂಗದಾನದ ಮಹತ್ವ ತಿಳಿಸಿಡುವ ವಿನೂತನ ಪ್ರಯತ್ನ
ವಿಜಯಪುರ: ದೇಶದಲ್ಲಿಯೇ ಇದೇ ಮೊದಲ ಬಾರಿಗೆ ವಿನೂತನ ಕಾರ್ಯಕ್ರಮವೊಂದನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಬಸವನಾಡಿನ ಪ್ರತಿಷ್ಠಿತ ಬಿ.ಎಲ್.ಡಿ.ಈ ಡೀಮ್ಡ್ ವಿಶ್ವವಿದ್ಯಾಲಯದ ಸುಮಾರು 600 ಜನ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಜನಮೆಚ್ಚುವ ಕೆಲಸ ಮಾಡಿದ್ದಾರೆ. ಆಗಷ್ಟು 3 ರಾಷ್ಟ್ರೀಯ ಅಂಗದಾನ ದಿನಾಚರಣೆ ನಡೆಯುತ್ತದೆ. ಈ ಕಾರ್ಯಕ್ರಮದ ಮಹತ್ವನ್ನು 25 ಸಾವಿರ ಮನೆಮನೆಗಳಿಗೆ ತೆರಳಿ ಜನಜಾಗೃತಿ ಮಾಡುವ ಮೂಲಕ ಈ ವೈದ್ಯರು ಮತ್ತು ವಿದ್ಯಾರ್ಥಿಗಳು ರಾಷ್ಟ್ರೀಯ ಅಂಗದಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಗಮನ ಸೆಳೆದಿದ್ದಾರೆ. ಬಿ.ಎಲ್.ಡಿ.ಇ ಡೀಮ್ಡ್ ವಿವಿ […]