ಮಾ. 9 ರಂದು ಬಿ. ಎಲ್. ಡಿ. ಇ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ವಿಶ್ವಮೂತ್ರ ಪಿಂಡ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಸೇರಿ ನಾನಾ ಕಾರ್ಯಕ್ರಮ

ವಿಜಯಪುರ: ವಿಶ್ವ ಮೂತ್ರಪಿಂಡ ದಿನಾಚರಣೆ ಅಂಗವಾಗಿ ಮಾರ್ಚ್ 9 ರಂದು ಗುರುವಾರ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ಜನಜಾಗೃತಿ ಜಾಥಾ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಕಾರ್ಯಾಗಾರ ನಡೆಯಲಿದೆ. ಆಸ್ಪತ್ರೆಯ ಮೂತ್ರಜನಕಾಂಗ ಶಸ್ತ್ರಚಿಕಿತ್ಸಾ ವಿಭಾಗ, ಮೂತ್ರಪಿಂಡ ಚಿಕಿತ್ಸಾ ವಿಭಾಗ ಹಾಗೂ ಶ್ರೀ ಬಿ.ಎಂ.ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬೆ.10ಗಂ. ರಿಂದ ಸಂ.4 ಗಂಟೆಯವರೆಗೆ ಈ ಶಿಬಿರ ನಡೆಯಲಿದ್ದು, ಶೇ.50 ರಿಯಾಯಿತಿ ದರದಲ್ಲಿ ಹೊಟ್ಟೆ ಸ್ಕ್ಯಾನಿಂಗ್, ಎಕ್ಸ್‍ರೆ ಮತ್ತು ಸಿಬಿಸಿ ತಪಾಸಣೆ […]
ಕಾಖಂಡಕಿ, ಬರಟಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ- ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕಾಖಂಡಕಿ ಮತ್ತು ತಿಕೋಟಾ ತಾಲೂಕಿನ ಬರಟಗಿ ಗ್ರಾಮಗಳಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳಿಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಈ ಶಿಬಿರಗಳನ್ನು ಆಯೋಜಿಸಲಾಗಿತ್ತು. ಕಾಖಂಡಕಿ ಶಿಬಿರ ಕಾಖಂಡಕಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ೯೫೦ ಜನರ […]
ಅವಧಿ ಪೂರ್ವ ಜನಿಸಿದ, ಅತೀ ಕಡಿಮೆ ತೂಕದ ಅವಳಿ ಮಕ್ಕಳಿಗೆ ಚಿಕಿತ್ಸೆ ನೀಡಿ ಪೋಷಕರ, ಜನಮನಗೆದ್ದ ಬಿ.ಎಲ್.ಡಿ.ಇ ಆಸ್ಪತ್ರೆ ವೈದ್ಯರು

ವಿಜಯಪುರ: ಪೋಷಕರೂ ನಂಬಲು ಅಸಾಧ್ಯವಾದ ಮತ್ತು ಅವಧಿಪೂರ್ವ ಜನಿಸಿದ ಹಾಗೂ ಅತೀ ಕಡಿಮೆ ತೂಕ ಹೊಂದಿದ್ದ ಅವಳಿ ಮಕ್ಕಳನ್ನು ಅಕ್ಕರೆಯ ಆರೈಕೆಯಿಂದ ವೈದ್ಯರು ಗುಣಪಡಿಸಿ ಪೋಷಕರಿಗೆ ಹಸ್ತಾಂತರಿಸಿದ ಹೃದಯಸ್ಪರ್ಶಿ ಘಟನೆಗೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆ ಸಾಕ್ಷಿಯಾಗಿದೆ. ಹೆಣ್ಣು ಮಗು ಅನನ್ಯ ಮತ್ತು ಗಂಡು ಮಗು ಆಗಸ್ತ್ಯ(ಹೆಸರು ಬದಲಾಯಿಸಲಾಗಿದೆ)ರ ಆರೋಗ್ಯ ಸತತ 23 ದಿನಗಳ ಉತ್ತಮ ಆರೈಕೆಯಿಂದ ಈಗ ಸುಧಾರಿಸಿದ್ದು, ಕೆಕ್ ಕತ್ತರಿಸಿ ಪೋಷಕರಿಗೆ ಶುಭ ಕೋರಿ […]
ಹರನಾಳ ಗ್ರಾಮದಲ್ಲಿ ಮಹಿಳೆಯರು, ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಹರನಾಳ ಗ್ರಾಮದಲ್ಲಿ ನಡೆಯಿತು. ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ನಡೆದ ಈ ಶಿಬಿರದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ಸ್ತ್ರಿರೋಗ ಮತ್ತು ಪ್ರಸೂತಿ ವಿಭಾಗದ ವೈದ್ಯರಾದ ಪ್ರೊ. ನೀಲಮ್ಮ ಪಾಟೀಲ, ಡಾ. ನಮಿತಾ ಗುಪ್ತಾ ಮಹಿಳೆಯರ ಆರೋಗ್ಯ ತಪಾಸಣೆ ನಡೆಸದಿರು. ಚಿಕ್ಕಮಕ್ಕಳ ವಿಭಾಗದ ವೈದ್ಯರಾದ ಡಾ. ತ್ರಿಮಲ್ ಕುಲಕರ್ಣಿ, […]
ಸಾಮಾಜಿಕ ಜಾಲತಾಣಗಳು ನಿರಂತರ ವೈದ್ಯಕೀಯ ಶಿಕ್ಷಣ ಪ್ರಸರಣಕ್ಕೆ ಬಹುಪಯೋಗಿಯಾಗಿವೆ- ಡಾ. ವೈ. ಎಂ. ಜಯರಾಜ

ವಿಜಯಪುರ: ವೈದ್ಯಕೀಯ ಶಿಕ್ಷಣ ಮತ್ತು ಈ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳನ್ನು ಸಾಮಾಜಿಕ ಜಾಲತಾಣಗಳ ಕ್ರಾಂತಿಯಿಂದಾಗಿ ಅತೀ ಹೆಚ್ಚು ಜನರನ್ನು ಸಂಪರ್ಕಿಸಲು ಸಾಧ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಲಾಯಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮೆಡಿಸೀನ್, ನ್ಯೂರಾಲಾಜಿ ಮತ್ತು ನ್ಯೂರೊಸರ್ಜರಿ ವಿಭಾಗದ ಆಶ್ರಯದಲ್ಲಿ ನಡೆದ ಮೂರ್ಛೆರೋಗದ ಜೊತೆ ಜೀವನ ಸಾಗಿಸುವ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ(ಸಿಎಂಇ) ಕಾರ್ಯಕ್ರಮ ಉದ್ಘಾಟಿಸಿ […]
ಕ್ಯಾನ್ಸರ್ ರೋಗಿಗಳಿಗೆ ಪ್ರೀತಿಯ ಆರೈಕೆ ಮತ್ತು ಆಪ್ತ ಸಮಲೋಚನೆಯಿಂದ ಉಪಚರಿಸಿದರೆ ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ- ಡಾ. ಬಿ. ಆರ್. ಪಾಟೀಲ

ವಿಜಯಪುರ: ಕ್ಯಾನ್ಸರ್ ರೋಗಿಗಳಿಗೆ ಪ್ರೀತಿಯ ಆರೈಕೆ ಮತ್ತು ಆಪ್ತ ಸಮಲೋಚನೆಯಿಂದ ಉಪಚರಿಸಿದರೆ ರೋಗವನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಯಂತ್ರಿಸಿ ಗುಣಪಡಿಸಬಹುದಾಗಿದೆ ಎಂದು ಹುಬ್ಬಳ್ಳಿಯ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯ ಚೇರ್ಮನ್ ಡಾ. ಬಿ. ಆರ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಬಿ ಎಲ್ ಡಿ ಇ ಡಿಮ್ಡ್ ವಿವಿಯಲ್ಲಿ ದಿ. ಡಾ. ಸಿ. ಆರ್. ಬಿದರಿ ಸ್ಮಾರಕ ನಿರಂತರ ವೈದ್ಯಕೀಯ ಶಿಕ್ಷಣ(ಸಿಎಂಇ) ಅಂಗವಾಗಿ ನಡೆದ ಗ್ರಂಥಿ ವಿಜ್ಞಾನ(ಆಂಕಾಲಜಿ) ರಾಜ್ಯ ಮಟ್ಟದ ಒಂದು ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ […]
ಟಕ್ಕಳಕಿ ಎಲ್. ಟಿ. ಯಲ್ಲಿ ಮಹಿಳೆಯರು, ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ತಿಕೋಟಾ ತಾಲೂಕಿನ ಟಕ್ಕಳಕಿ ಎಲ್. ಟಿ. ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ. ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ರಾಜಶ್ರೀ ಯಲಿವಾಳ ಮತ್ತು ಚಿಕ್ಕ ಮಕ್ಕಳ ಚಿಕಿತ್ಸಾ ವಿಭಾಗದ ವೈದ್ಯ ಡಾ. ರಾಜೇಶ […]
ದೇವರ ನಿಂಬರಗಿ, ಜಾಲಗೇರಿಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ಬೃಹತ್ ಚಿಕಿತ್ಸಾ ಶಿಬಿರ ಸಾವಿರಾರು ಜನರಿಗೆ ಆರೋಗ್ಯ ತಪಾಸಣೆ

ವಿಜಯಪುರ: ಚಡಚಣ ತಾಲೂಕಿನ ದೇವರ ನಿಂಬರಗಿ ಮತ್ತು ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮಗಳಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ, ಮತ್ತು ಬೃಹತ್ ಚಿಕಿತ್ಸಾ ಶಿಬಿರ ನಡೆಯಿತು. ದೇವರ ನಿಂಬರಗಿ ಗ್ರಾಮದ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ನಡೆದ ಶಿಬಿರದಲ್ಲಿ 998 ರೋಗಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ 12 ಜನರು ರಕ್ತದಾನ ಮಾಡಿದರು. ಈ ಶಿಬಿರದಲ್ಲಿ ಬಿ.ಎಲ್.ಡಿ.ಇ. […]
ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆಗೆ ಖಾಸಗಿ ವಲಯದ ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ

ವಿಜಯಪುರ: ನಗರದ ಪ್ರತಿಷ್ಠಿತ ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆಗೆ ರಾಜ್ಯ ಸರಕಾರ ಖಾಸಗಿ ಆಸ್ಪತ್ರೆಗೞ ವಲಯದಲ್ಲಿ ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ ನೀಡಿದೆ. ಗಣರಾಜ್ಯೋತ್ಸವದ ಅಂಗವಾಗಿ ವಿಜಯಪುರದಲ್ಲಿ ಭಾರತ ರತ್ನ ಡಾ. ಬಿ. ಆರ್. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಆಸ್ಪತ್ರೆಯ ಮುಖ್ಯಸ್ಥ ಡಾ. ಎಲ್. ಎಚ್. ಬಿದರಿ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸಂಸದ ರಮೇಶ […]
ಗಡಿಗ್ರಾಮ ಸಿದ್ಧಾಪುರ(ಅ) ದಲ್ಲಿ ಮಹಿಳೆಯರು, ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಗ್ರಾಮೀಣ ಮಹಿಳೆಯರ ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರ ಗಡಿ ಭಾಗದ ತಿಕೋಟಾ ತಾಲೂಕಿನ ಸಿದ್ಧಾಪುರ(ಅ) ಗ್ರಾಮದಲ್ಲಿ ನಡೆಯಿತು. ವಿಜಯಪುರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ಹಾಗೂ ಮಕ್ಕಳ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ರೋಗಿಗಳಿಗೆ ಅಗತ್ಯವಾಗಿರುವ ಔಷಧಿಯನ್ನು ಉಚಿತವಾಗಿ ವಿತರಿಸಲಾಯಿತು. ಅಲ್ಲದೇ, ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿರುವವರಿಗೆ ವಿಜಯಪುರದ ಬಿ. ಎಲ್. […]