ಮಹಿಳೆಯರು ಮೌಢ್ಯಗಳ ಬಗ್ಗೆ ಜಾಗೃತರಾಗಿ ಆರೋಗ್ಯದ ಕಡೆಗೆ ಗಮನ ಹರಿಸಬೇಕು- ಡಾ. ಆರ್. ಬಿ. ಕೊಟ್ನಾಳ

ವಿಜಯಪುರ: ಮಹಿಳೆಯರು ಮೌಢ್ಯಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಬಿ. ಎಲ್. ಡಿ. ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಹೇಳಿದ್ದಾರೆ. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜು ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಲೈಬ್ರರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಸಬಲೀಕರಣ ಕುರಿತ ಒಂದು ದಿನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಆರೋಗ್ಯ ಕುಟುಂಬ ನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ. ಮಹಿಳೆಯರು ಆರೋಗ್ಯವಾಗಿದ್ದರೆ ಕುಟುಂಬವೂ ಆರೋಗ್ಯವಾಗಿರುತ್ತದೆ. […]
ಘೋಣಸಗಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುತ್ತಿರುವ ಕಾರ್ಯಕ್ರಮ

ವಿಜಯಪುರ: ಬಿ ಎಲ್ ಡಿ ಇ ಆಸ್ಪತ್ರೆಯ ವೈದ್ಯರು ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಮುಂದುವರೆಸಿದ್ದಾರೆ. ತಿಕೋಟಾ ತಾಲೂಕಿನ ಘೊಣಸಗಿ ಗ್ರಾಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಬೃಹತ್ ಶಿಬಿರ ನಡೆಯಿತು. ಈ ಶಿಬಿರದಲ್ಲಿ 400ಕ್ಕೂ ಹೆಚ್ಚು ಜನ ಮಹಿಳೆಯರು ಮತ್ತು ಮಕ್ಕಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅಲ್ಲದೇ, ಅಗತ್ಯ ರೋಗಿಗಳಿಗೆ ಉಚಿತವಾಗಿ ಔಷಧಿ ವಿತರಣೆ ಮಾಡಲಾಯಿತು. ಬಿ ಎಲ್ ಡಿ ಇ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ವೈದ್ಯರಾದ ಡಾ. ಗಿರೀಶ ಬಿರಾದಾರ ಪಾಟೀಲ, […]
ಅಳಗಿನಾಳ ಗ್ರಾಮದಲ್ಲಿ ಬಿ ಎಲ್ ಡಿ ಇ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ, ಬೃಹತ್ ಚಿಕಿತ್ಸಾ ಶಿಬಿರ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ತಿಕೋಟಾ ತಾಲೂಕಿನ ಅಳಗಿನಾಳ ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಬೃಹತ್ ಶಿಬಿರ ನಡೆಯಿತು. ಗ್ರಾಮದ ವಿಠ್ಠಲ ರುಕ್ಮಿಣಿ ಮಂದಿರದ ಆವರಣದಲ್ಲಿ ನಡೆದ ಈ ಶಿಬಿರದಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ಹಾಗೂ ಮಕ್ಕಳ ತಜ್ಞ ವೈದ್ಯರು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಅಲ್ಲದೇ, ಉಚಿತವಾಗಿ ಔಷಧಿ ವಿತರಣೆ ಮಾಡಿದರು. ಅಷ್ಟೇ ಅಲ್ಲ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ವಿಜಯಪುರ ಬಿ. ಎಲ್. ಡಿ. ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಶಿಫಾರಸು ಮಾಡಿದರು. ಈ ಸಂದರ್ಭದಲ್ಲಿ 69 ಮಕ್ಕಳು ಸೇರಿದಂತೆ ಒಟ್ಟು 230 ಜನರ ಆರೋಗ್ಯ […]
ಯತ್ನಾಳದಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ವತಿಯಿಂದ ಮಹಿಳೆಯರ, ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ತಿಕೋಟಾ ತಾಲೂಕಿನ ಗಡಿಗ್ರಾಮ ಯತ್ನಾಳದಲ್ಲಿ ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಬೃಹತ್ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ವೈದ್ಯರು ಮತ್ತು ಮಕ್ಕಳ ಚಿಕಿತ್ಸಾ ವಿಭಾಗದ ಡಾಕ್ಟರುಗಳು ರೋಗಿಗಳ ತಪಾಸಣೆ ನಡೆಸಿದರು. ಅಲ್ಲದೇ, ಉಚಿತವಾಗಿ ಔಷಧಿ ವಿತರಣೆ ಮಾಡಿದರು. ಅಷ್ಟೇ ಅಲ್ಲ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ವಿಜಯಪುರ ಬಿ. […]
ಹೃದ್ರೋಗ, ಮೂತ್ರ ಜನಕಾಂಗ ರೋಗಿಗಳ ಪಾಲಿಗೆ ವರದಾನವಾದ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ- ಇಲ್ಲಿರುವ ಸೌಲಭ್ಯಗಳೇನು ಗೊತ್ತಾ?

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ. ಡೀಮ್ಡ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹೃದ್ರೋಗ ಮತ್ತು ಮೂತ್ರಜನಕಾಂಗ ರೋಗಿಗಳ ಪಾಲಿಗೆ ವರದಾನವಾಗಿ ಪರಿಣಮಿಸಿದೆ ಎಂದು ಡೀಮ್ಡ್ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅತ್ಯಾದುನಿಕ ಫಿಲಿಫ್ಸ್, ಅಝೂರಿಯಾನ್ ಎಂ. 20 ಹೃದ್ರೋಗ ಡಯಾಗ್ನಾಸ್ಟ್ರಿಕ್ ಕ್ಯಾಥÀಲ್ಯಾಬ್ ಸೌಲಭ್ಯ ಇಲ್ಲಿ ಲಭ್ಯವಿದೆ. ದಿನದ 24 ಗಂಟೆಗಳ […]
ಗಿನ್ನಿಸ್ ದಾಖಲೆಯ ಅಂಗವಾಗಿ ಸೈನಿಕ ಶಾಲೆಯ ಆವರಣದಲ್ಲಿ ಯೋಗಾಥಾನ- 25 ಸಾವಿರಕ್ಕೂ ಹೆಚ್ಚು ಜನ ಯೋಗಾಪಟುಗಳು ಭಾಗಿ

ವಿಜಯಪುರ: ದೇಹ ಮತ್ತು ಮನಸ್ಸನ್ನು ಸದೃಡಗೊಳಿಸಲು ಜೀವನದಲ್ಲಿ ಯೋಗಾಭ್ಯಾಸ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ನಗರದ ಸೈನಿಕ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗಾಥಾನಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗದಿಂದ ನಮ್ಮ ಆರೋಗ್ಯಕ್ಕೆ ಪ್ರಯೋಜನವಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಅಷ್ಟೇ […]
ಮಹಿಳೆಯರು ರೋಗಲಕ್ಷಣ ಕಂಡು ಬಂದರೆ ಸಂಕೋಚವಿಲ್ಲದೆ ಚಿಕಿತ್ಸೆ ಪಡೆದರೆ ಮಾರಕ ರೋಗ ತಡೆಗಟ್ಟಲು ಸಾಧ್ಯ- ಡಾ. ಆರ್. ಎಸ್. ಮುಧೋಳ

ವಿಜಯಪುರ: ಮಹಿಳೆಯರು ರೋಗಲಕ್ಷಣ ಕಂಡು ಬಂದ ತಕ್ಷಣ ಯಾವುದೇ ಸಂಕೋಟವಿಲ್ಲದೇ ವೈದ್ಯರನ್ನು ಸಂಪರ್ಕಿಸಿದರೆ ಮಾರಕ ರೋಗಗಳಿಗೆ ಆರಂಭದಲ್ಲಿಯೇ ಚಿಕಿತ್ಸೆ ನೀಡಬಹುದು ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಅರಕೇರಿಯಲ್ಲಿ ನಡೆದ ಬಿ. ಎಲ್. ಡಿ. ಇ. ಸಂಸ್ಥೆಯ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ […]
ಐಟಿ, ಬಿಟಿ ಜೊತೆ ಫಾರ್ಮಸಿ ಟೆಕ್ನಾಲಜಿಯೂ ವೇಗವಾಗಿ ಬೆಳೆಯುತ್ತಿದೆ- ಔಷಧ ವಿಜ್ಞಾನಿಗಳಿಗೆ ಬೇಡಿಕೆ ಹೆಚ್ಚಾಗಿದೆ- ಡಾ. ಎಸ್. ಸಚ್ಚಿದಾನಂದ

ವಿಜಯಪುರ: ಐಟಿ, ಬಿಟಿ ಜೊತೆ ಈಗ ಪಿಟಿ (ಫಾರ್ಮಸಿ ಟೆಕ್ನಾಲಜಿ) ವೇಗವಾಗಿ ಬೆಳೆಯುತ್ತಿದ್ದು ಔಷಧ ಕ್ಷೇತ್ರದ ತಜ್ಞರು ಮತ್ತು ವಿಜ್ಞಾನದ ಆರೋಗ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಎಸ್. ಸಚ್ಚಿದಾನಂದ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ನಡೆದ ಪದವಿ ಪ್ರಧಾನ ಮತ್ತು ಪದವೀಧರರಿಗೆ ಬೀಳ್ಕೋಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ತಂತ್ರಜ್ಞಾನ ಆಧಾರಿತ […]
ಬಿದರಿ ಗ್ರಾಮದಲ್ಲಿ ಅಶ್ವಿನಿ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ವತಿಯಿಂದ ಬೃಹತ್ ಉಚಿತ ಆರೋಗ್ಯ, ರಕ್ತದಾನ ಶಿಬಿರ

ಬಾಗಲಕೋಟೆ: ದಿ. ಶ್ರೀ ಎಚ್. ಟಿ. ಬಿದರಿ ಜನ್ಮಶತಮಾನೋತ್ಸವದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ಶ್ರೀ ಕುಮಾರೇಶ್ವರ ಪ್ರೌಢಶಾಲೆಯಲ್ಲಿ ವಿಜಯಪುರದ ಪ್ರತಿಷ್ಠಿತ ಅಶ್ವಿನಿ ಆಸ್ಪತ್ರೆ ಹಾಗೂ ಭಾರತೀಯ ರೆಡ್ ಕ್ರಾಸ್ ವಿಜಯಪುರ ಶಾಖೆಯ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು. ಈ ಶಿಬಿರವನ್ನು ಶ್ರೀ ಶಿವಲಿಂಗ ಮಹಾಸ್ವಾಮಿಗಳು ಉದ್ಗಾಟಿಸಿದರು. ಬಳಿಕ ಮಾತನಾಡಿದ ಅವರು, ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಇಂಥ ಶಿಬಿರಗಳು ತುಂಬಾ ಸಹಕಾರಿಯಾಗಿವೆ. ಕೊರೊನಾ ನಂತರದ ದಿನಗಳಲ್ಲಿ […]
Health Camp: ಜನತೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಪ್ರಯೋಜ ಪಡೆಯಬೇಕು- ಬಸನಗೌಡ ಪಾಟೀಲ

ವಿಜಯಪುರ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಮುಂಚೂಣಿಯಲ್ಲಿರುವ ಬಿ ಎಲ್ ಡಿ ಆಸ್ಪತ್ರೆ ಜಿಲ್ಲೆಯ ನಾನಾ ಕಡೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರಗಳನ್ನು ಆಯೋಜಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಎಲ್ಲರೂ ಆರೋಗ್ಯವಂತರಾಗಬೇಕು ಎಂದು ಬಿ ಎಲ್ ಡಿ ಇ ಸಂಸ್ಥೆಯ ನಿರ್ದೇಶಕ ಬಸನಗೌಡ(ರಾಹುಲ) ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ […]