ರಸ್ತೆ ಅಪಘಾತದಲ್ಲಿ ತೀವ್ರವಾಗಿ ತಲೆಗೆ ಪೆಟ್ಟಾಗಿದ್ದ 19 ವರ್ಷದ ಯುವಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ, 19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ […]
ಬಿ.ಎಲ್.ಡಿ.ಇ ಟ್ರಾಮಾ ಆ್ಯಂಡ್ ಎಮರ್ಜೆನ್ಸಿ ನೂತನ ಕಟ್ಟಡ ಉದ್ಘಾಟನೆ- ಸಂಸ್ಥೆಯನ್ನು ಕಟ್ಟಿ ಬೆಳಿಸಿದ ಮಹನೀಯರ ಸ್ಮರಣೆ ಕಾರ್ಯಕ್ರಮ
ವಿಜಯಪುರ: ಶತಮಾನದ ಹಿಂದೆ ಈ ಭಾಗದ ಶರಣರು ಮತ್ತು ಮಹನೀಯರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕದ ಜನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾಗಲು ಕಾರಣರಾಗಿದ್ದಾರೆ ಎಂದು ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ಚೇರಮನ್ ಮತ್ತು ಕಾಹೆರ ಕುಲಾಧಿಪತಿ ಪ್ರಭಾಕರ ಬಿ. ಕೋರೆ ಹೇಳಿದ್ದಾರೆ. ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಪಘಾತ ಮತ್ತು ತುರ್ತು ಚಿಕಿತ್ಸೆ ವಿಭಾಗದ ಕಟ್ಟಡ(ಟ್ರಾಮಾ ಸೆಂಟರ್ ಮತ್ತು ಎಮರ್ಜೆನ್ಸಿ ಮೆಡಿಸೀನ್) ಉದ್ಘಾಟಿಸಿದ ಅವರು, ಬಿ.ಎಲ್.ಡಿ.ಇ ಸಂಸ್ಥೆಯನ್ನು ಕಟ್ಟಿ […]
ಇಂಡಿಯಲ್ಲಿ ಡೆಂಗ್ಯು ಜನಜಾಗೃತಿ ಜಾಥಾಕ್ಕೆ ಡಿಸಿ ಟಿ. ಭೂಬಾಲನ್ ಚಾಲನೆ
ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕರೆ ನೀಡಿದ್ದಾರೆ. ಇಂಡಿ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಡೆಂಗ್ಯು ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಳೆಗಾಲ ಆರಂಭವಾಗಿರುವುದರಿಂದ ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ಜಾಗೃತೆ ವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇವಾರಿ ಮಾಡಬೇಕು, […]
111 ಕೆ.ಜಿ ತೂಕದ 15 ವರ್ಷದ ಬಾಲಕನಿಗೆ ಸಂಭಾವ್ಯ ಪಾಶ್ವವಾಯು ತಪ್ಪಿಸಿದ ವೈದ್ಯರು- ಬೆನ್ನೆಲುಬಿನ ಡಿಸ್ಕ್ ಯಶಸ್ವಿ ಶಸ್ತ್ರಚಿಕಿತ್ಸೆ
ಬೆಂಗಳೂರು: ಬೆನ್ನುಮೂಳೆಯ ಡಿಸ್ಕ್‌ಲೊಕೇಟ್ ಆಗಿದ್ದ ಪರಿಣಾಮ ಪಾರ್ಶ್ವವಾಯು ಆತಂಕಕ್ಕೆ ಒಳಗಾಗಿದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿ ಗಮನ ಸೆಳೆದಿದ್ದಾರೆ. ಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿ ಎಂಬ ಕಾಲು ಉಳಿಸುವ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ. ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ. ಗಣೇಶ್ ವಿ. ನೇತೃತ್ವದ ತಂಡ ಒಂದು ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ವೈದ್ಯರು, 111 ಕೆ.ಜಿ. ತೂಕದ15 ವರ್ಷದ […]
ಡೆಂಗ್ಯೂ ನಿಯಂತ್ರಣ: ಕಾರ್ಪೋರೇಟರ್ ಶಿವರುದ್ರ ಬಾಗಲಕೋಟ ಸಮ್ಮುಖದಲ್ಲಿ ಪಾಲಿಕೆಯಿಂದ ಕ್ರಿಮಿನಾಶಕ ಸಿಂಪಡಣೆ
ವಿಜಯಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಜ್ವರದ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ವಾರ್ಡ್ ಸಂಖ್ಯೆ 32 ರಲ್ಲಿ ಬರುವ ನಾನಾ ಬಡಾವಣೆಗಳಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣಕ್ಕಾಗಿ ಲಾರ್ವಾ ಸಂತತಿ ಉತ್ಪತ್ತಿ ತಾಣಗಳಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿವರುದ್ರ ಬಾಗಲಕೋಟ, ರಾಜ್ಯಾದ್ಯಂತ ಡೆಂಗ್ಯೂ ಹಾವಳಿ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ 700 ಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಶುದ್ಧ ನೀರು ಇರುವ ಸಣ್ಣಪುಟ್ಟ ಸ್ಥಳದಲ್ಲಿಯೇ ಡೆಂಗ್ಯೂ ಜ್ವರ ಹರಡುವ ಇಡಿಸ್ […]
ರಾಷ್ಟ್ರೀಯ ಶಸ್ತ್ರ ಚಿಕಿತ್ಸೆ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರಿಂದ ರಕ್ತದಾನ
ವಿಜಯಪುರ: ರಾಷ್ಟ್ರೀಯ ಶಸ್ತ್ರ ಚಿಕಿತ್ಸೆ ವೈದ್ಯರ ದಿನಾಚರಣೆ ಅಂಗವಾಗಿ ನಗರದ ಬಿ ಎಲ್ ಡಿ ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ರಕ್ತ ನಿಧಿ ಕೇಂದ್ರದಲ್ಲಿ ಸೋಮವಾರ ವೈದ್ಯರಿಂದ ರಕ್ತದಾನ ಶಿಬಿರ ನಡೆಯಿತು. ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಭಾರತೀಯ ಶಸ್ತ್ರ ಚಿಕಿತ್ಸಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಈ ರಕ್ತದಾನ ಶಿಬಿರದಲ್ಲಿ ಸುಮಾರು 15 ಜನ ವೈದ್ಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಡಾ. ಎಂ. ಬಿ. […]
ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೌಲಭ್ಯ- ಗರ್ಭಿಣಿ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಲು ಕರೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಕರೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು […]
ವಿಶ್ವ ರಕ್ತದಾನ ದಿನದ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ
ವಿಜಯಪುರ: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗಶಾಸ್ತ್ರ ವಿಭಾಗದ ವತಿಯಿಂದ ಶುಕ್ರವಾರ ಬೀದಿ ನಾಟಕದ ಮೂಲಕ ರಕ್ತದಾನದ ಮಹತ್ವದ ಕುರಿತು ಜನ ಜನಜಾಗೃತಿ ಮೂಡಿಸಲಾಯಿತು ರಕ್ತ ದಾನ ಜಾಗೃತಿ ಮತ್ತು ರಕ್ತ ದಾನಿಗಳಿಗೆ ಕೃತಜ್ಞತೆ ಅರ್ಪಿಸುವ ಕಾರ್ಯಕ್ರಮ ಘೋಷಣೆಯಡಿ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯ ಎದುರು, ಶ್ರೀ ಸಿದ್ದೇಶ್ವರ ದೇವಸ್ಥಾನದ ಮುಂಭಾಗ, ಗಾಂಧಿ ಚೌಕ್ ಹಾಗೂ ಕೇಂದ್ರ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು. ಈ ಬೀದಿ ನಾಟಕದಲ್ಲಿ ಪಾಲ್ಗೊಂಡ ಎಂಬಿಬಿಎಸ್ ವಿದ್ಯಾರ್ಥಿಗಳು ರಕ್ತದಾನದ ಕುರಿತು ಜಾಗೃತಿ ಮತ್ತು […]
ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಫಲಕ ಕಡ್ಡಾಯ- ಡಿಸಿ ಟಿ. ಭೂಬಾಲನ್
ವಿಜಯಪುರ: ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಕಡ್ಡಾಯವಾಗಿ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ಕಾಯ್ದೆ -2018 ರ ಅಡಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳು, ಪ್ರಯೋಗಾಲಯ, ನರ್ಸಿಂಗ್ ಹೋಮ್ ಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು. ನಕಲಿ ವೈದ್ಯರ […]
ಎರಡೂ ಕಿವಿಗಳಲ್ಲೂ ಶ್ರವಣದೋಷ: ನೈಜೀರಿಯನ್ ಯುವತಿಗೆ ಯಶಸ್ವಿ ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ನಡೆಸಿದ ಫೋರ್ಟಿಸ್ ವೈದ್ಯರು
ಬೆಂಗಳೂರು: ವೈರಲ್ ಜ್ವರದ ಬಳಿಕ ಎರಡೂ ಕಿವಿಗಳು ಶ್ರವಣದೋಷಕ್ಕೆ ಒಳಗಾಗಿದ್ದ ನೈಜೀರಿಯಾ ಮೂಲದ 23 ವರ್ಷದ ಯುವತಿಗೆ ಏಕಕಾಲದಲ್ಲಿ ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ ಮೂಲಕ ಯುವತಿಗೆ ಎರಡು ಶ್ರವಣ ಸಾಧನಗಳನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಅಳವಡಿಸಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಹಿರಿಯ ಸಲಹೆಗಾರ ಡಾ. ಎಚ್. ಕೆ. ಸುಶೀನ್ ದತ್ ಹಾಗೂ ತಜ್ಞರ ಆರೈಕೆಯಲ್ಲಿ ಈ ಸಂಕೀರ್ಣ ಕಾರ್ಯವಿಧಾನವನ್ನು 9 ಗಂಟೆಗಳಲ್ಲಿ ಪೂರ್ಣಗೊಳಿಸಲಾಯಿತು. ಈ ಕುರಿತು […]