ರಾಜೀವ ಗಾಂಧಿ ವಿವಿ ಪರೀಕ್ಷೆ- ಬಾಗಲಕೋಟೆ ಬಿವಿವಿ ಹೋಮಿಯೋಪಥಿ ವಿದ್ಯಾರ್ಥಿಗಳ ಉತ್ತಮ ಸಾಧನೆ

ಬಾಗಲಕೋಟೆ: ಬಾಗಲಕೋಟೆಯ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜನೇವರಿಯಲ್ಲಿ ನಡೆದ ಪ್ರಥಮ ಮತ್ತು ದ್ವಿತೀಯ ಬಿ ಎಚ್ ಎಂ ಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.   ಈ ಕಾಲೇಜಿನ ಪ್ರಥಮ ವರ್ಷದ ಎಲ್ಲ ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ. 100 ಫಲಿತಾಂಶ ಸಾಧನೆ ಮಾಡಿದ್ದಾರೆ.  ದ್ವಿತೀಯ ವರ್ಷದಲ್ಲಿ ಶೇ. 99 ರಷ್ಟು ಫಲಿತಾಂಶ ಬಂದಿದೆ.  ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ದಕ್ಷತಾ ಹೊರಟ್ಟಿ, ಪ್ರಿಯಾಂಕಾ ಹವಾಲ್ದಾರ, ದಿರಿಸಲಾ ಸಿರಿ ಹಾಗೂ ಚಾಯಾ […]

ಸರಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು.  ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಸರಕಾರಿ ಔಷಧ ಮಳಿಗೆಗಗಳು ಸ್ಥಳೀಯ ಮಟ್ಟದಲ್ಲಿಯೇ ಇದ್ದು, ಅಗತ್ಯ ಔಷಧಗಳನ್ನು ಹೊಂದಿರಬೇಕು.  ದಾಸ್ತಾನು ಹಾಗೂ ಲೆಕ್ಕಪತ್ರಗಳೆಲ್ಲವೂ ಡಿಜಿಟಲೀಕರಣವಾಗಬೇಕು.  ಅನಗತ್ಯ ಔಷಧಗಳನ್ನು ಕೊಳ್ಳದೇ ಔಷಧಗಳ ಗುಣಮಟ್ಟವನ್ನು ಖಾತ್ರಿ ಪಡಿಸಿಕೊಳ್ಳಬೇಕು.  ಇತರೆ ರಾಜ್ಯಗಳಲ್ಲಿ […]

ಕುಷ್ಠರೋಗ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಬೇಕು- ಜಿ. ಪಂ. ಸಿಇಓ ಗೋವಿಂದರೆಡ್ಡಿ

ವಿಜಯಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿರುವ ಕುಷ್ಠರೋಗ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಬೇಕು.  ಆ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಶ್ರಮಿಸೋಣ ಎಂದು ಜಿ. ಪಂ. ಸಿಇಒ ಗೋವಿಂದ ರೆಡ್ಡಿ ಹೇಳಿದ್ದಾರೆ.  ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರದ ಅಮೃತ ಮಹೋತ್ಸವದೊಂದಿಗೆ ಕುಷ್ಠಮುಕ್ತ ಭಾರತದ […]

ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಡಿಸಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಮತ್ತು ಇನ್ನಷ್ಟು ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ನಾನಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ ಅವರು, ಅಧಿಕಾರಿಗಳು ತಮ್ಮ ನಿತ್ಯದ ಕಚೇರಿ ಕೆಲಸ ಕಾರ್ಯಗಳೊಂದಿಗೆ ಕೋವಿಡ್ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದು […]

ಬಂಜಾರಾ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದ ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ

ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಜ್ಞ ವೈದ್ಯರ ತಂಡದೊಂದಿಗೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ವಿಶೇಷ ತಜ್ಞರನ್ನೊಳಗೊಂಡ ತಂಡದೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ರೋಗಿಗಳನ್ನು ಟ್ರಯೇಜಿಗೆ ಒಳಪಡಿಸುವ ಬಗ್ಗೆ ಪರಿಶೀಲನೆ ನಡೆಸಿದರು.  ಅಲ್ಲದೇ, ಕೊರೊನಾ 3ನೇ ಅಲೆಗಾಗಿ ರೋಗಿಗಳನ್ನು ದಾಖಲು ಮಾಡುವ ವಾರ್ಡ್‍ಗಳ ಐಸಿಯು ಬೆಡ್‍ಗಳನ್ನು ಅವರು ಪರಿಶೀಲನೆ ನಡೆಸಿದರು. ಬಂಜಾರಾ ಆಸ್ಪತ್ರೆಯಲ್ಲಿ ಗರ್ಭಿಣಿಯು ಮರಣ ಹೊಂದಿರುವ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದ ಅವರು, ಪ್ರತಿ ಕೇಸುಗಳ ಬಗ್ಗೆ ಎಕ್ಸಪರ್ಟ್ […]

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಶತಕ ದಾಟಿದ ಕೊರೊನಾ ಸೋಂಕು- ಪಾಸಿಟಿವಿಟಿ ದರ ಮತ್ತೆ ಏರಿಕೆ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಶತಕ ದಾಟಿದೆ.  ಈಗ ಹೊಸದಾಗಿ 102 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಶುಕ್ರವಾರ ಒಂದೇ ದಿನ 107 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.  ಶನಿವಾರ ಈ ಸಂಖ್ಯೆ 77ಕ್ಕೆ ಇಳಿಕೆಯಾಗಿತ್ತು.  ಈಗ ಮತ್ತೆ 102 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.  ಇದರಲ್ಲಿ ವಿಜಯಪುರ ನಗರವೊಂದರಲ್ಲಿಯೇ 48 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿಜಯಪುರ ಗ್ರಾಮೀಣ ಭಾಗದಲ್ಲಿ ಒಬ್ಬರಲ್ಲಿ, ತಿಕೋಟಾ ತಾಲೂಕಿನಲ್ಲಿ 3, […]

ಎರಡು ವಾರ ಅನಗತ್ಯವಾಗಿ ಆಸ್ಪತ್ರೆಗಳಿಗೆ ತೆರಳಬೇಡಿ- ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕೋರೋನಾ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸದಾಗಿ ಸೂಚನೆ ನೀಡಿದೆ. ಅಸ್ವಸ್ಥ ಮತ್ತು ತುರ್ತು ಆರೋಗ್ಯ ಸೇವೆ ಅಗತ್ಯ ಇರುವ ರೋಗಿಗಳು ಮಾತ್ರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಲಘು ಅನಾರೋಗ್ಯದ ಲಕ್ಷಣಗಳಿರುವವರು ಮತ್ತು ದಂತ ಸಂಬಂದಿ ಚಿಕಿತ್ಸೆ ರೋಗಿಗಳು ಎರಡು ವಾರ ಆಸ್ಪತ್ರೆಗಳಿಗೆ ತೆರಳಬಾರದು.  ಎರಡು ವಾರಗಳ ಕಾಲ ಅತವಾ ಮುಂದಿನ ಆದೇಶದವರೆಗೆ ಇದನ್ನು ಅನುಸರಿಸಬೇಕು ಎಂದು ಹೇಳಿದೆ. ಖಾಸಗಿ ಆಸ್ಪತ್ರೆಗಳು ಕೂಡ ಈ ಮಾರ್ಗಸೂಚಿ ಪಾಲಿಸಬೇಕು.  ಸಧ್ಯದ […]

ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ 77 ಜನರಲ್ಲಿ ಕೊರೊನಾ ಸೋಂಕು ಪತ್ತೆ- ಪಾಸಿಟಿವಿಟಿ ದರ ಸ್ವಲ್ಪ ಇಳಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಹೊಸಗಾಗಿ 77 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಶುಕ್ರವಾರ ಒಂದೇ ದಿನ 107 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.  ಇದರಲ್ಲಿ ವಿಜಯಪುರ ನಗರವೊಂದರಲ್ಲಿಯೇ 27 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿಜಯಪುರ ಗ್ರಾಮೀಣ ಭಾಗದಲ್ಲಿ 2, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ತಲಾ 1, ಬಸವನ ಬಾಗೇವಾಡಿ ತಾಲೂಕಿನಲ್ಲಿ 9, ಕೊಲ್ಹಾರ ತಾಲೂಕಿನಲ್ಲಿ 13, ಇಂಡಿ ತಾಲೂಕಿನಲ್ಲಿ 3, ಮುದ್ದೇಬಿಹಾಳ ತಾಲೂಕಿನಲ್ಲಿ 12, ತಾಳಿಕೋಟೆ ತಾಲೂಕಿನಲ್ಲಿ 4, ಸಿಂದಗಿ ತಾಲೂಕಿನಲ್ಲಿ 3, ದೇವರ […]

ವಿಜಯಪುರ ಜಿಲ್ಲೆಯಲ್ಲಿ ಕೇವಲ 13 ದಿನಗಳಲ್ಲಿ 131 ಮಕ್ಕಳಲ್ಲಿ ಕೊರೊನಾ ಸೋಂಕು ದೃಢ

ವಿಜಯಪುರ: ಬಸವ ನಾಡಿನಲ್ಲಿ ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೇವಲ 13 ದಿನಗಳಲ್ಲಿ 131 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಜನೇವರಿ 1 ರಿಂದ ಜನೇವರಿ 13ರ ವರೆಗೆ ಒಟ್ಟು 131 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ.  ಈ ಮಕ್ಕಳಲ್ಲಿ 11 ರಿಂದ 18 ವರ್ಷದ ಮಕ್ಕಳಲ್ಲಿಯೇ ಕೊರೊನಾ ಸೋಂಕು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಒಂದು ವರ್ಷದೊಳಗಿನ ಮಕ್ಕಳಲ್ಲಿ ಯಾರಿಗೂ […]

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ- ರಾಷ್ಟ್ರೀಯ ಸರಾಸರಿಗಿಂತ ರಾಜ್ಯದಲ್ಲಿ ಹೆಚ್ಚಿಗೆ ಕೊರೊನಾ ಲಸಿಕೆ ಕ್ರಮಕ್ಕೆ ಪ್ರಧಾನಿ ಮೆಚ್ಚುಗೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಸಿಎಂ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು.  ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ […]