ಬಿ ಎಲ್ ಡಿ ಇ ಡೀಮ್ಡ್ ವಿವಿ, ಆಸ್ಪತ್ರೆಯ ವತಿಯಿಂದ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಆರಂಭಕ್ಕೆ ಯೋಜನೆ ರೂಪಿಸಲಾಗುತ್ತಿದೆ- ಉಪಕುಲಪತಿ ಡಾ. ಆರ್. ಎಸ್. ಮುಧೋಳ

ವಿಜಯಪುರ: ವಿಜಯಪುರ ನಗರ ಮತ್ತು ಸುತ್ತಲಿನ ಜಿಲ್ಲೆಗಳ ಕ್ಯಾನ್ಸರ್ ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ದೃಷ್ಟಿಯಿಂದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ  ಬಿ. ಎಂ. ಪಾಟೀ ವೈದ್ಯಕೀಯ ಕಾಲೇಜು, ಆಸ್ಪತ್ರೆಯು ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸುವ ಯೋಜನೆ ರೂಪಿಸುತ್ತಿದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಕ್ಯಾನ್ಸರ್ ಚಿಕಿತ್ಸೆ ಲಭ್ಯವಿಲ್ಲದ ಕಾರಣ ರೋಗಿಗಳು ಬೇರೆ ಜಿಲ್ಲೆ, ರಾಜ್ಯಗಳಿಗೆ ತೆರಳಿ ಚಿಕಿತ್ಸೆ ಪಡೆಯುವಂತಾಗಿದೆ. ಇದು […]

ಕೋವಿಡ್ ಪರಿಣಾಮಕಾರಿ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಖಾಸಗಿ ಆಸ್ಪತ್ರೆಗಳ ಸಹಕಾರವೂ ಅಗತ್ಯ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಕೋವಿಡ 3ನೇ ಅಲೆ ಹಾಗೂ ಒಮಿಕ್ರಾನ್ ವೈರಸ್ ಹಾವಳಿ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಈಗಾಗಲೇ ಸಮರೋಪಾದಿಯಲ್ಲಿ ಸಕಲ ರೀತಿಯ ಸಿದ್ಧತೆ ಹಾಗೂ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಕೂಡ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿದಾಗ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಹೇಳಿದ್ದಾರೆ.  ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ಕೋವಿಡ್ 3ನೇ ಅಲೆ ನಿಯಂತ್ರಣ ಹಾಗೂ ಹಾಸಿಗೆಗಳ ವ್ಯವಸ್ಥೆಗಳ ಕುರಿತು ಸರಕಾರಕ್ಕೆ ಹಾಸಿಗೆಗಳ ಮಾಹಿತಿ […]

ಕೋವಿಡ್ ಮೂರನೇ ಅಲೆಯ ಸಮರ್ಪಕ ನಿಯಂತ್ರಣಕ್ಕಾಗಿ ಸಮರೋಪಾದಿಯಲ್ಲಿ ಸಕಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಿ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ಕೊರೊನಾ 3ನೇ ಅಲೆಯನ್ನು ಸಮರ್ಪಕ ನಿಯಂತ್ರಿಸಲು ಸಮರೋಪಾದಿಯಲ್ಲಿ ಸಕಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಸರಿಯಾದ ಸಮಯಕ್ಕೆ ಆಸ್ಪತ್ರೆಗಳಲ್ಲಿ ಬೆಡ್ ದೊರೆಯುವಂತೆ ವ್ಯವಸ್ಥೆ ಮಾಡಿ ಇಟ್ಟುಕೊಳ್ಳಬೇಕು.  ಬೆಡ್‍ಗಳಿಗಾಗಿ ರೋಗಿಗಳು ಅನಗತ್ಯವಾಗಿ ಪರದಾಡುವಂತೆ ಆಗಬಾರದು.  ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ […]

ಕೊರೊನಾ 3ನೇ ಅಲೆ ತಡೆಯಲು ಗಡಿಭಾಗಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ 3ನೇ ಅಲೆ ತಡೆಗಟ್ಟಲು ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ.  ಆದಷ್ಟು ಬೇಗನೆ ನಿಗದಿತ ಗುರಿ ತಲುಪಬೇಕು ಎಂದು ಸೂಚನೆ ನೀಡಿದರು. 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತಿರುವ ಲಸಿಕೆಗಳ ಬಗ್ಗೆ ಪೋರ್ಟಲ್‍ನಲ್ಲಿ ಡಾಟಾ ಎಂಟ್ರಿ […]

ಬಸವ ನಾಡಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕಾಕರಣ ಆರಂಭ- ಮೊದಲ ದಿನ ಶೇ. 93.13 ರಷ್ಟು ಸಾಧನೆ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 16 ಜನೇವರಿ 2021 ರಿಂದ ಈಗಾಗಲೇ ಕೊರೊನಾ ಲಸಿಕೆಯನ್ನು ನೀಡಲಾಗುತ್ತಿದ್ದು. ಈಗಾಗಲೇ ಶೇ. 100ಕ್ಕೂ ಹೆಚ್ಚು ಗುರಿ ಸಾಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 1634000 ಫಲಾನುಭವಿಗಳಿಗೆ ಕೊರೊನಾ ಲಸಿಕೆ ನೀಡುವ ಗುರಿ ಇತ್ತು.  ಆದರೆ, ಈಗಾಗಲೇ ನಿಗದಿತ ಗುರಿ ಮೀರಿ ಲಸಿಕೆಯನ್ನು 1661047 ಫಲಾನುಭವಿಗಳು ನೀಡು ಮೂಲಕ ಶೇ. 100ಕ್ಕಿಂತಲೂ ಹೆಚ್ಚಿನ ಗುರಿ ಸಾಧಿಸಲಾಗಿದೆ.  ಅದರಂತೆ 1336713 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, […]

ಕೋವಿಡ್ ಲಸಿಕಾಕರಣದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಸಾಧನೆ- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಎರಡನೇ ಅತೀ ದೊಡ್ಡ ರಾಷ್ಟ್ರವಾಗಿರುವ ಭಾರತದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ದಾಖಲೆ ಪ್ರಮಾಣದ ಸಾಧನೆ ಮಾಡುವ ಮೂಲಕ ಕೊರೊನಾ ವಿರುದ್ಧ ದಿಟ್ಟ ಸಮರ ಸಾರಲಾಗಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ವಿಜಯಪುರ ನಗರದ ಬಾಲಕರ ಸರಕಾರಿ ಪಿಯು ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಪಿಯು ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ […]

15 ರಿಂದ18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ: ಬಸವ ನಾಡಿನಲ್ಲಿ ಉತ್ಸಾಹದಿಂದ ಲಸಿಕೆ ಪಡೆದ ವಿದ್ಯಾರ್ಥಿಗಳು

ವಿಜಯಪುರ: ದೇಶಾದ್ಯಂತ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಿದೆ. ವಿಜಯಪುರ ಜಿಲ್ಲೆಯಲ್ಲಿಯೂ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ವಿಜಯಪುರ ನಗರದ ರವೀಂದ್ರನಾಥ ಠಾಗೋರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ‌.   ಆಧಾರ ಕಾರ್ಡ್ ಹಾಗೂ ಕಾಲೇಜು ಐಡಿ ಕಾರ್ಡ್ ತೋರಿಸಿ ಲಸಿಕೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ‌. ವಿದ್ಯಾರ್ಥಿಗಳು ಸಹ ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ […]

15 ರಿಂದ 18 ವರ್ಷದೊಳಗಿನ‌‌ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ- ಸಿಎಂ‌ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: 15 ರಿಂದ 18 ವರ್ಷದೊಳಗಿನ‌ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಬಸವರಾಜ, ಡಾ. ಕೆ. ಸುಧಾಕರ, ಡಾ. ಸಿ. ಎನ್. ಅಶ್ವತ್ಥನಾರಾಯಣ, ವಿ. ಸೋಮಣ್ಣ ಮತ್ತು ಇತರರು ಉಪಸ್ಥಿತರಿದ್ದರು.

ಕೊರೊನಾ ಮಹಾತಂಕ ಹಿನ್ನೆಲೆ- ವಿಜಯಪುರ ಗಡಿಯಲ್ಲಿ 11 ಚೆಕ್ ಪೋಸ್ಟ್ ತೆರೆಯಲಾಗಿದೆ- ರಾಜ್ಯದಲ್ಲಿ ನೈಟ್ ಕರ್ಫ್ಯೂ ಬಗ್ಗೆ ಚರ್ಚಿಸಿ ಕ್ರಮ- ಬಸವರಾಜ ಬೊಮ್ಮಾಯಿ

ಬೆಳಗಾವಿ: ಕಳೆದ ಒಂದು ವಾರದಲ್ಲಿ ಕರೋನಾ ಒಮಿಕ್ರಾನ್ ಕೇಸ್ ಹೆಚ್ಚಾಗಿವೆ.  ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.  ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡು ಡೋಸ್ ಕೊರೊನಾ ಲಸಿಕೆ ಕಡ್ಡಾಯ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಮಾತ್ರ ರಾಜ್ಯ ಪ್ರವೇಶಕ್ಕೆ […]

ಡಾ. ಬಿದರಿ ಅಶ್ವಿನಿ ಆಸ್ಪತ್ರೆ ವತಿಯಿಂದ ಕೂಡಗಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ- ಸುಮಾರು 300 ಜನರ ಆರೋಗ್ಯ ತಪಾಸಣೆ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ವಿಜಯಪುರ ಶಾಖೆ, ಅಶ್ವಿನಿ ಸ್ಕೂಲ್ ಆಫ್ ನರ್ಸಿಂಗ್ ಸೈನ್ಸಸ್ ವಿಜಯಪುರ, ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ಕಾಲೇಜ್ ಆಫ್ ಕಾಮರ್ಸ, ಹಾಗೂ ಕೂಡಗಿ ಪವರ್‍ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ 400 ಕೆವಿ ಉಪಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ವಿಜಯಪುರ ಜಿಲ್ಲೆಯ ಕೂಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.  ಆಜಾದಿ ಕಾ ಅಮೃತ ಮಹೋತ್ಸವದ […]