ಕಡೂರಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಸವನಾಡಿನ ಯೋಗಪಟುಗಳ ಉತ್ತಮ ಸಾಧನೆ
ಚಿಕ್ಕಮಗಳೂರು: ಜಿಲ್ಲೆಯ ಕಡೂರಿನಲ್ಲಿ ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಮತ್ತು ಚಾಂಪಿಯನ್ ಆಫ್ ಚಾಂಪಿಯನ್ ಹಾಗೂ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿಜಯಪುರದ ಯೋಗಪಟಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿಜಯಪುರದ ಯೋಗ ಗುರು ಎಂ. ಪಿ. ದೊಡಮನಿ ಅವರ ಮಾರ್ಗದರ್ಶನದಲ್ಲಿ ಬಸವನಾಡಿನ ಯೋಗಪಟುಗಳಾದ ರಾಜು ಮಾನೆ ಮತ್ತು ಮಡಿವಾಳಪ್ಪ ದೊಡಮನಿ ಪ್ರಥಮ ಸ್ಥಾನ ಪಡೆದಿದ್ದಾರೆ. ಐಶ್ವರ್ಯ ರಜಪೂತ ಹಾಗೂ ಸೋಮನಾಥ ಗುರುಮಠ 5ನೇ ಸ್ಥಾನ ಪಡೆದಿದ್ದಾರೆ. ವಿಜೇತರು ಪ್ರಶಸ್ತಿ ಮತ್ತು ಪ್ರಮಾಣ ಪತ್ರ […]
ಯೋಗಾಭ್ಯಾಸ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ: ನ್ಯಾಯಾಧೀಶ ನಲವಡೆ
ವಿಜಯಪುರ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳುವುದಲ್ಲದೇ, ಸದೃಢ ಆರೋಗ್ಯ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಎ. ನಲವಡೆ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಸಂತೋಷ ಎಸ್. ಕುಂದರ, ವಕೀಲರ ಸಂಘದ ಅಧ್ಯಕ್ಷ ಐ. […]
ಜೀವನದಲ್ಲಿ ಯೋಗ ರೂಢಿಸಿಕೊಂಡು ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು- ಸಂಸದ ರಮೇಶ ಜಿಗಜಿಣಗಿ ಕರೆ
ವಿಜಯಪುರ: ದೇಶದ ಋಷಿ ಮುನಿಗಳಿಂದ ಕೊಡುಗೆಯಾಗಿ ಬಂದ ಬಹು ಪುರಾತನವಾದ ಯೋಗವನ್ನು ಪ್ರತಿಯೊಬ್ಬರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸದೃಢ ಆರೋಗ್ಯ ಹೊಂದುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು […]
ಯೋಗ ಜೀವನ ಪದ್ಧತಿಯಾಗಿದೆ- ಪ್ರತಿದಿನ ಮಾಡುವುದರಿಂದ ಉತ್ತಮ ದೈಹಿಕ, ಮಾನಸಿಕ ಆರೋಗ್ಯ ಸಾಧ್ಯ- ಪ್ರೊ. ವೈ. ಎನ್. ಜಯರಾಜ
ವಿಜಯಪುರ: ಯೋಗ ಅಲೋಪಥಿ, ಹೋಮಿಯೋಪಥಿ, ಆಯುರ್ವೇದ ಯಾವುದೂ ಅಲ್ಲ. ಇದು ಜೀವನದ ವಿಧಾನವಾಗಿದೆ ಎಂದು ವೂ ಅಲ್ಲಇದು ಜೀವನದ ವಿಧಾನವಾಗಿದೆ ಎಂದು ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕಲಾಧಿಪತಿ ಪ್ರೊ. ವೈ. ಎನ್. ಜಯರಾಜ ಹೇಳಿದ್ದಾರೆ. ವಿಶ್ವವಿದ್ಯಾಲಯದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಗಾಟಿಸಿ ಅವರು ಮಾತನಾಡಿದರು. ಸದೃಢ ದೇಹ ಮತ್ತು ಮನಸ್ಸು ಮನುಷ್ಯನನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ಮತ್ತು ಬುದ್ದಿವಂತನನ್ನಾಗಿ ಮಾಡುತ್ತದೆ. 21ನೇ ಶತಮಾನದಲ್ಲಿ ಇದರ ಅಗತ್ಯ ಹೆಚ್ಚಾಗಿದೆ. ಭಾರತದ ಯೋಗ […]
ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅರ್ಥಪೂರ್ಣವಾಗಿ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಜೂ. 21 ರಂದು ಜಿಲ್ಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ದತೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅಂದು ಬೆ. 6 ರಿಂದ ಬೆ. 7.30ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಆಯುರ್ವೇದ, […]
ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ
ವಿಜಯಪುರ: ಯೋಗೋತ್ಸವದ ಅಂಗವಾಗಿ ಮಾನವೀಯತೆಗಾಗಿ ಯೋಗ ಕಾರ್ಯಕ್ರಮ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ನಡೆಯಿತು. ಕಾತ್ರಾಳ ಗುರುದೇವ ಆಶ್ರಮದ ಡಾ. ಅಮೃತಾನಂದ ಸ್ವಾಮೀಜಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರ, ಶರೀರಶಾಸ್ತ್ರ ವಿಭಾಗ ಮತ್ತು ನವದೆಹಲಿಯ ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ, ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯ […]
ಗಿನ್ನಿಸ್ ದಾಖಲೆಯ ಅಂಗವಾಗಿ ಸೈನಿಕ ಶಾಲೆಯ ಆವರಣದಲ್ಲಿ ಯೋಗಾಥಾನ- 25 ಸಾವಿರಕ್ಕೂ ಹೆಚ್ಚು ಜನ ಯೋಗಾಪಟುಗಳು ಭಾಗಿ
ವಿಜಯಪುರ: ದೇಹ ಮತ್ತು ಮನಸ್ಸನ್ನು ಸದೃಡಗೊಳಿಸಲು ಜೀವನದಲ್ಲಿ ಯೋಗಾಭ್ಯಾಸ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ನಗರದ ಸೈನಿಕ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗಾಥಾನಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗದಿಂದ ನಮ್ಮ ಆರೋಗ್ಯಕ್ಕೆ ಪ್ರಯೋಜನವಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಅಷ್ಟೇ […]
Yogathon: ಯೋಗಾಥಾನ್-2022 ಕಾರ್ಯಕ್ರಮಕ್ಕೆ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ
ವಿಜಯಪುರ: ರಾಜ್ಯ ಹಾಗೂ ಕೇಂದ್ರ ಸರಕಾರಗಳ ಮಹತ್ವದ ಕಾರ್ಯಕ್ರಮ ಯೋಗಾಥಾನ್-2022ಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನಗರದಲ್ಲಿ ಚಾಲನೆ ನೀಡಿದರು. ನಗರದ ಡಾ. ಬಿ. ಎನ್. ಎಂ ಆಯುರ್ವೇದ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಯೋಗವು ನಮ್ಮ ದೇಶದ ಪರಂಪರೆ, ಸಂಸ್ಕೃತಿ ಮತ್ತು ಹಿರಿಮೆಯಾಗಿದೆ. ಪುರಾತನ ಕಾಲದಿಂದಲೂ ಯೋಗ ಪದ್ಧತಿಯನ್ನು ಅಳವಡಿಸಿಕೊಂಡು ಬಂದಿದ್ದೇವೆ. ಯೋಗ ಮಾಡುತ್ತಿದ್ದ ಋಷಿಮುನಿಗಳು ಶತಾಯುಷಿಗಳಾಗಿ ಬದುಕಿ ನಮಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಹೆಚ್ಚು […]
Yoga Day: ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಆಡಳಿತಾಧಿಕಾರಿ ವೆಂಕಟೇಶ, ವಿಶ್ವಾದ್ಯಂತ ಇಂದು ಯೋಗ ದಿನ ಆಚರಿಸಲಾಗುತ್ತಿದೆ. ಭಾರತದಲ್ಲಿ ಪುರಾತನ ಕಾಲದಿಂದಲೂ ಯೋಗ ಮಾಡಲಾಗುತ್ತಿದೆ. ಜೀವನದಲ್ಲಿ ಗುರಿ ಸಾಧಿಸಲು ಯೋಗ ಪ್ರಮುಖ ಸಾಧನವಾಗಿದೆ. ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಸಲು ಸಾಧ್ಯ. ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಎಸ್. ಎಸ್. […]
BJP Yoga Day: ಐತಿಹಾಸಿಕ ಗಗನ ಮಹಲ್ ನಲ್ಲಿ ಬಿಜೆಪಿ ಮುಖಂಡರಿಂದ ಯೋಗ ದಿನಾಚರಣೆ
ವಿಜಯಪುರ: ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ನಗರದ ಐತಿಹಾಸಿಕ ಗಗನ ಮಹಲ ಆವರಣದಲ್ಲಿ 8ನೇ ಅಂತಾರಾಷ್ಡ್ರೀಯ ಯೋಗ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಭವ್ಯ ಪರಂಪರೆ ಮತ್ತು ಸಂಸ್ಕೃತಿಯನ್ನು ಭಾರತದ ಋಷಿಮುನಿಗಳು ಸದೃಢ ಆರೋಗ್ಯಕ್ಕಾಗಿ ಯೋಗವನ್ನು ನಮಗೆಲ್ಲರಿಗೂ ವರವಾಗಿ ನೀಡಿದ್ದಾರೆ. ಈ ಯೋಗದ ಆರೋಗ್ಯ ಗುಟ್ಟನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಮುಂದೆ ತೆರೆದಿಟ್ಟಿದ್ದಾರೆ. ಈಗ ವಿಶ್ವಾದ್ಯಂತ 180ಕ್ಕೂ ಹೆಚ್ಚು ರಾಷ್ಟ್ರಗಳು ಯೋಗವನ್ನು ಆಚರಣೆ ಮಾಡುತ್ತಿವೆ. […]