ಕೇಂದ್ರ ಜಲ ಶಕ್ತಿ ತಂಡದಿಂದ ಇಂಡಿ ತಾಲೂಕಿನ ನಿಂಬಾಳ ಕೆ. ಡಿ., ಕೊಳುರಗಿ, ಬಬಲಾದ, ಹೊರ್ತಿ, ಚವಡಿಹಾಳ ಕ್ಷೇತ್ರ ಭೇಟಿ
ವಿಜಯಪುರ: ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು(ಬಿ), ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಶ್ ಕೇಶರ್ವಾಣಿ ಅವರು ಇಂಡಿ ತಾಲೂಕಿನ ನಿಂಬಾಳ ಕೆ. ಡಿ, ಕೊಳುರಗಿ, ಬಬಲಾದ, ಹೊರ್ತಿ ಹಾಗೂ ಚವಡಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು. ನಿಂಬಾಳ ಕೆ.ಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಬೋರ್‌ವೆಲ್ ಮರುಪೂರಣ ಘಟP,À ಕೊಳುರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಸಾಮಾಜಿಕ ಅರಣ್ಯ […]
ಕೇಂದ್ರ ಜಲ ಶಕ್ತಿ ತಂಡದಿಂದ ಜಿಲ್ಲೆಯ ನಾನಾ ಗ್ರಾಮ ಪಂಚಾಯಿತ್ಗಿಳಿಗೆ ಭೇಟಿ, ಪರಿಶೀಲನೆ
ವಿಜಯಪುರ: ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿ ಅವರನ್ನೊಳಗೊಂಡ ತಂಡ ವಿಜಯಪುರ ತಾಲೂಕಿನ ಹೆಗಡಿಹಾಳ, ಐನಾಪುರ ಹಾಗೂ ಹಡಗಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಪರಿಶೀಲನೆ ನಡೆಸಿತು. ಹೆಗಡಿಹಾಳ ಗ್ರಾಮ ಅಮೃತ ಸರೋವರ, ಬೋರ್ ವೆಲ್ ಮರು ಪೂರಣ ಘಟಕ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ನಂತರ ಅಮೃತ […]
ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡಿ- ಜಿಲ್ಲಾಧಿಕಾರಿ ಟಿ. ಭೂಬಾಲನ್
ವಿಜಯಪುರ: ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಣೆ ಮೇಲ್ವಿಚಾರಕರ ಜವಾಬ್ದಾರಿಯಾಗಿದೆ. ಸರ್ಕಾರ ಒದಗಿಸುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯಾದ ಮತ್ತು ಪೌಷ್ಟಿಕ ಆಹಾರ ಒದಗಿಸುವ ಮತ್ತು […]
ಫೆ. 26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ- ನಿರುದ್ಯೋಗಿಗಳು ನೊಂದಾಯಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಹಾಗೂ 27 ರಂದು ರಾಜ್ಯ ಮಟ್ಟದ ಯುವ ಬೃಹತ್ ಉದ್ಯೋಗ ಮೇಳ-2024 ಅಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಭಾಗವಹಿಸಲು ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಗಳ ಸಭಾ ಭವನದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯಲ್ಲಿ, ಸದರಿ ಉದ್ಯೋಗ https://skillconnect.kaushalkar.com ಪೋರ್ಟಲ್ ನಲ್ಲಿ ನೋಂದಣಿ […]
ವಿಜಯಪುರ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ- ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಸದಸ್ಯರು
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಘಟಕ ಕೊಡಮಾಡುವ ಉತ್ತಮ ಸಾಧನೆಗೈದ ಸಂಘ ಪ್ರಶಸ್ತಿಗೆ ಪುರಸ್ಕೃತವಾಗಿದ್ದುö, ಸಂಘದ ಸದಸ್ಯರ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ. ರಾಜ್ಯದ ಮೂರು ಜಿಲ್ಲಾ ಘಟಕಗಳಿಗೆ ಈ ಪ್ರಶಸ್ತಿ ಲಭಿಸಿದ್ದುö, ಅದರಲ್ಲಿ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘವೂ ಈ ಪ್ರಶಸ್ತಿಗೆ ಪಾತ್ರವಾಗಿದ್ದುö, ಸಂಘದ ಸದಸ್ಯರು ಹಾಗೂ ಪದಾಕಾರಿಗಳ ಹರ್ಷದ ಹೊನಲಿಗೆ ಕಾರಣವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ. […]
ಶಾಸಕ ಸುನೀಲಗೌಡ ಪಾಟೀಲ ಪ್ರಯತ್ನದ ಫಲಶೃತಿ- ಗಣರಾಜ್ಯೋತ್ಸವ ದಿನದಿಂದ ವಿಜಯಪುರದಿಂದ ಬೆಂಗಳೂರಿಗೆ ಎಸಿ ಸ್ಲೀಪರ್ ಕೋಚ್ ಬಸ್ ಪ್ರಾರಂಭ
ವಿಜಯಪುರ: ವಿಜಯಪುರ ದಿಂದ ಬೆಂಗಳೂರಿಗೆ ಎ.ಸಿ ಮಲ್ಟಿ ಎಕ್ಸಲ್ ವೋಲ್ವೋ ಸ್ಲೀಪರ್ ಬಸ್ ಸೇವೆ ಪ್ರಾರಂಭಿಸುವAತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಮಾಡಿದ ಮನವಿಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಜನೇವರಿ 26 ಶುಕ್ರವಾರ ಗಣರಾಜೋತ್ಸವ ದಿನದಿಂದ ವಿಜಯಪುರ ದಿಂದ ಬೆಂಗಳೂರಿಗೆ ಬಸ್ ಸಂಚಾರ ಪ್ರಾರಂಭವಾಗಲಿದೆ. ಈ ಬಸ್ ಸಂಚಾರ ಪ್ರಾರಂಭಿಸುವಂತೆ ಸುನೀಲಗೌಡ ಪಾಟೀಲ ಅವರು ಕಳೆದ ಎರಡು ವರ್ಷಗಳಿಂದ ಸರಕಾರವನ್ನು ಆಗ್ರಹಿಸಿದ್ದರು. ಅಲ್ಲದೇ, ವಿಧಾನ ಪರಿಷತ್ ಕಲಾಪದಲ್ಲಿಯೂ ಈ ಕುರಿತು ಪ್ರಸ್ತಾಪಿಸಿದ್ದರು. ಜೊತೆಗೆ ಕಳೆದ […]
ದೇಶದ ಅಭ್ಯುದಯಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ- ಸಂತೋಶ ಕುಂದರ ಕರೆ
ವಿಜಯಪುರ: ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಕರೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ […]
ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ : ಪರಿಶೀಲನೆ
ವಿಜಯಪುರ: ನಿಡಗುಂದಿ ತಾಲೂಕಿನ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ವಿದ್ಯಾಲಯದ ಸಲಹಾ ಸಮಿತಿ ಸಭೆ ನಡೆಸಿದ ಅವರು, ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. […]
ನೋಡಲ್ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ ಜಿಲ್ಲೆಯಲ್ಲಿ ಜನವರಿ 26 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿರುವ ಸ್ತಬ್ಧಚಿತ್ರ ವಾಹನಕ್ಕೆ ಮಾರ್ಗನಕ್ಷೆ (ರೂಟ್ ಮ್ಯಾಪ್) ಸಿದ್ಧಪಡಿಸಲಾಗಿದ್ದು, ಮಾರ್ಗನಕ್ಷೆಯಂತೆ ಸ್ತಬ್ಧಚಿತ್ರ ವಾಹನ ಸಂಚರಿಸಲು ಎಲ್ಲ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನ ಜಾಗೃತಿ ಜಾಥಾದ […]
ಸಂಚಾರಿ ನಿಯಮ ಪಾಲನೆ, ಜಾಗರೂಕತೆಯಿಂದ ವಾಹನ ಚಾಲನೆಯಿಂದ ರಸ್ತೆ ಅಪಘಾತ ತಪ್ಪಿಸಬಹುದು- ಬಸವರಾಜ ಯಲಿಗಾರ
ವಿಜಯಪುರ: ಸಂಚಾರಿ ನಿಯಮಗಳ ಪಾಲನೆ ಮತ್ತು ಜಾಗರೂಕತೆಯಿಂದ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಹಾಗೂ ಜೀವಹಾನಿ ತಡೆಯಲು ಸಾಧ್ಯ ಎಂದು ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ಹೇಳಿದ್ದಾರೆ. ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್ ನಲ್ಲಿ ವಿವಿಯ ಐಕ್ಯೂಎಸಿ ವಿಭಾಗದ ವತಿಯಿಂದ ಇಂದು ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರಸ್ತೆ ಅಪಘಾತಗಳು ಮತ್ತು ಅವುಗಳಿಗೆ ಕಾರಣಗಳ ಕುರಿತು ಎಳೆಎಳೆಯಾಗಿ ಮಾಹಿತಿ ನೀಡಿದ […]