ವಿಜಯಪುರ ಜಿ. ಪಂ. ನೂತನ ಸಿಇಓ ರಿಶಿ ಆನಂದ ಅಧಿಕಾರ ಸ್ವೀಕಾರ
ವಿಜಯಪುರ: ಜಿ. ಪಂ. ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ರಿಶಿ ಆನಂದ ಅಧಿಕಾರ ಸ್ವೀಕರಿಸಿದ್ದಾರೆ. ವಿಜಯಪುರ ಜಿ. ಪಂ. ಸಿಇಓ ಆಗಿದ್ದ ರಾಹುಲ ಶಿಂಧೆ ಅವರು ಬೆಳಗಾವಿ ಜಿ. ಪಂ. ಸಿಇಓ ಆಗಿ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ಈಗ ರಿಶಿ ಆನಂದ ಅವರು ವರ್ಗವಣೆಯಾಗಿದ್ದು, ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿ. ಪಂ. ಉಪಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ […]
ದೇಶದ 500 ಟಾಪ್ ಸ್ಕೂಲ್ ಗಳಲ್ಲಿ ಬಸವನಾಡಿನ ಪ್ರೇರಣಾ ಪಬ್ಲಿಕ್ ಸ್ಲೂಕ್ ಗೆ ಸ್ಥಾನ- ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್ಸ್ ಗೌರವ
ವಿಜಯಪುರ: ನಗರದ ಪ್ರೇರಣಾ ಪಬ್ಲಿಕ್ ಸ್ಕೂಲ್ ದೇಶದ 500 ಟಾಪ್ ಶಾಲೆಗಳಲ್ಲಿ ಸ್ಥಾನ ಪಡೆದಿದೆ. ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್- 2023 ನೀಡಿ ಗೌರವಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಮಗ್ರ ಅಭಿವೃದ್ಧಿಯಲ್ಲಿ ಶಾಲೆಯ ಶ್ರೇಷ್ಠತೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತದೆ. ಅಷ್ಟೇ ಅಲ್ಲ, ಈ ಶಾಲೆಯು ಕರ್ನಾಟಕದ 25 ಅತ್ಯುತ್ತಮ ಸಿಬಿಎಸ್‌ಇ ಶಾಲೆಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ಅಲ್ಲದೇ, ಈ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಜಯಪುರ ಜಿಲ್ಲೆಯ ಏಕೈಕ ಶಾಲೆ ಇದಾಗಿದೆ. […]
ಶಾಲೆಗಳ ಅಭಿವೃದ್ಧಿಗೆ ನರೇಗಾ ಸಹಕಾರಿ: ತಾ. ಪಂ. ಸಹಾಯಕ ನಿರ್ದೇಶಕ ಕಾಸಿಂಸಾಬ್ ಮಸಳಿ
ವಿಜಯಪುರ: ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಶ್ಯಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ ಅಡುಗೆ ಕೋಣೆಯನ್ನು ವಿಜಯಪುರ ತಾ. ಪಂ. ಸಹಾಯಕ ನಿರ್ದೇಶಕ ಕಾಸಿಂಮಸಾಬ ಮಸಳಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನರೇಗಾ ಯೋಜನೆಯು ಗ್ರಾಮೀಣ ಜನರಿಗೆ ರೂ. 316 ಕೂಲಿ ಜೊತೆಗೆ 100 ದಿನಗಳ ಉದ್ಯೋಗ ಖಾತರಿ ನೀಡುವವರ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹ ನೆರವು ನೀಡುತ್ತಿದೆ. ಸರಕಾರಿ […]
ಹಂಚನಾಳ ಕೆರೆ ಸೇರಿದಂತೆ ನಾನಾ ಸ್ಥಳಗಳಿಗೆ ಡಿಸಿ, ಪೌರಾಯುಕ್ತರ ಭೇಟಿ- ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹಂಚನಾಳ ಕೆರೆ ಸೇರಿದಂತೆ ವಿಜಯಪುರ ನಗರದ ನಾನಾ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆ ವ್ಯಾಪ್ತಿಯ ಇಂಡಿ ರಸ್ತೆಯಲ್ಲಿರುವ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಸ ಪ್ರತ್ಯೇಕಿಸುವ ಯಂತ್ರದ ಅಳವಡಿಕೆಯ ಯಂತ್ರದ ಅಳವಡಿಕೆ ಕೆಲಸವನ್ನು ಬೇಗನೆ ಪೂರ್ಣಗೊಳಿಸಬೇಕು. ಈ ಸ್ಥಳದಲ್ಲಿರುವ ಘನ ತ್ಯಾಜ್ಯವನ್ನು ಕೂಡಲೇ ವಿಲೇವಾರಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಸುತ್ತಮುತ್ತಲಿನ ಗಿಡ ಮರಗಳಿಗೆ ಬೇಸಿಗೆ […]
ಬೆಂಗಳೂರು ಜೈಲಿನಿಂದ ಬಿಡುಗಡೆಯಾಗಿ ಬಂದ ಕರವೇ ಮುಖಂಡರಿಗೆ ಗುಮ್ಮಟ ನಗರಿಯಲ್ಲಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ
ವಿಜಯಪುರ: ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ನಡೆದ ಹೋರಾಟದಲ್ಲಿ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ಜೊತೆ ಬಂಧಿತರಾಗಿ ಜೈಲು ಸೇರಿದ್ದ ವಿಜಯಪುರ ಜಿಲ್ಲಾಧ್ಯಕ್ಷ ಎಂ. ಸಿ. ಮುಲ್ಲಾ ಮತ್ತು ಉಪಾಧ್ಯಕ್ಷ ಮಹಾದೇವ ರಾವಜಿ ಅವರು ನಗರಕ್ಕೆ ಮರಳಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರಿದಂ ಅವರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಎಂ. […]
ಗುಮ್ಮಟ ನಗರಿಯಲ್ಲಿ ವಿದ್ಯುತ್ ಚಿತಾಗಾರ ಸ್ಥಾಪನೆಗೆ ಕ್ರಮ ಕೈಗೊಳ್ಳಿ- ಡಿಸಿ, ಪೌರಾಯುಕ್ತರಿಗೆ ಶಾಸಕ ಸುನೀಲಗೌಡ ಪಾಟೀಲ ಪತ್ರ
ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ವಿಜಯಪುರ ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ವಿಜಯಪುರ ನಗರವು ಈಗ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದೆ. ಅಲ್ಲದೇ, ಮಹಾನಗರಪಾಲಿಕೆ ಸುಮಾರು 10ಕಿ.ಮೀ ವ್ಯಾಪ್ತಿ ಒಳಗೊಂಡಿದೆ. ವಿಜಯಪುರ ನಗರದ ಜನಸಂಖ್ಯೆ ಸುಮಾರು 5 ಲಕ್ಷ ತಲುಪಿದೆ. ನಗರದಲ್ಲಿ ನಾನಾ ಸಮುದಾಯದ ಜನರು ಶವಗಳನ್ನು ಹೂಳುವ ಬದಲಾಗಿ ದಹನ ಮಾಡುವ ಸಂಪ್ರದಾಯವಿದೆ. ಈ ಸಮುದಾಯಗಳ ಜನ ನಿಧನರಾದವರ ಅಂತ್ಯಕ್ರಿಯೆ ಸಮಯದಲ್ಲಿ […]
ವಿಜಯಪುರದಲ್ಲಿ ವಾರಿ ಸೌರಶಕ್ತಿ ಸಾಯಿ ಎಂಟರಪ್ರೈಸಿಸ್ ಪ್ರಾಂಚೈಸಿ ಲೋಕಾರ್ಪಣೆ ಮಾಡಿದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ನಗರದಲ್ಲಿ ವಾರಿಸೌರ ಶಕ್ತಿ ಕೇಂದ್ರದ ಸಾಯಿ ಎಂಟರ್ ಪ್ರೈಸಸ್ ಪ್ರಾಂಚೈಸಿ ಲೋಕಾರ್ಪಣೆ ಸಮಾರಂಭ ನಡೆಯಿತು. ಪುಲಕೇಶಿ ನಗರದಲ್ಲಿ ಬಿಜೆಪಿ ಮುಖಂಡ ಸಿದ್ದು ಬುಳ್ಳಾ ಅವರಿಗೆ ಸೇರಿದ ಈ ನೂತನ ಕೇಂದ್ರವನ್ನು ಸಂಸದ ರಮೇಶ ಜಿಗಜಿಣಗಿ ಉದ್ಘಾಟಿಸಿದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ಮುಖಂಡ ಸಂತೋಷ ಪಾಟೀಲ ಡಂಬಳ ಮುಂತಾದವರು […]
ಬುರಣಾಪುರದಲ್ಲಿ ಸರಕಾರಿ ಬಾಲಕರ ಪಿಯು ಕಾಲೇಜಿನ ವತಿಯಿಂದ ಎನ್ಎಸ್ಎಸ್ ವಾರ್ಷಿಕ ಶಿಬಿರ- ವಿದ್ಯಾರ್ಥಿಗಳಿಂದ ಶ್ರಮದಾನ
ವಿಜಯಪುರ: ವಿಜಯಪುರ ನಗರದಲ್ಲಿರುವ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ವಿಜಯಪುರ ತಾಲೂಕಿನ ಬುರಣಾಪುರ ಗ್ರಾಮದಲ್ಲಿ ಒಂದು ವಾರ ವಾರ್ಷಿಕ ಎನ್ಎಸ್ಎಸ್ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಶಿಬಿರಾರ್ಥಿಗಳು ಗ್ರಾಮ ಪಂಚಾಯಿತಿ, ಮಹಲ್, ಐನಾಪೂರ ಗ್ರಾಮದ ಸಾರ್ವಜನಿಕ ಪ್ರದೇಶಗಳನ್ನು ಸ್ವಚ್ಚತೆಗೆ ಶ್ರಮದಾನ ಮಾಡಿದರು. ಈ ಶಿಬಿರದಲ್ಲಿ ಪರಿಸರ ರಕ್ಷಣೆ, ಆರೋಗ್ಯ ಕಾರ್ಯಕ್ರಮ, ನಾನಾ ಉಪನ್ಯಾಸಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಯಿತ್ತು. ಈ ಶಿಬಿರದ ಸಮಾರೋಪ ಸಮಾರಂಭವನ್ನು ಪಿಯು ಉಪನಿದೇರ್ಶಕ ಡಾ. ಸಿ. ಕೆ. ಹೊಸಮನಿ ಉದ್ಘಾಟಿದರು. […]
ಕೇವಲ 18 ವರ್ಷಗಳಲ್ಲಿ ರೂ. 3000 ಕೋ. ಠೇವಣಿ ಸಂಗ್ರಹಿಸಿದ ಸಿದ್ಧಸಿರಿ- ರಾಜ್ಯಾದ್ಯಂತ ಸಾವಿರಾರು ಯುವಜನರಿಗೆ ಉದ್ಯೋಗ- ರಾಘವ ಅಣ್ಣಿಗೇರಿ
ವಿಜಯಪುರ: ಸಿದ್ಧಸಿರಿ ಸೌಹಾರ್ದ ಕೇವಲ 18 ವರ್ಷಗಳಲ್ಲಿ ರೂ. 3000 ಕೋ. ಠೇವಣಿ ಪೂರೈಸಿ ದಾಖಲೆ ನಿರ್ಮಿಸಿದ್ದು, ರಾಜ್ಯಾದ್ಯಂತ ನೂರಾರು ಯುವಕ- ಯುವತಿಯರಿಗೆ ಉದ್ಯೋಗ ಕಲ್ಪಿಸಿದೆ ಎಂದು ಸೌಹಾರ್ದದ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಹೇಳಿದ್ದಾರೆ. ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಗ್ರಾಹಕರ ಸಭೆ ಸಭೆಯಲ್ಲಿ ಮಾತನಾಡಿದ ಅವರು, ಸೌಹಾರ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆ ದಕ್ಷ ಆಡಳಿತ ಮಂಡಳಿಯನ್ನು ಹೊಂದಿದೆ. ರಾಜ್ಯಾದ್ಯಂತ 158 ಶಾಖೆಗಳು, […]
ಕಾಲೇಜು, ವಿವಿ ಶುಲ್ಕ ಶೇ. 10ರಷ್ಟು ಹೆಚ್ಚಳಕ್ಕೆ ಎಬಿವಿಪಿ ಖಂಡನೆ- ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿರನ್ನಾಗಿ ಮಾಡುವ ಹುನ್ನಾರ ಆರೋಪ
ವಿಜಯಪುರ: ರಾಜ್ಯ ಸರಕಾರ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಿಸಲು ನಿರ್ಧರಿಸಿರುವುದನ್ನು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶಿಕ್ಷಣವು ಎಲ್ಲರಿಗೂ ಸಿಗುವಂತಾಗಬೇಕು. ಅದು ಕೇವಲ ಉಳ್ಳವರ ಸ್ವತ್ತು ಆಗಬಾರದು. ಬಡ ಪ್ರತಿಭಾವಂತ, ಕೂಲಿ ಕಾರ್ಮಿಕರು, ರೈತಾಪಿ ವರ್ಗದ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಸುಲಭವಾಗಿ ಮತ್ತು ಕನಿಷ್ಠ ಶುಲ್ಕ ರಾಜ್ಯ ಸರಕಾರ ಶೇ.10ರಷ್ಟು ಶುಲ್ಕವನ್ನು ಹೆಚ್ಚಿಸಲು ಒಪ್ಪಿಗೆ ನೀಡಿರುವುದನ್ನು ವಿರೋಧಿಸುವುದಾಗಿ […]