ಖೊಟ್ಟಿ ದಾಖಲೆ ಸೃಷ್ಠಿಸಿ ನೋಂದಣಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ. ಪಾಟೀಲ ಖಡಕ್ ಸೂಚನೆ

ವಿಜಯಪುರ: ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಠಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಖಡಕ್ಕ್ಕಾಗಿ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ […]

ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತಿಮುಖ್ಯವಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವ   ಗ್ರಾಮ ಪಂಚಾಯತಿ ಅಭಿವೃದ್ಧಿ ಕೈ ಜೋಡಿಸುವಂತೆ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಮನವಿ ಮಾಡಿದ್ದಾರೆ.  ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಮತ್ತು ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿ ನಾನಾ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಕಣಕಾಲ ಗ್ರಾಮದಲ್ಲಿ ಸರಕಾರಿ ಜಾಗ ಅತಿಕ್ರಮಣವಾಗಿರುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.  ಅತೀಕ್ರಮಣವಾಗಿದೆ ಎನ್ನಲಾದ ಸ್ಥಳದಲ್ಲಿ ಹಲವಾರು ವರ್ಷಗಳಿಂದ […]

ವೃಕ್ಷತ್ಥಾನ್ ಹೆರಿಟೇಜ್ ರನ್- 2023: ಸಾರ್ವಜನಿಕರು, ಸಂಘ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಕೈ ಜೋಡಿಸಿ ಯಶಸ್ವಿಗೊಳಿಸಿ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವವಹನ್ನು ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ನಗರದಲ್ಲಿ ಡಿ. 24ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್- 2023ನ್ನು ಜಿಲ್ಲೆಯ ನಾನಾ ಸಂಘ ಸಂಸ್ಥೆಗಳ ಸಹಾಯ, ಸಹಕಾರದೊಂದಿಗೆ ಯಶಸ್ವಿಯಾಗಿ ಆಯೋಜಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ,  ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.   ನಗರದ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಾನಾ ಸಂಘ- ಸಂಸ್ಥೆಗಳೊಂದಿಗೆ […]

ಗ್ರಾಮ-ನಗರ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯ- ಜಿ. ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

ವಿಜಯಪುರ: ಗ್ರಾಮ ನಗರ ಸ್ವಚ್ಛತೆಯನ್ನು ಹೆಚ್ಚಿಸುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಸಮಾಜದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ನಗರಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ವತಿಯಿಂದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರಿಗೆ ಇ.ಎಸ್.ಐ, ಪಿಎಫ್ ವಿಮೆ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ […]

ವಿಜಯಪುರ ಜಿಲ್ಲೆಯ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಲ್ಲಿ ಕಾರ್ಯನಿರ್ವಹಿಸುತ್ತಿರುವ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ವಿತರಣೆ ಮಾಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಂದ ನೇಮಕಾತಿ ಆದೇಶ ಪಡೆದುಕೊಂಡರು.ಆದೇಶ ಪ್ರತಿ ಪಡೆದ ಪೌರಕಾರ್ಮಿಕರು ಅಪಾರ ಸಂತಸ ವ್ಯಕ್ತಪಡಿಸಿ, ನಮ್ಮ ಬಾಳಿಗೆ ಬೆಳಕು ಕಲ್ಪಿಸಿದ ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳಿಗೆ […]

ಅಪಘಾತ ರಹಿತ ಚಾಲನೆ: ಮುಖ್ಯಮಂತ್ರಿಗಳಿಂದ ಬಸವ ನಾಡಿನ ಆರು ಚಾಲಕರಿಗೆ ಪದಕ

ವಿಜಯಪುರ: ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ  ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರು ಜನ ಚಾಲಕರು ಅಪಘಾತ ರಹಿತ ಚಾಲನೆಗೆ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಮೊಹಮ್ಮದ ಫೈಜ್ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ನಿಗಮದ ಚಾಲಕರಾದ ಮುದ್ದೇಬಿಹಾಳ ಘಟಕದ ಸಿ. ಎಸ್. ಕಸಬೇಗೌಡರ, ಸಿಂದಗಿಯ ಪಿ. […]

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ- ಸಂವಿಧಾನದ ಆಶಯದಂತೆ ನಡೆದುಕೊಳ್ಳೋಣ- ಎಡಿಸಿ ಮಹಾದೇವ ಮುರಗಿ ಕರೆ

ವಿಜಯಪುರ: ಸಂವಿಧಾನದ ಪ್ರಸ್ತಾವನೆಯ ಆಶಯವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಂಡು, ಸಂವಿಧಾನಕ್ಕನುಗುಣವಾಗಿ ಕಾರ್ಯನಿರ್ವಹಿಸಬೇಕು ಹಾಗೂ ನಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು. ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಅಧಿಕಾರಿ,ಸಿಬ್ಬಂದಿಗೆ ಬೋಧಿಸಿ,  ಮಾತನಾಡಿದ ಅವರು,ಎಲ್ಲರಿಗೂ ರಕ್ಷಣೆ ಒದಗಿಸುತ್ತದೆ.  ಸಂವಿಧಾನವು ದೇಶದ ಬಹು ದೊಡ್ಡ ಶಕ್ತಿಯಾಗಿದೆ. ಅದು, ಜನರನ್ನು ಸಶಕ್ತಗೊಳಿಸಿದೆ.  ಡಾ. ಬಿ. ಆರ್. ಅಂಬೇಡ್ಕರ ಅವರು ದೇಶಕ್ಕೆ ಬಹು ದೊಡ್ಡ ಸಂವಿಧಾನ […]

ಸಂವಿಧಾನ ಸಮಾನತೆ ನೀಡಿದ್ದರೂ ಮಹಿಳೆಯರು ಇನ್ನೂ ವಂಚಿತರಾಗುತ್ತಿರುವುದು ವಿಷಾಧನೀಯ- ಪ್ರೊ. ಚಂದ್ರಮ್ಮ

ವಿಜಯಪುರ: ನಮ್ಮ ಸಂವಿಧಾನವು ಮಹಿಳೆಯರಿಗಾಗಿ ಸಮಾನ ವೇತನ ಕಾಯಿದೆ, ಮಾತೃತ್ವ ಸವಲತ್ತು ಕಾಯಿದೆ, ಬಹು ಪತ್ನಿತ್ವ ನಿಷೇಧ ಕಾಯಿದೆ, ಅಂತರ್ಜಾತಿ ವಿವಾಹ ಕಾಯಿದೆ ಸೇರಿದಂತೆ ಹಲವಾರು ವಿಧಿಗಳನ್ನು ನೀಡಿದ್ದರು ಇಂದಿಗೂ ಹಲವು ಕಡೆಗಳಲ್ಲಿ ಮಹಿಳೆಯರು ಇದರಿಂದ ವಂಚಿತರಾಗುತ್ತಿರುವುದು ವಿಷಾದನೀಯ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವೆ ಪ್ರೊ. ಚಂದ್ರಮ್ಮ ಎಂ. ಅಭಿಪ್ರಾಯಪಟ್ಟಿದ್ದಾರೆ. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾ. ಬಿ. ಆರ್. […]

ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷವಾಗುತ್ತದೆ- ಪತ್ರಕರ್ತ ಕೆ. ಎನ್. ರಮೇಶ

ವಿಜಯಪುರ: ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ಉಂಟಾಗುತ್ತದೆ ಎಂದು ಹಿರಿಯ ಪತ್ರಕರ್ತ ಕೆ. ಎನ್. ರಮೇಶ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ರಾಜ್ಯ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ.  ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ.  ಪ್ರಶಸ್ತಿಯನ್ನು ಕೇಳಿ ಪಡೆಯುವಂತಾಗಬಾರದು.  ಅದು ಸಾಧನೆ ಅರಸಿ […]

ವಿಶ್ವಪ್ರಕಾಶ ಟಿ ಮಲಗೊಂಡ ನಟನೆಯ ತುಷಾರ ಸಿನೇಮಾ ನಾ ನಿನ್ನ ಕಾವಲುಗಾರ ಹಾಡು ಬಿಡುಗಡೆ

ವಿಜಯಪುರ: ಯುವ ನಟ ವಿಶ್ವಪ್ರಕಾಶ ಮಲಗೊಂಡ ನಟಿಸಿರುವ ಮತ್ತು ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಾಗಿರುವ ತುಷಾರ್ ಸಿನಿಮಾದ ಹಾಡು ನಾ ನಿನ್ನ ಕಾವಲುಗಾರ ಬಿಡುಗಡೆಯಾಗಿದೆ. ಪವನಕುಮಾರ ಬೂದಿಹಾಳ ಅವರು ನಾ ನಿನ್ನ ಕಾಯೋ ಕಾವಲುಗಾರ ಹಾಡಿಗೆ ಸಾಹಿತ್ಯ ರಚಿಸಿದ್ದು, ಮಂಜು ಕವಿ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.  ಹೊಸ ಪ್ರತಿಭೆ ಆರ್ ಜೆ ನವೀನ ಈ ಹಾಡಿಗೆ ಧ್ವನಿಯಾಗಿದ್ದಾರೆ.  ದೀಪಾವಳಿ ಹಬ್ಬದ ಅಂಗವಾಗಿ ಚಿತ್ರತಂಡ ಈ ಹಾಡನ್ನು Charvi Music […]