ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷವಾಗುತ್ತದೆ- ಪತ್ರಕರ್ತ ಕೆ. ಎನ್. ರಮೇಶ
ವಿಜಯಪುರ: ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ಉಂಟಾಗುತ್ತದೆ ಎಂದು ಹಿರಿಯ ಪತ್ರಕರ್ತ ಕೆ. ಎನ್. ರಮೇಶ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ರಾಜ್ಯ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ. ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ. ಪ್ರಶಸ್ತಿಯನ್ನು ಕೇಳಿ ಪಡೆಯುವಂತಾಗಬಾರದು. ಅದು ಸಾಧನೆ ಅರಸಿ […]
ವಿಶ್ವಪ್ರಕಾಶ ಟಿ ಮಲಗೊಂಡ ನಟನೆಯ ತುಷಾರ ಸಿನೇಮಾ ನಾ ನಿನ್ನ ಕಾವಲುಗಾರ ಹಾಡು ಬಿಡುಗಡೆ
ವಿಜಯಪುರ: ಯುವ ನಟ ವಿಶ್ವಪ್ರಕಾಶ ಮಲಗೊಂಡ ನಟಿಸಿರುವ ಮತ್ತು ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಾಗಿರುವ ತುಷಾರ್ ಸಿನಿಮಾದ ಹಾಡು ನಾ ನಿನ್ನ ಕಾವಲುಗಾರ ಬಿಡುಗಡೆಯಾಗಿದೆ. ಪವನಕುಮಾರ ಬೂದಿಹಾಳ ಅವರು ನಾ ನಿನ್ನ ಕಾಯೋ ಕಾವಲುಗಾರ ಹಾಡಿಗೆ ಸಾಹಿತ್ಯ ರಚಿಸಿದ್ದು, ಮಂಜು ಕವಿ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ. ಹೊಸ ಪ್ರತಿಭೆ ಆರ್ ಜೆ ನವೀನ ಈ ಹಾಡಿಗೆ ಧ್ವನಿಯಾಗಿದ್ದಾರೆ. ದೀಪಾವಳಿ ಹಬ್ಬದ ಅಂಗವಾಗಿ ಚಿತ್ರತಂಡ ಈ ಹಾಡನ್ನು Charvi Music […]
ನ. 20ಕ್ಕೆ ಬಸವ ನಾಡಿಗೆ ಸಿಎಂ ಸಿದ್ಧರಾಮಯ್ಯ- ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗಿ- ಶಿವಾನಂದ ಎಸ್. ಪಾಟೀಲ
ವಿಜಯಪುರ: ನಗರದಲ್ಲಿ ನ. 20 ರಂದು ನಡೆಯಲಿರುವ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಹಕಾರ ಮಹಾಮಂಡಳದಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ. 20 ರಂದು ಸೋಮವಾರ ನಡೆಯಲಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ […]
ಕುಡಿಯುವ ನೀರಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಚಿವ ಎಂ. ಬಿ. ಪಾಟೀಲ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂಬರುವ ದಿನಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಯೋಜನಾಬದ್ಧವಾಗಿ ಕುಡಿಯುವ ನೀರಿಗೆ ವಿಷಯದಲ್ಲಿ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸುವಂತೆ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬರ ಪರಿಸ್ಥಿತಿ ಹಾಗೂ ಬರ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, […]
ಸಚಿವ ಎಂ. ಬಿ. ಪಾಟೀಲ ಅವರಿಂದ ವಿಜಯಪುರ ಜಿಲ್ಲೆ ಬರಪೀಡಿತ ತಾಲೂಕುಗಳಿಗೆ ಭೇಟಿ- ಪರಿಶೀಲನೆ
ವಿಜಯಪುರ: ಬೃಹತ್ ಮತ್ತು ಮದ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ. ಪಾಟೀಲ ಅವರು ಜಿಲ್ಲೆಯ ಬರಪೀಡಿತ ವಿಜಯಪುರ, ಇಂಡಿ, ಚಡಚಣ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ ತಾಲೂಕಿನ ನಾನಾ ಪ್ರದೇಶಗಳಿಗೆ ಭೇಟಿ ನೀಡಿ ಬರ ನಿರ್ವಹಣೆ ಪರಿಶೀಲನೆ ಹಾಗೂ ಜನ, ಜಾನುವಾರು, ಕುಡಿಯುವ ನೀರು, ಮೇವಿನ ಪರಿಸ್ಥಿತಿ, ನರೇಗಾ ಯೋಜನೆ ಕಾಮಗಾರಿ, ಗ್ರಾಮೀಣ ಪ್ರದೇಶದವರಿಗೆ ಉದ್ಯೋಗ ಸೃಜನೆ ಸೇರಿದಂತೆ ಜಿಲ್ಲೆಯ ಬರ ಪರಿಸ್ಥಿತಿ ಕುರಿತು […]
ಸಚಿವ ಎಂ. ಬಿ. ಪಾಟೀಲರಿಂದ ನ. 15 ರಿಂದ 16 ರಂದು ವಿಜಯಪುರ ಜಿಲ್ಲಾ ಪ್ರವಾಸ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ನವೆಂಬರ್ 14 ರಿಂದ ನವೆಂಬರ್ 16ರ ವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 14 ರಂದು ಮಂಗಳವಾರ ರಾತ್ರಿ ವಿಜಯಪುರಕ್ಕೆ ಆಗಮಿಸಲಿರುವ ಅವರು ವಾಸ್ತವ್ಯ ಮಾಡಲಿದ್ದಾರೆ. ನವೆಂಬರ್ 15 ರಂದು ಬುಧವಾರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿಜಯಪುರ ಜಿಲ್ಲೆಯ ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲದೇ, ಬರ […]
ತೆರಿಗೆ ಹಣದಲ್ಲಿ ಅಭಿವೃದಿ ಕಾರ್ಯಗಳನ್ನು ಕೈಗೊಳ್ಳುವಂತೆ ಸಚಿವ ಶಿವಾನಂದ ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ಸೂಚನೆ
ವಿಜಯಪುರ: ತೆರಿಗೆಯಿಂದ ಬಂದ ಹಣದಲ್ಲಿ ಮಸೂತಿ, ಕೂಡಗಿ, ತೆಲಗಿ ಮುತ್ತಗಿ ಮತ್ತು ಗೊಳಸಂಗಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ಸೂಚನೆ ನೀಡಿದ್ದಾರೆ. ಕೊಲ್ಹಾರ ತಾಲೂಕಿನ ಕೂಡಗಿ ಎನ್ ಟಿ ಪಿ ಸಿ ಸಭಾಭವನದಲ್ಲಿ ನಡೆದ 11ನೇ ಗ್ರಾಮ ಅಭಿವೃದ್ದಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇನ್ನೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಬಾಕಿ ಮತ್ತು ಇನ್ನೂ ಆರಂಭವಾಗದ ಕಾಮಗಾರಿಗಳ […]
ಸೂಕ್ತ ಸಮಯದಲ್ಲಿ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಅಗತ್ಯ ಲಸಿಕೆ ನೀಡಿ- ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ರೋಗಗಸ್ಥ ಜಾನುವಾರುಗಳಿಗೆ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ನೀಡುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಹೇಳಿದರು. ಅವರು ಜಿಲ್ಲಾ ಪಶು ವೈಧ್ಯಕೀಯ ಪಾಲಿಕ್ಲಿನಿಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ದಿನ ಪಶು ವೈಧ್ಯಕೀಯ ಪಾಲಿಕ್ಲಿನಿಕ್ ಭೇಟಿ ನೀಡುವ ಸಾರ್ವಜನಿಕರು, ರೈತರ ಭೇಟಿ ಕುರಿತು ಮಾಹಿತಿ ಪಡೆದುಕೊಂಡರು. ಜಾನುವಾರುಗಳಿಗೆ ಮತ್ತು ರೈತರಿಗೆ ನೀಡುವ ಚಿಕಿತ್ಸೆಗಳ ಕುರಿತು ಪರಿಶೀಲನೆ ನಡೆಸಿದ ಅವರು, ಇಲ್ಲಿನ ನಾನಾ ವಿಭಾಗಗಳಿಗೆ […]
ನಾನಾ ಮತಗಟ್ಟೆ, ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಭೇಟಿ, ಪರಿಶೀಲನೆ
ವಿಜಯಪುರ: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ್ ಅವರು ಇಂಡಿ ವಿಧಾನಸಭಾ ಮತಕ್ಷೇತ್ರದ ನಾನಾ ಮತಗಟ್ಟೆಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ತಾಲೂಕಿನ ಹೊರ್ತಿ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿದ ಅವರು, ಮಕ್ಕಳ ಹಾಜರಾತಿ ಮತ್ತು ನಿರ್ಮಾಣ ಹಂತದ ಕಟ್ಟಡ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ನಂತರ ಸರಕಾರಿ […]
ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ- ಡಾ.ರಿ ಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಉದ್ಭವಿಸಬಹುದಾದ ಸಮಸ್ಯೆಗಳನ್ನು ಯೋಜನಾಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ಯಾವುದೇ ಸಮಸ್ಯೆ ಬರದಂತೆ ನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿ ಇರುವುದರಿಂದ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ […]